Saturday | March 21, 2026 |

ಡಿ ಕೆ ಶಿವಕುಮಾರ್‍‌ ವಿರುದ್ಧ ಸಿಬಿಐ ತನಿಖೆ; ಬಿಜೆಪಿ ಸರ್ಕಾರದ ಆದೇಶ ಹಿಂಪಡೆಯಲು ಸಚಿವ ಸಂಪುಟಕ್ಕೆ ಪ್ರಸ್ತಾವನೆ

Support THE-FILE

spot_img

ಬೆಂಗಳೂರು; ಆದಾಯ ಮೂಲಕ್ಕಿಂತ 200 ಕೋಟಿ ಹೆಚ್ಚು ಅಕ್ರಮ ಸಂಪಾದನೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮತ್ತು ಇತರರ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಹಸ್ತಾಂತರಿಸಿದ್ದ ಪ್ರಕರಣವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಹಿಂಪಡೆದುಕೊಳ್ಳಲು ಮುಂದಾಗಿದೆ. ಈ ಸಂಬಂಧ ಗೃಹ ಇಲಾಖೆಯು  ಸಚಿವ ಸಂಪುಟಕ್ಕೆ ಪ್ರಸ್ತಾವನೆಯನ್ನು ಮಂಡಿಸಿದೆ.

 

ಸಿಬಿಐ ತನಿಖೆಗೆ ವಹಿಸಿರುವ ಆದೇಶವನ್ನು ಹಿಂಪಡೆದು ಪ್ರಕರಣವನ್ನು ಕರ್ನಾಟಕ ಪೊಲೀಸ್‌ ಇಲಾಖೆ ಅಥವಾ ಲೋಕಾಯುಕ್ತ ಪೊಲೀಸ್‌ ತನಿಖೆಗೆ ಹಸ್ತಾಂತರಿಸಲು ಗೃಹ ಇಲಾಖೆಯು ಸಚಿವ ಸಂಪುಟದ ಅನುಮೋದನೆಗೆ ಕಡತವನ್ನು ಮಂಡಿಸಿರುವುದು ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರವನ್ನು ನೀಡಿದಂತಾಗಿದೆ.

 

‘ರಾಜಕೀಯ ಉದ್ದೇಶಕ್ಕಾಗಿಯೇ ಬಿ.ಎಸ್‌. ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ  ನೀಡಿದ್ದರು. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಅವರು ಇತ್ತೀಚೆಗಷ್ಟೇ  ತಿರುಗೇಟು ನೀಡಿದ್ದರು. ಇದರ ಬೆನ್ನಲ್ಲೇ ಪ್ರಕರಣವನ್ನು ಸಿಬಿಐ ತನಿಖೆಯಿಂದಲೇ ಹಿಂಪಡೆಯಲು ಸಚಿವ ಸಂಪುಟಕ್ಕೆ ಸಲ್ಲಿಸಿರುವ ಪ್ರಸ್ತಾವನೆಯು ಮುನ್ನೆಲೆಗೆ ಬಂದಿದೆ.

 

ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ನೀಡಿ ಆದೇಶಿಸಿದ್ದ ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆದೇಶ ರದ್ದು ಕೋರಿರುವ ಮೇಲ್ಮನವಿ ವಿಚಾರಣೆ ಕುರಿತು ಇದೇ ನವೆಂಬರ್‍‌ 29ರಂದು ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಿಗದಿಪಡಿಸಿರುವ ಬೆನ್ನಲ್ಲೇ ಹಿಂದಿನ ಸರ್ಕಾರವು ಸಿಬಿಐ ತನಿಖೆಗೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ಗೃಹ ಸಚಿವ ಡಾ ಜಿ ಪರಮೇಶ್ವರ್‍‌ ಅವರು ಅನುಮೋದಿಸಿದ್ದಾರೆ.

 

ಗೃಹ ಇಲಾಖೆಯು ಸಚಿವ ಸಂಪುಟಕ್ಕೆ ಮಂಡಿಸಿರುವ ಪ್ರಸ್ತಾವನೆ ಮತ್ತು ಈ ಸಂಬಂಧ ರಾಜ್ಯ ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರು ನೀಡಿರುವ 28 ಪುಟಗಳ ಅಭಿಪ್ರಾಯದ (ಕಡತ ಸಂಖ್ಯೆ ಹೆಚ್‌ಡಿ 4 ಸಿಒಡಿ 2023 , ವಿಷಯ ಸಂಖ್ಯೆ ಸಿ 552/2023) ಪ್ರತಿಯೂ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರು ನೀಡಿರುವ 2023ರ ನವೆಂಬರ್‍‌ 21ರಂದು ನೀಡಿದ್ದ ಅಭಿಪ್ರಾಯವನ್ನಾಧರಿಸಿ ಸಿಬಿಐ ತನಿಖೆಗೆ ಹೊರಡಿಸಿದ್ದ ಆದೇಶವನ್ನು ಹಿಂಪಡೆದುಕೊಳ್ಳುವ ಪ್ರಸ್ತಾವನೆಯನ್ನು ಮಂಡಿಸಿರುವುದು ಗೊತ್ತಾಗಿದೆ.

 

ಉಭಯ ಪಕ್ಷಕಾರರು ಜಂಟಿ ಮೆಮೊ ಹಾಕಿ ಮುಂದೂಡಿಕೆ ಕೋರಿದ ಹಿನ್ನೆಲೆಯಲ್ಲಿ ನವೆಂಬರ್‌ 29ಕ್ಕೆ ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಿಗದಿಪಡಿಸಿದೆ.

 

ಪ್ರಸ್ತಾವನೆಯಲ್ಲೇನಿದೆ?

 

ಅಂದಿನ ಮುಖ್ಯಮಂತ್ರಿಗಳ ನಿರ್ದೇಶನ ಹಾಗೂ ಅನುಮೋದನೆ ಅನ್ವಯ ಡಿ ಕೆ ಶಿವಕುಮಾರ್‍‌ ಮತ್ತು ಇತರರ ವಿರುದ್ಧ (ಸರ್ಕಾರದ ಆದೇಶ ಸಂಖ್ಯೆ ; E-HD/40/C0D/2019, ದಿನಾಂಕ 25-09-2019 ರಲ್ಲಿ ದೆಹಲಿ ವಿಶೇಷ ಪೊಲೀಸ್‌ ಎಸ್ಟಾಬ್ಲಿಷ್‌ಮೆಂಟ್‌ ಕಾಯ್ದೆ 1946 ಅಡಿ ಸೆಕ್ಷನ್‌ 6 ಅನ್ವಯ ತನಿಖೆ/ವಿಚಾರಣೆ ಕೈಗೊಳ್ಳಲು ಕೇಂದ್ರೀಯ ತನಿಖಾ ದಳ (ಸಿಬಿಐ)ಗೆ ವಹಿಸಿ ಆದೇಶಿಸಲಾಗಿದೆ.

 

ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿದ್ದ ಡಿ ಕೆ ಶಿವಕುಮಾರ್‍‌ ಅವರು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ರಿಟ್‌ ಅರ್ಜಿ (ಸಂಖ್ಯೆ 10479/2020) ಸಲ್ಲಿಸಿದ್ದರು. ನ್ಯಾಯಾಲಯವು ಈ ಪ್ರಕರಣವನ್ನು 2023ರ ಏಪ್ರಿಲ್‌ 20ರಂದು ಪ್ರಕರಣವನ್ನು ವಜಾಗೊಳಿಸಿದೆ.

 

ರಿಟ್‌ ಅರ್ಜಿಯ ತೀರ್ಪಿನ ವಿರುದ್ಧ ಡಿ ಕೆ ಶಿವಕುಮಾರ್‍‌ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ರಿಟ್‌ ಅಪೀಲ್‌ (ಸಂಖ್ಯೆ 646/2023) ದಾಖಲಿಸಿದ್ದಾರೆ. 2019ರ ಸೆ 25ರಂದು ಹಿಂದಿನ ಸರ್ಕಾರವು ಹೊರಡಿಸಿದ್ದ ಆದೇಶಕ್ಕೆ ಸಂಬಂಧಿಸಿದಂತೆ ಕಾನೂನಾತ್ಮಕ ಅಂಶಗಳ ಕುರಿತು ಅಡ್ವೋಕೇಟ್‌ ಜನರಲ್‌ ಅವರ ಅಭಿಪ್ರಾಯವನ್ನು ಕೋರಲಾಗಿದೆ. ಅವರು ಈ ಆದೇಶವನ್ನು ಹಿಂಪಡೆಯಲು ಅಭಿಪ್ರಾಯ ನೀಡಿದ್ದಾರೆ.

 

ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದು ಸ್ಥಳೀಯ ಪೊಲೀಸ್‌ ಅಥವಾ ಲೋಕಾಯುಕ್ತ ಪೊಲೀಸ್‌ ತನಿಖೆಗೆ ಹಸ್ತಾಂತರಿಸಬೇಕು ಎಂದು ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರು ನೀಡಿರುವ ಅಭಿಪ್ರಾಯವನ್ನು ಎಂದು ಪ್ರಸ್ತಾವನೆಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಹಿಂಪಡೆಯಲು ನೀಡಿರುವ ಸಮರ್ಥನೆ ಏನು?

 

ಅಡ್ವೋಕೇಟ್‌ ಜನರಲ್‌ ಅವರು ನೀಡಿದ್ದ ಅಭಿಪ್ರಾಯವನ್ನು ಸವಿವರವಾಗಿ ಪರಿಶೀಲಿಸಲಾಗಿದೆ. 2019ರ ಸೆ.24 ಮತ್ತು ಸೆ.25ರ ನಡುವೆ ಅಂದಿನ ಅಡ್ವೋಕೇಟ್‌ ಜನರಲ್‌ ಅವರ ಅಭಿಪ್ರಾಯವನ್ನು ಕೋರಲಾಗಿತ್ತು.

 

ಎಫ್‌ಐಆರ್‍‌ ದಾಖಲಿಸದೇ ಕೇಂದ್ರ ಸರ್ಕಾರದ ಸಿಬ್ಬಂದಿ ಕುಂದುಕೊರತೆ ಮತ್ತು ಪಿಂಚಣಿ ಮಂತ್ರಾಲಯದ ದಿನಾಂಕ 2018ರ ನವೆಂಬರ್‍‌ 22ರಂದು ( ಪತ್ರ ಸಂಖ್ಯೆ 270/37/2018-AVD-11) ಮಾರ್ಗಸೂಚಿಗಳನ್ನು ಪಾಲಿಸದೇ ತನಿಖೆ/ವಿಚಾರಣೆ ಕೈಗೊಳ್ಳಲು ಕೇಂದ್ರೀಯ ತನಿಖಾ ದಳ (ಸಿಬಿಐ)ಗೆ ವಹಿಸಲು ಆದೇಶ ಹೊರಡಿಸಲಾಗಿದೆ.

 

ಪ್ರಕರಣವನ್ನು ತನಿಖೆ ಮಾಡಲು ಪೊಲೀಸರ ಅಸಮರ್ಥತೆಯನ್ನು ಯಾವುದೇ ರೀತಿಯಲ್ಲಿಯೂ ಪರಿಶೀಲಿಸಲಾಗಿರುವುದಿಲ್ಲ. ಮತ್ತು ಇದಕ್ಕೆ ಸಂಬಂಧಿಸಿದಂತೆ ಪ್ರೊಫಾರ್ಮಾದಲ್ಲಿ ಕಡ್ಡಾಯಪಡಿಸಿರುವ ಅಂತರ ರಾಜ್ಯ ಅಥವಾ ದೇಶವ್ಯಾಪ್ತಿಯ ಪರಿಣಾಮಗಳು ಇರುವಂತಹ ಯಾವುದೇ ಸಮರ್ಥನೆಯೂ ಸಹ ಇರುವುದಿಲ್ಲ.

 

ಆದ್ದರಿಂದ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಸರ್ಕಾರವು ವಹಿಸಿರುವುದನ್ನು ಸಮರ್ಥಿಸಲು ಯಾವುದೇ ಅಗತ್ಯ ಮತ್ತು ಅಸಾಧಾರಣ ಸಂದರ್ಭಗಳನ್ನು 2019ರ ಸೆ.25ರಂದು ಸರ್ಕಾರದ ಆದೇಶವನ್ನು ಹೊರಡಿಸುವಾಗ ಪ್ರಸ್ತಾಪಿಸಿರುವುದಿಲ್ಲ ಈ ಎಲ್ಲಾ ಅಂಶಗಳು ಕೇಂದ್ರೀಯ ತನಿಖಾ ದಳದ ತನಿಖೆಗೆ ಅನುಮತಿ/ಸಮ್ಮತಿ ನೀಡಿರುವ ನಿರ್ಧಾರವು ಕಾನೂನಿಗೆ ಅನುಸಾರವಾಗಿರುವುದಿಲ್ಲ ಎಂದು ಸೂಚಿಸುತ್ತದೆ ಎಂದು ಗೃಹ ಇಲಾಖೆಯು ಸಮರ್ಥಿಸಿಕೊಂಡಿರುವುದು ಗೊತ್ತಾಗಿದೆ.

 

ಈ ಹಿನ್ನೆಲೆಯಲ್ಲಿ ಕರ್ನಾಟಕ ವ್ಯವಹಾರ ಹಂಚಿಕೆ ನಿಯಮಾವಳಿ 1977ರ ಒಂದನೇ ಅನುಸೂಚಿಯ ಐಟಂ 30ರ ಅನ್ವಯ ಡಿ ಕೆ ಶಿವಕುಮಾರ್‍‌ ಮತ್ತು ಇತರರ ವಿರುದ್ಧ ಸಿಬಿಐ ತನಿಖೆಗೆ ವಹಿಸಿ 2019ರರ ಸೆ.25ರಲ್ಲಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ಮತ್ತು ಈ ಪ್ರಕರಣದ ತನಿಖೆಯನ್ನು ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಗೆ ವಹಿಸಲು ಅನುಮೋದನೆ ನೀಡಬೇಕು ಎಂದು ಒಳಾಡಳಿತ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರವಿ ಎಸ್‌ ಅವರು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿರುವುದು ತಿಳಿದು ಬಂದಿದೆ.

 

ಅಕ್ರಮ ಆದಾಯ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ “ಉಭಯ ಪಕ್ಷಕಾರರು ಜಂಟಿ ಮೆಮೊ ಸಲ್ಲಿಸಿ, ವಿಚಾರಣೆ ಮುಂದೂಡಿಕೆ ಕೋರಿದರೆ ಪರಿಗಣಿಸಲಾಗುವುದು” ಎಂದಿತು. ಈ ಹಿನ್ನೆಲೆಯಲ್ಲಿ ಪಕ್ಷಕಾರರು ಜಂಟಿ ಮೆಮೊ ಸಲ್ಲಿಸಿದ್ದು, ಅದನ್ನು ಪರಿಗಣಿಸಿ ನ್ಯಾಯಾಲಯವು ವಿಚಾರಣೆಯನ್ನು ನವೆಂಬರ್‌ 29ಕ್ಕೆ ಮುಂದೂಡಿತ್ತು.

 

ಸರ್ವೋಚ್ಚ ನ್ಯಾಯಾಲಯವು ನವೆಂಬರ್‌ 11ರಂದು ತನ್ನ ಆದೇಶದಲ್ಲಿ ಶಿವಕುಮಾರ್‌ ಅವರ ಪರವಾಗಿ ನೀಡಿರುವ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಈಗಾಗಲೇ ಕರ್ನಾಟಕ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಈ ಅಂಶವನ್ನು ಗಮನಿಸಿದ್ದ ಪೀಠವು ಮಧ್ಯಂತರ ಆದೇಶ ತೆರವು ಮಾಡುವಂತೆ ಸಿಬಿಐ ಕೋರಿದ್ದ ಅರ್ಜಿ ಹಾಗೂ ಮೇಲ್ಮನವಿಯನ್ನು ತುರ್ತಾಗಿ ಅಂದರೆ ಎರಡು ವಾರದಲ್ಲಿ ಇತ್ಯರ್ಥಪಡಿಸುವಂತೆ ಹೈಕೋರ್ಟ್‌ಗೆ ಸೂಚಿಸಿರುವುದನ್ನು ಸ್ಮರಿಸಬಹುದು.

 

ಪ್ರಕರಣದ ಹಿನ್ನೆಲೆ

 

2013ರಿಂದ 2018ರ ಅವಧಿಯಲ್ಲಿ ಡಿ.ಕೆ. ಶಿವಕುಮಾರ್‌ ಅವರು ಗೊತ್ತಾದ ಆದಾಯ ಮೂಲಕ್ಕಿಂತ 200 ಕೋಟಿ ಹೆಚ್ಚು ಅಕ್ರಮ ಸಂಪಾದನೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿ ಸಿಬಿಐ ಎಫ್‌ಐಆರ್‌ ಹಾಕಿತ್ತು.

 

ಇದಕ್ಕೆ ರಾಜ್ಯ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ವಿಧಿಸುತ್ತಲೇ ಬಂದಿತ್ತು.

 

ಗೊತ್ತಾದ ಮೂಲಕ್ಕಿಂತಲೂ ಹೆಚ್ಚು ಆಸ್ತಿಯನ್ನು ಹೊಂದಿದ್ದರು ಎಂದು ಸಿಬಿಐ ತನ್ನ ಎಫ್‌ಐಆರ್‍‌ನಲ್ಲಿ ವಿವರಿಸಿತ್ತು.

 

 

ವಿಚಾರಣೆಯ ವೇಳೆ ಸಿಬಿಐ ತನಿಖೆಗೆ ಗ್ರೀನ್‌ ಸಿಗ್ನಲ್‌ ನೀಡಿತ್ತು. ಅದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಡಿ.ಕೆ. ಶಿವಕುಮಾರ್‌ ಚಿಂತನೆ ನಡೆಸಿದ್ದರು.

 

ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸಿಬಿಐ ಅವರು ಶೇ 90 ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ” ಎಂದಿದ್ದನ್ನು ಸ್ಮರಿಸಬಹುದು.

Hot this week

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

Topics

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

Related Articles

Popular Categories

error: Content is protected !!