Sunday | October 18, 2026 |

ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವರ್ಗಾವಣೆ; ಸುತ್ತೋಲೆ ಉಲ್ಲಂಘಿಸಿದ ಸಿಎಂ, ಸಚಿವೆ ಹೆಬ್ಬಾಳ್ಕರ್‍‌

ಬೆಂಗಳೂರು; ಕೆಳ ದರ್ಜೆಯ ಅಧಿಕಾರಿಗಳನ್ನು ಮೇಲ್ದರ್ಜೆ ಹುದ್ದೆಗೆ ಸ್ವಂತ ವೇತನ ಶ್ರೇಣಿಯ ಆಧಾರದ ಮೇಲೆ ನೇಮಕ, ನಿಯೋಜನೆಗೊಳಿಸುವುದನ್ನು ಸರ್ಕಾರವೇ ನಿರ್ಬಂಧಿಸಿದ್ದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಹುದ್ದೆಗೆ ಮೂವರು ಅಧಿಕಾರಿಗಳನ್ನು ವರ್ಗಾಯಿಸಿರುವುದು ಇದೀಗ ಬಹಿರಂಗವಾಗಿದೆ.

 

ಸರ್ಕಾರಿ ನೌಕರರ ನಿಯೋಜನೆಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸುತ್ತೋಲೆಯನ್ನು (2023ರ ಸೆ.12) ಹೊರಡಿಸಿದ್ದ ಒಂದೇ ತಿಂಗಳ ಅಂತರದಲ್ಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸರ್ಕಾರದ ಸುತ್ತೋಲೆಯನ್ನೇ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಲ್ಲಂಘಿಸಿರುವುದು ಮುನ್ನೆಲೆಗೆ ಬಂದಿದೆ.

 

ಇದಕ್ಕೆ ಸಂಬಂಧಿಸಿದಂತೆ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಸುತ್ತೋಲೆಯಲ್ಲೇನಿತ್ತು?

 

ಯಾವುದೇ ಇಲಾಖೆಯಲ್ಲಿಯಾದರೂ ಕೆಳ ದರ್ಜೆಯ ಅಧಿಕಾರಿಗಳನ್ನು ಮೇಲ್ದರ್ಜೆ ಹುದ್ದೆಗೆ ಸ್ವಂತ ವೇತನ ಶ್ರೇಣಿಯ ಆಧಾರದ ಮೇಲೆ ನೇಮಕ ಮಾಡುವುದನ್ನು ನಿಯೋಜನೆಗೊಳಿಸುವುದನ್ನು ನಿರ್ಬಂಧಿಸಿದೆ. ಈ ಮೇಲಿನ ಸೂಚನೆಯನ್ನು ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಅವರು 2023ರ ಸೆ.12ರಂದೇ ಹೊರಡಿಸಿದ್ದ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದ್ದರು.

 

ಆದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮೂವರು ಉಪ ನಿರ್ದೇಶಕರನ್ನು ಸ್ವಂತ ವೇತನ ಶ್ರೇಣಿ ಮೇಲೆ ವರ್ಗಾಯಿಸಿ 2023ರ ಅಕ್ಟೋಬರ್‍‌ 11ರಂದು ಅಧಿಸೂಚನೆ ಹೊರಡಿಸಿದೆ.
ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಬಸವರಾಜ ಜಿಗಳೂರು ಅವರನ್ನು ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಗೆ (ಸ್ವಂತ ವೇತನ ಶ್ರೇಣಿ) ವರ್ಗಾಯಿಸಲಾಗಿದೆ.

 

ಅದೇ ರೀತಿ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿಯಾದ ಶಿವಮೂರ್ತಿ ಕುಂಬಾರ ಅವರನ್ನು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹುದ್ದೆಗೆ ನಿಯುಕ್ತಿಗೊಳಿಸಲಾಗಿದೆ.
ಹಾಗೆಯೇ ತರೀಕೆರೆ ಯೋಜನೆಯ ಜ್ಯೋತಿ ಲಕ್ಷ್ಮಿ ಅವರನ್ನು ಹೊಳೆ ನರಸೀಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ( ಸ್ವಂತ ವೇತನ ಶ್ರೇಣಿ) ಹುದ್ದೆಗೆ ವರ್ಗಾಯಿಸಿರುವುದು ಅಧಿಸೂಚನೆಯಿಂದ ಗೊತ್ತಾಗಿದೆ.

 

ಈ ಅಧಿಸೂಚನೆ ಹೊರಡಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‍‌ ಅವರು ಅನುಮೋದನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

ಅಲ್ಲದೇ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಬೇರೆ ಇಲಾಖೆಯಿಂದ ನಿಯೋಜನೆಗೆ ಅವಕಾಶ ಕಲ್ಪಿಸದೇ ಇರುವ ಹುದ್ದೆಗಳಿಗೆ ನಿಯೋಜನೆ ಮಾಡುವುದನ್ನು ನಿರ್ಬಂಧಿಸಿತ್ತು.

 

ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿಯೊಂದಿಗೆ ನಿಯೋಜನೆ ಮೇಲೆ ಮುಂದುವರೆದಿರುವ ಅಧಿಕಾರಿ ನೌಕರರು ಒಂದು ವೇಳೆ ಗರಿಷ್ಠ ಐದು ವರ್ಷಗಳ ನಿಯೋಜನಾ ಅವಧಿಯನ್ನು ಪೂರ್ಣಗೊಳಿಸಿದ್ದಲ್ಲಿ ಹಾಗೂ ಸರ್ಕಾರದ ವಿಶೇಷ ಆದೇಶಗಳಿರದೇ ಸದರಿ ನಿಯೋಜನೆಯಲ್ಲಿ ಮುಂದುವರೆದಿದ್ದಲ್ಲಿ ಅಂತಹವರನನು ಮಾತೃ ಇಲಾಖೆಗೆ ಹಿಂದಿರುಗಿಸಲು ಕೂಡಲೇ ಕ್ರಮ ವಹಿಸಬೇಕು ಎಂದೂ ನಿರ್ದಶನ ನೀಡಲಾಗಿತ್ತು.

 

ಹಾಗೆಯೇ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಯೋಜನೆಗೆ ಅವಕಾಶವಿರುವ ಹುದ್ದೆಗಳಿಗೆ ಮಾತ್ರ ಆ ಹುದ್ದೆಗೆ ಸಮಾನ ದರ್ಜೆ, ಹುದ್ದೆ ಹೊಂದಿರುವ ಅಧಿಕಾರಿ, ನೌಕರರನ್ನು ಅನಿವಾರ್ಯ ಪ್ರಸಂಗಗಳಲ್ಲಿ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ನಿಯಮಾನುಸಾರ ನಿಯೋಜನೆಗೊಳಿಸಬೇಕು ಎಂದೂ ಹೇಳಲಾಗಿತ್ತು.

Hot this week

ಮರಿಮಲ್ಲಪ್ಪ ಶಿಕ್ಷಣ ಸಂಸ್ಥೆಯಿಂದ ನಿಯಮ, ಕಾಯ್ದೆ ಉಲ್ಲಂಘನೆ ಆರೋಪ; ಆಡಳಿತಾಧಿಕಾರಿ ನೇಮಕಕ್ಕೆ ಮುಂದಾದ ಸರ್ಕಾರ, ಇದು ಖಾಸಗಿ ಸಂಸ್ಥೆಯೋ ಸಾರ್ವಜನಿಕ ಸಂಸ್ಥೆಯೋ?

ಬೆಂಗಳೂರು; ಮೈಸೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮರಿಮಲ್ಲಪ್ಪ ವಿದ್ಯಾ ಸಂಸ್ಥೆಯು ಕಾಲೇಜು, ...

ಅಪೆಕ್ಸ್ ಬ್ಯಾಂಕ್‌ನಲ್ಲಿ 1,000 ಕೋಟಿ ಹಗರಣ; ಹೈಕೋರ್ಟ್‌ನಲ್ಲಿ ಪಿಐಎಲ್‌, ಸರ್ಕಾರಕ್ಕೆ ಎದುರಾಗಲಿದೆಯೇ ಸಂಕಷ್ಟ?

ಬೆಂಗಳೂರು; ಕೃಷಿಗೆ ಸಂಬಂಧಿಸದ ಉದ್ದೇಶಗಳಿಗಾಗಿ ಸಾಲ ಮಂಜೂರಾತಿ,  ಈಗಾಗಲೇ ಅನುತ್ಪಾದಕ ಆಸ್ತಿಗಳೆಂದು (Non-Performing...

ರೈಲ್ವೇ- ವಿಮಾನ ಭತ್ಯೆ; 15ನೇ ವಿಧಾನಸಭೆಯ ಶಾಸಕರಿಗೆ 16.32 ಕೋಟಿ ಮರು ಪಾವತಿ

ಬೆಂಗಳೂರು; ಹದಿನೈದನೇ ವಿಧಾಸಭೆ ಅವಧಿಯಲ್ಲಿ ರಾಜ್ಯದ 224 ಶಾಸಕರು  16.32 ಕೋಟಿಯಷ್ಟು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ...
Please Scan to make Your Contribution

Topics

ಮರಿಮಲ್ಲಪ್ಪ ಶಿಕ್ಷಣ ಸಂಸ್ಥೆಯಿಂದ ನಿಯಮ, ಕಾಯ್ದೆ ಉಲ್ಲಂಘನೆ ಆರೋಪ; ಆಡಳಿತಾಧಿಕಾರಿ ನೇಮಕಕ್ಕೆ ಮುಂದಾದ ಸರ್ಕಾರ, ಇದು ಖಾಸಗಿ ಸಂಸ್ಥೆಯೋ ಸಾರ್ವಜನಿಕ ಸಂಸ್ಥೆಯೋ?

ಬೆಂಗಳೂರು; ಮೈಸೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮರಿಮಲ್ಲಪ್ಪ ವಿದ್ಯಾ ಸಂಸ್ಥೆಯು ಕಾಲೇಜು, ...

ಅಪೆಕ್ಸ್ ಬ್ಯಾಂಕ್‌ನಲ್ಲಿ 1,000 ಕೋಟಿ ಹಗರಣ; ಹೈಕೋರ್ಟ್‌ನಲ್ಲಿ ಪಿಐಎಲ್‌, ಸರ್ಕಾರಕ್ಕೆ ಎದುರಾಗಲಿದೆಯೇ ಸಂಕಷ್ಟ?

ಬೆಂಗಳೂರು; ಕೃಷಿಗೆ ಸಂಬಂಧಿಸದ ಉದ್ದೇಶಗಳಿಗಾಗಿ ಸಾಲ ಮಂಜೂರಾತಿ,  ಈಗಾಗಲೇ ಅನುತ್ಪಾದಕ ಆಸ್ತಿಗಳೆಂದು (Non-Performing...

ರೈಲ್ವೇ- ವಿಮಾನ ಭತ್ಯೆ; 15ನೇ ವಿಧಾನಸಭೆಯ ಶಾಸಕರಿಗೆ 16.32 ಕೋಟಿ ಮರು ಪಾವತಿ

ಬೆಂಗಳೂರು; ಹದಿನೈದನೇ ವಿಧಾಸಭೆ ಅವಧಿಯಲ್ಲಿ ರಾಜ್ಯದ 224 ಶಾಸಕರು  16.32 ಕೋಟಿಯಷ್ಟು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ...

ಸ್ಟಿಂಗ್ ಆಪರೇಷನ್‌; ಅಸಲು ದಾವೆ ಬೆನ್ನಲ್ಲೇ ಪೊಲೀಸ್‌ ಆಯುಕ್ತರಿಗೂ ದೂರು ಸಲ್ಲಿಸಿ ಯಾವ ಭಯವೂ ನನಗಿಲ್ಲವೆಂದ ಸಿದ್ದರಾಮಯ್ಯ

ಬೆಂಗಳೂರು; ಯೂ ಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು...

21 ಪ್ಯಾಕೇಜ್‌ ಟೆಂಡರ್; ಶೇ. 5 ಪ್ರೀಮಿಯಂ ಮೀರಿದ್ದರೂ ಪರಿಶೀಲನೆ ಸಮಿತಿ ರಚಿಸಲು ಆಕ್ಷೇಪ ಎತ್ತಿದ್ದ ಡಿಕೆಶಿ

ಬೆಂಗಳೂರು;  ಜಿಬಿಎ ವ್ಯಾಪ್ತಿಯಲ್ಲಿ  ಉತ್ಪತ್ತಿಯಾಗುವ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ...

ಪ್ರಭಾವಿ ನಾಯಕನ ವಿರುದ್ಧ ಸ್ಟಿಂಗ್ ಕಾರ್ಯಾಚರಣೆ; ನ್ಯಾಯಾಂಗ ತನಿಖೆಗೆ ಹೈಕೋರ್ಟ್‌, ಬಾಲ ನ್ಯಾಯಮಂಡಳಿ ಮೆಟ್ಟಿಲೇರಿದ ನೈಜ ಹೋರಾಟಗಾರರ ವೇದಿಕೆ

ಬೆಂಗಳೂರು; ಯೂ ಟ್ಯೂಬ್‌ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ  ‘ಹನಿಟ್ರ್ಯಾಪ್’ ಪ್ರಕರಣದ...

Related Articles

Popular Categories

error: Content is protected !!