Thursday | April 16, 2026 |

ಅಕ್ರಮ ಆಸ್ತಿ ಗಳಿಕೆ; ಹೈಕೋರ್ಟ್‌ ವಿಸ್ತೃತ ಪೀಠದ ವಿಚಾರಣೆ ನಡುವೆಯೇ ಡಿಕೆಶಿ ವಿರುದ್ಧ ಎಫ್‌ಐಆರ್‍‌

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರ ವಿರುದ್ಧದ ಪ್ರಕರಣವನ್ನು ಸಿಬಿಐನಿಂದ ಹಿಂಪಡೆದುಕೊಂಡಿರುವುದನ್ನು ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು  ಪ್ರಶ್ನಿಸಿರುವ ಅರ್ಜಿಯು ಹೈಕೋರ್ಟ್‌ನ ವಿಸ್ತೃತ ಪೀಠವು ವಿಚಾರಣೆ ನಡೆಸುತ್ತಿರುವ ಹೊತ್ತಿನಲ್ಲಿಯೇ ಲೋಕಾಯುಕ್ತ ಪೊಲೀಸರು ಡಿ ಕೆ ಶಿವಕುಮಾರ್‍‌ ವಿರುದ್ಧ ಎಫ್‌ಐಆರ್‍‌ ದಾಖಲಿಸಿದ್ದಾರೆ.

 

ಸಿಬಿಐಗೆ ತನಿಖೆಗೆ ವಹಿಸಿ ಹೊರಡಿಸಿದ್ದ ಆದೇಶವನ್ನು  ಹಿಂಪಡೆದಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರವು ತಿಂಗಳ ಹಿಂದೆಯೇ ಲೋಕಾಯುಕ್ತಕ್ಕೆ  ವರ್ಗಾಯಿಸಿತ್ತು.

 

 

ಈ ಸಂಬಂಧ ಎಫ್‌ಐಆರ್‍‌ ಸೇರಿದಂತೆ ಯಾವುದೇ ಕ್ರಮವನ್ನು ಕೈಗೊಳ್ಳದ ಲೋಕಾಯುಕ್ತ ಪೊಲೀಸರು ಅಳೆದು ತೂಗಿ ತಿಂಗಳ ನಂತರ ಎಫ್‌ಐಆರ್‍‌ ದಾಖಲಿಸಿದ್ದಾರೆ.

 

ರಾಜ್ಯ ಬಜೆಟ್‌ ಅಧಿವೇಶನ ಆರಂಭವಾಗಿರುವ ಹೊತ್ತಿನಲ್ಲಿಯೇ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ವಿರುದ್ಧ ಎಫ್‌ಐಆರ್‍‌ ದಾಖಲಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

 

ಡಿ ಕೆ ಶಿವಕುಮಾರ್‌ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆಗೆ ಹೊರಡಿಸಿದ್ದ ಆದೇಶವನ್ನು ಕಾಂಗ್ರೆಸ್‌ ಸರ್ಕಾರವು ಹಿಂಪಡೆದುಕೊಂಡಿರುವುದನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಈ ಸಂಬಂಧ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ನ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

 

 

ಈ ಪೀಠದಲ್ಲಿ ಅರ್ಜಿಯು  ಇತ್ಯರ್ಥವಾಗುವವರೆಗೂ ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಡಿ ಕೆ ಶಿವಕುಮಾರ್‍‌ ಅವರ ವಕೀಲರು ಕೋರಿರುವ ನಡುವೆಯೇ ಲೋಕಾಯುಕ್ತ ಪೊಲೀಸರು ಎಫ್‌ಐಆರ್‍‌ ದಾಖಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ವಿಶೇಷವೆಂದರೇ ಈ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ ಇದೇ ಫೆಬ್ರುವರಿ 12ರಂದು ನಡೆಸಲಿದೆ.

 

 

ಯತ್ನಾಳ್‌ ಪರ ವಕೀಲ ವೆಂಕಟೇಶ್‌ ದಳವಾಯಿ ಅವರು ತಮ್ಮ ಅರ್ಜಿಯಲ್ಲಿ ಲೋಕಾಯುಕ್ತವನ್ನು ಪ್ರತಿವಾದಿಯನ್ನಾಗಿಸಲು ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಮಾನ್ಯ ಮಾಡಲಾಗಿದೆ ಎಂದು ನ್ಯಾಯಾಲಯ ಹೇಳಿತು. ಸಿಬಿಐ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ್‌ ಅವರು ಅರ್ಜಿಯ ಪ್ರತಿಯನ್ನು ಅಡ್ವೊಕೇಟ್‌ ಜನರಲ್‌ ಹಾಗೂ ಶಿವಕುಮಾರ್‌ ಅವರ ಪರ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರ ಜೊತೆ ಹಂಚಿಕೊಳ್ಳಲು ನಿರ್ದೇಶಿಸಿದ ನ್ಯಾಯಾಲಯ ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿತು.

 

ಸಭಾಧ್ಯಕ್ಷರು ವಿಧಾನಸಭೆ  ಸದಸ್ಯರನ್ನು  ನೇಮಿಸುವ  ಪ್ರಾಧಿಕಾರವಾಗಿಲ್ಲ. ಹೀಗಾಗಿ ಡಿ ಕೆ ಶಿವಕುಮಾರ್‌ ಅವರ ವಿರುದ್ಧ ತನಿಖೆ, ಅಭಿಯೋಜನೆ ಕೈಗೊಳ್ಳಲು ಸಭಾಧ್ಯಕ್ಷರು ಅನುಮತಿ  ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ವಿಧಾನಸಭೆ ಸಚಿವಾಲಯವು ಆರ್‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿತ್ತು.

 

ಸಿಬಿಐ ತನಿಖೆಗೆ ವಹಿಸಲು ವಿಧಾನಸಭೆ ಸಭಾಧ್ಯಕ್ಷರ ಅನುಮತಿ ನೀಡುವ ಅಗತ್ಯವೇ ಇಲ್ಲ ಎಂದು ವಿಧಾನಸಭೆ ಸಚಿವಾಲಯವೇ ಪುನರುಚ್ಛರಿಸಿರುವುದು ಪ್ರತಿಪಕ್ಷಗಳ ಕೈಗೆ ಪ್ರಬಲ ಅಸ್ತ್ರವೊಂದನ್ನು ನೀಡಿದಂತಾಗಿತ್ತು.

 

 

‘ವಿಧಾನಸಭೆಯ ಸದಸ್ಯರನ್ನು ಸಭಾಧ್ಯಕ್ಷರು ನೇಮಿಸುವ ಪ್ರಾಧಿಕಾರವಾಗಿರದೇ ಇರುವುದರಿಂದ ವಿಧಾನಸಭೆ ಸದಸ್ಯರುಗಳ ವಿರುದ್ಧ ದೂರು ದಾಖಲಿಸಲು, ತನಿಖೆ ಕೈಗೊಳ್ಳಲು ಮತ್ತು ಅಭಿಯೋಜನೆಗೆ ಒಳಪಡಿಸುವುದಕ್ಕೆ ಸಭಾಧ್ಯಕ್ಷರು ಅನುಮತಿ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದ ಕಾರಣ ಡಿ ಕೆ ಶಿವಕುಮಾರ್‌ ಅವರ ವಿರುದ್ಧ ಯಾವುದೇ ಅಭಿಯೋಜನೆ ಮಂಜೂರಾತಿ ನೀಡಿರುವುದಿಲ್ಲ,’ ಎಂದು ವಿಧಾಸಭೆ ಸಚಿವಾಲಯದ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಮಾಹಿತಿ ಒದಗಿಸಿದ್ದಾರೆ. ಈ ಮಾಹಿತಿಯ ಉತ್ತರಕ್ಕೆ ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಅನುಮೋದಿಸಿದ್ದಾರೆ ಎಂದು ಗೊತ್ತಾಗಿದೆ.

 

ಡಿ ಕೆ ಶಿ ವಿರುದ್ಧ ಸಿಬಿಐ ತನಿಖೆ; ಸಭಾಧ್ಯಕ್ಷರ ಅನುಮತಿ ಪ್ರಶ್ನೆಯೇ ಉದ್ಭವಿಸದು ಎಂದ ಸಚಿವಾಲಯ

 

 

ಅಲ್ಲದೇ ಇದೀಗ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‍‌ ಕೂಡ  ಪ್ರತಿಪಕ್ಷಗಳ ಕೈಗೆ ಅಸ್ತ್ರವೊಂದನ್ನು ಕೊಟ್ಟಂತಾಗಿದೆ.

 

 

ಹಿಂದಿನ ಅಡ್ವೊಕೇಟ್‌ ಜನರಲ್‌ ಕೆ ಪ್ರಭುಲಿಂಗ ನಾವದಗಿ ಹಾಗೂ ಹಾಲಿ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ  ಅವರ ಅಭಿಪ್ರಾಯಗಳನ್ನು ಗಂಭೀರವಾಗಿ ಪರಿಗಣಿಸಿ ಈ ನಿರ್ಧಾರ ಮಾಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ ಕೆ ಪಾಟೀಲ್‌ ಅವರು  ಸಮರ್ಥಿಸಿಕೊಂಡಿದ್ದರು. 

 

 

ಆದರೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ವಿರುದ್ಧ ಸಿಬಿಐ ತನಿಖೆ ನಡೆಸಲು ಹೊರಡಿಸಿದ್ದ ಆದೇಶಕ್ಕೆ ವಿಧಾನಸಭಾಧ್ಯಕ್ಷರ ಅನುಮತಿ ಪಡೆದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಸಚಿವ ಸಂಪುಟದ ಬಹುತೇಕ ಸಚಿವರು ಮತ್ತು ರಾಜ್ಯದ ಅಡ್ವೋಕೇಟ್‌ ಜನರಲ್‌ ಅವರು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ ಎಂಬ ಅಭಿಪ್ರಾಯವು ವಿಧಾನಸಭೆ ಸಚಿವಾಲಯದಲ್ಲಿ ವ್ಯಕ್ತವಾಗಿತ್ತು.

 

ಸಿಬಿಐ ತನಿಖೆಗೆ ಹೊರಡಿಸಿದ್ದ ಆದೇಶವನ್ನು ಹಿಂಪಡೆದುಕೊಂಡಿರುವುದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ವಾಸ್ತವ ಅಂಶಗಳನ್ನು ಮುಚ್ಚಿಟ್ಟು ದಾರಿ ತಪ್ಪಿಸಿರುವುದು ರಾಜಕೀಯ ವಲಯದಲ್ಲಿ ಟೀಕೆಗೆ ಗುರಿಯಾಗಿತ್ತು.

ಡಿ ಕೆ ಶಿವಕುಮಾರ್‍‌ ವಿರುದ್ಧ ಸಿಬಿಐ ತನಿಖೆ; ಬಿಜೆಪಿ ಸರ್ಕಾರದ ಆದೇಶ ಹಿಂಪಡೆಯಲು ಸಚಿವ ಸಂಪುಟಕ್ಕೆ ಪ್ರಸ್ತಾವನೆ

ಸಿಬಿಐಗೆ ವಹಿಸಿದ್ದ ಆದೇಶವನ್ನು ಹಿಂಪಡೆದಿದ್ದನ್ನು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಸಮರ್ಥಿಸಿಕೊಂಡಿದ್ದರಲ್ಲದೇ ಅದನ್ನು ಟ್ವೀಟ್‌ ಕೂಡ ಮಾಡಿದ್ದರು.

 

 

 

ವಿಶೇಷವೆಂದರೆ ಸಿದ್ದರಾಮಯ್ಯ ಅವರು 2017ರಲ್ಲಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲೇ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮತ್ತು ವಿಚಾರಣೆಗೆ ಅನುಮತಿ ನೀಡುವ ಸಂಬಂಧ ಡಿಪಿಎಆರ್‍‌ಗೆ  ಪತ್ರ ಬರೆದಿದ್ದರು. ಅದೇ ಪತ್ರಕ್ಕೆ ವಿಧಾನಸಭೆ ಸಚಿವಾಲಯ ಸ್ಪಷ್ಟವಾಗಿ ಉತ್ತರವನ್ನೂ ನೀಡಿತ್ತು.

 

 

2019ರಲ್ಲಿ ಬಿಜೆಪಿ ಸರ್ಕಾರವು ಡಿ ಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ಅನುಮತಿ ನೀಡಿತ್ತು.  ಇದನ್ನು ಪ್ರಶ್ನಿಸಿ  ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿದ್ದ  ಡಿ ಕೆ ಶಿವಕುಮಾರ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ, ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಮೇಲ್ಮನವಿ ಹಿಂಪಡೆದಿದ್ದರು. ಹೀಗಾಗಿ, ವಿಭಾಗೀಯ ಪೀಠವು ಅರ್ಜಿಯನ್ನು  ಇತ್ಯರ್ಥಪಡಿಸಿತ್ತು.

 

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹಿಂದಿನ ಸಂಸದ ಹಾಗೂ ಹಾಲಿ ಶಾಸಕ ಸಿ.ಎಸ್​.ಪುಟ್ಟರಾಜು, ಶಾಸಕರಾಗಿದ್ದ ಎಂ.ಶ್ರೀನಿವಾಸ್​ ಮತ್ತು ಎ.ಬಿ.ರಮೇಶ್​ ಅವರ ವಿರುದ್ಧ ಸಿಬಿಐ ವಿಚಾರಣೆ ನಡೆಸುವ ಸಂಬಂಧ ವಿಧಾನಸಭಾಧ್ಯಕ್ಷರ ಅನುಮತಿ ಪಡೆಯುವ ಅಗತ್ಯವೇ ಇಲ್ಲ ಎಂದು ಅಂದಿನ ಸ್ಪೀಕರ್‍‌ ಮತ್ತು ವಿಧಾನಸಭೆ ಸಚಿವಾಲಯವೇ ನಿರ್ದಿಷ್ಟ ಮತ್ತು ಸ್ಪಷ್ಟವಾಗಿ ಉತ್ತರ ಒದಗಿಸಿತ್ತು.

ಸಿಬಿಐ ತನಿಖೆ ಆದೇಶ; ಸ್ಪೀಕರ್‍‌ ಅನುಮತಿ ಅಗತ್ಯವಿಲ್ಲ, ಅವರ ವ್ಯಾಪ್ತಿಗೂ ಒಳಪಡುವುದಿಲ್ಲ, ದಾರಿತಪ್ಪಿಸಿದ್ದೇಕೆ?

ಮೂಡಾ ಪ್ರಕರಣದ ಹಿನ್ನೆಲೆ

 

ರಾಜ್ಯ ಸರ್ಕಾರದಿಂದ ಅಭಿಯೋಜನಾ ಮಂಜೂರಾತಿಗೆ ಬಾಕಿ ಇರುವ ಪ್ರಕರಣಗಳಲ್ಲಿ ಮಂಜೂರಾತಿ ಬಾಕಿ ಉಳಿಸಿಕೊಂಡಿರುವ ಕಾರಣ ಪ್ರಕರಣದ ವಿಚಾರಣೆಗೆ ತಡೆಯಾಗುತ್ತಿದೆ ಎಂದು ಕೇಂದ್ರ ಜಾಗೃತ ಆಯೋಗದ ಆಯುಕ್ತ ಕೆ.ವಿ.ಚೌಧುರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದರು.

 

 

ಈ ಪತ್ರ ಆಧರಿಸಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದರು.

 

 

ಮುಖ್ಯಮಂತ್ರಿ ಸೂಚನೆಯಂತೆ ನಗರಾಭಿವೃದ್ಧಿ ಇಲಾಖೆ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ, ಶಾಸಕರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ಸಭಾಧ್ಯಕ್ಷರಿಗೆ ಪತ್ರ ಬರೆದಿತ್ತು. ಈ ಕುರಿತು ವಿಧಾನಸಭೆಯ ಅಂದಿನ ಉಪ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದು, ಎಂ.ಶ್ರೀನಿವಾಸ್​, ಸಿ.ಎಸ್​.ಪುಟ್ಟರಾಜು, ಎ.ಬಿ.ರಮೇಶ್​ ವಿರುದ್ಧ ಭ್ರಷ್ಟಾಚಾರ ಅಧಿನಿಯಮ 1988ರ ಪ್ರಕರಣ 19(1)ರ ಅಡಿಯಲ್ಲಿ ಸಭಾಧ್ಯಕ್ಷರು ಅಭಿಯೋಜನಾ ಮಂಜೂರಾತಿ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದರು.

 

 

ಶಾಸಕರು ಸರ್ಕಾರಿ ನೌಕರರಲ್ಲದ ಕಾರಣ ಅವರ ವಿರುದ್ಧ ವಿಚಾರಣೆ ನಡೆಸಲು ಯಾವುದೇ ಅನುಮತಿ ಪಡೆಯುವ ಅವಶ್ಯಕತೆ ಇಲ್ಲ. ಮೇಲಾಗಿ ಈ ಪ್ರಕರಣ ಸದನದ ಹೊರಗೆ ನಡೆದಿರುವ ಕಾರಣ ಸಭಾಧ್ಯಕ್ಷರ ವ್ಯಾಪ್ತಿಗೂ ಒಳಪಡುವುದಿಲ್ಲ. ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಭಾಗಿ ಆಗಿದ್ದ ಶಾಸಕರನ್ನು ಸಿಬಿಐ ವಿಚಾರಣೆ ನಡೆಸಿತ್ತು. ಆ ಸಂದರ್ಭದಲ್ಲೂ ಸಭಾಧ್ಯಕ್ಷರು, ಅಭಿಯೋಜನಾ ಮಂಜೂರಾತಿ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಿಬಿಐಗೆ ಪತ್ರ ಬರೆದಿದ್ದನ್ನು ಸ್ಮರಿಸಬಹುದು.

Hot this week

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

Topics

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!