Thursday | May 14, 2026 |

ಪಿಯು ಶುಲ್ಕ ಹೆಚ್ಚಳ ಪ್ರಸ್ತಾವನೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಹಿಂದೆ ಸರಿದ ಸರ್ಕಾರ

ಬೆಂಗಳೂರು; ಪದವಿಪೂರ್ವ ಕಾಲೇಜುಗಳ ಪ್ರವೇಶ ಶುಲ್ಕ ಹೆಚ್ಚಳ ಮಾಡಲು ಪದವಿಪೂರ್ವ ಶಿಕ್ಷಣ ಮಂಡಳಿಯು ಪ್ರಸ್ತಾವನೆ ಸಲ್ಲಿಸಿರುವ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸಿದ್ದರ  ಬೆನ್ನಲ್ಲೇ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಶುಲ್ಕ ಹೆಚ್ಚಳ ಮಾಡುವ ನಿರ್ಧಾರದಿಂದ  ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಿಂದೆ ಸರಿದಿದೆ. ಶುಲ್ಕ ಹೆಚ್ಚಳ ಮಾಡುವ ಸಂಬಂಧ  ಪದವಿಪೂರ್ವ ಶಿಕ್ಷಣ ಮಂಡಳಿಯು ಸಲ್ಲಿಸಿದ್ದ  ಪ್ರಸ್ತಾವನೆಯನ್ನು ಸದ್ಯಕ್ಕೆ ತಿರಸ್ಕರಿಸಿದೆ.

 

ಹಿಂದಿನ ಬಿಜೆಪಿ ಸರ್ಕಾರವು ಪಿಯು ವಿದ್ಯಾರ್ಥಿನಿಯರಿಗೆ ಶುಲ್ಕ ವಿನಾಯಿತಿ ನೀಡಿದ್ದರೇ ಈಗಿನ ಕಾಂಗ್ರೆಸ್‌ ಸರ್ಕಾರವು 2024-25ನೇ ಸಾಲಿಗೆ ಪಿಯು ವಿದ್ಯಾರ್ಥಿಗಳ ವಿವಿಧ ರೀತಿಯ ಶುಲ್ಕವನ್ನು ಪರಿಷ್ಕರಣೆ ಮಾಡಲು ಹೊರಟಿತ್ತು. ತೆರಿಗೆಯೇತರ ಆದಾಯಗಳನ್ನು ಪರಿಷ್ಕರಿಸುವ ಭಾಗವಾಗಿ ಪದವಿಪೂರ್ವ ಶಿಕ್ಷಣ ಮಂಡಳಿಯು ಶುಲ್ಕ ಹೆಚ್ಚಳ ಪ್ರಸ್ತಾವನೆ ಸಲ್ಲಿಸಿತ್ತು.

 

ಪಿಯು ವಿದ್ಯಾರ್ಥಿಗಳ ಶುಲ್ಕ ಪರಿಷ್ಕರಣೆ ಮಾಡುವ ಸಂಬಂಧ ಪಿಯು ಮಂಡಳಿಯ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆ ಕುರಿತು ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಪ್ರಸ್ತಾಪಿಸಿದ್ದರು.

 

ಪಿಯು ಮಂಡಳಿ ನಿರ್ದೇಶಕರು ಪ್ರಸ್ತಾವಿಸಿರುವ ಶುಲ್ಕ ಪರಿಷ್ಕರಣೆಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆಯಲು ಕಡತವನ್ನು (ಇಪಿ ಟಿಪಿಯು 2023, ಸ್ವೀಕೃತಿ ಸಂಖ್ಯೆ; 7004123/2023)  ರವಾನಿಸಿತ್ತು. ಇದನ್ನಾಧರಿಸಿ   ‘ದಿ ಫೈಲ್‌’ಗೆ 2023ರ ಡಿಸೆಂಬರ್‍‌ 28ರಂದೇ ವರದಿ ಪ್ರಕಟಿಸಿತ್ತು.

ಪಿಯು ವಿದ್ಯಾರ್ಥಿಗಳ ಜೇಬಿಗೆ ‘ಕೈ’ ಹಾಕಿದ ಸರ್ಕಾರ; ಮುಂದಿನ ವರ್ಷದಿಂದಲೇ ಶುಲ್ಕ ಪರಿಷ್ಕರಣೆ

 

ಪದವಿಪೂರ್ವ ಶಿಕ್ಷಣ ಹಂತದಲ್ಲಿ ಕಾಲೇಜುಗಳಿಂದ ಸಂಗ್ರಹ ಮಾಡಲಾಗುವ ಶುಲ್ಕ ಮತ್ತು ಪ್ರಥಮ, ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಶುಲ್ಕಗಳನ್ನು ಪಡೆಯಲಾಗುತ್ತಿದೆ. ಕಾಲೇಜುಗಳಿಂದ ಸಂಗ್ರಹ ಮಾಡಲಾಗುವ ಶುಲ್ಕಗಳನ್ನು 2018ನೇ ಸಾಲಿನಲ್ಲಿ (ಸರ್ಕಾರದ ಆದೇಶ ಸಂಖ್ಯೆ ಇಡಿ 195 ಡಿಜಿಡಿ 2017, ದಿನಾಂಕ 02-03-2018) ಪರಿಷ್ಕರಿಸಲಾಗಿತ್ತು. ಇದು 2018-19ನೇ ಸಾಲಿನಿಂದಲೇ ಜಾರಿಯಲ್ಲಿತ್ತು.

 

ಶುಲ್ಕ ಪರಿಷ್ಕರಣೆಯನ್ನು ಪ್ರತೀ ಮೂರು ವರ್ಷಗಳಿಗೊಮ್ಮೆ ಮಾಡಬೇಕಿದೆ ಎಂಬ ಸಮರ್ಥನೆಯನ್ನು ಮುಂದಿರಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು 2024-25ನೇ ಶೈಕ್ಷಣಿಕ ಸಾಲಿನಿಂದಲೇ ಜಾರಿಗೆ ಬರುವಂತೆ ಶುಲ್ಕವನ್ನು ಪರಿಷ್ಕರಿಸಲು ಮುಂದಾಗಿತ್ತು.

 

‘ಕಾಲೇಜಿನ ಮೂಲಭೂತ ಸೌಕರ್ಯ ಅಭಿವೃದ್ಧಿ ದೃಷ್ಟಿಯನ್ನು ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆಯಾಗದಂತೆ ಇಲಾಖೆಯ ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಷ್ಕರಣೆ ಪಟ್ಟಿ ಸಿದ್ಧಪಡಿಸಲಾಗಿದೆ. ಜಾರಿಯಲ್ಲಿರುವ ಪ್ರಸ್ತುತ ಶುಲ್ಕ ಹಾಗೂ ಪರಿಷ್ಕರಣೆ ಮಾಡಲು ಉದ್ದೇಶಿಸಿರುವ ಶುಲ್ಕಗಳ ವಿವರವಾದ ಪಟ್ಟಿಯೊಂದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರಂತೆ 2024-25ನೇ ಶೈಕ್ಷಣಿಕ ಸಾಲಿನಿಂದಲೇ ಜಾರಿಗೆ ಬರುವಂತೆ ಶುಲ್ಕ ಪರಿಷ್ಕರಣೆ ಸಂಬಂಧ ಸರ್ಕಾರದ ಹಂತದಲ್ಲಿ ಸೂಕ್ತ ಅದೇಶ ಹೊರಡಿಸಬೇಕು,’ ಎಂದು ಕೋರಿತ್ತು.

 

ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ವಿದ್ಯಾರ್ಥಿಗಳಿಂದ ಹಾಗೂ ಕಾಲೇಜುಗಳಿಂದ ಸಂಗ್ರಹ ಮಾಡಲಾಗುವ ಶುಲ್ಕಗಳನ್ನು ಪರಿಷ್ಕರಣೆ ಮಾಡಲು ಕೋರಿರುವ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯಲು ಕಡತವನ್ನು ರವಾನಿಸಿತ್ತು

 

 

2013-14ರಲ್ಲಿದ್ದ ಶುಲ್ಕವನ್ನು ಶೇ.30ರಿಂದ ಶೇ.60ರ ವರೆಗೆ 2018-19ರಿಂದ ಹೆಚ್ಚಿಸಿತ್ತು. ಪರೀಕ್ಷಾ ಶುಲ್ಕ, ಮರು ಮೌಲ್ಯಮಾಪನ, ಅಂಕಪಟ್ಟಿ, ಅನುತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿ, ಹೊಸ ಕಾಲೇಜು, ಹೊಸ ಕಾಂಬಿನೇಷನ್‌ ತೆರೆಯಲು, ವರ್ಗಾವಣೆ ಪತ್ರ, ನೋಂದಣಿ ಶುಲ್ಕ, ಪರೀಕ್ಷಾ ಕೇಂದ್ರದ ಬದಲಾವಣೆ ಸೇರಿದಂತೆ ಸುಮಾರು 46 ವಿವಿಧ ಶುಲ್ಕ ಪರಿಷ್ಕರಿಸಿತ್ತು.

 

2018-19ರಲ್ಲಿದ್ದ ದರ ಪಟ್ಟಿ

 

ವಿದ್ಯಾರ್ಥಿ ಪ್ರವೇಶ 36.50 ರು ನಿಂದ 38.89 ರು.,

 

 

ಖಾಸಗಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ 252 ರು. ನಿಂದ 400. 37 ರು.,

 

ನೋಂದಣಿ ಶುಲ್ಕ 25 ರು. ನಿಂದ 35. 40

 

 

ಟ್ಯೂಷನ್‌ ಶುಲ್ಕ 504 ರು ನಿಂದ 670 ರು.

 

 

ಖಾಸಗಿ, ಅನುದಾನಿತ ಕಾಲೇಜುಗಳಲ್ಲಿ  ಟ್ಯೂಷನ್‌ ಶುಲ್ಕ 1,008 ರುನಿಂದ 1,330 ರು.

 

 

ವಿಳಂಬ ದಾಖಲಾತಿ ದಂಡ 504 ರು. ನಿಂದ 670 ರು.

 

 

ವಿಳಂಬ ದಾಖಲಾತಿ ವಿಶೇಷ ದಂಡ 1,680 ರು ನಿಂದ 2, 220 ರು.,

 

 

ಕಾಲೇಜು ಬದಲಾವಣೆ ಶುಲ್ಕ 1,200 ರು. ನಿಂದ 1,600 ರು.

 

 

ಹೊಸ ಕಾಲೇಜಿಗೆ ಅರ್ಜಿ ಶುಲ್ಕ 36,000 ರು. ನಿಂದ 50, 000 ರು.,

 

 

ಹೊಸ ಕಾಲೇಜು ನೋಂದಣಿ ಶುಲ್ಕ 72, 000 ರು. ನಿಂದ 1,00, 800 ರು.,

 

ಹೊಸ ಕಾಂಬಿನೇಷನ್‌(ಕಲಾ, ವಾಣಿಜ್ಯ) 1,44,007 ರು. ನಿಂದ 2,00, 000

 

ಹಿಂದಿನ ಬಿಜೆಪಿ ಸರ್ಕಾರವು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗುವ ವಿದ್ಯಾರ್ಥಿನಿಯರಿಗೆ 456 ರೂಪಾಯಿ ಶುಲ್ಕದಿಂದ ವಿನಾಯಿತಿ ನೀಡಿತ್ತು. ಈ ಮೊತ್ತವನ್ನು ಮೊತ್ತವನ್ನು ಕಾಲೇಜು ಪ್ರಾಂಶುಪಾಲರ ಖಾತೆಗೆ ಜಮೆ ಮಾಡಲು ಆದೇಶ ಹೊರಡಿಸಿತ್ತು.

 

2019-20ನೇ ಸಾಲಿನಿಂದ 456 ರೂಪಾಯಿ ಶುಲ್ಕದಿಂದ ವಿನಾಯಿತಿ ನೀಡಿ ಪ್ರವೇಶ ನೀಡಲು ಆದೇಶಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ಕೇವಲ ಆಯಾ ವರ್ಷಗಳಿಗೆ ಮಾತ್ರ ಸೀಮಿತವಾಗಿ ಶುಲ್ಕದಿಂದ ವಿನಾಯಿತಿ ನೀಡಿ ಪ್ರಾಂಶುಪಾಲರ ಖಾತೆಗೆ ಜಮೆ ಮಾಡಲು ಅನುಮತಿ ನೀಡಲಾಗುತ್ತಿತ್ತು.

 

ಆದರೆ ಹಿಂದಿನ ಬಿಜೆಪಿ ಸರ್ಕಾರದ ಆದೇಶದಂತೆ 2022-23ನೇ ಶೈಕ್ಷಣಿಕ ಸಾಲಿನಿಂದ ಶಾಶ್ವತವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ 456 ರೂಪಾಯಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದ್ದನ್ನು ಸ್ಮರಿಸಬಹುದು.

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!