‘ದಿ ಫೈಲ್‌’ನ ವರದಿಗಳ ಉಲ್ಲೇಖ; ಹೊಣೆಗಾರಿಕೆ ಕಾಯ್ದೆಯನ್ನು ಸ್ವತಃ ವಿತ್ತ ಸಚಿವರೇ ಉಲ್ಲಂಘಿಸಿದರೆ ಹೇಗೆ?

ಬೆಂಗಳೂರು; ಗ್ಯಾರಂಟಿ ಯೋಜನೆಗಳ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರ  ಮಧ್ಯೆ ಟ್ವೀಟ್‌ ಸಮರ ಆರಂಭವಾಗಿದೆ. ಗೃಹ ಲಕ್ಷ್ಮಿ ಯೋಜನೆ ಕುರಿತು ನಿರ್ದಿಷ್ಟವಾಗಿ ಪ್ರತಿಕ್ರಿಯಿಸಿರುವ ಹೆಚ್‌ ಡಿ ಕುಮಾರಸ್ವಾಮಿ ಅವರು  ‘ದಿ ಫೈಲ್‌’ ಪ್ರಕಟಿಸಿದ್ದ  ಎರಡು ವರದಿಗಳನ್ನು  ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ.

 

ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಮಾಧ್ಯಮ ಸಂಸ್ಥೆಗೆ 1 ಕೋಟಿ ರು. ನೀಡಿರುವ ವಿಚಾರವು ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಮಾಡಿರುವ ಸರಣಿ ಟ್ವೀಟ್‌ಗಳು ಮುನ್ನೆಲೆಗೆ ಬಂದಿವೆ.

 

ಗ್ಯಾರಂಟಿ ಯೋಜನೆಗಳ ಬಗ್ಗೆ ಸಮೀಕ್ಷೆ ನಡೆಸಲು ಮಾಧ್ಯಮ ಸಂಸ್ಥೆಗೆ 1 ಕೋಟಿ ರು. ನೀಡಿದ್ದನ್ನು ‘ದಿ ಫೈಲ್‌’ ವರದಿ ಪ್ರಕಟಿಸಿತ್ತು.

 

ಗ್ಯಾರಂಟಿಗಳ ಸಮೀಕ್ಷೆ; ಮಾಧ್ಯಮ ಸಂಸ್ಥೆಗೆ ಕೋಟಿ ರು ಕೊಟ್ಟ ಸರ್ಕಾರ

 

ಈ ವರದಿಯನ್ನು ಹೆಚ್‌ ಡಿ ಕುಮಾರಸ್ವಾಮಿ ಅವರು ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

 

‘ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆಯೇ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ? ನಿಮ್ಮ ಯೋಗ್ಯತೆಗೆ ಇನ್ನು ʼಯುವನಿಧಿʼ ಬಂದೇ ಇಲ್ಲ.

 

ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ? * ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ʼರಾಮನಗರʼ ಹೆಸರಿಗೇ ಕೊಕ್‌ ಕೊಡಲು ಹೊರಟಿದ್ದಾರೆ. ಆಯ್ಯೋ ದೇವೆರೇ,  ಸರಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ,’ ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ.

 

 

ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್‌ (ಟ್ವಿಟರ್‌) ನಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಹರಿಹಾಯ್ದಿದ್ದರು.

 

‘ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿನ ಘೋಷಣೆಗಳು. ಅದನ್ನು ಒಪ್ಪಿಕೊಂಡೇ ರಾಜ್ಯದ ಜನ ನಮ್ಮ ಪಕ್ಷವನ್ನು ಗೆಲ್ಲಿಸಿದ್ದಾರೆ. ಈ ಯೋಜನೆಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡೂ ವಿರೋಧಿಸಿದ್ದವು, ಈ ಪಕ್ಷಗಳ ಸೋಲಿಗೆ ಗ್ಯಾರಂಟಿ ಯೋಜನೆಗಳ ಬಗೆಗಿನ ನಿಮ್ಮ ವಿರೋಧವೂ ಕಾರಣ ಎನ್ನುವುದು ನಿಮಗೆ ಇನ್ನೂ ಅರ್ಥವಾಗದೆ ಇರುವುದು ದುರಂತ.

 

ಇದೇ ರೀತಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಹೋದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡಕ್ಕೂ ರಾಜ್ಯದ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ,’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು   ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದರು.

 

 

 

ಇದಕ್ಕೂ ಹೆಚ್‌ ಡಿ ಕುಮಾರಸ್ವಾಮಿ ಅವರು ಉತ್ತರಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆ ಕುರಿತು ‘ದಿ ಫೈಲ್‌’ ಕಳೆದ 5 ತಿಂಗಳ ಹಿಂದೆ ಆರ್‌ಟಿಐ ದಾಖಲೆ ಸಹಿತ ಪ್ರಕಟಿಸಿದ್ದ ವರದಿಯನ್ನು ಹಂಚಿಕೊಂಡಿರುವ ಹೆಚ್‌ ಡಿ ಕುಮಾರಸ್ವಾಮಿ ಅವರು ವಿತ್ತ ಸಚಿವರೇ ವಿತ್ತೀಯ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

 

ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ ಹೌದಲ್ಲವೇ? ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ ಹಾಗಲ್ಲ ಇದು. 5 ಗ್ಯಾರಂಟಿ ಕೊಟ್ಟಿದ್ದೀರಿ, ಸರಿ. ಅದನ್ನು ನೆಟ್ಟಗೆ ಕೊಡಲು ವಿಫಲರಾಗಿದ್ದೀರಿ ಎಂದಿದ್ದೇನೆ. ಇಲ್ಲವೆಂದರೆ ಹೇಳಿ, ಬಹಿರಂಗ ಚರ್ಚೆಗೇ ಬರುತ್ತೇನೆ. ಎಲ್ಲಿಗೆ ಬರಲಿ? ಎಂದು ಸವಾಲು ಎಸೆದಿದ್ದಾರೆ. 

 

 

‘ದೂರದೃಷ್ಟಿ ಇಲ್ಲದ ಗ್ಯಾರಂಟಿಗಳು ಕರ್ನಾಟಕವನ್ನು ಆರ್ಥಿಕ ಆಪತ್ತಿಗೆ ದೂಡುತ್ತವೆ ಎಂದು ಆರ್ಥಿಕ ಇಲಾಖೆ ಕಳೆದ ಜೂನ್ (1-6-2023) ನಲ್ಲಿಯೇ ಎಚ್ಚರಿಸಿತ್ತು. ಗೃಹಲಕ್ಷ್ಮೀ ಯೋಜನೆ ರಾಜ್ಯವನ್ನು ಆದಾಯ ಕೊರತೆಗೆ ನೂಕಲಿದೆ, ಪ್ರತೀವರ್ಷ ಇಷ್ಟು ಬೃಹತ್ ಮೊತ್ತ ಹೊಂದಿಸುವುದು ಕಷ್ಟ. ರಾಜ್ಯ ದಿವಾಳಿ ಆಗುತ್ತದೆ ಎಂಬ ಎಚ್ಚರಿಕೆಯನ್ನು ಹಣಕಾಸು ಸಚಿವರಾಗಿ ಉಪೇಕ್ಷೆ ಮಾಡಿದ್ದು ನೀವಲ್ಲವೇ? ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಸ್ವತಃ ವಿತ್ತ ಸಚಿವರೇ ಉಲ್ಲಂಘಿಸಿದರೆ ಹೇಗೆ?

 

ಸೋಲು, ಗೆಲುವು ಜನಾಧೀನ. ಆ ಸತ್ಯ ನನಗೂ ಗೊತ್ತು, ನಿಮಗೂ ಗೊತ್ತು. ಆದರೆ, ಅರೆಬರೆ ಗ್ಯಾರಂಟಿಗಳಿಂದ ಲೋಕಸಭೆ ಗೆಲ್ಲುತ್ತೇವೆ ಎಂದು ಹೊರಟಿದ್ದೀರಿ. ಬನ್ನಿ ಅಖಾಡಕ್ಕೆ. ನಮ್ಮ ಸತ್ಯಕ್ಕೆ ಸೋಲೋ, ನಿಮ್ಮ ಸುಳ್ಳಿಗೆ ಗೆಲುವೋ.. ಎಂದು ನೋಡೋಣ.,’ ‘ಸಾಲದ ಶೂಲ’, ‘ಆರ್ಥಿಕ ದಿವಾಳಿತನ’, ‘ಆರ್ಥಿಕ ಅಸ್ಥಿರತೆ-ಅದಕ್ಷತೆ’, ‘ಪರಾಧೀನ ಬದುಕು’, ‘ಕಮೀಷನ್‌ ಕಾಂಡ’ ; ಇವು ನಿಮ್ಮ ಸರಕಾರ ರಾಜ್ಯಕ್ಕೆ ಕೊಟ್ಟಿರುವ 5 ಹೊಸ ಗ್ಯಾರಂಟಿಗಳು! ಇನ್ನು, ರಾಜ್ಯದ ಭವಿಷ್ಯ, ಪ್ರತಿಷ್ಠೆ ಎಲ್ಲವೂ ದೈವಾಧೀನ!! ಎಂದಿದ್ದಾರೆ.

ಆರ್ಥಿಕತೆಯ ಚಲನಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು, ಆರ್ಥಿಕ ಇಲಾಖೆಯು ನೀಡಿದ್ದ ಎಚ್ಚರಿಕೆಯನ್ನೂ ಗಂಭೀರವಾಗಿ ಪರಿಗಣಿಸದೇ ರಾಜ್ಯವನ್ನು ಬೃಹತ್‌ ಆದಾಯ ಕೊರತೆಗೆ ದೂಡಲಿದೆ ಎಂಬುದನ್ನು ‘ದಿ ಫೈಲ್‌’  ದಾಖಲೆ ಸಹಿತ  ಹೊರಗೆಡವಿತ್ತು.

 

ಅಲ್ಲದೇ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲು ಆರ್ಥಿಕ ಇಲಾಖೆಯು ಪ್ರಸ್ತುತ ಇರುವ ಹಣಕಾಸಿನ ನಿರ್ಬಂಧ ಮತ್ತು ಆರ್ಥಿಕ ಮುಗ್ಗಟ್ಟುಗಳಿರುವ ಕಾರಣ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈ ಯೋಜನೆಗೆ ಅವಕಾಶ ಕಲ್ಪಿಸುವುದು ಕಷ್ಟಕರ. ಪ್ರತಿ ಆರ್ಥಿಕ ವರ್ಷದಲ್ಲಿ ಅಗಾಧ ಪ್ರಮಾಣದ ಹಣವನ್ನು ಈ ಯೋಜನೆಗೆ ಒದಗಿಸಲು ಸಾಧ್ಯವಿಲ್ಲ. ಈ ಯೋಜನೆಗೆ ಮಾನದಂಡಗಳನ್ನು ನಿಗದಿಪಡಿಸುವ ಮೂಲಕ ಫಲಾನುಭವಿಗಳ ಸಂಖ್ಯೆಯನ್ನೂ ಅತ್ಯಗತ್ಯವಾಗಿ ಕಡಿತಗೊಳಿಸಬೇಕು ಎಂದು ಆರ್ಥಿಕ ಇಲಾಖೆಯು ಕಠಿಣ ಅಭಿಪ್ರಾಯ ನೀಡಿತ್ತು.

 

ಗೃಹ ಲಕ್ಷ್ಮಿ; ನಿರಂತರ ಸಾಲದ ಸುಳಿ, ಆದಾಯದ ಕೊರತೆ, ಹಣಕಾಸು ಹೊಣೆಗಾರಿಕೆ ಕಾಯ್ದೆ ಉಲ್ಲಂಘನೆ

ಪ್ರತಿ ಕುಟುಂಬದಲ್ಲಿರುವ ಮನೆ ಯಜಮಾನಿಗೆ ಗೃಹ ಲಕ್ಷ್ಮಿ ಯೋಜನೆಯಡಿ 2,000 ರು. ಸಹಾಯಧನ ನೀಡುವುದಾಗಿ ಚುನಾವಣೆಗೂ ಮುನ್ನ ಘೋಷಿಸಿದ್ದ ಕಾಂಗ್ರೆಸ್‌ ಪಕ್ಷವು ಯಾವುದೇ ಷರತ್ತುಗಳನ್ನು ವಿಧಿಸಿರಲಿಲ್ಲ. ಪಕ್ಷವು ಅತ್ಯಂತ ಬಹುಮತದಿಂದ ಅಧಿಕಾರಕ್ಕೆ ಬಂದ ಕೂಡಲೇ ಯೋಜನೆಯನ್ನು ಯಾವುದೇ ಷರತ್ತುಗಳಿಲ್ಲದೇ ಜಾರಿಗೊಳಿಸಲು ಹೊರಟಾಗ ಆರ್ಥಿಕ ಇಲಾಖೆಯು ವಾಸ್ತವಿಕ ನೆಲೆಗಟ್ಟಿನಲ್ಲಿ ನೀಡಿದ್ದ ಅಭಿಪ್ರಾಯಕ್ಕೆ ಮಣಿದು ಮಾನದಂಡಗಳನ್ನು ಮುಂದಿರಿಸಿ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆಗೊಳಿಸಿತ್ತು.

 

the fil favicon

SUPPORT THE FILE

Latest News

Related Posts