ಅಲ್ಪಸಂಖ್ಯಾತರಿಗೆ ಅನುದಾನ; 2,101.20 ಕೋಟಿ ರು.ನಲ್ಲಿ ಬಿಡುಗಡೆ ಮಾಡಿದ್ದು ಕೇವಲ 421.60 ಕೋಟಿ

ಬೆಂಗಳೂರು; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಆಯವ್ಯಯದಲ್ಲಿ ಒದಗಿಸಿದ್ದ 2,101.20 ಕೋಟಿ ರು. ಪೈಕಿ ಅಕ್ಟೋಬರ್‌ ಅಂತ್ಯಕ್ಕೆ ಕೇವಲ 421.60 ಕೋಟಿಯಷ್ಟೇ ಬಿಡುಗಡೆಯಾಗಿದೆ. ಅಲ್ಲದೇ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳಿಗೆ ಆಯವ್ಯಯದಲ್ಲಿ ಅನುದಾನ ಒದಗಿಸಿದೆಯಾದರೂ ಅತ್ಯಂತ ಕನಿಷ್ಠ ಪ್ರಮಾಣದಲ್ಲಿ ಬಿಡುಗಡೆ ಮಾಡಿದೆ.   ಮುಸ್ಲಿಂ ಸಮುದಾಯಕ್ಕೆ ನೀಡಲಾಗುವ ಅನುದಾನದ ಮೊತ್ತವನ್ನು 4 ರಿಂದ 10 ಸಾವಿರ ಕೋಟಿಗೆ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಹುಬ್ಬಳ್ಳಿಯ ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಭರವಸೆಗೆ  ಸದನದ ಒಳಗೆ ಮತ್ತು ಹೊರಗೆ … Continue reading ಅಲ್ಪಸಂಖ್ಯಾತರಿಗೆ ಅನುದಾನ; 2,101.20 ಕೋಟಿ ರು.ನಲ್ಲಿ ಬಿಡುಗಡೆ ಮಾಡಿದ್ದು ಕೇವಲ 421.60 ಕೋಟಿ