Wednesday | May 27, 2026 |

ಸಿಎಂ ತವರು ಜಿಲ್ಲೆಯಲ್ಲಿ 2,308 ಸೇರಿ ಒಟ್ಟಾರೆ 25,032 ನವಜಾತ ಶಿಶುಗಳು ಮರಣ; ಇಳಿಕೆಯಾಗದ ಮರಣ ದರ

ಬೆಂಗಳೂರು; ಮಾತೃ ಪೂರ್ಣ ಯೋಜನೆ, ಮಾತೃ ವಂದನಾ, ಪೌಷ್ಟಿಕ ಆಹಾರ ವಿತರಣೆ ಸೇರಿ ನಾನಾ ಯೋಜನೆಗಳಿಗೆ ಕೋಟ್ಯಂತರ ರುಪಾಯಿ ಖರ್ಚು ಮಾಡಿದ್ದರೂ ಸಹ ರಾಜ್ಯದಲ್ಲಿ ನವಜಾತ ಶಿಶುಗಳ ಮರಣ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿಲ್ಲ.

 

ರಾಜ್ಯದಲ್ಲಿ ಕಳೆದ ನಾಲ್ಕು ವರ್ಷದಲ್ಲಿ 25,032 ನವಜಾತ ಶಿಶುಗಳು ಮರಣ ಹೊಂದಿವೆ ಎಂದು ರಾಜ್ಯ ಸರ್ಕಾರವು ವಿಧಾನಮಂಡಲಕ್ಕೆ ಒದಗಿಸಿರುವ ಮಾಹಿತಿಯು ಆತಂಕಕಾರಿಯಾಗಿದೆ.

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಳೆದ ನಾಲ್ಕು ವರ್ಷದಲ್ಲಿ 2,308 ನವಜಾತ ಶಿಶುಗಳು ಮರಣ ಹೊಂದಿವೆ. 2023ರ ಏಪ್ರಿಲ್‌ನಿಂದ 2024ರ ಜನವರಿವರೆಗೆ 437 ನವಜಾತ ಶಿಶುಗಳು ಮೃತಪಟ್ಟಿವೆ. ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ 1,074 ನವಜಾತ ಶಿಶುಗಳು ಮರಣ ಹೊಂದಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಾಹಿತಿ ಒದಗಿಸಿದ್ದಾರೆ.

 

ಬಳ್ಳಾರಿಯಲ್ಲಿ 2,174,  ಬೆಂಗಳೂರು ನಗರ 2,557, ಕಲ್ಬುರ್ಗಿಯಲ್ಲಿ 1,443, ಧಾರವಾಡ 1,225, ಬೀದರ್‍‌ನಲ್ಲಿ 839,ದಾವಣಗೆರೆಯಲ್ಲಿ 947, ಚಿತ್ರದುರ್ಗ 662, ಗದಗ್‌ನಲ್ಲಿ 488, ಹಾಸನದಲ್ಲಿ 1,049, ಕೊಪ್ಪಳದಲ್ಲಿ 1,519, ರಾಯಚೂರು 2,142, ಶಿವಮೊಗ್ಗದಲ್ಲಿ 1,089, ತುಮಕೂರಿನಲ್ಲಿ 742, ಉಡುಪಿಯಲ್ಲಿ 283, ಮಂಡ್ಯದಲ್ಲಿ 533, ಕೋಲಾರದಲ್ಲಿ 569, ದಕ್ಷಿಣ ಕನ್ನಡದಲ್ಲಿ 1,065, ಉತ್ತರ ಕನ್ನಡದಲ್ಲಿ 259, ವಿಜಯಪುರದಲ್ಲಿ 349 ಮಕ್ಕಳು ಮೃತಪಟ್ಟಿವೆ.

 

ರಾಜ್ಯ ಸರಕಾರಿ ಆಸ್ಪತ್ರೆಗಳಲ್ಲೂ ಆಧುನಿಕ, ತಂತ್ರಜ್ಞಾನ ಆಧರಿತ ಉಪಕರಣಗಳನ್ನು ಅಳವಡಿಸುವ ಮೂಲಕ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹೀಗಿದ್ದರೂ ನವಜಾತ ಶಿಶುಗಳ ಮರಣ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ.

 

ವಿಶೇಷವೆಂದರೇ ನವಜಾತ ಶಿಶು ಮರಣ ದರ ಪ್ರಮಾಣದ ವಿಷಯದಲ್ಲಿ ರಾಷ್ಟ್ರೀಯ ಆರೋಗ್ಯ ನೀತಿ 2025 ನಿಗದಿಪಡಿಸಿದ್ದ ಗುರಿಯನ್ನು 5 ವರ್ಷವೇ ಮುಂಚಿತವಾಗಿ ಸಾಧನೆ ಮಾಡಿದೆ ಎಂದೂ ಸರ್ಕಾರವು ಉತ್ತರಿಸಿದೆ. ರಾಷ್ಟ್ರೀಯ ಆರೋಗ್ಯ ನೀತಿಯ 2017ರ ಅನ್ವಯ ಎಲ್ಲಾ ರಾಜ್ಯಗಳಿಗೆ 2025ರ ವೇಳೆಗೆ ನವಜಾತ ಶಿಶು ಮರಣ ದರವನ್ನು 16ಕ್ಕಿಂತ (ಪ್ರತಿ 1000 ಜೀವಂತ ಜನನಗಳಿಗೆ) ಕಡಿಮೆ ಸಾಧಿಸಲು ಗುರಿ ನೀಡಿವೆ.

 

ಮಾಧರಿ ವ್ಯವಸ್ಥೆ 2020ರ ವರದಿ ಅನ್ವಯ ಕರ್ನಾಟಕ ರಾಜ್ಯದ ನವಜಾತ ಶಿಶು ಮರಣ ದರವು ಪ್ರಸ್ತುತ 14 ( ಪ್ರತಿ 1000 ಜೀವಂತ ಜನನಗಳಿಗೆ) ಇದೆ ಎಂದು ವಿವರಿಸಿದೆ.

 

ಅವಧಿಪೂರ್ವ ಜನನ, ಶಿಶುವಿನ ಕಡಿಮೆ ತೂಕದಿಂದಾಗುವ ತೊಂದರೆಗಳು, ಜನನ ಸಮಯದಲ್ಲಿ ಉಸಿರುಗಟ್ಟುವಿಕೆ, ನ್ಯುಮೋನಿಯಾ, ಸೆಪ್ಸಿಸ್‌ ನವಜಾತ ಶಿಶುಗಳ ಕಾಮಾಲೆ, ಅತಿಸಾರಭೇದಿ ಕಾರಣಗಳಿಂದಾಗಿ ನವಜಾತ ಶಿಶುಗಳು ಸಾವನ್ನಪ್ಪುತ್ತಿವೆ.

 

ನವಜಾತ ಶಿಶುಗಳ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಮತ್ತು ನವಜಾತ ಶಿಶು ಮರಣಗಳನ್ನು ತಡೆಯಲು ವೈದ್ಯಕೀಯ ಮಹಾವಿದ್ಯಾಲಯಗಳ ಆಸ್ಪತ್ರೆಗಳು ಮತ್ತು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳಿಗೆ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ.

 

ತಾಲೂಕು ಮಟ್ಟದ ಪೌಷ್ಠಿಕ ಪುನಶ್ಚೇತನ ಕೇಂದ್ರದಲ್ಲಿ ರಾಜ್ಯ ಅನುದಾನದಿಂದ ದಿನವೊಂದಕ್ಕೆ ದಾಖಲಾಗುವ ಪ್ರತೀ ಮಗುವಿಗೆ ಒಟ್ಟು 684 ರು., ಜಿಲ್ಲಾ ಮಟ್ಟದ ಕೇಂದ್ರದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಿಂದ ದಿನವೊಂದಕ್ಕೆ ದಾಖಲಾಗುವ ಪ್ರತೀ ಮಗುವಿಗೆ ಒಟ್ಟು 450 ರು. ನೀಡಲಾಗುತ್ತಿದೆ.

 

ಕಡಿಮೆ ಹುಟ್ಟು ತೂಕವುಳ್ಳ ನವಜಾತ ಶಿಶುಗಳಿಗೆ ಆರೈಕೆ ಮಾಡಲು ವಿಶೇಷ ನವಜಾತ ಶಿಶು ಆರೈಕೆ ಘಟಕಗಳನ್ನು ಹೊಂದಿದೆ. ಅಲ್ಲದೇ ಎಲ್ಲಾ ಆಸ್ಪತ್ರೆಗಳಲ್ಲಿ ಕಾಂಗರೂ ಮದರ್‍‌ ಕೇರ್‍‌ ವಾರ್ಡ್‌ಗಳನ್ನು ಸ್ಥಾಪಿಸಿದೆ. ವಿಶೇ‍ಷ ಆರೈಕೆ ಅಗತ್ಯವಿರುವ ಗಂಭೀರ ಅನಾರೋಗ್ಯದ ಶಿಶುಗಳಿಗೆ ಅನುಕೂಲವಾಗುವಂತೆ ವಿಭಾಗಕ್ಕೆ ಒಂದರಂತೆ ನಾಲ್ಕು ಅಂಬ್ಯಲೆನ್ಸ್‌ ಸೇವೆಗಳನ್ನೂ ಒದಗಿಸುತ್ತಿದೆ ಎಂದು ವಿವರ ಒದಗಿಸಿದೆ.

Hot this week

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...
Please Scan to make Your Contribution

Topics

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

Related Articles

Popular Categories

error: Content is protected !!