ಗ್ಯಾರಂಟಿ ಸಮೀಕ್ಷೆ 15 ಜಿಲ್ಲೆಗಳಲ್ಲಷ್ಟೇ ಪ್ರಗತಿ, 16 ರಲ್ಲಿ ಕುಂಠಿತ; ಅಧಿಕಾರಿಶಾಹಿ ವಿರುದ್ಧ ಕಿಡಿ ಕಾರಿದ ಸರ್ಕಾರ

ಬೆಂಗಳೂರು;  ರಾಜ್ಯ ಕಾಂಗ್ರೆಸ್‌ ಸರ್ಕಾರವು ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಸಮೀಕ್ಷೆಯು  15 ಜಿಲ್ಲೆಗಳಲ್ಲಷ್ಟೇ ಶೇ.70ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿದೆ. ಉಳಿದ 16 ಜಿಲ್ಲೆಗಳಲ್ಲಿ ಸಮೀಕ್ಷೆಯ  ಪ್ರಗತಿ ಕುಂಠಿತವಾಗಿದೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.

 

ಲೋಕಸಭೆ ಚುನಾವಣೆಗೆ ಗ್ಯಾರಂಟಿ ಯೋಜನೆಗಳನ್ನೇ  ಕಾಂಗ್ರೆಸ್‌ ಸರ್ಕಾರವು  ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಂಡಿರುವ ಹೊತ್ತಿನಲ್ಲೇ ಇನ್ನೂ 16 ಜಿಲ್ಲೆಗಳಲ್ಲಿ ಗ್ಯಾರಂಟಿಗಳ ಸಮೀಕ್ಷೆ  ಪ್ರಗತಿ ಕುಂಠಿತಗೊಂಡಿರುವುದಕ್ಕೆ ಅಧಿಕಾರಿಶಾಹಿ ವಿರುದ್ಧ ಕಿಡಿ ಕಾರಿದೆ.

 

ಕೆಲವು ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಮೀಕ್ಷೆಯ ಕೆಲಸವನ್ನು ಮಾಡುತ್ತಿಲ್ಲ. ಹೀಗಾಗಿ ಸಮೀಕ್ಷೆ ಪ್ರಗತಿಯು ಹಿನ್ನಡೆಯಾಗಿದೆ ಎಂದು ಜಿಲ್ಲಾಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

 

ಐದು ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ  ತಲುಪುತ್ತಿರುವ ಹಾಗೂ ಗ್ಯಾರಂಟಿಗಳನ್ನು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್‌ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ 2024ರ ಮಾರ್ಚ್‌ 14ರಂದು ನಡೆದಿದ್ದ ಸಭೆಯಲ್ಲಿ ಈ ವಿಚಾರ ಮುನ್ನೆಲೆಗೆ ಬಂದಿದೆ.

 

ರಾಜ್ಯಾದ್ಯಂತ ನಡೆಯುತ್ತಿರುವ ಗ್ಯಾರಂಟಿ ಸಮೀಕ್ಷೆ ಪ್ರಗತಿ ಕುರಿತು ನಡೆದ  ಸಭೆಯಲ್ಲಿ ಗ್ಯಾರಂಟಿಗಳು ತಲುಪಿರುವ ಕುರಿತು  ವಿಶ್ಲೇಷಣೆ ನಡೆಸಿದೆ. ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ನಡೆಸಿದ್ದ ಸಭೆಯ ನಡವಳಿಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

’15 ಜಿಲ್ಲೆಗಳು ಶೇ.70ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿದೆ. ಕೆಲವು ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಮೀಕ್ಷೆಯ ಕೆಲಸವನ್ನು ಮಾಡುತ್ತಿಲ್ಲ. ಹೀಗಾಗಿ ಹಿನ್ನಡೆಯುಂಟಾಗಿದೆ,’ ಎಂಬುದು ಸಭೆಯ ನಡವಳಿಯಿಂದ ತಿಳಿದು ಬಂದಿದೆ. ಸಮೀಕ್ಷೆ ಕುಂಠಿತಗೊಂಡಿರುವ 16 ಜಿಲ್ಲೆಗಳ ವಿವರಗಳು ನಡವಳಿಯಲ್ಲಿ ದಾಖಲಾಗಿಲ್ಲ.

 

ನಗರ ಪ್ರದೇಶಗಳಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಕೊರತೆ ಇರುವ ಕಾರಣ ಸಮೀಕ್ಷೆಯು ನಿಧಾನವಾಗಿದೆ. ಹೀಗಾಗಿ ನಗರ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳನ್ನು ಸಮೀಕ್ಷೆಗೆ ತೊಡಗಿಸಲು ಅನುಷ್ಠಾನ ಪ್ರಾಧಿಕಾರವು ಸೂಚಿಸಿರುವುದು ಗೊತ್ತಾಗಿದೆ.

 

ಶಕ್ತಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಗಳಲ್ಲಿ ಪ್ರಗತಿಯು ಕುಂಠಿತವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಬಸ್‌ ನಿಲ್ದಾಣಗಳಲ್ಲಿ ಸಾರಿಗೆ ಇಲಾಖೆಯ ಸಹಕಾರದೊಂದಿಗೆ ಸಮೀಕ್ಷೆ ನಡೆಸಲು ನಿರ್ದೇಶನ ನೀಡಿರುವುದು ತಿಳಿದು ಬಂದಿದೆ.

 

ಸರ್ಕಾರದ ವತಿಯಿಂದ ಗೃಹಜ್ಯೋತಿ ಯೋಜನೆಗೆ ಈಗಾಗಲೇ 1,47,95,380, ಗೃಹ ಲಕ್ಷ್ಮಿಗೆ 1,22,08,292, ಶಕ್ತಿ ಗೆ 4,33,46,779, ಅನ್ನಭಾಗ್ಯ ಹಾಗೂ ಯುವನಿಧಿಗೆ 5,23,492 ಫಲಾನುಭವಿಗಳನ್ನು ನೋಂದಾಯಿಸಲಾಗಿದೆ.

 

2024ರ ಫೆ.23ರಿಂದ ಮಾರ್ಚ್‌ 14ರವರೆಗೆ ನಡೆದ ಸಮೀಕ್ಷೆಯಲ್ಲಿ ಗೃಹಜ್ಯೋತಿ ಯೋಜನೆಗೆ 1,05,64,678, ಗೃಹ ಲಕ್ಷ್ಮಿ ಯೋಜನೆಯ 77,30,851, ಅನ್ನಭಾಗ್ಯ ಯೋಜನೆಯ 1,73,75,749, ಶಕ್ತಿ ಯೋಜನೆಯ 81,03,979 ಹಾಗೂ ಯುವನಿಧಿ ಯೋಜನೆಯ 3,87,106 ಫಲಾನುಭವಿಳ ಸಮೀಕ್ಷೆ ಆಗಿರುವುದು ಗೊತ್ತಾಗಿದೆ.

 

ಐದು ಗ್ಯಾರಂಟಿ ಯೋಜನೆಗಳ ಕುರಿತಾಗಿ ನಡೆಯುತ್ತಿರುವ ಸಮೀಕ್ಷೆ ಕಾರ್ಯವನ್ನು ತ್ವರಿತಗತಿಯಲ್ಲಿ  ಪೂರ್ಣಗೊಳಿಸಬೇಕು ಎಂದು    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ತೀವ್ರ ಒತ್ತಡ ಹೇರಿದ್ದಾರೆ. ಇದರ ಮಧ್ಯೆ ಅಭಿವೃದ್ಧಿ ಆಯುಕ್ತರು ಸಹ ಮುಂದಿನ ಮೂರು ದಿನದೊಳಗೇ ಸಮೀಕ್ಷೆಯನ್ನು ತ್ವರಿತಗೊಳಿಸಬೇಕು ಎಂದು ನಿರ್ದೇಶಿಸಲಾಗಿತ್ತು.  ಇದಕ್ಕಾಗಿ  ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೇಲೆ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಒತ್ತಡ ಹೇರಿತ್ತು.

ಗ್ಯಾರಂಟಿ ಸಮೀಕ್ಷೆ; 3 ದಿನದೊಳಗೇ ಪೂರ್ಣಗೊಳಿಸಲು ತೀವ್ರ ಒತ್ತಡ, ಕಾರ್ಯಕರ್ತೆಯರ ಕೆಂಗಣ್ಣು

ಈ ಸಮೀಕ್ಷೆಯನ್ನು 10ರಿಂದ 15 ದಿನಗಳಲ್ಲಿ ಪೂರ್ಣಗೊಳಿಸಬೇಕು ಮತ್ತು ಕಾಲಕಾಲಕ್ಕೆ ವರದಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ  ಸೂಚಿಸಿದ್ದಾರೆ. ಹೀಗಾಗಿ  ಅಭಿವೃದ್ಧಿ ಆಯುಕ್ತರು ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು,  ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನಿರ್ದೇಶಿಸಿದ್ದರು. ಸರ್ಕಾರದ ಒತ್ತಡವನ್ನು ಪ್ರತಿಪಕ್ಷ ಬಿಜೆಪಿಯು ಟೀಕಿಸಿತ್ತು.

 

ಗ್ಯಾರಂಟಿಗಳನ್ನು ಜನ ಮೆಚ್ಚಿದ್ದರೇ ಸಮೀಕ್ಷೆಯೇಕೆ?; ‘ದಿ ಫೈಲ್‌’ ವರದಿ ಹಂಚಿಕೊಂಡು ಪ್ರಶ್ನಿಸಿದ ಪ್ರತಿಪಕ್ಷ ನಾಯಕ

ಈ ಪೈಕಿ ಆಶಾ ಕಾರ್ಯಕರ್ತೆಯರು 1,20,59,396 ಮಂದಿಯನ್ನು ಅಂಗನವಾಡಿ ಕಾರ್ಯಕರ್ತೆಯರು 2,61,85,056 ಮಂದಿಯನ್ನು ಸಮೀಕ್ಷೆ ನಡೆಸಿದ್ದಾರೆ. ಬೆಂಗಳೂರು ನಗರದಲ್ಲಿ 3,94,277 ಫಲಾನುಭವಿಗಳನ್ನು ಸಮೀಕ್ಷೆ ನಡೆಸಿರುವುದನ್ನು ಹೊರತುಪಡಿಸಿ ರಾಜ್ಯದ ವಿವಿಧ ನಗರಗಳಲ್ಲಿ ಸಮೀಕ್ಷೆ ನಡೆಸಿರಲಿಲ್ಲ.

 

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಸಮೀಕ್ಷೆಗೆ ರಾಜ್ಯ ಸರ್ಕಾರವು  12 ಕೋಟಿ ರು. ವೆಚ್ಚ ಮಾಡಲಿದೆ.

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಗ್ಯಾರಂಟಿ ಸಮೀಕ್ಷೆಗೆ 12 ಕೋಟಿ; ದುಂದುವೆಚ್ಚಕ್ಕೆ ದಾರಿ

 

ಎಂ2ಎಂ ಮಾಧ್ಯಮ ಸಂಸ್ಥೆಗೆ ಸಮೀಕ್ಷೆ ನಡೆಸಲು 1 ಕೋಟಿ ರು, ಮುಂಬೈ ಮೂಲದ ಎಕ್ಸ್‌ ಕೆಡಿಆರ್‍‌ ಸಂಸ್ಥೆಗೆ ಅಧ್ಯಯನದ ಹೆಸರಿನಲ್ಲಿ 1.03 ಕೋಟಿ ರು.ಗಳನ್ನು ನೀಡಿದೆ. ಈ ಎರಡೂ ಸಂಸ್ಥೆಗಳು ಈಗಾಗಲೇ ಮುಂಗಡ ಹಣ ಪಡೆದು ಸಮೀಕ್ಷೆ ಕಾರ್ಯವನ್ನೂ ಕೈಗೆತ್ತಿಕೊಂಡಿದೆ. ಈ ಎರಡೂ ಖಾಸಗಿ ಸಂಸ್ಥೆಗಳು ಈಗಾಗಲೇ ಸಮೀಕ್ಷೆ ಮತ್ತು ಅಧ್ಯಯನ ನಡೆಸುತ್ತಿರುವಾಗಲೇ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಮೂಲಕ ನಡೆಸಲಿರುವ  ಸಮೀಕ್ಷೆಗೆ 12 ಕೋಟಿ ರು ವೆಚ್ಚ ಮಾಡುತ್ತಿರುವುದು ದುಂದುವೆಚ್ಚಕ್ಕೆ ದಾರಿಮಾಡಿಕೊಟ್ಟಂತಾಗಿತ್ತು.

 

ಅಲ್ಲದೇ ಸಮೀಕ್ಷೆ ನಡೆಸಿದ್ದ ಎಂ2ಎಂ ಸಂಸ್ಥೆಯು ಸರ್ಕಾರಕ್ಕೆ ಜಿಪಿಎಸ್‌ ದಾಖಲೆಗಳು ಮತ್ತು ವಿಧಾನಸಭಾ ಕ್ಷೇತ್ರವಾರು ಫೋಟೋಗಳನ್ನು ನೀಡಿರಲಿಲ್ಲ.

 

ಶಕ್ತಿ ಯೋಜನೆ ಸಮೀಕ್ಷೆ; ಜಿಪಿಎಸ್‌ ದಾಖಲೆಗಳಿಲ್ಲ, ವಿಧಾನಸಭಾ ಕ್ಷೇತ್ರವಾರು ಫೋಟೋಗಳೂ ಇಲ್ಲ

 

ಗೃಹಲಕ್ಷ್ಮಿ ಸೇರಿದಂತೆ 4 ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ ವರ್ಕ್‌ ಕಂಪನಿಗೆ  4(ಜಿ) ವಿನಾಯಿತಿ ನೀಡುವ ಮುನ್ನ ಆರ್ಥಿಕ ಇಲಾಖೆಯ ಅಧಿಕಾರಿಗಳು  ಆಡಳಿತಾತ್ಮಕ  ಪ್ರಕ್ರಿಯೆಗಳನ್ನೇ ನಡೆಸಿರಲಿಲ್ಲ.

ಕೋಟಿ ರು.ವೆಚ್ಚದ ಸಮೀಕ್ಷೆ; ಇಲಾಖೆಗಳ ಪ್ರಸ್ತಾವನೆಯಿಲ್ಲ, ಅಭಿಪ್ರಾಯವೂ ಇಲ್ಲ, ನೇರ ಮಾರ್ಗದಲ್ಲೇ 4(ಜಿ)

 

2023ರ ವಿಧಾನಸಭೆ ಚುನಾವಣೆಯಲ್ಲಿ  ಕಾಂಗ್ರೆಸ್‌ಗೆ ಪೂರ್ಣ ಬಹುಮತ ಬರಲಿದೆ ಎಂದು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಯ ಈದಿನ.ಕಾಮ್‌ ವೆಬ್‌ಸೈಟ್‌ ಚುನಾವಣೆ ಪೂರ್ವ ಸಮೀಕ್ಷೆ ಹೇಳಿತ್ತು. ಕಾಂಗ್ರೆಸ್‌ ಪಕ್ಷವು ಸರ್ಕಾರ ರಚಿಸಿದ ಎರಡೇ ಎರಡು ತಿಂಗಳಲ್ಲಿ ಇದೇ ಕಂಪನಿಗೇ 58 ಸಾವಿರ ಕೋಟಿ ರು. ವೆಚ್ಚದ ಗ್ಯಾರಂಟಿಗಳ ಸಮೀಕ್ಷೆ ನಡೆಸಲು 1 ಕೋಟಿ ರು. ನೀಡಿದ್ದು  ಚರ್ಚೆಗೆ ಗ್ರಾಸವಾಗಿತ್ತು.

ಗ್ಯಾರಂಟಿಗಳ ಸಮೀಕ್ಷೆ; ಮಾಧ್ಯಮ ಸಂಸ್ಥೆಗೆ ಕೋಟಿ ರು ಕೊಟ್ಟ ಸರ್ಕಾರ

 

ಗ್ಯಾರಂಟಿಗಳ ಕುರಿತಾಗಿ ಐಸೆಕ್‌, ಮೌಲ್ಯಮಾಪನ ಪ್ರಾಧಿಕಾರಗಳಿಂದ ಸಮೀಕ್ಷೆ ನಡೆಸಬೇಕಿತ್ತು ಎಂದು ಪ್ರತಿಪಾದಿಸಿರುವ ಹಲವು ಅಧಿಕಾರಿಗಳು, ಕೇವಲ ಪ್ರಕಾಶನ, ಮುದ್ರಣದಂತಹ ಸೇವೆಗಳನ್ನು ಒದಗಿಸುತ್ತಿರುವ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ವಹಿಸಿರುವುದಕ್ಕೆ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದರು.

 

ಸರ್ವೆ ಕಾರ್ಯಕ್ಕೆ ಸರ್ಕಾರದ ಬೆನ್ನು ಬಿದ್ದಿದ್ದ ಎಂ2ಎಂ ಮೀಡಿಯಾ ನೆಟ್‌ವರ್ಕ್ ಕಂಪನಿ; ದಾಖಲೆ ಬಹಿರಂಗ

 

ಗ್ಯಾರಂಟಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಆಡಳಿತಾತ್ಮಕ ಪ್ರಕ್ರಿಯೆಗಳು ಜೂನ್‌, ಜುಲೈವರೆಗೂ ಚಾಲ್ತಿಯಲ್ಲಿದ್ದವು. ಇದಾದ ನಂತರವೂ ಯೋಜನೆ ಅನುಷ್ಠಾನದಲ್ಲಿ ಗೊಂದಲ ಮುಂದುವರೆದಿತ್ತು. ಬಹುತೇಕ ಫಲಾನುಭವಿಗಳಿಗೆ ಹಣವೂ ಇದುದವರೆಗೂ ಪಾವತಿಯಾಗಿಲ್ಲ.  ಮಾರ್ಗಸೂಚಿಗಳ ಸಂಬಂಧ ಆಗಸ್ಟ್‌ವರೆಗೂ ತಿದ್ದುಪಡಿಗಳು ಮುಂದುವರೆದಿದ್ದವು. ಕೆಎಸ್‌ಆರ್‍‌ಟಿಸಿಯು 20 ಲಕ್ಷ ರು.ಗಳನ್ನು ನೀಡಿದ್ದರೂ ಇದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನೇ ಒದಗಿಸಿರಲಿಲ್ಲ.

ಕೋಟಿ ರು. ಸಮೀಕ್ಷೆ; 20 ಲಕ್ಷರು ಮುಂಗಡ ನೀಡಿ ದಾಖಲೆಗಳನ್ನೇ ಒದಗಿಸದ ಕೆಎಸ್‌ಆರ್‍‌ಟಿಸಿ

 

ಅಲ್ಲದೇ ಬೆಸ್ಕಾಂ ಕೂಡ  ಸಮಗ್ರ ಕಡತವನ್ನೇ ಮುಚ್ಚಿಟ್ಟಿತ್ತು.

 

ಕೋಟಿ ರು. ವೆಚ್ಚದ ಸಮೀಕ್ಷೆ; ಎಂ2ಎಂ ಕಂಪನಿಗೆ ನೀಡಿರುವ ಆದೇಶದ ಸಮಗ್ರ ಕಡತವನ್ನೇ ಮುಚ್ಚಿಟ್ಟ ಬೆಸ್ಕಾಂ

 

 

ಅದೇ ರೀತಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸಹ ಎಂ2ಎಂ ಕಂಪನಿಯೊಂದಿಗೆ ಎಂಒಯು ಸೇರಿ ಹಲವು ದಾಖಲೆಗಳೇ ಲಭ್ಯವಿಲ್ಲ ಎಂದು ಆರ್‍‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿತ್ತು.

 

 

ಸಮೀಕ್ಷೆಗೆ ಕೋಟಿ ರು.; ಎಂಒಯು ಸೇರಿ ಹಲವು ವಿವರಗಳೇ ಲಭ್ಯವಿಲ್ಲವೆಂದ ಆಹಾರ ಇಲಾಖೆ

 

ಇದರ ನಡುವೆಯೇ ಸರ್ಕಾರವು ಗ್ಯಾರಂಟಿಗಳನ್ನು ಅಧ್ಯಯನ ನಡೆಸಲು ಮುಂಬೈ ಮೂಲದ ಸಂಸ್ಥೆಗೆ 1.03 ಕೋಟಿ ರು. ವೆಚ್ಚ ಮಾಡಲು 4(ಜಿ) ವಿನಾಯಿತಿ ನೀಡಿತ್ತು.

 

ಗ್ಯಾರಂಟಿ ಸಮೀಕ್ಷೆ, ಅನುಷ್ಠಾನ ಸಮಿತಿ ರಚನೆ ಬೆನ್ನಲ್ಲೇ ಈಗ ಅಧ್ಯಯನ; ಮುಂಬೈ ಸಂಸ್ಥೆಗೆ 1.03 ಕೋಟಿ ರು ನೀಡಿಕೆ

ಗ್ಯಾರಂಟಿ ಯೋಜನೆಗಳನ್ನು  ಏಕಕಾಲಕ್ಕೆ ಐದಾರು ಸಮಿತಿಗಳು ಸಮೀಕ್ಷೆ ನಡೆಸುತ್ತಿರುವುದು ಮತ್ತು ಇದಕ್ಕಾಗಿ ಕೋಟ್ಯಂತರ ರುಪಾಯಿ ವೆಚ್ಚ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ.

SUPPORT THE FILE

Latest News

Related Posts