Thursday | July 16, 2026 |

ಪಿಇಎಸ್‌ ವಿರುದ್ಧ ಕ್ರಮ; ನಿರ್ದಿಷ್ಟವಾಗಿ ಕೋರಿದ್ದರೂ ಮಾಹಿತಿ ಒದಗಿಸದೇ ಮುಚ್ಚಿಟ್ಟ ಸರ್ಕಾರ

ಬೆಂಗಳೂರು;  ಸರ್ವೋಚ್ಛ ನ್ಯಾಯಾಲಯ ಮತ್ತು ರಾಜ್ಯ ಸರ್ಕಾರದ ಆದೇಶಗಳನ್ನು  ಉಲ್ಲಂಘಿಸಿ  ಪ್ರತ್ಯೇಕ ಪ್ರವೇಶ ಪರೀಕ್ಷೆ ಮತ್ತು  ಕೌನ್ಸಲಿಂಗ್‌ ನಡೆಸಿರುವ ಪಿಇಎಸ್‌ ಸೇರಿದಂತೆ ಖಾಸಗಿ ವಿಶ್ವವಿದ್ಯಾಲಯಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರವೇಶ ಮೇಲ್ವಿಚಾರಣೆ ಸಮಿತಿ ಬರೆದಿದ್ದ ಪತ್ರವನ್ನಾಧರಿಸಿ ಕೈಗೊಂಡಿರುವ ಕ್ರಮಗಳ ಕುರಿತಾದ ಮಾಹಿತಿಯನ್ನು ಈಗಿನ ಕಾಂಗ್ರೆಸ್‌ ಸರ್ಕಾರವು ಮುಚ್ಚಿಡಲು ಹವಣಿಸುತ್ತಿದೆ.

 

ಹಿಂದಿನ ಇಬ್ಬರು ಮುಖ್ಯಮಂತ್ರಿಗಳಿಗೆ ಶೈಕ್ಷಣಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಡಾ ಎಂ ಆರ್‍‌ ದೊರೆಸ್ವಾಮಿ ಅವರು ಕುಲಾಧಿಪತಿ ಆಗಿರುವ  ಪಿಇಎಸ್‌ ವಿಶ್ವವಿದ್ಯಾಲಯದ ವಿರುದ್ಧ ದೂರು  ದಾಖಲಾಗಿತ್ತು. ಈ  ದೂರನ್ನಾಧರಿಸಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬಿ ಮನೋಹರ್‍‌ ಅಧ್ಯಕ್ಷತೆಯಲ್ಲಿದ್ದ ಪ್ರವೇಶ ಮೇಲ್ವಿಚಾರಣೆ ಸಮಿತಿಯು  ಮೂರು ವರ್ಷದ ಹಿಂದೆಯೇ ವರದಿ ನೀಡಿತ್ತು.

 

ಈ ವರದಿ ಆಧರಿಸಿ ಉನ್ನತ ಶಿಕ್ಷಣ ಇಲಾಖೆಯು ಯಾವ ಕ್ರಮ ಕೈಗೊಂಡಿದೆ ಎಂದು ‘ದಿ ಫೈಲ್‌’ 2023ರ ಸೆ.14ರಂದು ಆರ್‌ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿತ್ತು.  ಅರ್ಜಿಯಲ್ಲಿ   ಪ್ರವೇಶ ಮೇಲ್ವಿಚಾರಣೆ ಸಮಿತಿಯು ಬರೆದಿದ್ದ ಪತ್ರ, ಸಂಖ್ಯೆ ಮತ್ತು ದಿನಾಂಕವನ್ನು ನಿರ್ದಿಷ್ಟವಾಗಿ ನಮೂದಿಸಲಾಗಿತ್ತು.

 

ಆದರೆ ಉನ್ನತ ಶಿಕ್ಷಣ ಇಲಾಖೆಯು 2023ರ ಸೆ.29 ರಂದು ನೀಡಿರುವ ಉತ್ತರವು, ಮೂಲ ಅರ್ಜಿಯಲ್ಲಿ ನಿರ್ದಿಷ್ಟವಾಗಿ ಮಾಹಿತಿ ಕೋರಲಾಗಿದ್ದರೂ ‘ನಿರ್ದಿಷ್ಟವಾಗಿ ಮಾಹಿತಿ/ದಾಖಲೆಯನ್ನು ಕೋರಿರುವುದಿಲ್ಲ,’ ಎಂದು ಹಿಂಬರಹ ನೀಡಿದೆ.

 

 

ಉನ್ನತ ಶಿಕ್ಷಣ ಇಲಾಖೆಯು ಒದಗಿಸಿರುವ ದಾಖಲೆಗಳ ಪ್ರಕಾರ 2023ರ ಜೂನ್‌ 16ವರೆಗೆ ಕಡತ ಚಲನೆಯಲ್ಲಿದೆ. ಆದರೆ ಪಿಇಎಸ್‌ ವಿಶ್ವವಿದ್ಯಾಲಯದ ವಿರುದ್ಧ ನೋಟೀಸ್‌ ಕೂಡ ನೀಡದೇ ಇರುವುದು ಸೇರಿದಂತೆ ಯಾವುದೇ ಕ್ರಮ ವಹಿಸಿರುವ ಬಗ್ಗೆ ದಾಖಲೆಗಳು ಕಡತದಲ್ಲಿ ಕಂಡು ಬಂದಿಲ್ಲ.

 

ಪಿಇಎಸ್‌ ವಿಶ್ವವಿದ್ಯಾಲಯವು ಬಿ ಟೆಕ್‌ ಕೋರ್ಸ್‌ಗಳಿಗೆ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸಿ 2020ರ ಸೆಪ್ಟಂಬರ್‍‌ 18ರಿಂದ 20ವರೆಗೆ ಕೌನ್ಸಲಿಂಗ್‌ ನಡೆಸಿತ್ತು. ಇದು ಸರ್ವೋಚ್ಛ ನ್ಯಾಯಾಲಯ ನೀಡಿದ್ದ ತೀರ್ಪು ಮತ್ತು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಗಳ ಉಲ್ಲಂಘನೆಯಾಗಿತ್ತು. ಈ ಕುರಿತು ಪ್ರವೇಶ ಮೇಲ್ವಿಚಾರಣೆ ಸಮಿತಿಯು ಪಿಇಎಸ್‌ ವಿಶ್ವವಿದ್ಯಾಲಯದ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶಿಸಿತ್ತು ಎಂಬ ಅಂಶವನ್ನು ಕಡತದ ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಲಾಗಿತ್ತು. ಈ ಕುರಿತು ‘ದಿ ಫೈಲ್‌’ 2023ರ ಸೆ.15ರಂದು ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

ಪ್ರತ್ಯೇಕ ಸಿಇಟಿ; ಪಿಇಎಸ್‌ ಸೇರಿ ಖಾಸಗಿ ವಿವಿಗಳಿಂದ ಆದೇಶ ಉಲ್ಲಂಘನೆ, ಕಸದಬುಟ್ಟಿಗೆ ಸೇರಿದ ವರದಿ

 

ಸರ್ವೋಚ್ಛ ನ್ಯಾಯಾಲಯ ನೀಡಿರುವ ಆದೇಶ ಮತ್ತು ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳು (ಪ್ರವೇಶ, ನಿಯಂತ್ರಣ ಮತ್ತು ಶುಲ್ಕ ನಿಗದಿ) ಅಧಿನಿಯಮ 2006ರ ಕಲಂ 04 ಅನ್ವಯ ಒಂದೇ ರೀತಿಯ ವೃತ್ತಿಪರ ಶಿಕ್ಷಣವನ್ನು ನೀಡುತ್ತಿರುವ ಎಲ್ಲಾ ವೃತ್ತಿಪರ ಶಿಕ್ಷಣ ಸಂಸ್ಥೆಗಳು (ಎಲ್ಲಾ ಖಾಸಗಿ ಅನುದಾನ ರಹಿತ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಹಾಗೂ ಎಲ್ಲಾ ಖಾಸಗಿ ವಿಶ್ವವಿದ್ಯಾಲಯಗಳು, ಡೀಮ್ಡ್‌ ವಿಶ್ವವಿದ್ಯಾಲಯ) ಒಟ್ಟಾಗಿ ಸೇರಿಕೊಂಡು ಪಾರದರ್ಶಕತೆ ಮತ್ತು ಅರ್ಹತೆ ಪೂರೈಸಲು ವೃತ್ತಿ ಪರ ಇಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ ಕೋರ್ಸ್‌ಗಳಿಗೆ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಬೇಕು.

 

ಕೇಂದ್ರೀಕೃತ ಸಮಾಲೋಚನೆ ಅಥವಾ ಏಕ ಗವಾಕ್ಷಿ ವ್ಯವಸ್ಥೆ ಮೂಲಕ ವೃತ್ತಿಪರ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು. ಇದರಲ್ಲಿ ಕಾಮೆಡ್‌ ಕೆ ಕೋಟಾ, ಕೆಆರ್‍ಎಲ್‌ಎಂಪಿಸಿಎ ಕೋಟಾ, ಮ್ಯಾನೇಜ್‌ಮೆಂಟ್‌ ಕೋಟಾ, ಖಾಸಗಿ ಡೀಮ್ಡ್‌ ವಿವಿ ಸೀಟುಗಳು, ಖಾಸಗಿ ವಿಶ್ವವಿದ್ಯಾಲಯದ ಸೀಟುಗಳು ಒಳಗೊಂಡಿದ್ದವು.

 

ಆದರೆ ಪಿಇಎಸ್‌ ವಿಶ್ವವಿದ್ಯಾಲಯವು ಸರ್ವೋಚ್ಛ ನ್ಯಾಯಾಲಯ ಮತ್ತು ರಾಜ್ಯ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸಿತ್ತು. ಅಲ್ಲದೇ ಕೌನ್ಸಲಿಂಗ್‌ ಪ್ರಕ್ರಿಯೆಯನ್ನೂ ನಡೆಸಿತ್ತು ಎಂಬುದು ವರದಿಯಿಂದ ತಿಳಿದು ಬಂದಿದೆ.

 

ಪ್ರವೇಶ ಮೇಲ್ವಿಚಾರಣೆ ಸಮಿತಿ ವರದಿಯಲ್ಲೇನಿದೆ?

 

ಪಿಇಎಸ್‌ ವಿಶ್ವವಿದ್ಯಾಲಯವು ಬಿ ಟೆಕ್‌ ಕೋರ್ಸ್‌ಗಳಿಗೆ ಪ್ರತ್ಯೇಕವಾಗಿ ಪ್ರವೇಶ ಪರೀಕ್ಷೆ ನಡೆಸಿದೆ. ಈ ಮೂಲಕ ಸುಪ್ರೀಂ ಕೋರ್ಟ್‌ ತೀರ್ಪುಗಳನ್ನು ಉಲ್ಲಂಘಿಸಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸದೇ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದಂತಾಗಿದೆ. 2020ರ ಸೆಪ್ಟಂಬರ್‍‌ 18ರಿಂದ 20ರವರೆಗೆ ಪ್ರತ್ಯೇಕವಾಗಿ ಪ್ರವೇಶ ಪರೀಕ್ಷೆ ನಡೆಸಿರುವುದನ್ನು ಒಪ್ಪಿಕೊಂಡಿದೆ. ಈ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಮಿತಿಯು ತನ್ನ ವರದಿಯಲ್ಲಿ ನಿರ್ದೇಶನ ನೀಡಿತ್ತು.

 

ಕರ್ನಾಟಕ ಅನುದಾನ ರಹಿತ ಖಾಸಗಿ ಇಂಜಿನಿಯರಿಂಗ್‌ ಸಂಘ, ಕರ್ನಾಟಕ ಖಾಸಗಿ ಅನುದಾನ ರಹಿತ, ಕರ್ನಾಟಕ ಭಾಷಾ ಮತ್ತು ಮತೀಯ ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ, ಕರ್ನಾಟಕ ಅಲ್ಪಸಂಖ್ಯಾತ ವೃತ್ತಿ ಪರ ಕಾಲೇಜುಗಳ ಸಂಘ ಒಳಗೊಂಡಂತೆ ಇತರೆ ಖಾಸಗಿ ಮತ್ತು ಡೀಮ್ಡ್‌ ವಿಶ್ವವಿದ್ಯಾಲಯಗಳು ವೃತ್ತಿ ಪರ ಇಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸಿ ನಿಯಮಗಳನ್ನು ಉಲ್ಲಂಘಿಸಿವೆ ಎಂದು ಉನ್ನತ ಶಿಕ್ಷಣ ಇಲಾಖೆಯೇ (ತಾಂತ್ರಿಕ ಶಿಕ್ಷಣ) ಒಪ್ಪಿಕೊಂಡಿತ್ತು.

 

ಆದರೂ ಈಗಿನ ಕಾಂಗ್ರೆಸ್‌ ಸರ್ಕಾರವು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ಅಲ್ಲದೇ ಹಾಲಿ ಸಚಿವ ಎಂ ಸಿ ಸುಧಾಕರ್‍‌ ಅವರೂ ಸಹ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಗೊತ್ತಾಗಿದೆ.

 

ಪಿಇಎಸ್‌ ವಿಶ್ವವಿದ್ಯಾಲಯ ಮಾತ್ರವಲ್ಲದೇ ಎಂ ಎಸ್‌ ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ, ರೇವಾ ವಿಶ್ವವಿದ್ಯಾಲಯಗಳು ಪ್ರತ್ಯೇಕ ಪ್ರವೇಶ ಪರೀಕ್ಷೆಗೆ ಆನ್‌ಲೈನ್‌ ಅಧಿಸೂಚನೆ ಹೊರಡಿಸಿದ್ದವು ಎಂಬುದು ಉನ್ನತ ಶಿಕ್ಷಣ ಇಲಾಖೆಯ ದಾಖಲೆಯಿಂದ ತಿಳಿದು ಬಂದಿದೆ.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!