Sunday | May 24, 2026 |

ಗಣಿ ಗುತ್ತಿಗೆದಾರರಿಂದ 6,105 ಕೋಟಿ ರು. ದಂಡ ವಸೂಲು; ಒಟಿಎಸ್‌ ಜಾರಿಗೆ ಸಂಪುಟಕ್ಕೆ ಪ್ರಸ್ತಾವ ಸಲ್ಲಿಕೆ

ಬೆಂಗಳೂರು; ಪರವಾನಿಗೆ ಉಲ್ಲಂಘನೆಯೂ ಸೇರಿದಂತೆ ವಿವಿಧ ರೀತಿಯ ಉಲ್ಲಂಘನೆ ಮಾಡಿರುವ ಗಣಿ ಗುತ್ತಿಗೆದಾರರಿಗೆ ವಿಧಿಸಿರುವ ಅಂದಾಜು 6,105 ಕೋಟಿ ರು. ಮೊತ್ತವನ್ನು ವಸೂಲು ಮಾಡುವ ಸಂಬಂಧ  ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಒಟಿಎಸ್‌ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸಿದೆ.

 

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ಒಟಿಎಸ್‌ ಯೋಜನೆ ಜಾರಿಗೊಳಿಸಲು ಪ್ರಸ್ತಾವ ಸಲ್ಲಿಕೆಯಾಗಿತ್ತು. ಆದರೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಈ ಪ್ರಸ್ತಾವವನ್ನು ಕೈ ಬಿಡಲಾಗಿತ್ತು. ಆದರೀಗ ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರವು ಕೈ ಬಿಟ್ಟಿದ್ದ ಒಟಿಎಸ್‌ ಯೋಜನೆಯನ್ನು ಜಾರಿಗೊಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಈ ಸಂಬಂಧ ಸಚಿವ ಸಂಪುಟಕ್ಕೆ ಪ್ರಸ್ತಾವವನ್ನು ಮಂಡಿಸಿದೆ. ಇದನ್ನು ಪರಿಶೀಲಿಸಿರುವ ಆರ್ಥಿಕ ಇಲಾಖೆಯೂ ಸಹ ಒಟಿಎಸ್‌ ಯೋಜನೆ ಜಾರಿಗೊಳಿಸಿದ್ದಲ್ಲಿ 6,105 ಕೋಟಿ ರು. ಮೊತ್ತದಷ್ಟು ಬೊಕ್ಕಸಕ್ಕೆ ನಷ್ಟವಾಗಲಿದೆ ಎಂದು ಅಭಿಪ್ರಾಯ ನೀಡಿದೆ. ಈ ಕುರಿತು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಖಚಿತಪಡಿಸಿದ್ದಾರೆ.

 

ವಿಶೇಷವೆಂದರೇ ಒಟಿಎಸ್‌ ಯೋಜನೆಯನ್ನು 2023ರ ಜುಲೈ ಆಯವ್ಯಯದ ಸಂದರ್ಭದಲ್ಲೇ ಜಾರಿಗೊಳಿಸಲು ಇಲಾಖೆಯು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಆದರೆ ಈ ಪ್ರಸ್ತಾವವು ಹಿಂದಿನ ಬಜೆಟ್‌ನಲ್ಲಿ ಘೋಷಣೆಯಾಗಿರಲಿಲ್ಲ ಮತ್ತು ನಂತರ ನಡೆದ ಸಚಿವ ಸಂಪುಟ ಸಭೆಗಳಲ್ಲಿ ಈ ವಿಚಾರವು ಪ್ರಸ್ತಾಪವಾಗಿರಲಿಲ್ಲ. ಆದರೀಗ ಇದೇ ಮಾರ್ಚ್‌ನಲ್ಲಿ ನಡೆಯಲಿರುವ ಸಚಿವ ಸಂಪುಟಕ್ಕೆ ಇದೇ ಕಡತವನ್ನು ಮಂಡಿಸಲಾಗಿದೆ ಎಂದು ತಿಳಿದು ಬಂದಿದೆ.

 

ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಹೆಚ್ಚುವರಿಯಾಗಿ 127 ಎಂಎಂಟಿ ಹಾಗೂ ಗುತ್ತಿಗೆ ಪ್ರದೇಶದ ಹೊರಗಡೆ 75 ಎಂಎಂಟಿ ಕಟ್ಟಡ ಕಲ್ಲನ್ನು ತೆಗೆದು ಸಾಗಾಣಿಕೆ ಮಾಡಿದ್ದು ಈ ಪ್ರಾಣದಕ್ಕೆ ರಾಜಧನದ 05 ಪಟ್ಟು ದಂಡ ವಿಧಿಸಲಾಗಿದೆ. ಈ ಪ್ರಕ್ರಿಯೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ರಾಜಧನ ಪ್ರತಿ ಮೆಟ್ರಿಕ್‌ ಟನ್‌ಗೆ 60 ರು. ನಂತೆ ಈ ಪ್ರಮಾಣಕ್ಕೆ ಅಂದಾಜು 1,200 ಕೋಟಿ ರಾಜಧನ ಮತ್ತು ಇದೇ ಪ್ರಮಾಣಕ್ಕ 05 ಪಟ್ಟು ರಾಜಧನ ವಿಧಿಸಿದರೆ ಒಟ್ಟು ಅಂದಾಜು ದಂಡದ ಮೊತ್ತವು 6,105 ಕೋಟಿ ರುಗಳಾಗುತ್ತವೆ ಎಂದು ಇಲಾಖೆಯು 2023ರ ಜುಲೈನಲ್ಲಿ   ಅಂದಾಜಿಸಿತ್ತು.

 

 

 

 

 

 

 

ಗಣಿ ಉದ್ಯಮಿಗಳ ಮೇಲೆ ವಿಧಿಸಿದ್ದ ದಂಡದ ಪ್ರಮಾಣವನ್ನು ಅರ್ಧದಷ್ಟು ಇಳಿಕೆ ಮಾಡಲಾಗುವುದು ಎಂದು ಬಿಜೆಪಿ ಸರ್ಕಾರದಲ್ಲಿ ಗಣಿ  ಸಚಿವರಾಗಿದ್ದ  ಮುರುಗೇಶ್‌ ನಿರಾಣಿ ಹೇಳಿಕೆ ನೀಡಿದ್ದರು.  ಎಲ್ಲಾ ಬಗೆಯ ಗಣಿಗಾರಿಕೆಯಿಂದ ಸರ್ಕಾರಕ್ಕೆ ನ್ಯಾಯಬದ್ಧವಾಗಿ ಬರಬೇಕಿದ್ದ 6,700 ಕೋಟಿ ರು. ಮೊತ್ತ ಇದೆ. ಈ  ದಂಡದ ಪ್ರಮಾಣವನ್ನು ಅರ್ಧದಷ್ಟು ಇಳಿಕೆ ಮಾಡಿದಲ್ಲಿ  3,350 ಕೋಟಿ ರು. ಬೊಕ್ಕಸಕ್ಕೆ ಖೋತಾ ಆಗಲಿತ್ತು.  6,700 ಕೋಟಿಯಲ್ಲಿ ಅರ್ಧದಷ್ಟು ಇಳಿಕೆ ಮಾಡಲು ಹೊರಟಿದ್ದ ಗಣಿ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿತ್ತು ಎಂಬ ಟೀಕೆಗೆ ಗುರಿಯಾಗಿತ್ತು.

ಅಕ್ರಮ ಗಣಿಗಾರಿಕೆ; 354 ಕೋಟಿ ದಂಡದಲ್ಲಿ ವಸೂಲು ಮಾಡಿದ್ದು ಕೇವಲ 34 ಕೋಟಿ

 

ಗಣಿ ಉದ್ಯಮಗಳಿಗೆ ದಂಡದಲ್ಲಿ ಅರ್ಧದಷ್ಟು ರಿಯಾಯಿತಿ-ವಿನಾಯಿತಿ ನೀಡಲು ಹಿಂದಿನ ಬಿಜೆಪಿ ಸರ್ಕಾರವು  ಮುಂದಾಗಿದ್ದ ಹೊತ್ತಿನಲ್ಲೂ  ಪ್ರತಿಪಕ್ಷದಲ್ಲಿದ್ದ  ಕಾಂಗ್ರೆಸ್‌ ಉಸಿರೆತ್ತಿರಲಿಲ್ಲ. ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತ ಸಂತೋಷ್‌ ಹೆಗ್ಡೆ ಅವರು ಕೊಟ್ಟಿದ್ದ ವರದಿಯನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದ್ದ ಕಾಂಗ್ರೆಸ್‌, ಬೆಂಗಳೂರಿಗೆ ಬಳ್ಳಾರಿಯವರೆಗೆ ಪಾದಯಾತ್ರೆ ನಡೆಸಿತ್ತು. ಎರಡನೇ ಬಾರಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌, ಗಣಿ ಉದ್ಯಮಿಗಳ ಮೇಲೆ ವಿಧಿಸಿರುವ ದಂಡದ ಮೊತ್ತಕ್ಕೆ ಸಂಬಂಧಿಸಿದಂತೆ ಒಟಿಎಸ್‌ ಯೋಜನೆ ಜಾರಿಗೊಳಿಸುತ್ತಿರುವುದು ಸಾರ್ವಜನಿಕ ಟೀಕೆಗೆ ಒಳಗಾಗಲಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. 

 

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅವಧಿ ಮುಗಿದ ಎ ಮತ್ತು ಬಿ ಕೆಟಗರಿ ಹಾಗೂ ರದ್ದುಪಡಿಸಿರುವ ಸಿ ಕೆಟಗರಿ ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಇಲಾಖೆಯು ವಶಪಡಿಸಿಕೊಂಡು ದಾಸ್ತಾನಿರಿಸಿರುವ (ಹಳೆಯ ದಾಸ್ತಾನು) ಕಬ್ಬಿಣ ಅದಿರು ಹರಾಜು, ಚಾಲ್ತಿಯಲ್ಲಿರುವ ಉಪ ಖನಿಜ ಗಣಿಗುತ್ತಿಗೆಗಳಿಂದ ಒಟ್ಟಾರೆ 9,115.55 ಕೋಟಿ ರು. ಮೊತ್ತದಲ್ಲಿ ರಾಜಸ್ವ ಸಂಗ್ರಹಿಸಬಹುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಅಂದಾಜಿಸಿತ್ತು.

ಗಣಿ ಗುತ್ತಿಗೆದಾರರಿಂದ 2,855 ಕೋಟಿ ರು. ರಾಜಧನ ಬಾಕಿ; ವಸೂಲಾತಿಗೆ ಇಲಾಖೆ ಮೀನಮೇಷ

 

ಅದೇ ರೀತಿ ಉಪ ಖನಿಜಗಳಮೇಲಿನ ರಾಜಧನವನ್ನು ಶೇ.15ರಷ್ಟು ಹೆಚ್ಚಿಸಲು ಇಲಾಖೆ ಚಿಂತಿಸಿದೆ. ಸರ್ಕಾರಿ ಸಂಸ್ಥೆಗಳ ಗಣಿಗಾರಿಕೆಗೆ ಹೆಚ್ಚುವರಿ ರಾಜಧನ ನಿಗದಿಪಡಿಸಿದ್ದು ಅದರಂತೆಯೇ ಹರಾಜೇತರ ಗುತ್ತಿಗೆಗಳಿಗೂ ಕನಿಷ್ಠ ಶೇ.22ರಷ್ಟು ಹೆಚ್ಚುವರಿ ಮೊತ್ತವನ್ನು ವಿಧಿಸಿದಲ್ಲಿ ಪ್ರತಿ ವರ್ಷ ಸರ್ಕಾರಕ್ಕೆ 1,000 ಕೋಟಿಗೂ ಅಧಿಕ ರಾಜಸ್ವ ಸಂಗ್ರಹವಾಗುವ ಸಾಧ್ಯತೆ ಇದೆ ಎಂದು  ಹೇಳಿತ್ತು.

 

ಹಾಗೆಯೇ ವಿವಿಧ ಪರವಾನಿಗೆ ಉಲ್ಲಂಘನೆಗಳಿಗಾಗಿ ರಾಜ್ಯದಲ್ಲಿ ಒಟ್ಟಾರೆ 6,105 ಕೋಟಿ ರು. ದಂಡ ವಿಧಿಸಲಾಗಿದ್ದು ಇದನ್ನ ಒಟಿಎಸ್‌ ಮೂಲಕ ಜಾರಿಗೊಳಿಸಲು ಚಿಂತಿಸಿದೆ. ರಾಜ್ಯದ ಒಟ್ಟು 12 ಜಿಲ್ಲೆಗಳಲ್ಲಿ ಕಲ್ಲು ಗಣಿ ಗುತ್ತಿಗೆದಾರರು ಕಟ್ಟಡ ಕಲ್ಲನ್ನು ಖನಿಜ ರವಾನೆ ಪರವಾನಿಗೆ ಪಡೆಯದೇ ಸಾಗಾಣಿಕೆ ಮಾಡಿರುವ ಸಂಬಂಧ 520.0 ಕೋಟಿ ರು. ನಷ್ಟವಾಗಿದೆ. ಈ ಪೈಕಿ ಜುಲೈ ಅಂತ್ಯಕ್ಕೆ  ಕೇವಲ 60.39 ಕೋಟಿ ಸಂಗ್ರಹಿಸಿತ್ತು.

 

2023 ರ ಜುಲೈ 27ರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಸಭೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ವಾರ್ಷಿಕ ರಾಜಸ್ವ ಸಂಗ್ರಹ ಗುರಿಯನ್ನು ಸಾಧಿಸಲು 9,115.55 ಕೋಟಿ ಸಂಗ್ರಹ ಗುರಿಯ ಲೆಕ್ಕಾಚಾರವನ್ನು ಮಂಡಿಸಿತ್ತು.

 

ರಾಜಸ್ವ ಗುರಿ ಸಾಧಿಸುವ ಸಂಬಂಧ ಹರಾಜು ಮಾಡಲಾದ ಕಬ್ಬಿಣ ಅದಿರಿನ ಬ್ಲಾಕ್‌ಗಳಿಗೆ ಎಂಎಂಡಿಆರ್‍‌ ಕಾಯ್ದೆ 1957ರ ಕಲಂ 8 ಬಿ ಅನ್ವಯ ಅರಣ್ಯ ಅನುಮತಿಗಳನ್ನು ವರ್ಗಾಯಿಸುವುದು, ಅರಣ್ಯ ಅನುಮತಿ ನೀಡುವ ಸಂದರ್ಭದಲ್ಲಿ ಪರಿಹಾರಾತ್ಮಕ ನೆಡುತೋಪುಗೆ ಭೂಮಿ ನೀಡುವಲ್ಲಿ ಎದುರಿಸುತ್ತಿರುವ ಸಮಸ್ಯೆಗಳು, ಸಿ ವರ್ಗದ ಅದಿರಿನ ಬ್ಲಾಕ್‌ಗಳಿಗೆ ಸರ್ವೋಚ್ಛ ನ್ಯಾಯಾಲಯದ ಆದೇಶದ ಅನ್ವಯ ಅರಣ್ಯ ಅನುಮತಿಗಳನ್ನು ವರ್ಗಾಯಿಸಲು ಸಹಕಾರ ಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಕೋರಿತ್ತು.

 

ಹಾಗೆಯೇ ಸಿ ವರ್ಗದ ಗಣಿ ಗುತ್ತಿಗೆ, ರದ್ದಾದ ಗಣಿ ಗುತ್ತಿಗೆಗಳು, ಸ್ಟಾಕ್‌ ಯಾರ್ಡ್‌ ಮತ್ತು ವಿವಿಧೆಡೆ ಜಫ್ತಿ ಮಾಡಲಾದ ಕಬ್ಬಿಣದ ಅದಿರನ್ನು ಹರಾಜು ಮೂಲಕ ವಿಲೇ ಮಾಡಲು ಕ್ರಮ ವಹಿಸುತ್ತಿರುವ ಇಲಾಖೆಯು ಕಬ್ಬಿಣ ಅದಿರಿನ ಪೈಕಿ 2.71 ಎಂಎಂಟಿ ಪ್ರಮಾಣದಷ್ಟು ಅದಿರು ಅರಣ್ಯ ಪ್ರದೇಶದಲ್ಲಿ ದಾಸ್ತಾನಿದೆ ಎಂದು ಸಭೆಗೆ ಮಾಹಿತಿ ಒದಗಿಸಿತ್ತು.

 

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅವಧಿ ಮುಗಿದ ಎ ಮತ್ತು ಬಿ ಕೆಟಗರಿ ಹಾಗೂ ರದ್ದುಪಡಿಸಿರುವ ಸಿ ಕೆಟಗರಿ ಗಣಿ ಗುತ್ತಿಗೆ ಪ್ರದೇಶಗಳಲ್ಲಿ 5.89 ಎಂಎಂಟಿ ಪ್ರಮಾಣದಲ್ಲಿ ಕಬ್ಬಿಣ ಅದಿರನ್ನು ವಶಪಡಿಸಿಕೊಂಡು ಇಲಾಖೆಯು ದಾಸ್ತಾನಿನಲ್ಲಿರಿಸಿದೆ. ಇದನ್ನು ಹರಾಜು ಮಾಡಿದಲ್ಲಿ ಅಂದಾಜು 1,200.00 ಕೋಟಿ ರು ರಾಜಸ್ವ ಸಂಗ್ರಹಿಸಬಹುದು ಎಂದು ಇಲಾಖೆಯು ಅಂದಾಜಿಸಿರುವುದು ಗೊತ್ತಾಗಿದೆ.

 

ರದ್ದುಪಡಿಸಿರುವ ದಾಸ್ತಾನು ಕೇಂದ್ರಗಳಲ್ಲಿ ಪೊಲೀಸ್‌ ಠಾಣೆ ಮತ್ತು ರೈಲ್ವೆ ಯಾರ್ಡ್‌ಗಳಲ್ಲಿ 0.9 ಎಂಎಂಟಿ ಪ್ರಮಾಣದಲ್ಲಿರುವ ಕಬ್ಬಿಣ ಅದಿರನ್ನು ಇಲಾಖೆಯು ವಶಪಡಿಸಿಕೊಂಡಿದೆ. ಇದನ್ನು ಹರಾಜು ಹಾಕಿದಲ್ಲಿ 50.00 ಕೋಟಿ ರು., ಚಾಲ್ತಿಯಲ್ಲಿರುವ ಕಬ್ಬಿಣ ಅದಿರು ಗಣಿಗುತ್ತಿಗೆಗಳಿಂದ (ಹರಾಜು ಮತ್ತು ಹರಾಜು ರಹಿತ ಗಣಿ ಗುತ್ತಿಗೆಗಳು 42.19 ಎಂಎಟಿ) 3,664.00 ಕೋಟಿ ರು., ಹರಾಜು ಪ್ರಕ್ರಿಯೆ ಮುಗಿದಿರುವ 27 ಗಣೀ ಗುತ್ತಿಗೆ ಬ್ಲಾಕ್‌ಗಳಿಗೆ ಶಾಶನ ಬದ್ಧ ದಾಖಲೆಗಳು ಸಲ್ಲಿಕೆಯಾಗಿ ಗಣಿ ಕಾರ್ಯ ನಿರ್ವಹಿಸಿದ್ದಲ್ಲಿ (27 ಗಣಿ ಗುತ್ತಿಗೆ ಬ್ಲಾಕ್‌ಗಳ ಪೈಕಿ ಪ್ರಸ್ತುತ ಸಾಲಿನಲ್ಲಿ 12 ಬ್ಲಾಕ್‌ಗಳಲ್ಲಿ 9 ಕಬ್ಬಿಣ ಅದಿರು, 3 ಸುಣ್ಣದ ಕಲ್ಲು- 4.607 ಎಂಎಂಟಿ) 589.55 ಕೋಟಿ ರು., ಇತರೆ ಮುಖ್ಯ ಖನಿಜಗಳಿಂದ (ಸುಣ್ಣದ ಕಲ್ಲು ಮತ್ತು ಚಿನ್ನದ ಅದಿರು- 33.46 ಎಂಎಂಟಿ) 342.00 ಕೋಟಿ ರು.ಗಳ ರಾಜಸ್ವ ಸಂಗ್ರಹಿಸಬಹುದು ಎಂದು ಅಂಕಿ ಅಂಶಗಳ ವಿವರಗಳನ್ನು ಮಂಡಿಸಿತ್ತು.

 

ಚಾಲ್ತಿ ಉಪ ಖನಿಜ ಗಣಿ ಗುತ್ತಿಗೆಗಳಿಂದ 2,600 ಕೋಟಿ ರು., ಉಪ ಖನಿಜಗಳಮೇಲಿನ ರಾಜಧನವನ್ನು ಶೇ.15ರಷ್ಟು ಹೆಚ್ಚಿಸಿದಲ್ಲಿ 390.00 ಕೋಟಿ ರು., ಹೊಸ ಕಲ್ಲು ಗಣಿ ಗುತ್ತಿಗೆ ಮಂಜೂರಾತಿ ಮತ್ತು ಬಾಕಿ ವಸೂಲಾತಿಯಿಂದ 300.00 ಕೋಟಿ ರು.ಗಳ ರಾಜಸ್ವ ಸಂಗ್ರಹಿಸಬಹುದು ಎಂದು ಅಂದಾಜಿಸಿತ್ತು.

 

ಬಳ್ಳಾರಿ ಜಿಲ್ಲೆಯಲ್ಲಿ ಎ ಮತ್ತು ಬಿ ವರ್ಗದ ಗಣಿ ಗುತ್ತಿಗೆ (11)ಗಳಲ್ಲಿ 481209 ಟನ್‌, ಸಿ ವರ್ಗ (41)ದಲ್ಲಿ 1327214 ಪ್ರಮಾಣದಲ್ಲಿ ಕಬ್ಬಿಣ ಅದಿರು ದಾಸ್ತಾನಿದೆ. ಅದೇ ರೀತಿ ಇದೇ ಜಿಲ್ಲೆಯಲ್ಲಿ ಎ ಮತ್ತು ಬಿ ವರ್ಗದಲ್ಲಿ (4) 125856 ಟನ್‌, ಸಿ ವರ್ಗದಲ್ಲಿ (2) 903 ಟನ್‌ನಷ್ಟು ಮ್ಯಾಂಗನೀಸ್‌ ಅದಿರು ದಾಸ್ತಾನಿದೆ. ವಿಜಯನಗರ ಜಿಲ್ಲೆಯಲ್ಲಿ ಎ ಮತ್ತು ಬಿ (23) 196186.62 ಟನ್‌, ಸಿ ವರ್ಗದಲ್ಲಿ (6) 97009 ಟನ್‌, ಚಿತ್ರದುರ್ಗ ಜಿಲ್ಲೆಯಲ್ಲಿ ಎ ಮತ್ತು ಬಿ (9) 11850 ಟನ್‌ ಸೇರಿದಂತೆ ಒಟ್ಟಾರೆ 815101.62 ಟನ್‌ನಷ್ಟು, ತುಮಕೂರು ಜಿಲ್ಲೆಯಲ್ಲಿ ಸಿ ವರ್ಗ (112) ಟನ್‌ ಅದಿರು ಸೇರಿದಂತೆ ಒಟ್ಟಾರೆ 1880587.3 ಟನ್‌ನಷ್ಟು ಅದಿರು ಇದೆ ಎಂದು ಇಲಾಖೆಯು ಮಾಹಿತಿ ಒದಗಿಸಿತ್ತು.

 

ಎಂಎಂಡಿಆರ್‍‌ ಕಾಯ್ದೆಗೆ ತಿದ್ದುಪಡಿ ತಂದು ನವೀಕರಣ ಪದ್ಧತಿ ಕೈ ಬಿಟ್ಟು ಚಾಲ್ತಿ ಗಣಿ ಗುತ್ತಿಗೆಗಳ ಅವಧಿ ವಿಸ್ತರಿಸಲು ನಿಯಮಗಳಲ್ಲಿ ಅವಕಾಶ ಕಲ್ಪಿಸಿದೆ. ಈ ಗಣಿ ಗುತ್ತಿಗೆಗಳಿಂದ ಸರ್ಕಾರಕ್ಕೆ ರಾಜಧನ ಮಾತ್ರ ಸಂದಾಯವಾಗುತ್ತಿದೆ. ಎಂಎಂಡಿಆರ್‍‌ ತಿದ್ದುಪಡಿ ಕಾಯ್ದೆ 2015 ಅನ್ವಯ ಗಣಿ ಗುತ್ತಿಗೆಗಳನ್ನು ಹರಾಜು ಮೂಲಕವೇ ವಿಲೇ ಮಾಡುತ್ತಿದ್ದರೂ ಈ ಪ್ರಕರಣಗಳಲ್ಲಿ ಸರ್ಕಾರಕ್ಕೆ ರಾಜಧನ ಜತೆ ಹರಾಜು ಮೊತ್ತವೂ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿದೆ. ಕರ್ನಾಟಕದಲ್ಲಿ ಕಬ್ಬಿಣದ ಅದಿರಿನ ಗಣಿ ಪ್ರದೇಶಗಳು ಐಬಿಎಂ ಪ್ರಕಟಿಸುವ ಬೆಲೆ ಮೇಲೆ ಕನಿಷ್ಠ ಶೇ. 26ರಿಂದ ಶೇ. 145.80 ಗೆ ಹರಾಜಾಗಿತ್ತು.

 

‘ಇತ್ತೀಚೆಗೆ ಬಾರತ ಸರ್ಕಾರವು 2021ರ ಮಾರ್ಚ್‌ 28ರಂದು ಎಂಎಂಡಿಆರ್‍‌ ಕಾಯ್ದೆಗೆ ತಿದ್ದುಪಡಿ ತಂದು ಸರ್ಕಾರಿ ಸ್ವಾಮ್ಯದ ಗಣಿ ಗುತ್ತಿಗೆ ಅವಧಿ ವಿಸ್ತರಿಸಿದ್ದಲ್ಲಿ ಐಬಿಎಂ ಪ್ರಕಟಿಸುವ ಬೆಲೆಯ ಮೇಲೆ ಹೆಚ್ಚುವರಿಯಾಗಿ ಶೇ.22.5ರಷ್ಟು ಮೊತ್ತವನ್ನು ಸರ್ಕಾರಕ್ಕೆ ಸಂದಾಯ ಮಾಡಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಹರಾಜೇತರ ಗಣೀ ಗುತ್ತಿಗೆಗಳಿಗೆ ಕನಿಷ್ಠ ಶೇ.22ರಷ್ಟು ಹೆಚ್ಚುವರಿ ಮೊತ್ತವನ್ನು ವಿಧಿಸಿದಲ್ಲಿ ಪ್ರತಿ ವರ್ಷ ಸರ್ಕಾರಕ್ಕೆ 1,000 ಕೋಟಿಗೂ ಅಧಿಕ ರಾಜಸ್ವ ಸಂಗ್ರಹವಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರವನ್ನು ಎಂಎಂಡಿಆರ್‍‌ ಕಾಯ್ದೆಗೆ ತಿದ್ದುಪಡಿ ಅಥವಾ ಈ ಸಂಬಂಧಿಸಿಂತೆ ನಿರ್ದೇಶನ ನೀಡಲು ಪ್ರಸ್ತಾವನೆ ಸಲ್ಲಿಸಬಹುದು,’ ಎಂದು ಇಲಾಖೆಯು ಸಲಹೆ ನೀಡಿತ್ತು.

 

ಗಣಿಗಾರಿಕೆ; ಗುತ್ತಿಗೆದಾರರಿಂದ ಸಮರ್ಪಕವಾಗಿ ಸಂಗ್ರಹಣೆಯಾಗದ ರಾಜಧನ

ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಮತ್ತು ದಂಡ ಮೊತ್ತದಲ್ಲಿ ಪೈಸೆ ಪೈಸೆಯನ್ನೂ ವಸೂಲಿ ಮಾಡುತ್ತೇವೆ ಎಂದು ಮೊದಲ ಬಾರಿ  ಅಧಿಕಾರಕ್ಕೇರಿದ್ದ ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್ಸಿಗರು ಮಾಡಿದ್ದ ವಾಗ್ದಾನ ಈಡೇರಿಸಿರಲಿಲ್ಲ ಎಂಬುದನ್ನು ಸ್ಮರಿಸಬಹುದು.

Hot this week

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...
Please Scan to make Your Contribution

Topics

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

ಸ್ವಚ್ಛ ನಗರಿಯ ಕಸದ ಕರಾಳತೆ; ಪರೀಕ್ಷೆಯಿಲ್ಲದೇ ವಿಷಕಾರಿ ತ್ಯಾಜ್ಯ ನಿರ್ವಹಣೆ, ಸಿಎಂ ತವರಿನಲ್ಲೇ ಅವೈಜ್ಞಾನಿಕ ವಿಲೇವಾರಿ?

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ  ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ...

Related Articles

Popular Categories

error: Content is protected !!