Wednesday | March 25, 2026 |

16ನೇ ಹಣಕಾಸು ಆಯೋಗ; ರಾಜ್ಯದ ಆರ್ಥಿಕ ಪರಿಸ್ಥಿತಿ, ಸವಾಲು ಮನವರಿಕೆಗೆ ತಜ್ಞರ ನೇಮಕ?

Support THE-FILE

spot_img

ಬೆಂಗಳೂರು; ಕೇಂದ್ರ ಸರ್ಕಾರವು ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಡಾ ಅರವಿಂದ್‌ ಪನಗಾರಿಯಾ ಅವರನ್ನು 16ನೇ ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ ಬೆನ್ನಲ್ಲೇ ಇದೇ ಆಯೋಗದ ಮುಂದೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ, ಆರ್ಥಿಕ ಸವಾಲುಗಳು ಕುರಿತು ಮನವರಿಕೆ ಮಾಡಲು ವಿಷಯ ತಜ್ಞರು ಮತ್ತು ಅನುಭವಿ ಆಡಳಿತಗಾರರ ತಂಡವೊಂದನ್ನು ರಚಿಸಲು ಮುಂದಾಗಿದೆ.

ರಾಜ್ಯದ 6ನೇ ವೇತನ ಆಯೋಗದ ಅಧ್ಯಕ್ಷರೂ ಆಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಎಂ ಆರ್‍‌ ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲು ಒಲವು ವ್ಯಕ್ತಪಡಿಸಿರುವುದು ಇದೀಗ ಬಹಿರಂಗವಾಗಿದೆ.
16ನೇ ಕೇಂದ್ರ ಹಣಕಾಸು ಆಯೋಗದ ಮುಂದೆ ರಾಜ್ಯ ಸರ್ಕಾರದ ಪರವಾಗಿ ತಾರ್ಕಿಕ ಮತ್ತು ನಿಖರ ಅಂಕಿ ಅಂಶಗಳೊಂದಿಗೆ ಮೆಮೊರೆಂಡಮ್‌ ಸಿದ್ಧಪಡಿಸುವ ಮಹತ್ತರ ಹೊಣೆಗಾರಿಕೆಯನ್ನು ಈ ಸಮಿತಿ ಮೇಲೆ ಹೊರಿಸಲಿದೆ.

ವಿಶೇಷವೆಂದರೇ  ಭಾರತ ಸರ್ಕಾರವು 16ನೇ ಕೇಂದ್ರ ಹಣಕಾಸು ಆಯೋಗವನ್ನು  ರಚಿಸುವ ಮುನ್ನವೇ ಮುಂಜಾಗ್ರತವಾಗಿ ಕರ್ನಾಟಕ ಸರ್ಕಾರವು ನವೆಂಬರ್‍‌ 2023ರಲ್ಲಿಯೇ ಎಂ ಆರ್‍‌ ಶ್ರೀನಿವಾಸಮೂರ್ತಿ ಅವರ ನೇತೃತ್ವದ ತಂಡವೊಂದನ್ನು ರಚಿಸಲು ಕಸರತ್ತು ನಡೆಸಿತ್ತು.

ಈ ಕುರಿತು ‘ದಿ ಫೈಲ್‌’ಗೆ ಕೆಲ ದಾಖಲೆಗಳು (FD -FCC/12/2023) ಲಭ್ಯವಾಗಿವೆ.

‘ಹಿಂದಿನ 15ನೇ ಕೇಂದ್ರ ಹಣಕಾಸು ಆಯೋಗದ ವರದಿಯಿಂದ ಕರ್ನಾಟಕ ರಾಜ್ಯಕ್ಕೆ ದೊರಕಬೇಕಾದ ಪಾಲು ಸರಿಯಾದ ಪ್ರಮಾಣದಲ್ಲಿ ದೊರಕಿಲ್ಲ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಬಹಳಷ್ಟು ಪ್ರಮಾಣದಲ್ಲಿ ಆರ್ಥಿಕ ನಷ್ಟವುಂಟಾಗಿದೆ. 15ನೇ ಹಣಕಾಸು ಆಯೋಗದ ವರದಿಯಿಂದ ಉಂಟಾಗಿರುವ ಅನ್ಯಾಯವು 16ನೇ ಕೇಂದ್ರ ಹಣಕಾಸು ಆಯೋಗದ ವರದಿಯಲ್ಲಿ ಮತ್ತೊಮ್ಮೆ ಉದ್ಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ,’ ಎಂದು ರಾಜ್ಯ ಸರ್ಕಾರವು ಇಂಗಿತ ವ್ಯಕ್ತಪಡಿಸಿರುವುದು ತಿಳಿದು ಬಂದಿದೆ.

15ನೇ ಹಣಕಾಸು ಆಯೋಗ; ಬಿಡಿಗಾಸೂ ನೀಡದ ಕೇಂದ್ರ, 551.53 ಕೋಟಿ ಮರಳಿಸಿದ ಆರೋಗ್ಯ ಇಲಾಖೆ

ರಾಜ್ಯದ ಆರ್ಥಿಕ ಪರಿಸ್ಥಿತಿ, ರಾಜ್ಯದ ಮುಂದಿರುವ ಆರ್ಥಿಕ ಸವಾಲುಗಳು ಮತ್ತಿತರೆ ವಿಷಯಗಳನ್ನು ಒಳಗೊಂಡಂತೆ ರಾಜ್ಯಕ್ಕೆ ದೊರಕಬೇಕಾದ ಆರ್ಥಿಕ ಸವಾಲು, ನ್ಯಾಯಯುತ ಪಾಲನ್ನು ಕೇಂದ್ರದಿಂದ ಪಡೆಯಲು ಸರಿಯಾಗಿ ಮನವರಿಕೆ ಮಾಡಲು ಒಂದು ವಿಸ್ತೃತವಾದ ಮೆಮೋರಂಡಮ್‌ ಸಲ್ಲಿಸಬೇಕಿದೆ. ಈ ಸಮಿತಿಯು ರಾಜ್ಯಕ್ಕೆ ಹೆಚ್ಚಿನ ಮತ್ತು ನ್ಯಾಯಯುತ ಪಾಲನ್ನು ಒದಗಿಸಿಕೊಡುವಲ್ಲಿ ಈ ಮೆಮೊರೆಂಡಮ್‌ ಗಣನೀಯ ಪಾತ್ರವನ್ನು ವಹಿಸತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ‘ದಿ ಫೈಲ್‌’ ಮುಂದೆ ಆಶಯ ವ್ಯಕ್ತಪಡಿಸಿದರು.

15ನೇ ಹಣಕಾಸು ಆಯೋಗ; 2,142 ಕೋಟಿ ಬಾಕಿ ಉಳಿಸಿಕೊಂಡರೂ ತುಟಿಬಿಚ್ಚದ ಈಶ್ವರಪ್ಪ

ತಂಡದಲ್ಲಿ ಯಾರೆಲ್ಲಾ ಇರಲಿದ್ದಾರೆ?

ಎಂ ಆರ್‍‌ ಶ್ರೀನಿವಾಸ್ ಮೂರ್ತಿ ಅವರ ನೇತೃತ್ವದಲ್ಲಿ ಐಸೆಕ್‌ನ ನಿವೃತ್ತ ನಿರ್ದೇಶಕರೂ ಮತ್ತು 14ನೇ ಕೇಂದ್ರ ಹಣಕಾಸು ಆಯೋಗದ ಸದಸ್ಯರೂ ಆಗಿದ್ದ ಡಾ ಗೋವಿಂದರಾವ್‌, ಐಐಎಸ್ಸಿಯ ಡಾ ನರೇಂದ್ರಪಾಣಿ, ನಾರಾಯಣರಾವ್‌ ಅವರನ್ನೊಳಗೊಂಡ ಪರಿಣಿತರ ತಂಡವಿರಲಿದೆ. ಇವರಿಗೆ ಲಂಪ್‌ಸಮ್‌ ಒಟ್ಟು 5 ಲಕ್ಷ ರು. ಗೌರವ ಧನ ನೀಡಬಹುದು ಎಂದು ಗೊತ್ತಾಗಿದೆ.

15ನೇ ಹಣಕಾಸು ಆಯೋಗ; ರಾಜ್ಯ ವಿಪತ್ತು ನಿರ್ವಹಣೆಗೆ ಈವರೆಗೂ ಬಿಡುಗಡೆಯಾಗದ ಅನುದಾನ

ಕೇಂದ್ರ ಸರಕಾರವು ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಡಾ.ಅರವಿಂದ್ ಪನಗಾರಿಯಾ ಅವರನ್ನು 16ನೇ ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಈಗಾಗಲೇ ಆದೇಶವನ್ನು ಹೊರಡಿಸಿದೆ. ಪನಗಾರಿಯಾ ಅಮೆರಿಕದ ಕೊಲಂಬಿಯಾ ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಆರ್ಥಿಕ ವ್ಯವಹಾರಗಳ ಇಲಾಖೆಯು ಹೊರಡಿಸಿರುವ ಅಧಿಸೂಚನೆಯಂತೆ ಐಎಎಸ್ ಅಧಿಕಾರಿ ರಿತ್ವಿಕ್ ರಂಜನಂ ಪಾಂಡೆ ಅವರು ಹಣಕಾಸು ಆಯೋಗದ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಬಿಡುಗಡೆಯಾಗದ 552 ಕೋಟಿ; ಅನುಷ್ಠಾನಗೊಂಡಿಲ್ಲ ಆಯೋಗದ ಶಿಫಾರಸ್ಸು?

ಆಯೋಗದ ಅಧ್ಯಕ್ಷರು ಮತ್ತು ಇತರ ಸದಸ್ಯರು ಹುದ್ದೆಯನ್ನು ವಹಿಸಿಕೊಂಡ ದಿನಾಂಕದಿಂದ ವರದಿ ಸಲ್ಲಿಕೆಯ ದಿನಾಂಕ ಅಥವಾ 2025,ಅ.31;ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅಧಿಕಾರದಲ್ಲಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹಣಕಾಸು ಆಯೋಗವು ಕೇಂದ್ರ ಮತ್ತು ರಾಜ್ಯಗಳ ನಡುವೆ ತೆರಿಗೆ ಹಂಚಿಕೆ,ಭಾರತದ ಸಂಚಿತ ನಿಧಿಯಿಂದ ರಾಜ್ಯಗಳಿಗೆ ಆದಾಯ ಅನುದಾನವನ್ನು ನಿಯಂತ್ರಿಸುವ ನೀತಿಗಳು,ರಾಜ್ಯ ಹಣಕಾಸು ಆಯೋಗದ ಶಿಫಾರಸುಗಳ ಆಧಾರದಲ್ಲಿ ಪಂಚಾಯತ್‌ಗಳು ಮತ್ತು ನಗರಸಭೆಗಳ ಸಂಪನ್ಮೂಲಗಳನ್ನು ಹೆಚ್ಚಿಸಲು ರಾಜ್ಯದ ಸಂಚಿತ ನಿಧಿಯನ್ನು ಹೆಚ್ಚಿಸಲು ಅಗತ್ಯ ಕ್ರಮಗಳ ಬಗ್ಗೆ ಶಿಫಾರಸುಗಳನ್ನು ಮಾಡುತ್ತದೆ.

ಆಯೋಗವು ವಿಪತ್ತು ನಿರ್ವಹಣಾ ಕ್ರಮಗಳಿಗೆ ಹಣಕಾಸು ಒದಗಿಸುವ ಪ್ರಸ್ತುತ ವ್ಯವಸ್ಥೆಗಳನ್ನು ಪುನರ್‌ಪರಿಶೀಲಿಸಬಹುದು ಮತ್ತು ಸೂಕ್ತ ಶಿಫಾರಸುಗಳನ್ನು ಮಾಡಬಹುದು ಎಂದೂ ಅಧಿಸೂಚನೆಯಲ್ಲಿ ಹೇಳಲಾಗಿದೆ. ಆಯೋಗವು 2026,ಎ.1ರಿಂದ ಆರಂಭಗೊಳ್ಳುವ ಐದು ವರ್ಷಗಳ ಅವಧಿಗಾಗಿ ತನ್ನ ವರದಿಯನ್ನು 2025,ಅ.31ರೊಳಗೆ ಸಲ್ಲಿಸಬೇಕಿದೆ.

Hot this week

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Topics

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

Related Articles

Popular Categories

error: Content is protected !!