Saturday | March 21, 2026 |

ಬರಗಾಲದಲ್ಲೂ ಆರೇ ಆರು ತಿಂಗಳಲ್ಲಿ ಜಾಹೀರಾತುಗಳಿಗೆ 18.50 ಕೋಟಿ ವೆಚ್ಚ

Support THE-FILE

spot_img

ಬೆಂಗಳೂರು; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ 2023-24ನೇ ಸಾಲಿನ ಆಯವ್ಯಯದಲ್ಲಿ  ಒದಗಿಸಿದ್ದ 37.95 ಕೋಟಿ ರು. ನಲ್ಲಿ ಈಗಾಗಲೇ 18.50 ಕೋಟಿ ರು. ಗೂ ಹೆಚ್ಚು ಮೊತ್ತದಲ್ಲಿ ಜಾಹೀರಾತು ಬಿಡುಗಡೆ ಆಗಿರುವುದು ಇದೀಗ ಬಹಿರಂಗವಾಗಿದೆ.

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಎಕ್ಸ್‌ ಖಾತೆಯಲ್ಲಿ ಟೀಕಿಸಿದ್ದರ ಬೆನ್ನಲ್ಲೇ ಕೇವಲ ಆರೇ ಆರು ತಿಂಗಳಲ್ಲಿ 18.50 ಕೋಟಿ ರು. ಜಾಹೀರಾತಿಗೆ ಬಿಡುಗಡೆ ಆಗಿರುವುದು ಮುನ್ನೆಲೆಗೆ ಬಂದಿದೆ.

 

ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ, ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಹಣ ಬಿಡುಗಡೆ ಮತ್ತು ಬರ  ಪರಿಹಾರಕ್ಕೆ ಹಣ ಹೊಂದಿಸಲು ಏದುಸಿರು ಬಿಡುತ್ತಿರುವ ಸರ್ಕಾರವು ಜಾಹೀರಾತುಗಳಿಗೆ ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿರುವುದು ಸಾರ್ವಜನಿಕ ಟೀಕೆಗಳಿಗೆ ಗುರಿಯಾಗಿದೆ.

 

ಆಯವ್ಯಯದಲ್ಲಿ ಒದಗಿಸಿದ್ದ (ಲೆಕ್ಕ ಶೀರ್ಷಿಕೆ; 2220-60-106-0-05-059) 37.95 ಕೋಟಿ ರು. ಪೈಕಿ ಈಗಾಗಲೇ 18.50 ಕೋಟಿ ರು. ಮೊತ್ತದ ಜಾಹೀರಾತು ಬಿಡುಗಡೆ ಆಗಿದೆ. ಈ ಲೆಕ್ಕ ಶೀರ್ಷಿಕೆಯಲ್ಲಿ 19.45 ಕೋಟಿ ರು. ಮಾತ್ರ ಲಭ್ಯವಿದೆ ಎಂದು 2023ರ ಸೆಪ್ಟಂಬರ್‌ನಲ್ಲಿ ಅರ್ಥಿಕ ಇಲಾಖೆಯು ಕಡತದಲ್ಲಿ ಉಲ್ಲೇಖಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಲು ದ ಪಾಲಿಸಿ ಫ್ರಂಟ್‌ ನ ಸೇವೆ ಪಡೆಯಲು ವಾರ್ತಾ ಇಲಾಖೆ ಕೋರಿದ್ದ ಪ್ರಸ್ತಾವನೆಯಲ್ಲಿ ಜಾಹೀರಾತಿಗೆ ಮಾಡಿರುವ ಖರ್ಚಿನ ವಿವರವನ್ನು ಪ್ರಸ್ತಾವಿಸಲಾಗಿದೆ.

 

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ; ‘ದ ಪಾಲಿಸಿ ಫ್ರಂಟ್‌’ಗೆ 7.20 ಕೋಟಿ ಕೊಟ್ಟ ಸರ್ಕಾರ

 

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ 2023-24ನೇ ಸಾಲಿಗೆ ಪ್ರಚಾರ ಮತ್ತು ಐಇಸಿ ಕಾರ್ಯಕ್ರಮಗಳಿಗಾಗಿ (ಲೆಕ್ಕಶೀರ್ಷಿಕೆ; 2220-60-106-05 ) ಅಡಿಯಲ್ಲಿ 5000.00 ಲಕ್ಷ ರು.ಗಳನ್ನು ಒದಗಿಸಿತ್ತು. ಇದರಲ್ಲ ಅಗಸ್ಟ್‌ 19ಕ್ಕೆ 4,750.11 ಲಕ್ಷ ಅನುದಾನ ಲಭ್ಯತೆ ಇತ್ತು.

 

‘ಸಿದ್ದರಾಮಯ್ಯ ಅವರ ತಂಡ ಅಂತರ್ಜಾಲದಿಂದ ಯಾವುದೋ ಯುವಕನ ಫೋಟೋ ಕದ್ದು, ಈತ ಯುವನಿಧಿಯ ಫಲಾನುಭವಿ ಅಂತ ತೋರಿಸುತ್ತಿರುವುದು ಇವರ ಕಳ್ಳಾಟಕ್ಕೆ ಹಿಡಿದ ಕೈಗನ್ನಡಿ., ಎಂದು ಯತ್ನಾಳ್‌ ಅವರು ಟೀಕಿಸಿದ್ದನ್ನು ಸ್ಮರಿಸಬಹುದು.

 

ಅದೇ ರೀತಿ 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಪಾದಕರು ಮತ್ತು ಮಾಲೀಕತ್ವದ ಪತ್ರಿಕೆಗಳಿಗೆ ಮೇ 2023ರಿಂದಲೇ ಅನುದಾನ ಕೊರತೆಯಾಗಿದೆ. ಈ ಸಂಬಂಧ ಕೃಷಿ ಸಚಿವ     ಎನ್‌ ಚೆಲುವರಾಯಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವನ್ನೂ ಬರೆದಿದ್ದಾರೆ.

 

ಸರ್ಕಾರಿ ಕಾರ್ಯಕ್ರಮಗಳ ಜಾಹೀರಾತು ನೀಡುವ ಕ್ರಿಯಾ ಯೋಜನೆಗೆ  ಈಗಾಗಲೇ ಅನುಮೋದನೆ ದೊರೆತಿದೆ. ಇದರ ಪ್ರಕಾರ 2023ರ ಏಪ್ರಿಲ್‌ನಿಂದ ಜಾಹೀರಾತು ನೀಡಲಾಗುತ್ತಿದೆ. ಈ ಜಾಹೀರಾತುಗಳಿಗೆ ವಾ‍ರ್ಷಿಕ 22 ಕೋಟಿ ರು. ಅನುದಾನ ಅಗತ್ಯವಿದೆ. ಆದರೆ ಸಮಾಜ ಕಲ್ಯಾಣ ಇಲಾಖೆಯು ಎಸ್‌ಸಿಪಿ ಯೋಜನೆಯಡಿಯಲ್ಲಿ ಕೇವಲ 8.57 ಕೋಟಿ ರು ಮಾತ್ರ ಅನುದಾನವನ್ನು ಮೀಸಲಿಟ್ಟಿದೆ ಎಂಬ ಸಂಗತಿಯನ್ನು ಚೆಲುವರಾಯಸ್ವಾಮಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

ಈ ಹಿಂದಿನ ಬಿಜೆಪಿ ಸರ್ಕಾರವೂ ಸಹ ಜಾಹೀರಾತಿಗೆ ಅಪಾರ ಪ್ರಮಾಣದಲ್ಲಿ ಖರ್ಚು ಮಾಡಿತ್ತು.

 

ಕೋವಿಡ್‌-19 ಸಂದರ್ಭದಲ್ಲಿ ಜಾಹೀರಾತುಗಳಿಗೆ 3 ತಿಂಗಳಲ್ಲಿ 11 ಕೋಟಿ ವೆಚ್ಚ ಮಾಡಿತ್ತು.

 

ಕೋವಿಡ್‌-19 ಜಾಹೀರಾತಿನ ಜಾಲ; 3 ತಿಂಗಳಲ್ಲಿ 11 ಕೋಟಿ ವೆಚ್ಚ

 

 

ಮೋದಿ ಹುಟ್ಟುಹಬ್ಬಕ್ಕೆ ಜಾಹೀರಾತು ನೀಡಿದ್ದ ಹಿಂದಿನ ಸರ್ಕಾರವು ಪ್ರಾಯೋಜಿತ ಪುರವಣಿಗಳಿಗೆ 44.85 ಲಕ್ಷ ರು. ವೆಚ್ಚ ಮಾಡಿತ್ತು.

 

ಮೋದಿ ಹುಟ್ಟುಹಬ್ಬದ ಪ್ರಾಯೋಜಿತ ಪುರವಣಿಯ 44.85 ಲಕ್ಷ ರು .ವೆಚ್ಚ ಮಾಹಿತಿ ಮುಚ್ಚಿಟ್ಟರೇಕೆ?

 

 

ಮೋದಿ ಹುಟ್ಟುಹಬ್ಬದ ಪ್ರಾಯೋಜಿತ ಪುರವಣಿಯ 44.85 ಲಕ್ಷ ರು .ವೆಚ್ಚ ಮಾಹಿತಿ ಮುಚ್ಚಿಟ್ಟಿತ್ತು.

 

ಮೋದಿ ಹುಟ್ಟುಹಬ್ಬದ ಪ್ರಾಯೋಜಿತ ಪುರವಣಿಯ 44.85 ಲಕ್ಷ ರು .ವೆಚ್ಚ ಮಾಹಿತಿ ಮುಚ್ಚಿಟ್ಟರೇಕೆ?

 

 

ಕೋವಿಡ್‌ ಪರಿಹಾರ ನೀಡಲು ಚೌಕಾಸಿ ಮಾಡಿದ್ದ ಸರ್ಕಾರವು ತಮಿಳುನಾಡಿನ ರಾಜಕೀಯ ವಿಶ್ಲೇಷಣೆಗೆ 25 ಲಕ್ಷ ನೀಡಿತ್ತು.

 

ಕೋವಿಡ್‌ ಪರಿಹಾರ ನೀಡಲು ಚೌಕಾಸಿ, ತಮಿಳುನಾಡಿನ ರಾಜಕೀಯ ವಿಶ್ಲೇಷಣೆಗೆ 25 ಲಕ್ಷ

 

2 ವರ್ಷದ ಸಾಧನೆ ಬಿಂಬಿಸಲು 7.96 ಕೋಟಿ ಖರ್ಚು ಮಾಡಿದ್ದ ಸರ್ಕಾರವು ಜಾಹೀರಾತಿಗೆ 6.62 ಕೋಟಿ ವೆಚ್ಚ ಮಾಡಿತ್ತು.

 

2 ವರ್ಷದ ಸಾಧನೆ ಬಿಂಬಿಸಲು 7.96 ಕೋಟಿ, ಜಾಹೀರಾತಿಗೆ 6.62 ಕೋಟಿ ವೆಚ್ಚ

 

ಕೋವಿಡ್ ಲಸಿಕೆ ಅಭಿಯಾನ ಜಾಹೀರಾತು; 3 ತಿಂಗಳಲ್ಲಿ 2.77 ಕೋಟಿ ವೆಚ್ಚವಾದರೂ ಗುರಿ ಮುಟ್ಟಿರಲಿಲ್ಲ.

 

ಕೋವಿಡ್ ಲಸಿಕೆ ಅಭಿಯಾನ ಜಾಹೀರಾತು; 3ತಿಂಗಳಲ್ಲಿ 2.77 ಕೋಟಿ ವೆಚ್ಚವಾದರೂ ಮುಟ್ಟದ ಗುರಿ

 

ಸರ್ಕಾರದ ಸಾಧನೆ ಬಿಂಬಿಸಲು ಆರೇ ಆರು ತಿಂಗಳಲ್ಲಿ ಜಾಹೀರಾತಿಗೆ 26.84 ಕೋಟಿ ವೆಚ್ಚ ಮಾಡಿತ್ತು.

 

ಸರ್ಕಾರದ ಸಾಧನೆ ಬಿಂಬಿಸಲು ಆರೇ ಆರು ತಿಂಗಳಲ್ಲಿ ಜಾಹೀರಾತಿಗೆ 26.84 ಕೋಟಿ ವೆಚ್ಚ

 

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಚಾರಕ್ಕೆ ಜಾಹೀರಾತಿಗೆ 1.02 ಕೋಟಿ ಖರ್ಚು ಮಾಡಿತ್ಉತ.

 

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಚಾರದ ಜಾಹೀರಾತಿಗೆ 1.02 ಕೋಟಿ ವೆಚ್ಚ

 

ಅನುಭವ ಮಂಟಪದಲ್ಲಿ ಸಿ ಎಂ ಭಾಷಣದ ನೇರ ಪ್ರಸಾರಕ್ಕೆ 42.26 ಲಕ್ಷ ವೆಚ್ಚವಾಗಿತ್ತು.

 

ಅನುಭವಮಂಟಪ ; ಸಿಎಂ ಭಾಷಣದ ನೇರಪ್ರಸಾರಕ್ಕೆ 42.26 ಲಕ್ಷ ರು. ವೆಚ್ಚ

 

ಕೋವಿಡ್‌ ಜಾಹೀರಾತುಗಳಿಗಾಗಿ ನೀಡಿದ್ದ 1. 60 ಕೋಟಿ ವೆಚ್ಚದಲ್ಲಿ ಹೊಸದಿಗಂತಕ್ಕೆ ಸಿಂಹಪಾಲು ಲಭಿಸಿತ್ತು.

 

ಕೋವಿಡ್‌ ಜಾಹೀರಾತು; 1. 60 ಕೋಟಿ ವೆಚ್ಚದಲ್ಲಿ ಹೊಸದಿಗಂತಕ್ಕೆ ಸಿಂಹಪಾಲು

 

ಬಜೆಟ್‌ ಸಂದರ್ಭದಲ್ಲಿ ಸಿ ಎಂ ಜತೆ ವಿಶೇಷ ಸಂವಾದಕ್ಕೂ ಸುದ್ದಿವಾಹಿನಿಗಳಿಗೆ 38.97 ಲಕ್ಷ ರು ಪಾವತಿ ಮಾಡಿತ್ತು.

 

ಬಜೆಟ್‌; ಸಿ ಎಂ ಜತೆ ಸಂವಾದಕ್ಕೂ ಸುದ್ದಿವಾಹಿನಿಗಳಿಗೆ 38.97 ಲಕ್ಷ ರು ಪಾವತಿ

 

2019-20ರಲ್ಲಿ ಟಿ ವಿ ಚಾನಲ್‌ಗಳಿಗೆ 15.25 ಕೋಟಿ ರು., ಮುದ್ರಣ ಮಾಧ್ಯಮಕ್ಕೆ 6.79 ಕೋಟಿ ರು., ಸಾಮಾಜಿಕ ಜಾಲತಾಣಕ್ಕೆ 0.48 ಲಕ್ಷ ರು., 2020-21ರಲ್ಲಿ 17.45 ಕೋಟಿ ರು., ಜಾಹೀರಾತುಗಳಿಗೆ ಬಿಡುಗಡೆ ಮಾಡಿತ್ತು.

 

 

ಮುದ್ರಣ ಮಾಧ್ಯಮಗಳಿಗೆ 9.75 ಕೋಟಿ ರು., 2021-22ರ್‍ಲಿ ಟಿ ವಿ ಚಾನಲ್‌ಗಳಿಗೆ 36.58 ಕೋಟಿ ರು., ಮುದ್ರಣ ಮಾಧ್ಯಮಗಳಿಗೆ 13.26 ಕೋಟಿ ರು., ಸಾಮಾಜಿಕ ಜಾಲತಾಣಗಳಿಗೆ 1.18 ಕೋಟಿ ರು., 2022-23ರ ಸಾಲಿಗೆ ಮಾರ್ಚ್‌ 31, 2023ರ ಅಂತ್ಯಕ್ಕೆ 42.23 ಕೋಟಿ ರು. ಸೇರಿ ಒಟ್ಟಾರೆ 111.51 ಕೋಟಿ ರು. ನೀಡಿತ್ತು ಎಂದು ಸರ್ಕಾರವೇ 2023ರ ಫೆ.16ರಂದು ಸದನಕ್ಕೆ ಉತ್ತರಿಸಿದ್ದನ್ನು ಸ್ಮರಿಸಬಹುದು.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!