Saturday | June 6, 2026 |

ಸಿಎಂ ಸಚಿವಾಲಯದ ಅಧೀನ ಕಾರ್ಯದರ್ಶಿ ಎತ್ತಂಗಡಿ; ಸಚಿವರ ಒತ್ತಡ, ಹುದ್ದೆಯೇ ಇಲ್ಲದ ಜಾಗಕ್ಕೆ ವರ್ಗಾ

ಬೆಂಗಳೂರು; ಮುಖ್ಯಮಂತ್ರಿ ಸಚಿವಾಲಯದ ಅಧೀನ ಕಾರ್ಯದರ್ಶಿ ಕೆಎಎಸ್‌ ಅಧಿಕಾರಿ ಕೆ ಆರ್‍‌ ಶ್ರೀನಿವಾಸ ಅವರ ವರ್ಗಾವಣೆಗೆ  ಸಕಾರಣಗಳಿಲ್ಲದಿದ್ದರೂ ಪ್ರಭಾವಿ ಸಚಿವರೊಬ್ಬರ ಒತ್ತಡಕ್ಕೆ ಮಣಿದು ಎತ್ತಂಗಡಿ ಮಾಡಿರುವುದು ಇದೀಗ ಬಹಿರಂಗವಾಗಿದೆ.

 

ದಾವಣಗೆರೆ ಮಹಾನಗರಪಾಲಿಕೆಯ ಉಪ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ ಆರ್‍‌ ಶ್ರೀನಿವಾಸ ಅವರನ್ನು ಮುಖ್ಯಮಂತ್ರಿ ಸಚಿವಾಲಯದ ಅಧೀನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಆದರೆ ತಿಂಗಳು ಕಳೆಯುವುದರೊಳಗೇ ಅವರನ್ನು ಅಲ್ಲಿಂದ ಎತ್ತಂಗಡಿ ಮಾಡಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಈ ಹಿಂದೆ ಅಧೀನ ಕಾರ್ಯದರ್ಶಿಯಾಗಿದ್ದ ಹರಿದಾಸನ್‌ ಅವರನ್ನೇ ಪುನಃ ನೇಮಿಸಿ ಅಧಿಸೂಚನೆ ಹೊರಡಿಸಿದೆ.

 

ಕೆ ಆರ್‍‌ ಶ್ರೀನಿವಾಸ್‌ ಅವರನ್ನು ಅವಧಿಪೂರ್ವವಾಗಿ ಎತ್ತಂಗಡಿ ಮಾಡಿದ್ದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಹುದ್ದೆಯೇ ಇಲ್ಲದ ಕೆಯುಡಿಎಫ್‌ಸಿಗೆ ವರ್ಗಾವಣೆ ಮಾಡಿತ್ತು. ಹೀಗಾಗಿ ಅಲ್ಲಿಯೂ ಅವರಿಗೆ ಕಾರ್ಯಭಾರವಿಲ್ಲದಂತಾಗಿದೆ.

 

ದಾವಣಗೆರೆ ಮಹಾನಗರಪಾಲಿಕೆಯಲ್ಲಿ ಉಪ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ  ಕೆ ಆರ್‍‌ ಶ್ರೀನಿವಾಸ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು  ಮುಖ್ಯಮಂತ್ರಿ ಸಚಿವಾಲಯದ ಅಧೀನ ಕಾರ್ಯದರ್ಶಿ ಹುದ್ದೆಗೆ 2023ರ ಜುಲೈ 15ರಂದು ನೇಮಿಸಿ ಅಧಿಸೂಚನೆ ಹೊರಡಿಸಿತ್ತು.

 

ಕಾರ್ಯಭಾರ ವಹಿಸಿಕೊಂಡು ತಿಂಗಳು ಕಳೆಯುವುದರೊಳಗೇ ಕೆ ಆರ್‍‌ ಶ್ರೀನಿವಾಸ ಅವರನ್ನು ಮುಖ್ಯಮಂತ್ರಿ ಸಚಿವಾಲಯದ ಅಧೀನ ಕಾರ್ಯದರ್ಶಿ ಹುದ್ದೆಯಿಂದ 2023ರ ಆಗಸ್ಟ್‌ 10ರಂದು ಎತ್ತಂಗಡಿ ಮಾಡಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಂತಾಗಿದೆ.

 

ಮುಖ್ಯಮಂತ್ರಿ ಸಚಿವಾಲಯದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಹರಿದಾಸನ್‌ ಅವರನ್ನೇ ಪುನಃ ಅಧೀನ ಕಾರ್ಯದರ್ಶಿಯನ್ನಾಗಿ ನೇಮಿಸಿ 2023ರ ಆಗಸ್ಟ್‌ 28ರಂದು ಅಧಿಸೂಚನೆ ಹೊರಡಿಸಲಾಗಿದೆ.

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಹರಿದಾಸನ್‌ ಅವರನ್ನು ನೇಮಿಸಲಾಗಿದೆ ಎಂದು ಗೊತ್ತಾಗಿದೆ.

 

ಇಲ್ಲದ ಹುದ್ದೆಗೆ ವರ್ಗಾ

 

ಒಂದೇ ತಿಂಗಳಲ್ಲೇ ಎತ್ತಂಗಡಿಯಾಗಿದ್ದ ಶ್ರೀನಿವಾಸ ಅವರನ್ನು ಕೆಯುಐಡಿಎಫ್‌ಸಿಯಲ್ಲಿನ ಉಪ ಪ್ರಧಾನ ವ್ಯವಸ್ಥಾಪಕರನ್ನಾಗಿ ನೇಮಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಅಲ್ಲಿಯೂ ಅವರನ್ನು ಕಾರ್ಯಭಾರ ವಹಿಸಿಕೊಳ್ಳಲು ಐಎಎಸ್‌ ಅಧಿಕಾರಿಯೊಬ್ಬರು ಅವಕಾಶ ಮಾಡಿಕೊಟ್ಟಿಲ್ಲ ಎಂದು ತಿಳಿದು ಬಂದಿದೆ.

 

ಕೆಯುಡಿಎಫ್‌ಸಿಯಲ್ಲಿ ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಯೇ ಇಲ್ಲದಿದ್ದರೂ ಅವರನ್ನು ವರ್ಗಾವಣೆ ಮಾಡಿದ್ದರಿಂದಾಗಿ ಐಎಎಸ್‌ ಅಧಿಕಾರಿಯೊಬ್ಬರು ಅಧಿಕಾರ ವಹಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿಲ್ಲ . ಈ ಬಗ್ಗೆ ಸರ್ಕಾರಕ್ಕೆ ಪತ್ರವನ್ನೂ ಬರೆದಿದ್ದರು ಎಂದು ಗೊತ್ತಾಗಿದೆ. ಹೀಗಾಗಿ ಕೆ ಆರ್‍‌ ಶ್ರೀನಿವಾಸ್‌ ಅವರಿಗೆ ಇದುವರೆಗೂ ಯಾವುದೇ ಹುದ್ದೆಯನ್ನು ತೋರಿಸಿಲ್ಲ.

 

ಎತ್ತಂಗಡಿ ಹಿಂದೆ ಸಚಿವರ ಪ್ರಭಾವ?

 

ಮುಖ್ಯಮಂತ್ರಿ ಸಚಿವಾಲಯದ ಅಧೀನ ಕಾರ್ಯದರ್ಶಿ ಹುದ್ದೆಯಿಂದ ಕೆ ಆರ್‍‌ ಶ್ರೀನಿವಾಸ ಅವರನ್ನು ಎತ್ತಂಗಡಿ ಮಾಡಿರುವುದರ ಹಿಂದೆ ಸಚಿವರೊಬ್ಬರು ಪ್ರಮುಖ ಪಾತ್ರವಹಿಸಿದ್ದರು ಎಂಬ ಮಾತು ಕೇಳಿ ಬಂದಿದೆ. ಕೆ ಆರ್‍‌ ಶ್ರೀನಿವಾಸ ಅವರು ಮುಖ್ಯಮಂತ್ರಿ ಸಚಿವಾಲಯದ ಅಧೀನ ಕಾರ್ಯದರ್ಶಿಯಾಗಿ ನೇಮಕವಾಗುವ ಮುನ್ನ ದಾವಣಗೆರೆ ಮಹಾನಗರಪಾಲಿಕೆಯ ಉಪ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

 

ಯಾರು ಈ ಶ್ರೀನಿವಾಸ್‌

 

ಈ ವೇಳೆಯಲ್ಲಿ ಚುನಾವಣೆ ಅಕ್ರಮಗಳನ್ನು ತಡೆಗಟ್ಟಲು ಪ್ರಾಮಾಣಿಕವಾಗಿ ಶ್ರಮಿಸಿದ್ದರು. ಮತದಾರರಲ್ಲಿ ಈ ಕುರಿತು ಅರಿವು ಮೂಡಿಸಿದ್ದರು. ಒಂದೊಂದು ಮತಕ್ಕೆ 1ರಿಂದ 2 ಸಾವಿರ ರು ಹಣ ನೀಡುತ್ತಿರುವ ಬಗ್ಗೆಯೂ ದೂರುಗಳನ್ನು ಪರಿಶೀಲಿಸಿದ್ದರು. ನೂರಾರು ಕೋಟಿ ರು. ದೋಚಿದರೆ ಇದು ಮತದಾರರಿಗೆ ಮಾಡುವ ಮೋಸ ಎಂದು ಸಾಮಾಜಿಕ ಜಾಲತಾಣದಲ್ಲಿ ಮುಕ್ತವಾಗಿ ಮಾತನಾಡಿದ್ದರು. ಈ ಮೂಲಕ ಮತದಾರರಲ್ಲಿ ಹಣ ಪಡೆದು ಮತ ಚಲಾಯಿಸಬೇಡಿ ಎಂದು ಅರಿವು ಮೂಡಿಸಿದ್ದರು. ಸರ್ಕಾರದ ಹಣವನ್ನು ಕೊಳ್ಳೆ ಹೊಡೆಯುವವರಿಗೆ ಮತದಾನ ಮಾಡಬೇಡಿ. ಪ್ರಜಾಪ್ರಭುತ್ವ ನಾಶ ಮಾಡುವ ಅಭ್ಯರ್ಥಿಗಳಿಗೆ ಮತದಾನ ಮಾಡಬೇಡಿ. ಕಳ್ಳರನ್ನು ಹಿಡಿದು ಕೊಡಿ ಎಂದು ಸಾಮಾಜಿಕ ಜಾಲತಾಣದಲ್ಲಿ  ಕೋರಿದ್ದರು.

 

 

ಕೊಣನೂರು ಚುನಾವಣೆ ವೇಳೆ ದೇವರ ಫೋಟೋ ನಡುವೆ ದುಡ್ಡು ಇಟ್ಟು ಜನರಿಗೆ ಹಣ ಹಂಚುತ್ತಿದ್ದಾರೆ ಎಂದು ದೂರು ಸ್ವೀಕರಿಸಿದ್ದ  ತಹಶೀಲ್ದಾರ್ ಆಗಿದ್ದ ಅವಧಿಯಲ್ಲಿ  ಶ್ರೀನಿವಾಸ್ ಅವರು  ಚುನಾವಣೆ ದಿನ ಮುಂಜಾನೆ ಪರಿಶೀಲನೆ ನಡೆಸಿದ್ದರು. ದಾವಣಗೆರೆ ಜಿಲ್ಲೆಯೊಂದರಲ್ಲೇ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ  ದೂರುಗಳನ್ನಾಧರಿಸಿ 15 ಎಫ್‌ಐಆರ್‍‌ಗಳನ್ನು ದಾಖಲಿಸಿದ್ದರು.

 

ಈ ಅವಧಿಯಲ್ಲಿ ಚುನಾವಣಾ ಅಧಿಕಾರಿಯಾಗಿಯೂ ಕೆಲಸ ಮಾಡಿದ್ದರಲ್ಲದೇ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಒಟ್ಟು 15 ಎಫ್‌ಐಆರ್‍‌ಗಳನ್ನು ದಾಖಲಿಸಿದ್ದರು. ಇದಕ್ಕೂ ಮುನ್ನ ಅರಕಲಗೂಡುವಿನಲ್ಲಿ ತಹಶೀಲ್ದಾರ್‍‌ ಆಗಿ ಕಾರ್ಯನಿರ್ವಹಿಸಿದ್ದ ಶ್ರೀನಿವಾಸ್‌ ಅವರು ರೈತರ ಮನೆ ಮನೆಗೆ ತೆರಳಿ ಎರಡು ಸಾವಿರ ಪೌತಿ ಖಾತೆ ಮಾಡಿಸುವ ಮೂಲಕ ಆಂದೋಲನವನ್ನೇ ನಡೆಸಿದ್ದರು.

 

 

ಪಟ್ಟಣ ಪ್ರದೇಶಗಳಲ್ಲಿ SC, ST , ವಿಶೇಷ ಚೇತನ ಹಾಗೂ ಇತರೆ ಹಿಂದುಳಿದ ವರ್ಗಗಳ ನಾಗರೀಕರ ಬಡತನ ನಿರ್ಮೂಲನೆಗೆ ಅನೇಕ ಯೋಜನೆಗಳ ಪೈಕಿ  24.10 ಯೋಜನೆ 7.25 ಯೋಜನೆ, 5 % ಯೋಜನೆಯಂತೆ ಅನೇಕ ಕಲ್ಯಾಣ ಕಾರ್ಯಕ್ರಮ ಕುರಿತು ಮಾಹಿತಿ ನೀಡಿದ್ದಲ್ಲದೇ ಅದು ನೇರವಾಗಿ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಂಡಿದ್ದರು.

 

ಹೊಳೆನರಸೀಪುರ ತಾಲೂಕಿನ ಬೆಟ್ಟದ ಸಾತೇನಹಳ್ಳಿಯಲ್ಲಿ ಗುಡಿಸಲು ಹಾಕಿಕೊಂಡು ಜೀವನ ಸಾಗಿಸುತ್ತಿದ್ದ  ಸುಡುಗಾಡು ಸಿದ್ದರು ಮನೆ ಕಟ್ಟಿಕೊಳ್ಳಲು ಸರಕಾರಿ ಜಮೀನು ಮಂಜೂರಾತಿಗಾಗಿ ಸಲ್ಲಿಸಿದ್ದ ಅರ್ಜಿಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿದ್ದರು. ಈ ಕುರಿತು ‘ದಿ ಹಿಂದೂ’ ಪ್ರಕಟಿಸಿದ ವರದಿ ಆಧರಿಸಿ  ಅಲೆಮಾರಿ ಜನರನ್ನು ಭೇಟಿ ಮಾಡಿ, ಅವರ ಕಷ್ಟ, ಸಂಕಷ್ಟಗಳಿಗೆ ತಹಶೀಲ್ದಾರ್‍‌ ಕೆ ಆರ್‍‌ ಶ್ರೀನಿವಾಸ್‌ ಅವರು  ಕಿವಿಯಾಗಿದ್ದರು.  ಇದೇ ತಾಲೂಕಿನ ಇನ್ನೊಂದು ಹಳ್ಳಿಯಲ್ಲಿದ್ದ ಶಿಳ್ಳೇಕ್ಯಾತ ಕುಟುಂಬಗಳಿಗೂ ಜಮೀನು ಕಾಯ್ದಿರಿಸಿದ್ದನ್ನು ಸ್ಮರಿಸಬಹುದು.

Hot this week

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಪ್ರಕರಣ; 6 ವರ್ಷವಾದರೂ ಹೈಕೋರ್ಟ್‌ನಲ್ಲಿ ವಿಚಾರಣೆಗೆ ನಿಗದಿಯಾಗದ ದಿನಾಂಕ

ಬೆಂಗಳೂರು;  ಹಾಲಿ ಮುಖ್ಯಮಂತ್ರಿ  ಡಿ ಕೆ ಶಿವಕುಮಾರ್ ಅವರು ಸೇರಿದಂತೆ ಅವರ...
Please Scan to make Your Contribution

Topics

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...

ಆರ್‍‌ಬಿಎಸ್‌ಎಸ್ಎನ್‌ ಗಣಿ ಕಂಪನಿಗೆ 64.50 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನು; 3 ಬಾರಿ ಪ್ರಸ್ತಾವ ತಿರಸ್ಕೃತವಾದರೂ ಸಚಿವ ಸಂಪುಟಕ್ಕೆ ಮಂಡಿಸಲು ಸಿಎಂ ನಿರ್ದೇಶನ

ಬೆಂಗಳೂರು; ಕಾನೂನುಬಾಹಿರವಾಗಿ ಗಣಿಗಾರಿಕೆ ನಡೆಸುತ್ತಿದೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿರುವ ಆರ್‍‌ಬಿಎಸ್‌ಎನ್‌...

ಶೈಕ್ಷಣಿಕ ಅಸಮಾನತೆ ಹೆಚ್ಚಳ; ರಾಜ್ಯದ ಆರ್ಥಿಕ ಪ್ರಗತಿಗೆ ಬೆದರಿಕೆ ಹಾಕುವ ಸಾಧ್ಯತೆ, ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಆಯೋಗ

ಬೆಂಗಳೂರು; ಪ್ರಾಥಮಿಕ ಶಾಲೆ ಮತ್ತು ವಿಶ್ವವಿದ್ಯಾಲಯ ಮಟ್ಟಗಳೆರಡರಲ್ಲೂ ಸಾಂಸ್ಥಿಕ ಮೂಲ ಸೌಕರ್ಯಗಳ...

Related Articles

Popular Categories

error: Content is protected !!