Wednesday | June 10, 2026 |

ಕಾಕಂಬಿ ಹಗರಣ; ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಅಧಿಕಾರ ಹಿಡಿದು ತಿಂಗಳಾದರೂ ಉಸಿರೆತ್ತದ ಕಾಂಗ್ರೆಸ್‌

ಬೆಂಗಳೂರು; ಅಂದಾಜು 260 ಕೋಟಿ ರು. ಮೌಲ್ಯದ 2 ಲಕ್ಷ ಮೆಟ್ರಿಕ್‌ ಟನ್‌ ಪ್ರಮಾಣದ ಕಾಕಂಬಿಯನ್ನು ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ ಕಂಪನಿಗೆ ರಫ್ತು ಪರವಾನಿಗೆ ನೀಡಿರುವ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದ ಕಾಂಗ್ರೆಸ್‌, ಇದೀಗ ಅಧಿಕಾರ ಗದ್ದುಗೆ ಹಿಡಿದು ತಿಂಗಳಾದರೂ ಈ ಪ್ರಕರಣದ ಬಗ್ಗೆ ಉಸಿರೆತ್ತದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರದ ಆರ್ಥಿಕ ಸಚಿವರಾಗಿರುವ ನಿರ್ಮಲಾ ಸೀತಾರಾಮನ್‌ ಅವರು ಪ್ರಭಾವ ಬೀರಿದ್ದಾರೆ ಎಂದು ಆಡಿಯೋ ಪುರಾವೆ ಮತ್ತು ಈ ಸಂಬಂಧ ಲಂಚಮುಕ್ತ ಕರ್ನಾಟಕ ವೇದಿಕೆಯು ಸಲ್ಲಿಸಿದ್ದ ದೂರನ್ನಾಧರಿಸಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಹಾಲಿ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ವಿಧಾನಪರಿಷತ್‌ನ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್‌ನ ವಕ್ತಾರ ರಮೇಶ್‌ಬಾಬು ಅವರು ಇದೀಗ ಈ ಪ್ರಕರಣದಲ್ಲಿ ಮೌನ ವಹಿಸಿರುವುದು ಸಹ ಸಂದೇಹಗಳಿಗೆ ಕಾರಣವಾಗಿದೆ.

 

ಪಿಎಸ್‌ಐ ಹಗರಣವೂ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ ಹಲವು ಹಗರಣಗಳ ಕುರಿತು ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ಆದಿಯಾಗಿ ಕಾಂಗ್ರೆಸ್‌ ಸರ್ಕಾರದ ಹಲವು ಸಚಿವರು ಹೇಳುತ್ತಿದ್ದಾರಾದರೂ 260 ಕೋಟಿ ಮೌಲ್ಯದ ಕಾಕಂಬಿ ರಫ್ತು ಪರವಾನಿಗೆ ಹಗರಣದ ಕುರಿತು ಕಾಂಗ್ರೆಸ್‌ನ ಯಾವೊಬ್ಬ ಸಚಿವರೂ ಇದುವರೆಗೂ ತುಟಿ ಬಿಚ್ಚಿಲ್ಲ.

 

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಪ್ರಿಯಾಂಕ್‌ ಖರ್ಗೆ ಮತ್ತು ವಿಧಾನಪರಿಷತ್‌ನ ಮಾಜಿ ಸದಸ್ಯ ರಮೇಶ್‌ಬಾಬು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಣಕಾಸು ಸಚಿವರ ಹೆಸರು ಪ್ರಸ್ತಾಪವಾಗಿರುವ ಆಡಿಯೋವನ್ನು ಬಹಿರಂಗಗೊಳಿಸಿದ್ದರು.

 

‘ಬಿಜೆಪಿಯವರು ಯಾವುದನ್ನು ಬಿಡದೇ ಲೂಟಿಗಿಳಿದಿದ್ದಾರೆ. ಅಬಕಾರಿ ಇಲಾಖೆಯಲಲ್ಇಒ ಕಾಕಂಬಿಯಲ್ಲೂ ಹಗರಣ ನಡೆಯುತ್ತಿದೆ. ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಖಾಶಗಿ ಕಂಪನಿ ಬಳಿ ಯಾವುದೇ ದಾಖಲೆ ಇಲ್ಲದಿದ್ದರೂ ಎಂ 1 ಎಂ 2 ಪರವಾನಿಗೆ ಕೊಟ್ಟಿದ್ದಾರೆ. ಕೇವಲ 2 ತಿಂಗಳಲ್ಲಿ ಯಾವುದೇ ದಾಖಲೆ ಇಲ್ಲದಿದ್ದರೂ ಪರವಾನಿಗೆ ನೀಡಿದ್ದಾರೆ,’ ಎಂದು ಪ್ರಿಯಾಂಕ್‌ ಖರ್ಗೆ ಅವರು ಆರೋಪಿಸಿದ್ದರು.

 

ಕಾಕಂಬಿ ರಫ್ತು ಹಗರಣದಲ್ಲಿ ಸ್ವತಃ ಸಿಎಂ ಡೀಲಿಗೆ ಇಳಿದಿರುವ ಸಂಗತಿ ಬಹಿರಂಗವಾಗಿದೆ. ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಮಾತನಾಡಲು ಹೆದುರುತ್ತಿರುವುದೇಕೆ, ನಿಯಮ ಮೀರಿ ಕಾಕಂಬಿ ರಫ್ತು ಮಾಡಲು ಸಹಕರಿಸಿದ್ದೇಕೆ? ಯಥಾ ಪ್ರಕಾರ ದಾಖಲೆ ಕೊಡಿ, ಸಾಕ್ಷಿ ಕೊಡಿ ಎನ್ನುವಿರಾ ಅಥವಾ ಸೂಕ್ತ ತನಿಖೆಯ ಅಗ್ನಿಪರೀಕ್ಷೆಗೆ ಒಳಪಟ್ಟು ಪ್ರಾಮಾಣಿಕತೆ ಸಾಬೀತುಪಡಿಸುವಿರಾ ಎಂದು ಪ್ರಶ್ನಿಸಿದ್ದರು.

 

ಬಿಜೆಪಿ ಸಂಸದರು ನೇರವಾಗಿ ಸಿ ಎಂ ಬಳಿ ಈ ಡೀಲ್‌ ಮಾಡಿದ್ದಾರೆ. ಇದು ದೊಡ್ಡ ಮಟ್ಟದ ಡೀಲ್‌ ಎಂದು ಅವರು ದೂರವಾಣಿಯಲ್ಲಿ ಮಾತನಾಡುತ್ತಾರೆ. ಮುಖ್ಯಮಂತ್ರಿಗಳೇ ಅಬಕಾರಿ ಸಚಿವರು ಹಾಗೂ ಆಯುಕ್ತರನ್ನು ಕರೆಸಿ ಇದಕ್ಕೆ ಅನುಮತಿ ಕೊಡಿಸಿದ್ದಾರೆ. ರಾಜ್ಯದ ಬೊಕ್ಕಸಕ್ಕೆ ನಷ್ಟವಾದರೂ ಸರಿ ಹೈಕಮಾಂಡ್‌ ಮನವೊಲಿಸಲು ಈ ಅನುಮತಿ ಕೊಟ್ಟರಾ ಎಂದೂ ಪ್ರಶ್ನಿಸಿದ್ದನ್ನು ಸ್ಮರಿಸಬಹುದು.

 

260 ಕೋಟಿ ಮೌಲ್ಯದ ಕಾಕಂಬಿ ಹಗರಣ; ‘ದಿ ಫೈಲ್‌’ ವರದಿ ಬೆನ್ನಲ್ಲೇ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್‌

 

ಅಗತ್ಯ ದಾಖಲೆಗಳನ್ನು ಹಾಜರುಪಡಿಸದಿದ್ದರೂ ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ 2 ಲಕ್ಷ ಮೆಟ್ರಿಕ್‌ ಟನ್‌ ಕಾಕಂಬಿಯನ್ನು ವಿದೇಶಗಳಿಗೆ ರಫ್ತು ಮಾಡಲು ಅನುಮತಿ ನೀಡಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ ಎಂದು ಆರೋಪಿಸಿರುವ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್‌ ಅವರು ಕಾಕಂಬಿ ರಫ್ತು ಹಗರಣದ ಸತ್ಯಾಸತ್ಯತೆಯನ್ನು ಹೊರತರಲು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು.

 

ಅಬಕಾರಿ ಹಗರಣ; ‘ದಿ ಫೈಲ್‌’ ವರದಿ ಉಲ್ಲೇಖಿಸಿ ತನಿಖೆಗೆ ಆಗ್ರಹಿಸಿ ಹೇಳಿಕೆ ಬಿಡುಗಡೆ

 

ಕಾಕಂಬಿ ರಫ್ತು ಮಾಡಲು ಅನುಮೋದನೆ ನೀಡಿರುವುದರ ಹಿಂದೆ ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು 8 ಕೋಟಿ ಕಿಕ್‌ಬ್ಯಾಕ್‌ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ‘ದಿ ಫೈಲ್‌’ 2022ರ ಅಕ್ಟೋಬರ್‌ 13ರಂದು ವರದಿ ಪ್ರಕಟಿಸಿತ್ತು.

 

 

ಅಬಕಾರಿ ಹಗರಣ; ಗೋವಾ ಬಂದರು ಮೂಲಕ ಕಾಕಂಬಿ ರಫ್ತಿನ ಅನುಮತಿಗೆ 8 ಕೋಟಿ ಕಿಕ್‌ಬ್ಯಾಕ್‌ ಆರೋಪ

ಕೆ ಎನ್ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಎಂ-2 ಲೈಸೆನ್ಸ್‌ ಇಲ್ಲದಿದ್ದರೂ 2 ಲಕ್ಷ ಮೆಟ್ರಿಕ್‌ ಟನ್‌ ಕಾಕಂಬಿಯನ್ನು ರಫ್ತು ಮಾಡಲು ಅನುಮೋದನೆ ನೀಡಿದ್ದನ್ನು ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡ ದಾಖಲೆಗಳನ್ನಾಧರಿಸಿ 2022ರ ನವಂಬರ್‌ 30ರಂದು ವರದಿ ಪ್ರಕಟಿಸಿತ್ತು.

 

ಅಬಕಾರಿ ಹಗರಣ; ಪರವಾನಿಗೆ ಇಲ್ಲದಿದ್ದರೂ ಮರೆಮಾಚಿ ಮುಂಬೈ ಕಂಪನಿಗೆ ಕಾಕಂಬಿ ರಫ್ತಿಗೆ ಅನುಮತಿ

 

ಈ ಕುರಿತು ಲಂಚಮುಕ್ತ ಕರ್ನಾಟಕ ವೇದಿಕೆಯು ಪ್ರಧಾನಿಗೂ ದೂರು ಸಲ್ಲಿಸಿತ್ತು.

 

ಅಬಕಾರಿ ಹಗರಣ; ಸಚಿವ ಗೋಪಾಲಯ್ಯ ಸೇರಿ ಅಧಿಕಾರಿಗಳ ವಿರುದ್ಧ ಪ್ರಧಾನಿಗೆ ದೂರು

ಈ ಹಗರಣದಲ್ಲಿ ಪ್ರಭಾವಿ ರಾಜಕಾರಣಯೊಬ್ಬರ ಪುತ್ರನ ಹೆಸರು ಪ್ರಸ್ತಾಪವಾಗಿದ್ದ ಆಡಿಯೋವನ್ನಾಧರಿಸಿ ‘ದಿ ಫೈಲ್‌’ 2022ರ ಡಿಸೆಂಬರ್‌ 22ರಂದು ವರದಿ ಪ್ರಕಟಿಸಿತ್ತು.

 

ಅಬಕಾರಿ ಹಗರಣ; ಪ್ರಭಾವಿ ರಾಜಕಾರಣಿಯೊಬ್ಬರ ಪುತ್ರನ ಹೆಸರು ಆಡಿಯೋದಲ್ಲಿ ಪ್ರಸ್ತಾಪ

 

ಅಲ್ಲದೇ ಈ ಹಗರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಉದ್ಯಮಿಗಳ ವಲಯದಲ್ಲಿ 25 ಪ್ರಶ್ನೆಗಳು ಕೇಳಿಬಂದಿದ್ದವು. ಈ ಕುರಿತು 2022ರ ಡಿಸೆಂಬರ್‌ 24ರಂದು ವರದಿ ಪ್ರಕಟಿಸಿತ್ತು.

 

ಅಬಕಾರಿ ಹಗರಣದಲ್ಲಿ ಪ್ರಭಾವಿ ಪುತ್ರನ ಹೆಸರು ಪ್ರಸ್ತಾಪ; ಮುನ್ನೆಲೆಗೆ ಬಂದ 25 ಪ್ರಶ್ನೆಗಳು

 

ನಿಯಮಬಾಹಿರವಾಗಿ ಹೊರ ರಾಜ್ಯದ ಕಂಪನಿಗೆ 2 ಲಕ್ಷ ಮೆಟ್ರಿಕ್‌ ಟನ್‌ ಪ್ರಮಾಣದ ಕಾಕಂಬಿಯನ್ನು ರಫ್ತುಮಾಡಲು ಅನುಮತಿ ನೀಡಿರುವುದು ರಾಜ್ಯದ ಉದ್ಯಮಿಗಳ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಆರಂಭದಲ್ಲಿ ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಕಾಂಗ್ರೆಸ್‌ ಇದೀಗ ಮೌನಕ್ಕೆ ಜಾರಿರುವುದು ಮತ್ತು ರಾಜ್ಯ ಅಬಕಾರಿ ಇಲಾಖೆಯ ನಡೆಯ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.

Hot this week

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...
Please Scan to make Your Contribution

Topics

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

Related Articles

Popular Categories

error: Content is protected !!