Friday | June 19, 2026 |

ಸಾವರ್ಕರ್‌ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ನಿಯೋಜನೆ; ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ನಿರ್ದೇಶನ

ಬೆಂಗಳೂರು; ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಸಾವರ್ಕರ್‌ ಅವರ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾನದ ಪೂರ್ವಭಾವಿ ತರಬೇತಿಗೆ ಕರೆದೊಯ್ದಿದ್ದ ಕಾಲೇಜು ಪ್ರಾಂಶುಪಾಲ ಕೆ ಕೃಷ್ಣಪ್ಪ ಅವರ ವಿರುದ್ಧ ಕೆಸಿಎಸ್‌ಆರ್‍‌ ನಿಯಮಗಳ ಪ್ರಕಾರ ಪದವಿಪೂರ್ವ ಶಿಕ್ಷಣ ಮಂಡಳಿಯ ಹಂತದಲ್ಲೇ  ಶಿಸ್ತು ಕ್ರಮ ಜರುಗಿಸಲು ತುರ್ತಾಗಿ ಕ್ರಮವಹಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪತ್ರ ಬರೆದಿರುವುದು ಇದೀಗ ಬಹಿರಂಗವಾಗಿದೆ.

 

ಈ ಕುರಿತು 2024ರ ಮಾರ್ಚ್‌ 20ರಂದು ಪದವಿಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕರಿಗೆ ಪತ್ರ (ಸಂಖ್ಯೆ ಇಪಿ;87 ಡಿಜಿಡಿ 2023) ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪ್ರಕರಣದ ಹಿನ್ನೆಲೆ

 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಹಾವೇರಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯು 2023ರ ಡಿಸೆಂಬರ್‌ 12ರಂದು ಹಾವೇರಿ ತಾಲೂಕಿನ ಇಜಾರಿ ಲಕ್ಮಾಪುರದ ಸರ್ಕಾರಿ ಪಿಯು ಕಾಲೇಜಿಗೆ ಪರಿಶೀಲನೆಗೆ ತೆರಳಿದಾಗ ಈ ಪ್ರಕರಣವು ಪತ್ತೆಯಾಗಿತ್ತು.

 

ಸಿಇಒ ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿಯು ಪರಿಶೀಲನೆಗೆ ತೆರಳಿದಾಗ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ಎ ಮತ್ತು ಬಿ ವಿಭಾಗದ ವಿದ್ಯಾರ್ಥಿನಿಯರ ಹಾಜರಾತಿ ಅತೀ ಕಡಿಮೆ ಇರುವುದನ್ನು ಗಮನಿಸಿದ್ದರು. ಈ ಬಗ್ಗೆ ಅತಿಥಿ ಉಪನ್ಯಾಸಕರನ್ನು ತಂಡವು ಪ್ರಶ್ನಿಸಿತ್ತು.

 

‘ಅತಿಥಿ ಉಪನ್ಯಾಸಕ ನಾಗರಾಜ ಬಣಕಾರ ಅವರನ್ನು ವಿಚಾರಿಸಲಾಗಿ ಸುಮಾರು 95 ವಿದ್ಯಾರ್ಥಿಗಳು ರಾಷ್ಟ್ರಭಕ್ತ ಬಳಗ ಹಾವೇರಿ ಘಟಕವು 2023ರ ಡಿಸೆಂಬರ್‌ 17ರಂದು ಹಮ್ಮಿಕೊಂಡಿರುವ ವೀರ ಸಾವರ್ಕರ್‌ ಸಂಸ್ಕರಣೆ ಕಾರ್ಯಕ್ರಮದ ಸಮೂಹ ಗಾನದ ಪೂರ್ವಭಾವಿ ತರಬೇತಿಗೆ ಹೋಗಿರುವುದಾಗಿ ತಿಳಿಸಿರುತ್ತಾರೆ,’ ಎಂಬ ಅಂಶವನ್ನು ಟಿಪ್ಪಣಿ ಹಾಳೆಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಅಲ್ಲದೇ ಇದೇ ವಿದ್ಯಾರ್ಥಿನಿಯರು ಕಾಲೇಜಿನ ಅವಧಿಯಲ್ಲಿ ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಎರಡೂ ಕಾರ್ಯಕ್ರಮಗಳಿಗೆ ಪ್ರಾಂಶುಪಾಲ ಕೆ ಕೃಷ್ಣಪ್ಪ ಅವರು ಅನುಮತಿ ನೀಡಿದ್ದರು ಎಂದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ಸಾವರ್ಕರ್‌ ಸಂಸ್ಮರಣೆ ಸಮೂಹಗಾನ ತರಬೇತಿಗೆ ಪಿಯು ವಿದ್ಯಾರ್ಥಿನಿಯರು; ಪ್ರಾಂಶುಪಾಲರ ವಿರುದ್ಧ ಶಿಸ್ತುಕ್ರಮ

‘ಪ್ರಾಂಶುಪಾಲ ಕೆ ಕೃಷ್ಣಪ್ಪ ಅವರು ಇಲಾಖೆಯಿಂದ ಆಯೋಜಿಸುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಲು ಅನುಮತಿ ನೀಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ,’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಜಿಲ್ಲಾ ಪಂಚಾಯತ್‌ ಸಿಇಒಗೆ ವರದಿ ಸಲ್ಲಿಸಿದ್ದರು ಎಂಬುದು ತಿಳಿದು ಬಂದಿದೆ.

 

ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಇತರೆ ಚಟುವಟಿಕೆಗಳಿಗೆ ಇಲಾಖೆಯ ಅನುಮತಿ ಇಲ್ಲದೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತಿಲ್ಲ. ಅಲ್ಲದೇ ಶೈಕ್ಷಣಿಕ ಚಟುವಟಿಕೆಗಳ ಹೊರತುಪಡಿಸಿದ ಇತರೆ ರಾಜಕೀಯ ಮತ್ತು ಖಾಸಗಿ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಅನುಮತಿಸಲು ಅವಕಾಶವನ್ನೂ ನೀಡಬಾರದು ಎಂದು ಎಂದು ಸರ್ಕಾರದ ಸೂಚನೆ ಮತ್ತು ನಿರ್ದೇಶನಗಳಿವೆ. ಆದರೂ ಇವುಗಳನ್ನು ಪ್ರಾಂಶಪಾಲ ಕೃಷ್ಣಪ್ಪ ಅವರು ಉಲ್ಲಂಘಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

 

ಅದೇ ರೀತಿ ‘ ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸಿ ಕಾಲೇಜಿನ ವಿದ್ಯಾರ್ಥಿನಿಯರನ್ನು ಇಲಾಖೆಯಿಂದ ಆಯೋಜಿಸುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ರಾಜಕೀಯ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನೀಡುವ ಮೂಲಕ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿನ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸದೇ ತೀವ್ರ ಸ್ವರೂಪದ ಕರ್ತವ್ಯಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ಅನ್ವಯ ಶಿಸ್ತು ಕ್ರಮ ಕೈಗೊಳ್ಳಬೇಕು,’ ಎಂದು ಜಿಲ್ಲಾ ಪಂಚಾಯತ್‌ ಸಿಇಒ ಪ್ರಸ್ತಾವನೆ ಸಲ್ಲಿಸಿದ್ದರು.

 

ಈ ಪ್ರಸ್ತಾವನೆಯನ್ನಾಧರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರು ಪದವಿಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

 

ಪತ್ರದಲ್ಲೇನಿದೆ?

 

ಹಾವೇರಿಯ ಇಜಾರಿಲಕ್ಮಾಪೂರ ಸರ್ಕಾರಿ ಪದವಿಪೂರ್ವ ಕಾಲೇಜಿನ (ಪ್ರಸ್ತುತ ಪ್ರಾಂಶುಪಾಲರ ವೃಂದದಿಂದ ಉಪನ್ಯಾಸಕರ ವೃಂದಕ್ಕೆ ಹಿಂಬಡ್ತಿ ಹೊಂದಿದವರು) ಪ್ರಾಂಶುಪಾಲ ಕೆ ಕೃಷ್ಣಪ್ಪ ಅವರು ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸಿ ಕಾಲೇಜಿನ ವಿದ್ಯಾರ್ಥಿನಿಯರನ್ನು ಇಲಾಖೆಯ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ರಾಜಕೀಯ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನೀಡಿದ್ದರು.

 

ಈ ಮೂಲಕ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿನ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸದೇ ತೀವ್ರ ಸ್ವರೂಪದ ಕರ್ತವ್ಯಲೋಪವೆಸಗಿದ್ದಾರೆ. ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನ್ವಯ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು.

 

ಇವರ ವಿರುದ್ಧದ ಶಿಸ್ತುಕ್ರಮದ ಇಲಾಖೆ ವಿಚಾರಣೆಯ ಮುಂದಿನ ನಡವಳಿಯನ್ನು ಕಾಯ್ದಿರಿಸಿ ಇವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಅಲ್ಲದೇ ಅವರ ಅಮಾನತುಗೊಂಡ ದಿನಾಂಕದಿಂದಲೇ ಜಾರಿಗೆ ಬರುವಂತೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕೊಂಡ್ಲಹಳ್ಳಿ ಕಾಲೇಜಿಗೆ ವರ್ಗಾಯಿಸಿ ಆದೇಶಿಸಿದೆ. ಕೃಷ್ಣಪ್ಪ ಅವರು ಪ್ರಸ್ತುತ ಉಪನ್ಯಾಸಕರಾಗಿರುವುದರಿಂದ ಉಪನ್ಯಾಸಕರ ನೇಮಕಾತಿ ಹಾಗೂ ಶಿಸ್ತು ಪ್ರಾಧಿಕಾರವಾದ ಪದವಿಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕರು ಇವರ ವಿರುದ್ಧ ತುರ್ತಾಗಿ ತಮ್ಮ ಹಂತದಲ್ಲೇ ಶಿಸ್ತು ಕ್ರಮ ಜರುಗಿಸಬೇಕು ಎಂದು ನಿರ್ದೇಶಿಸಿರುವುದು ತಿಳಿದು ಬಂದಿದೆ.

Hot this week

ಡಿಸಿಎಂ ಕಚೇರಿಯಲ್ಲಿಯೇ ಧೂಳಿಡಿದಿದ್ದ ಕಡತಗಳು; ಸಚಿವ ಸಂಪುಟ ವಿಸರ್ಜನೆ ಬೆನ್ನಲ್ಲೇ 80 ಕಡತಗಳು ಇಲಾಖೆಗೆ ವಾಪಸ್‌

ಬೆಂಗಳೂರು; ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಕೋರಿದ್ದ ಮಾಹಿತಿಯ ಕಡತ,...

ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...
Please Scan to make Your Contribution

Topics

ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ನಕಾರ; ವಿದ್ಯಾರ್ಥಿ ನಿಲಯಗಳ ವಿಲೀನಕ್ಕೆ ಮುಂದಾಯಿತೇ ಸರ್ಕಾರ?

ಬೆಂಗಳೂರು; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಹೊಸದಾಗಿ ಮೆಟ್ರಿಕ್‌ ಪೂರ್ವ...

ಮುಖ್ಯಮಂತ್ರಿ ಮೂಲಸೌಕರ್ಯ ಯೋಜನೆ ಉದ್ದೇಶಕ್ಕೆ ಧಕ್ಕೆ ; ನ್ಯಾಯಾಂಗ ಬಡಾವಣೆ ಪ್ರತಿಷ್ಠಿತರ ಒತ್ತಡಕ್ಕೆ ಮಣಿದು ಹೆಬ್ಬಾಗಿಲು ನಿರ್ಮಾಣ?

ಬೆಂಗಳೂರು; ಮುಖ್ಯಮಂತ್ರಿಗಳ ಮೂಲಸೌಕರ್ಯ ಯೋಜನೆಯಡಿ ಒದಗಿಸಿದ್ದ ಅನುದಾನವನ್ನು ಅಧಿಕಾರಿವರ್ಗವು ಪ್ರಭಾವಿಗಳ ಒತ್ತಡಕ್ಕೆ...

Related Articles

Popular Categories

error: Content is protected !!