ದುಬಾರಿ ಸಹಾಯಧನದಿಂದ ತೆರಿಗೆಯೇತರ ರಾಜಸ್ವ ಪ್ರಮಾಣ ನಗಣ್ಯ; ತೆರಿಗೆ ಭಾರ ಹೊರಿಸಲಿದೆಯೇ?

ಬೆಂಗಳೂರು; ಲಾಭಕರವಲ್ಲದ ಹಾಗೂ ದುಬಾರಿ ಸಹಾಯಧನಗಳಿಂದಾಗಿ ಜಿಎಸ್‌ಡಿಪಿಗೆ ಹೋಲಿಸಿದಲ್ಲಿ ತೆರಿಗೆಯೇತರ ರಾಜಸ್ವದ ಪ್ರಮಾಣವು ನಗಣ್ಯವಾಗಿದೆ. ಹೀಗಾಗಿ ಹೊಸ ತೆರಿಗೆ ಪ್ರಸ್ತಾಪಿಸುವುದು ಮತ್ತು ತೆರಿಗೆ ಸ್ವರೂಪಗಳ ಪರಿಷ್ಕರಣೆ ಮೂಲಕ ಹೆಚ್ಚುವರಿ ಸಂಪನ್ಮೂಲ ಸಂಗ್ರಹಿಸಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಮುಂದಾಗಿರುವುದು  ಇದೀಗ ಬಹಿರಂಗವಾಗಿದೆ.   ಐದು ಗ್ಯಾರಂಟಿಗಳ ಅನುಷ್ಠಾನದಿಂದಾಗಿ ಎದುರಾಗಿರುವ ಆರ್ಥಿಕ ಸವಾಲುಗಳನ್ನು ಎದುರಿಸಲು ಈಗಿನಿಂದಲೇ ಸಜ್ಜಾಗಿರುವ ಸರ್ಕಾರವು ಇದಕ್ಕಾಗಿ ತೆರಿಗೆಯೇತರ, ಬಳಕೆದಾರರ ಶುಲ್ಕ, ಬಾಕಿ ಇರುವ ಸಾಲವನ್ನು ವಸೂಲು ಮಾಡಬೇಕು ಎಂದು ಇಲಾಖೆ ಮುಖ್ಯಸ್ಥರಿಗೆ ಸೂಚಿಸಿರುವುದು ಮುನ್ನೆಲೆಗೆ ಬಂದಿದೆ. … Continue reading ದುಬಾರಿ ಸಹಾಯಧನದಿಂದ ತೆರಿಗೆಯೇತರ ರಾಜಸ್ವ ಪ್ರಮಾಣ ನಗಣ್ಯ; ತೆರಿಗೆ ಭಾರ ಹೊರಿಸಲಿದೆಯೇ?