Saturday | March 21, 2026 |

ಗ್ರಂಥಾಲಯ ಇಲಾಖೆಯಲ್ಲಿ ಕಂಪ್ಯೂಟರ್‌, ಯುಪಿಎಸ್‌, ಝೆರಾಕ್ಸ್‌ ಉಪಕರಣ ಖರೀದಿ ಹಗರಣ; ತನಿಖಾ ವರದಿ

Support THE-FILE

spot_img

ಬೆಂಗಳೂರು; ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಕಳಪೆ ಕಂಪ್ಯೂಟರ್‌, ಝೆರಾಕ್ಸ್‌, ಸಿ ಸಿ ಕ್ಯಾಮರಾ ಸೇರಿದಂತೆ ವಿದ್ಯುನ್ಮಾನಕ್ಕೆ ಸಂಬಂಧಿಸಿದ ಹಲವು ಉಪಕರಣಗಳನ್ನು ಖರೀದಿಸಿರುವುದನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ.

 

ಕಳಪೆ ಕಂಪ್ಯೂಟರ್‌ಗಳನ್ನು ಖರೀದಿಸಿರುವ ಸಂಬಂಧ ಇಡೀ ರಾಜ್ಯಾದ್ಯಂತ ಸಮಗ್ರ ತನಿಖೆ ನಡೆಸಿ ವರದಿ ಪಡೆಯಬೇಕು ಎಂದು ಕರ್ನಾಟಕ ಸಮಗ್ರ ಶಿಕ್ಷಣದ ರಾಜ್ಯ ಯೋಜನಾ ನಿರ್ದೇಶಕರು ಸಲ್ಲಿಸಿದ್ದ ವರದಿಯನ್ನೇ ಗ್ರಂಥಾಲಯ ಇಲಾಖೆಯ ಹಾಲಿ ನಿರ್ದೇಶಕ ಸತೀಶ್‌ ಕುಮಾರ್‌ ಹೊಸಮನಿ ಅವರು ಬದಿಗೆ ಸರಿಸಲು ಯತ್ನಿಸಿರುವುದು ಇದೀಗ ಬಹಿರಂಗವಾಗಿದೆ.

 

ಹೊಸಮನಿ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಕುರಿತಾಗಿ ‘ದಿ ಫೈಲ್‌’ ಬಹಿರಂಗಪಡಿಸಿದ್ದ ವರದಿಗಳು ಇಲಾಖೆಯಲ್ಲಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಇಲಾಖೆಯಲ್ಲಿ ನಡೆದಿದೆ ಎನ್ನಲಾಗಿರುವ ಕಂಪ್ಯೂಟರ್‌ ಹಗರಣದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ರಕ್ಷಣೆಗೆ ನಿಂತಿರುವುದು ಮುನ್ನೆಲೆಗೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸಮಗ್ರ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಬೆಂಗಳೂರಿನ ಅಕ್ನಾ ಟೆಕ್ನಾಲಜಿ ಸಂಸ್ಥೆಯು ಕಳಪೆ ಕಂಪ್ಯೂಟರ್‌, ಝೆರಾಕ್ಸ್‌, ಸಿಸಿ ಕ್ಯಾಮರಾ ಸೇರಿದಂತೆ ಹಲವು ಸಾಮಗ್ರಿಗಳನ್ನು ಸರಬರಾಜು ಮಾಡಿತ್ತು. ಇದರಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕಳಪೆ ಸಾಮಗ್ರಿಗಳ ಕುರಿತು ಪ್ರಶ್ನಿಸಿದ್ದ ಗ್ರಂಥಾಲಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರಿಗೆ ಕಿರುಕುಳ ನೀಡಲಾಗಿತ್ತು. ಈ ಕುರಿತು ತನಿಖೆ ನಡೆಸಿ 15 ದಿನದೊಳಗೆ ವಿವರವಾದ ವರದಿ ಸಲ್ಲಿಸಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ (ಸ್ವೀಕೃತಿ ಸಂಖ್ಯೆ; 1664726/2020) ಅವರು ಸಚಿವರಿಗೆ ಪತ್ರವನ್ನು ಬರೆದಿದ್ದರು.

 

ಈ ಪತ್ರವನ್ನಾಧರಿಸಿ ಪ್ರಾಥಮಿಕ ತನಿಖೆ ನಡೆಸಲು ಸಮಗ್ರ ಶಿಕ್ಷಣ ಯೋಜನೆಯ ರಾಜ್ಯ ಯೋಜನಾ ನಿರ್ದೇಶಕ ಹೆಚ್‌ ಎನ್‌ ಗೋಪಾಲಕೃಷ್ಣ ಅಧ್ಯಕ್ಷತೆಯಲ್ಲಿ ತನಿಖಾ ತಂಡ ರಚಿಸಿತ್ತು. ಈ ತಂಡವು 2020ರ ನವೆಂಬರ್‌ 20 ಮತ್ತು 21, 2021ರ ಫೆ.9ರಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ 2010-11ರಿಂದ 2019-20ರವರೆಗೂ ಕಡತಗಳ ತಪಾಸಣೆ ನಡೆಸಿತ್ತು ಎಂಬುದು ತನಿಖಾ ವರದಿಯಿಂದ ಗೊತ್ತಾಗಿದೆ.

 

ಕಂಪ್ಯೂಟರ್‌, ಯುಪಿಎಸ್‌, ಸರ್ವರ್‌, ಸ್ಕ್ಯಾನರ್‌, ಪ್ರಿಂಟರ್‌, ಬಯೋ ಮೆಟ್ರಿಕ್‌, ಸಿಸಿಟಿವಿ ಕ್ಯಾಮರಾ, ಜೆರಾಕ್ಸ್‌ ಯಂತ್ರ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್‌ ಸಾಮಗ್ರಿಗಳು, ಸಂಬಂಧಪಟ್ಟ ಉಪಕರಣಗಳ ಪರಿಕರಗಳ ಖರೀದಿ ವಿವರ, ಖರೀದಿ ವಿಧಾನ, ಖರೀದಿ ಮೊಬಲು, ಖರೀದಿ ದಿನಾಂಕ, ಕಡತಗಳ ನಿರ್ವಹಣೆ, ದಾಸ್ತಾನು ವಹಿ ಇತ್ಯಾದಿಗಳ ಕುರಿತು ಪ್ರಾಥಮಿಕ ತನಿಖೆ ನಡೆಸಿತ್ತು. ಈ ಸಂಬಂಧ 2021ರ ಅಕ್ಟೋಬರ್‌ 24ರಂದು ತನಿಖಾ ವರದಿ ಸಲ್ಲಿಸಿತ್ತು ಎಂಬುದು ದಾಖಲೆಗಳಿಂದ ತಿಳಿದು ಬಂದಿದೆ.

 

ಸದ್ಯ ಈ ಕಡತವು ಸಚಿವ ಮಧು ಬಂಗಾರಪ್ಪ ಅವರ ಅನುಮೋದನೆಗೆ ಬಾಕಿ ಇದೆ ಎಂದು ತಿಳಿದು ಬಂದಿದೆ.

 

ಪ್ರಾಥಮಿಕ ತನಿಖಾ ವರದಿಯಲ್ಲೇನಿದೆ?

 

1. ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಖರೀದಿಗೆ ತಾಂತ್ರಿಕ ಸಲಹೆ ಪಡೆಯಲು ಅನುಮೋದನೆ ಪಡೆಯಲು ಸುತ್ತೋಲೆ ಹೊರಡಿಸಲಾಗಿದೆ. ಆದರೆ ಕೆಟಿಪಿಪಿ ನಿಯಮಗಳನ್ನು ಪಾಲಿಸಿಲ್ಲ.

 

2. ಮೂರನೇ ಪಕ್ಷದ ಪರಿಶೀಲನೆ ಸಂಸ್ಥೆಯನ್ನಾಗಿ ಸರ್ಕಾರವು ನೇಮಿಸಿತ್ತು. ಸಂಸ್ಥೆಯ ಪರಿಶೀಲನಾ ವರದಿ ನಂತರ ಖರೀದಿ ಬಗ್ಗೆ ಕ್ರಮವಹಿಸಲು ಸೂಚಿಸಲಾಗಿತ್ತು. ಅದರಂತೆ ಕ್ರಮ ವಹಿಸಿಲ್ಲ.

 

3. ಎಲೆಕ್ಟ್ರಾನಿಕ್‌ ಸಾಮಗ್ರಿಗಳಿಗೆ ಸಂಬಂಧಿಸಿದಂತೆ ಮೂರನೇ ಪಕ್ಷದ ಸಂಸ್ಥೆಯಿಂದ ಖರೀದಿ ಪೂರ್ವದಲ್ಲಿ ಪರಿಶೀಲನೆಗಾಗಿ ಪ್ರಸ್ತಾವನೆ ಕಳಿಸಬೇಕಾಗಿತ್ತು. ಆ ಕ್ರಮವನ್ನು ಅನುಸರಿಸಿಲ್ಲ.

 

4.ಡಿಜಿಎಸ್‌ ಮತ್ತು ಡಿ ಮತ್ತು ಜೆಮ್‌ ದರದಲ್ಲಿ ಖರೀದಿಗೆ ಕ್ರಮ ವಹಿಸಿರುತ್ತಾರೆ. ಅದರಂತೆ ಡಿಜಿಎಸ್‌ ಮತ್ತು ಡಿ ಮತ್ತು ಜೆಮ್‌ ದರದ ಒಪ್ಪಂದದ ಸಂಸ್ಥೆಯೊಂದಿಗೆ ವ್ಯವಹರಿಸಿಲ್ಲ. ಆಥರೈಸೇಷನ್‌ ನೀಡಿರುವ ಬಗ್ಗೆ, ನೈಜತೆ ಇರುವ ಬಗ್ಗೆ ಖಾತ್ರಿ ಪಡಿಸಿಕೊಂಡಿಲ್ಲ. ಪರಿಶೀಲಿಸದೆಯೇ ನೇರವಾಗಿ ಅಕ್ನಾ ಟೆಕ್ನಾಲಜಿ ಸಂಸ್ಥೆಗೆ ಕಾರ್ಯಾದೇಶ ನೀಡಿರುವುದು ಕಂಡು ಬರುತ್ತದೆ.

 

5. ಜೆಮ್‌ ವೆಬ್‌ ಪೋರ್ಟಲ್‌ ನಲ್ಲಿ ನೋಂದಾಯಿತ ಸಂಸ್ಥೆಗಳೊಂದಿಗೆ ಆನ್‌ಲೈನ್‌ನಲ್ಲಿ ವ್ಯವಹಾರ ಮಾಡಿಲ್ಲ. ನೇರವಾಗಿ ಆಫ್‌ಲೈನ್‌ನಲ್ಲಿ ಮೆ. ಅಕ್ನಾ ಟೆಕ್ನಾಲಾಜೀಸ್‌ ಸಂಸ್ಥೆಗೆ ಕಾರ್ಯಾದೇಶ ನೀಡಿರುವುದು ಕಂಡು ಬಂದಿದೆ.

 

6. ದರಪಟ್ಟಿಗಳನ್ನು ಆಹ್ವಾನಿಸದೆಯೇ ನೇರವಾಗಿ ಅಕ್ನಾ ಟೆಕ್ನಾಲಾಜೀಸ್‌ ಸಂಸ್ಥೆಗೆ ಕಾರ್ಯಾದೇಶ ನೀಡಲಾಗಿದೆ.

 

7. ತಾಂತ್ರಿಕ ಸಾಮಗ್ರಿಗಳನ್ನು ಖರೀದಿಸಿರುವ ಸಂದರ್ಭದಲ್ಲಿ ತಾಂತ್ರಿಕ ಪರಿಣಿತರಿಂದ ಸ್ಪೆಸಿಫಿಕೇಷನ್‌ ಬಗ್ಗೆ ಅಭಿಪ್ರಾಯ, ಅನುಮೋದನೆ ಪಡೆದಿಲ್ಲ. ಅದೇ ರೀತಿ ತಾಂತ್ರಿಕ ಸಾಮಗ್ರಿಗಳ ಸರಬರಾಜು ಅಳವಡಿಕೆ ಸಮಯದಲ್ಲಿಯೂ ತಾಂತ್ರಿಕ ಪರಿಣಿತರ ಪಡೆದಿಲ್ಲ. ಸಂಸ್ಥೆಗೆ ಸಾಮಗ್ರಿಗಳನ್ನು ಖರೀದಿಸಿ ಪಾವತಿಸುವ ಸಂದರ್ಭದಲ್ಲಿಯೂ ತಾಂತ್ರಿಕ ಪರಿಣಿತರ ಅಭಿಪ್ರಾಯ ಪಡೆಯದಿರುವುದು ಕಡತಗಳ ನಿರ್ವಹಣೆಯಿಂದ ಕಂಡು ಬರುತ್ತದೆ.

 

8. ಕೆಲವೊಂದು ಸಾಮಗ್ರಿಗಳ ಖರೀದಿಗೆ ಕಾರ್ಯಾದೇಶ ಇರುವುದಿಲ್ಲ. ಕೆಲವೊಂದು ಸಾಮಗ್ರಿಗಳಿಗೆ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ಮಾಹಿತಿಯಿಲ್ಲ.

 

9. ಯಂತ್ರಗಳ ದುರಸ್ತಿಯಾಗಿರುವ ಬಗ್ಗೆ, ಯಂತ್ರಗಳು ಕಾರ್ಯನಿರ್ವಹಿಸದೇ ಇರುವುದಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಪರಿಣಿತರಿಂದ ಪರಿಶೀಲನೆ ಮಾಡಿಅರುವ ವರದಿಗಳು ಇರುವುದಿಲ್ಲ. ದುರಸ್ತಿ ನಂತರ ಯಂತ್ರಗಳು ಸುಸ್ಥಿತಿಯಲ್ಲಿರುವ ಬಗ್ಗೆ ಸರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ತಾಂತ್ರಿಕ ಪರಿಣಿತರಿಂದ ಪರಿಶೀಲಿಸಿರುವ ವರದಿ ಇಲ್ಲ.

 

10. ಇಲಾಖೆಯು ಅನೇಕ ಎಲೆಕ್ಟ್ರಾನಿಕ್‌ ಸಾಮಗ್ರಿಗಳು ಮತ್ತು ಪರಿಕರಗಳನ್ನು ಖರೀದಿಸಿದ್ದು, ಅವುಗಳ ನಿರ್ವಹಣೆಗೆ ಎಎಂಸಿ ಪಡೆದುಕೊಂಡಿರುವುದಿಲ್ಲ. ಅವುಗಳ ನಿರ್ವಹಣೆಗೆ ಎಎಂಸಿ ಹೊಂದಿದ್ದಲ್ಲಿ ದುರಸ್ತಿಗೆ ಅನಾವಶ್ಯಕವಾಗಿ ಹೆಚ್ಚುವರಿಯಾಗಿ ಸೇವಾ ಶುಲ್ಕ ನೀಡುವ ಸಂಭವ ಉದ್ಭವವಾಗುತ್ತಿರಲಿಲ್ಲ.

 

11. ಕೆಟಿಪಿಪಿ ನಿಯಮಗಳ ಅನ್ವಯ ಇ-ಪ್ರೊಕ್ಯೂರ್‌ಮೆಂಟ್‌ ಮೂಲಕ ಟೆಂಡರ್‌ ಕರೆದು ಖರೀದಿ ಪ್ರಕ್ರಿಯೆ ನಡೆಸಿದ್ದಲ್ಲಿ ಕಡಿಮೆ ಮೊತ್ತಕ್ಕೆ ಉತ್ತಮ ಸಾಮಗ್ರಿಗಳನ್ನು ಖರೀದಿಸಬಹುದಾಗಿತ್ತು. ಹಾಗೂ ಆರ್ಥಿಕವಾಗಿ ಸರ್ಕಾರಕ್ಕೆ ಹೆಚ್ಚಿನ ಉಳಿತಾಯವಾಗುತ್ತಿತ್ತು ಎಂಬ ಅಂಶವು ತನಿಖಾ ವರದಿಯಿಂದ ತಿಳಿದು ಬಂದಿದೆ.

 

‘ಎಲ್ಲಾ ಎಲೆಕ್ಟ್ರಾನಿಕ್‌ ಸಾಮಗ್ರಿಗಳ ಯಂತ್ರಗಳ, ಪರಿಕರಗಳ ಖರೀದಿ ಸಮಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಅಕ್ನಾ ಟೆಕ್ನಾಲಾಜೀಸ್‌ ಸಂಸ್ಥೆಗೆ ಅನುಕೂಲಕರವಾಗಿ ವರ್ತಿಸಿರುವುದು ಕಂಡು ಬರುತ್ತದೆ. ಮತ್ತು ಕೆಎಫ್‌ಸಿ ನಿಯಮ 14 ಮತ್ತು 15ರ ನಿಯಮ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ,’ ಎಂದು ಪ್ರಾಥಮಿಕ ತನಿಖಾ ವರದಿಯು ಅಭಿಪ್ರಾಯಪಟ್ಟಿರುವುದು ಗೊತ್ತಾಗಿದೆ.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!