Thursday | June 11, 2026 |

ಅನಗತ್ಯ ಖರ್ಚು ನೆಪ; ಸಮ್ಮಿಶ್ರ ಸರ್ಕಾರದಲ್ಲಿದ್ದ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ಮುಚ್ಚಲು ತೀರ್ಮಾನ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮವನ್ನು ಇದೀಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಈ ನಿಗಮವನ್ನು ಮುಚ್ಚಲು ತೀರ್ಮಾನಿಸಿದೆ.

 

ಹಿಂದಿನ ಬಿಜೆಪಿ ಸರ್ಕಾರವು ಈ ನಿಗಮವನ್ನು ಮುಚ್ಚಲು ಹೊರಟಿತ್ತಾದರೂ   ಕಡೇ ಗಳಿಗೆಯಲ್ಲಿ  ಕೈ ಬಿಟ್ಟಿತ್ತು.  ಕೋವಿಡ್‌-19ರಿಂದ ತೀವ್ರ ತರದಲ್ಲಿರುವ ಎದುರಾಗಿದ್ದ ಆರ್ಥಿಕ ಮುಗ್ಗಟ್ಟಿನಿಂದ ತತ್ತರಿಸಿದ್ದ ಹಿಂದಿನ ಬಿಜೆಪಿ ಸರ್ಕಾರವು ಈ ನಿಗಮವು  ಅನಗತ್ಯ ಖರ್ಚಿಗೆ ಕಾರಣವಾಗುತ್ತಿದೆ ಎಂದಿತ್ತು.  ಆದರೆ ತನ್ನ ಅಧಿಕಾರವಧಿಯವಲ್ಲಿ ಮುಚ್ಚುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರಲಿಲ್ಲ. ಇದೀಗ ಕಾಂಗ್ರೆಸ್‌ ಸರ್ಕಾರವು ಸಮ್ಮಿಶ್ರ ಸರ್ಕಾರದಲ್ಲಿ ಆರಂಭವಾಗಿದ್ದ ಈ ನಿಗಮವನ್ನು ಮುಚ್ಚಲು ಅಂತಿಮ ನಿರ್ಧಾರವನ್ನು ಪ್ರಕಟಿಸಿದೆ.

 

ಕೃಷಿ ಇಲಾಖೆಯ ಅಧೀನದಲ್ಲಿಯೇ ಕರ್ನಾಟಕ ರಾಜ್ಯ ಅಂತರಗಂಗೆ ಸೂಕ್ಷ್ಮ ನೀರಾವರಿ ನಿಗಮವು ಕಾರ್ಯಾಚರಿಸುತ್ತಿತ್ತು. ‘ರಾಜ್ಯ ಅಂತರಗಂಗೆ ಸೂಕ್ಷ್ಮ ನೀರಾವರಿ ನಿಗಮ ಮುಚ್ಚಲು ಕಂಪನಿ ಕಾಯ್ದೆ ಅನ್ವಯ ಶಾಸನಬದ್ಧ ವಿಧಾನಗಳನ್ನು ಅನುಸರಿಸಲು ಸೂಚಿಸಲಾಗಿದೆ. ಅಧಿಕಾರಿ ವರ್ಗವನ್ನು ಕೃಷಿ ಇಲಾಖೆಗೆ ವರ್ಗಾಯಿಸಲು ನಿರ್ದೇಶನ ನೀಡಲಾಗಿದೆ. ನಿಗಮದ ಅನುದಾನದಿಂದ ಯಾವುದೇ ಖರ್ಚು ವೆಚ್ಚ ಮಾಡದಂತೆ ಸೂಚಿಸಲಾಗಿದೆ,’ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.

 

 

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್‌ ಡಿ ಕುಮಾರಸ್ವಾಮಿ ಅವರು ಈ ನಿಗಮಕ್ಕೆ ಬಜೆಟ್‌ನಲ್ಲಿ ಹಣ ಹಂಚಿಕೆ ಮಾಡಿದ್ದರು. ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರವು ಈ ನಿಗಮವನ್ನು  ಮುಚ್ಚಲು ಹೊರಟಿದೆ ಎಂದು ‘ದಿ ಫೈಲ್‌’ 2020ರ ಜೂನ್‌ 1ರಂದೇ ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

 

ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ಮುಚ್ಚಲು ಹೊರಟ ಬಿಜೆಪಿ ಸರ್ಕಾರ

 

 

ಕೃಷಿ ಇಲಾಖೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆಯನ್ನು ಅಂತರಗಂಗೆ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ಹಿಂದಿನ ಕೃಷಿ  ಸಚಿವ ಬಿ ಸಿ ಪಾಟೀಲ್‌ ಅವರು 2020ರ ಮಾರ್ಚ್‌ 15ರಂದು ನಡೆದಿದ್ದ ಅಧಿವೇಶನದಲ್ಲಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅನಗತ್ಯ ಖರ್ಚಿಗೆ ಕಾರಣವಾಗುತ್ತಿದೆ ಎಂಬ ವಾದವನ್ನು ಮುಂದೊಡ್ಡಿದ್ದ ಆರ್ಥಿಕ ಇಲಾಖೆ, ಕರ್ನಾಟಕ ಅಂತರಗಂಗೆ ಸೂಕ್ಷ್ಮ ನೀರಾವರಿ ನಿಗಮವನ್ನು ಮುಕ್ತಾಯಗೊಳಿಸಲು ಆಡಳಿತ ಇಲಾಖೆಗೆ ಸೂಚಿಸಿತ್ತು.

 

 

‘ಸೂಕ್ಷ್ಮ ನೀರಾವರಿಯ ವಿವಿಧ ಕಾರ್ಯಕ್ರಮಗಳನ್ನು ಪ್ರಸ್ತುತ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಜಲ ಸಂಪನ್ಮೂಲ ಇಲಾಖೆಗಳಲ್ಲಿ ನಿರ್ವಹಿಸುತ್ತಿರುವುದರಿಂದ ನಿಗಮದ ಸ್ಥಾಪನೆಯು ಅನಗತ್ಯ ಖರ್ಚಿಗೆ ಕಾರಣವಾಗುವುದರಿಂದ ನಿಗಮವನ್ನು ಮುಕ್ತಾಯಗೊಳಿಸಲು ಆಡಳಿತ ಇಲಾಖೆ ಕ್ರಮಕೈಗೊಳ್ಳಬಹುದಾಗಿದೆ,’ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ 2020ರ ಮೇ 29ರಂದು ಪತ್ರ ಬರೆದಿದ್ದರು.  ಈ ಪತ್ರವನ್ನಾಧರಿಸಿ  ‘ದಿ ಫೈಲ್‌’ ವರದಿ ಪ್ರಕಟಿಸಿತ್ತು.

 

 

 

ಕೃಷಿ ಇಲಾಖೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆಯನ್ನು ಅಂತರಗಂಗೆ ಕಾರ್ಪೋರೇಷನ್ ಮೂಲಕ ಅನುಷ್ಠಾನಗೊಳಿಸಲು ತೀರ್ಮಾನಿಸಿದ್ದ ಹಿಂದಿನ ಸರ್ಕಾರ ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ(ಕೆಮಿಕ್) ಸ್ಥಾಪನೆಗೆ 2011 ಮತ್ತು 2018 ರಲ್ಲಿ ಸರ್ಕಾರಿ ಆದೇಶಗಳನ್ನು ಹೊರಡಿಸಿತ್ತು.

 

 

ಸದ್ಯದ ಪರಿಸ್ಥಿತಿಯ ಮಳೆ ಹಂಚಿಕೆ, ಅಂತರ್ಜಲ ಮಟ್ಟವನ್ನಾಧರಿಸಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮಗಳಿಗೆ ಪ್ರತ್ಯೇಕವಾಗಿ ಒತ್ತು ನೀಡುವುದು ಅನಿವಾರ್ಯ ಎಂಬ ಕಾರಣದಿಂದ ಕರ್ನಾಟಕ ಅಂತರಗಂಗೆ ಸೂಕ್ಷ್ಮ ನೀರಾವರಿ ನಿಗಮ ಆರಂಭಿಸಿತ್ತು.

 

ಈ ನಿಗಮಕ್ಕೆ  ಹಿಂದಿನ  ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹಿರಿಯ ಐಎಎಸ್‌ ಅಧಿಕಾರಿ ವಂದಿತಾ ಶರ್ಮಾ, ರಾಜೇಂದ್ರಕುಮಾರ್‌ ಕಟಾರಿಯಾ, ಸಿ ಎನ್‌ ನಂದಿನಿಕುಮಾರಿ ಅವರು ನಿರ್ದೇಶಕರಾಗಿದ್ದರು. ನಿಗಮಕ್ಕೆ ಅಧಿಕೃತ ಷೇರು ಬಂಡವಾಳ ರೂಪದಲ್ಲಿ 50,000,000 ರು. ಮತ್ತು ದುಡಿಯುವ ಬಂಡವಾಳ ರೂಪದಲ್ಲಿ 500,000 ರು.ಗಳನ್ನು ಹೂಡಲಾಗಿತ್ತು.

 

 

2014ರಲ್ಲಿ ಆರಂಭಗೊಂಡಿದ್ದ ಈ ನಿಗಮವನ್ನು 2015ರಲ್ಲಿ ನೋಂದಣಿ ಮಾಡಲಾಗಿತ್ತು. 2019-20ರಲ್ಲಿ ಈ ಯೋಜನೆಗಾಗಿ 336 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಇಡಲಾಗಿತ್ತು. 269 ಕೋಟಿ ರೂ.ಬಿಡುಗಡೆಯಾದ ಹಣದಲ್ಲಿ 254ಕೋಟಿ ರೂ.ಗಳನ್ನು ಯೋಜನೆಗಾಗಿ ಖರ್ಚು ಮಾಡಲಾಗಿದೆ ಎಂದು ತಿಳಿದು ಬಂದಿದೆ.

 

 

ಹನಿ, ತುಂತುರು ಮತ್ತು ರೈನ್‌ಗನ್ ಘಟಕಗಳನ್ನು ಅನುಷ್ಠಾನ ಮಾಡುವುದು. ರೈತರಿಗೆ ಗುಣಮಟ್ಟದ ಸಾಮಗ್ರಿಗಳ ಸರಬರಾಜು, ಸಮಯೋಚಿತ ಮತ್ತು ರೈತರಿಗೆ ತ್ವರಿತವಾಗಿ ವಿತರಿಸುವುದು. ವಿವಿಧ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ರಿಯಾಯಿತಿ ಯೋಜನೆಗಳ ಮತ್ತು ಸೂಕ್ಷ್ಮ ನೀರಾವರಿ ಯೋಜನೆಗಳ ಉಪಯುಕ್ತತೆ ಕುರಿತು ರೈತ ಸಮುದಾಯಗಳಲ್ಲಿ ಜಾಗೃತಿ ಮೂಡಿಸುವುದು ಹಾಗೂ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಮುಂತಾದ ಇಲಾಖೆಗಳಲ್ಲಿ ಅನುಷ್ಠಾನ ಮಾಡುತ್ತಿರುವ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಏಕಗವಾಕ್ಷಿ ಮಾದರಿಯಲ್ಲಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿತ್ತು.

 

 

ರಿಯಾಯಿತಿ ಸೌಲಭ್ಯ ಪುನರಾವರ್ತನೆ ಮತ್ತು ಅನುದಾನ ದುರ್ಬಳಕೆಗಳನ್ನು ತಡೆಯಬಹುದಾಗಿದೆ.ಫಲಾನುಭವಿಗಳ ಅರ್ಜಿ ಸ್ವೀಕೃತಿ ಪ್ರಕ್ರಿಯೆಯಿಂದ ಅನುಷ್ಠಾನದವರೆಗೆ ಗಣಕೀಕರಣಕ್ಕೆ ಈಗಿನ ಸರ್ಕಾರ ಮುಂದಾಗಿದ್ದನ್ನು ಸ್ಮರಿಸಬಹುದು.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

Related Articles

Popular Categories

error: Content is protected !!