ಬಜರಂಗದಳ ನಿಷೇಧ; ಡಿಜಿಐಜಿಪಿಯೊಂದಿಗೆ ಪತ್ರ ವ್ಯವಹಾರವನ್ನೇ ನಡೆಸದ ಗೃಹ ಇಲಾಖೆ

ಬೆಂಗಳೂರು;  ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದು ನೂರು ದಿನಗಳನ್ನು ದಾಟಿದರೂ ರಾಜ್ಯದಲ್ಲಿ ಬಜರಂಗದಳ ನಿಷೇಧಿಸುವ ಕುರಿತಂತೆ ಒಳಾಡಳಿತ ಇಲಾಖೆಯು ಪೊಲೀಸ್‌ ಮಹಾನಿರ್ದೇಶಕರೊಂದಿಗೆ ಒಂದೇ ಒಂದು ಪತ್ರ ವ್ಯವಹಾರವನ್ನೂ ಮಾಡಿಲ್ಲ.

 

ಕರ್ನಾಟಕದಲ್ಲಿ ಬಜರಂಗ ದಳ ನಿಷೇಧಕ್ಕೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ಕುರಿತಾಗಿ ನಡೆದಿರುವ ಸಭೆಗಳು, ನಡವಳಿಗಳು, ಪತ್ರ ವ್ಯವಹಾರಗಳಿಗಾಗಿ ‘ದಿ ಫೈಲ್‌’ ಆರ್‍‌ಟಿಐ ಅಡಿಯಲ್ಲಿ 2023ರ ಆಗಸ್ಟ್‌ 25ರಂದು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಗೆ 2023ರ ಸೆ.29ರಂದು ಹಿಂಬರಹ ನೀಡಿದೆ.

 

ಹಿಂಬರಹದಲ್ಲೇನಿದೆ?

 

ಕರ್ನಾಟಕದಲ್ಲಿ ಬಜರಂಗದಳ ನಿಷೇಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ಶಾಖೆಯಲ್ಲಿ 2023ರ ಜೂನ್‌ 1ರಿಂದ ಆಗಸ್ಟ್‌ 21ರವರೆಗೆ ಪೊಲೀಸ್‌ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರೊಂದಿಗೆ ಯಾವುದೇ ಪತ್ರ ವ್ಯವಹಾರವನ್ನು ನಡೆಸಿರುವುದಿಲ್ಲ ಎಂದು ಹಿಂಬರಹದಲ್ಲಿ ತಿಳಿಸಿದೆ.

 

2023ರ ಮೇ ನಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆ ಸಂಬಂಧ ಕಾಂಗ್ರೆಸ್‌ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ನಿಷೇಧಿಸುವುದಾಗಿ ಘೋಷಿಸಿತ್ತು. ಇದು ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರನ್ನು ಕೆರಳಿಸಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌, ಬಿಜೆಪಿ ಮತ್ತು ಬಜರಂಗದಳ ನಡುವೆ ವಾಕ್ಸಮರ ನಡೆದಿತ್ತು.

 

ಅಲ್ಲದೇ ಬಜರಂಗ ದಳ ಮತ್ತು ಪಾಪ್ಯುಲರ್‍‌ ಫ್ರಂಟ್‌ ಆಪ್ ಇಂಡಿಯಾವನ್ನೂ ನಿಷೇಧಿಸಲಾಗುವುದು ಎಂದು ಘೋಷಿಸಿತ್ತು. ಹೀಗಾಗಿ ಎರಡೂ ಸಂಘಟನೆಗಳು ಕಾಂಗ್ರೆಸ್‌ ಪ್ರಣಾಳಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೇಬಜರಂಗ ದಳ ನಿಷೇಧಿಸುವ ವಿಚಾರವು ವಿವಾದಕ್ಕೆ ತಿರುಗುತ್ತಿದ್ದಂತೆಯೇ ಎಐಸಿಸಿ ಮುಖಂಡ ಹಾಗೂ ಕರ್ನಾಟಕ ಉಸ್ತುವಾರಿ ರಣ ದೀಪ್ ಸಿಂಗ್‌ ಸುರ್ಜೆವಾಲಾ ಅವರೂ ಸಮಜಾಯಿಷಿ ನೀಡಿದ್ದರು. ಅಲ್ಲದೇ ವಿವಾದಕ್ಕೆ ಅಂತ್ಯ ಹಾಡಲು ಮುಂದಾಗಿದ್ದರು.

 

ಪಿಎಫ್‌ಐ, ಎಸ್‌ಡಿಪಿಐ ವಿರುದ್ಧ ಪ್ರಕರಣ ಹಿಂತೆಗೆತ; ಆರ್‌ಟಿಐ ಅಡಿ ಸ್ಪಷ್ಟ ಉತ್ತರ ನೀಡದ ಸರ್ಕಾರ

 

ಬಹುಮತ ಪಡೆಯುವ ಉತ್ಸಾಹದಲ್ಲಿದ್ದ ಕಾಂಗ್ರೆಸ್‌ಗೆ ಪ್ರಣಾಳಿಕೆಯೇ ಮುಳುವಾಗಿತ್ತು. ಪಿಎಫ್‌ಐ, ಭಜರಂಗದಳ ಸೇರಿದಂತೆ ಮತೀಯ ಸಂಘಟನೆಗಳ ನಿಷೇಧ ವಿವಾದಿಂದ ಹೊರಬರುವ ಪ್ರಯತ್ನ ನಡೆಸಿತ್ತು. ಈ ನಿಟ್ಟಿನಲ್ಲಿ ಈಗಾಗಲೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆಯನ್ನು ನಡೆಸಿದ್ದರು.

 

ಆರ್‌ಎಸ್‌ಎಸ್‌, ಎಸ್‌ಡಿಪಿಐ ಸಂಘಟನೆ ನಿಷೇಧ; ಮಾಹಿತಿ ನೀಡಲು ‘ವಿನಾಯಿತಿ’ ರಕ್ಷಣೆ ಪಡೆದ ಬಿಜೆಪಿ ಸರ್ಕಾರ

 

ಕಾಂಗ್ರೆಸ್ ಪ್ರಣಾಳಿಕೆಯಲ್ಲಿದ್ದ ಈ ಒಂದು ಅಂಶ ಬಿಜೆಪಿ ಪಾಲಿಗೆ ಬ್ರಹ್ಮಾಸ್ತ್ರವೇ ಸಿಕ್ಕಂತಾಗಿತ್ತು. ಕಾನೂನು ಉಲ್ಲಂಘಿಸಿದಲ್ಲಿ ಬಜರಂಗದಳದ ವಿರುದ್ಧವೂ ನಿಷೇಧದ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದರು. ಇದರಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪಕ್ಷಕ್ಕೆ ಹಿನ್ನಡೆ ಆಗುವ ಸಾಧ್ಯತೆ ಹೆಚ್ಚಾಗಿತ್ತು ಎಂದು ವಿಶ್ಲೇಷಿಸಲಾಗಿತ್ತು.

ಬಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ ಎಂದರು. ಇನ್ನು ಪಿಎಫ್ಐ ನಿಷೇಧ ಕುರಿತು ಕಾಂಗ್ರೆಸ್ ಹೇಳಿಕೆ ಬಗ್ಗೆ ಮಾತನಾಡಿದ್ದ ನಳಿನ್, ಪಿಎಪ್ ಐಯನ್ನು ನಾವು ನಿಷೇಧ ಮಾಡಿದ್ದೇವೆ, ಇವರೇನು ನಿಷೇಧ ಮಾಡೋದು? ಎಂದ್ದು ಹೇಳಿದ್ದನ್ನು ಸ್ಮರಿಸಬಹುದು.

the fil favicon

SUPPORT THE FILE

Latest News

Related Posts