ಶೂ ಖರೀದಿ; ವಾಸ್ತವ ದರ ಪರಿಗಣಿಸಿಲ್ಲ, ಹೆಚ್ಚುವರಿ ಧನವೂ ಇಲ್ಲ, ದಾನಿಗಳ ಬಳಿ ಕೈಯೊಡ್ಡುವುದು ನಿಂತಿಲ್ಲ

ಬೆಂಗಳೂರು; ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತವಾಗಿ ಒದಗಿಸುವ ಶೂ ಮತ್ತು ಸಾಕ್ಸ್‌ ಖರೀದಿಗೆ ಹಿಂದಿನ ವರ್ಷ  ನೀಡಿದ್ದ ಅನುದಾನಕ್ಕಿಂತಲೂ 4 ಕೋಟಿ ಕಡಿಮೆ ಮಂಜೂರು ಮಾಡಿದೆ.

 

ಅಲ್ಲದೇ ಪ್ರಸಕ್ತ ಸ್ಥಳೀಯ ಮಾರುಕಟ್ಟೆಯಲ್ಲಿನ ವಾಸ್ತವ ದರಗಳನ್ನು ಪರಿಗಣಿಸಿಲ್ಲ . ಬದಲಿಗೆ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿ ಅಂದರೇ 7 ವರ್ಷದ ಹಿಂದೆ (2017-18) ಇದ್ದ ದರವನ್ನೇ ಇದೇ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವು  2024-25ನೇ ಸಾಲಿನಲ್ಲಿಯೂ ನಮೂದಿಸಿದೆ.

 

ಪ್ರಸಕ್ತ ಸಾಲಿನಲ್ಲಿ ಪ್ರಚಲಿತ ಮಾರುಕಟ್ಟೆಯಲ್ಲಿನ ವಾಸ್ತವ ದರಗಳನ್ನೂ ಪರಿಗಣಿಸದೇ ಆದೇಶ ಹೊರಡಿಸಿರುವುದು ನಗೆಪಾಟಲಿಗೀಡಾಗಿದೆ. ಹಾಗೆಯೇ ರಾಷ್ಟ್ರ ಮಟ್ಟದ ಪ್ರತಿಷ್ಠಿತ ಕಂಪನಿ, ಸಂಸ್ಥೆಗಳ ಮೊದಲ ಗುಣಮಟ್ಟ (FIRST QUALITY)ದಿಂದ ಕೂಡಿರುವ ಶೂ, ಸಾಕ್ಸ್‌ಗಳನ್ನೇ ಕಡ್ಡಾಯವಾಗಿ ಖರೀದಿಸಬೇಕು ಎಂದು ಹೊರಡಿಸಿರುವ  ಸುತ್ತೋಲೆಯು  ಖಾಸಗಿ ಸಂಘ, ಸಂಸ್ಥೆ, ದಾನಿಗಳ ಬಳಿ ಕೈಯೊಡ್ಡಲು ನಿಲ್ಲಿಸಿರುವುದು ಶಿಕ್ಷಕರನ್ನು  ಪೇಚಿಗೆ ಸಿಲುಕಿಸಿದಂತಾಗಿದೆ.

 

ಅದೇ ರೀತಿ   ಉತ್ತಮ ಗುಣಮಟ್ಟದ ಶೂ ಮತ್ತು ಸಾಕ್ಸ್‌  ಖರೀದಿಸಲು ಈ ಬಾರಿಯೂ  ಹೆಚ್ಚುವರಿ ಧನ ಸಹಾಯ ನೀಡಿಲ್ಲ.  ಬದಲಿಗೆ ಹೆಚ್ಚುವರಿ ಧನ ಸಹಾಯಕ್ಕಾಗಿ ಖಾಸಗಿ ಸಂಘ ಸಂಸ್ಥೆ ಮತ್ತು ದಾನಿಗಳ ಬಳಿ ಶಿಕ್ಷಕರು ಅನಿವಾರ್ಯವಾಗಿ ಕೈಯೊಡ್ಡಿ ನಿಲ್ಲಬೇಕಿದೆ.

 

2024-25ನೇ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ 42.65 ಲಕ್ಷ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತವಾಗಿ ಒಂದು ಜೊತೆ ಶೂ ಮತ್ತು 2 ಜೊತೆ ಸಾಕ್ಸ್‌ ಅಥವಾ ಪಾದರಕ್ಷೆ ವಿತರಿಸಲು ಒಟ್ಟು 121.00 ಕೋಟಿ ರು. ಬಿಡುಗಡೆ ಮಾಡಿದೆ. ಈ ಸಂಬಂಧ 2024ರ ಮೇ 29ರಂದು ಸುತ್ತೋಲೆ ಹೊರಡಿಸಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

2023-24ನೇ ಸಾಲಿನಲ್ಲಿ ಇದೇ ಉದ್ದೇಶಕ್ಕೆ 125 ಕೋಟಿ ರು ಬಿಡುಗಡೆ ಮಾಡಿತ್ತು.  ಹಿಂದಿನ ವರ್ಷ ಬಿಡುಗಡೆ ಮಾಡಿದ್ದ ಅನುದಾನಕ್ಕೆ ಹೋಲಿಸಿದರೇ ಈ ವರ್ಷ 4 ಕೋಟಿ ಕಡಿಮೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

2017-18ನೇ ಸಾಲಿನಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ  ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಖರೀದಿ ಸಂಬಂಧ ಶಾಲಾ ಎಸ್.ಡಿ.ಎಂ.ಸಿ ಖಾತೆಗಳಿಗೆ ರೂ.129.84 ಕೋಟಿ ಅನುದಾನವನ್ನು ಬಿಡುಗಡೆ ಮಾಡಿತ್ತು. 7 ವರ್ಷಗಳ ಹಿಂದೆ ಹೊರಡಿಸಿದ್ದ ಆದೇಶದಲ್ಲಿ ನಮೂದಿಸಿದ್ದ ದರವನ್ನೇ ಹಿಂದಿನ ಎರಡು ಸರ್ಕಾರಗಳೂ ಮುಂದುವರೆಸಿವೆ. ಈಗಿನ ಕಾಂಗ್ರೆಸ್‌ ಸರ್ಕಾರವೂ ಸಹ ಹಿಂದಿನ ದರವನ್ನೇ ಯಥಾವತ್ತಾಗಿ ಪಾಲಿಸಿದೆ.

 

ಹಿಂದಿನ ಬಿಜೆಪಿ ಸರ್ಕಾರವು ಸಹ ಶಾಲಾ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್‌ ಖರೀದಿಸಲು 132 ಕೋಟಿ ರು. ಬಿಡುಗಡೆ ಮಾಡಿತ್ತು. ಕಾಂಗ್ರೆಸ್‌ ಸರ್ಕಾರವು 125.00 ಕೋಟಿ ರು. ಬಿಡುಗಡೆ ಮಾಡಿದೆ. ಇದರಲ್ಲಿ 01ರಿಂದ 8ನೇ ತರಗತಿ ಮಕ್ಕಳಿಗೆ ಶೂ ಮತ್ತು ಸಾಕ್ಸ್‌ ವಿತರಿಸಲು 99.70 ಕೋಟಿಯನ್ನಷ್ಟೇ ಬಿಡುಗಡೆ ಮಾಡಿದೆ.  ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ಈಗಿನ ಸರ್ಕಾರವು ಉಚಿತ ಶೂ ಮತ್ತು ಸಾಕ್ಸ್‌ ಖರೀದಿಸಲು 7 ಕೋಟಿ ರು. ಕಡಿಮೆ ಮಾಡಿತ್ತು.

 

2017-18ನೇ ಸಾಲಿನಲ್ಲಿ 1ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 265 ರು., 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 295 ರು., 9ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 325 ರು.ಗಳಂತೆ ಬಿಡುಗಡೆ ಮಾಡಿತ್ತು. ಇದೇ ದರವು 2019-20ರಲ್ಲಿಯೂ ಮುಂದುವರೆದಿತ್ತು. 2022-23, 2023-24, 2024-25 ನೇ ಶೈಕ್ಷಣಿಕ ಸಾಲಿನಲ್ಲಿಯೂ ಅದೇ ದರವನ್ನು ಉಲ್ಲೇಖಿಸಿದೆ.

 

ಬಾಟಾ, ಲಿಬರ್ಟಿ, ಲ್ಯಾನ್ಸರ್‌, ಪ್ಯಾರಾಗಾನ್‌, ಕರೋನ, ಆಕ್ಷನ್‌, ಲಕಾನಿ ಸೇರಿದಂತೆ ರಾಷ್ಟ್ರಮಟ್ಟದ ಹೆಸರಾಂತ ಕಂಪನಿಗಳ ಪ್ರತಿಷ್ಠಿತ ಬ್ರ್ಯಾಂಡ್‌ಗಳ ದರವು ಕಳೆದ 5 ವರ್ಷಕ್ಕೆ ಹೋಲಿಸಿದರೆ ಸ್ಥಳೀಯ ಮಟ್ಟದಲ್ಲಿಯೂ ಈ ಬಾರಿ ಹೆಚ್ಚಳವಾಗಿದೆ. ಆದರೆ ಸರ್ಕಾರವು ಚಾಲ್ತಿ ದರಗಳನ್ನು ನಮೂದಿಸದಿರುವುದು ಹೆಚ್ಚುವರಿ ಹಣಕ್ಕಾಗಿ ಶಿಕ್ಷಕರು ದಾನಿಗಳು, ಖಾಸಗಿ ಸಂಸ್ಥೆಗಳ ಬಳಿ ಕೈಯೊಡ್ಡಬೇಕಾಗಿದೆ.

 

‘7ವರ್ಷದ ಹಿಂದಿನ ದರವನ್ನೇ ಆದೇಶದಲ್ಲಿ ನಮೂದಿಸಿದೆ. ಆದರೆ ಮಾರುಕಟ್ಟೆಯಲ್ಲಿ ಈಗಲೂ ಅದೇ ದರ ಇರುವುದಿಲ್ಲ. ಪೆಟ್ರೋಲ್‌ ಮತ್ತು ಡೀಸೆಲ್‌ ದರವು ಸುಮಾರು 25 ರಿಂದ 30 ರು. ಹೆಚ್ಚಳವಾಗಿದೆ. ಎಲ್ಲಾ ಸರಕು ಸಾಮಗ್ರಿಗಳ ದರವೂ ಏರಿಕೆಯಾಗಿರುತ್ತದೆ. ಹೀಗಿರುವಾಗ 7 ವರ್ಷದ ಹಿಂದಿನ ದರವನ್ನು ಪರಿಷ್ಕರಿಸಿ ಚಾಲ್ತಿ ದರವನ್ನು ನಮೂದಿಸಿ ಹಣ ಬಿಡುಗಡೆ ಮಾಡಬೇಕಿತ್ತು. ಆದರೆ ಈಗಿನ ಸರ್ಕಾರವು 7 ವರ್ಷದ ಹಿಂದಿನ ದರವನ್ನೇ ನಮೂದಿಸಿ ಶಿಕ್ಷಕರನ್ನು ಮತ್ತೊಮ್ಮೆ ಕೈಚಾಚುವಂತೆ ಮಾಡಿದೆ. ಒಂದೊಮ್ಮೆ ದಾನಿಗಳು, ಖಾಸಗಿ ಸಂಘ ಸಂಸ್ಥೆಗಳು ನೆರವು ನೀಡದಿದ್ದರೇ ಕೆಳದರ್ಜೆಯ ಶೂ ಗಳನ್ನು ಖರೀದಿಸುವುದು ಅನಿವಾರ್ಯವಾಗುತ್ತದೆ,’ ಎನ್ನುತ್ತಾರೆ ಮುಖ್ಯ ಶಿಕ್ಷಕರೊಬ್ಬರು.

 

 

ಪೆಟ್ರೋಲ್‌ ಮತ್ತು ಡೀಸೆಲ್‌ ದರವು ಏರಿಕೆಯಾಗಿರುವ ಕಾರಣ ಎಲ್ಲಾ ರೀತಿಯ ಸರಕು, ಸಾಮಗ್ರಿ, ಉತ್ಪನ್ನಗಳ ದರವೂ ಸಹಜವಾಗಿ ಸ್ಥಳೀಯ ಮಟ್ಟದಲ್ಲಿಯೂ ಏರಿಕೆ ಕಂಡಿದೆ. ಹೀಗಿರುವಾಗ ಕಳೆದ 7 ವರ್ಷದ ಹಿಂದಿನ ದರವನ್ನೇ ಈಗಲೂ ನಮೂದಿಸಿ ಬಿಡುಗಡೆ ಮಾಡಿರುವುದಕ್ಕೆ ಶಿಕ್ಷಕರ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

 

ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌; ಹಳೆಯ ಸುತ್ತೋಲೆ ಜಾರಿ, ಹೆಚ್ಚುವರಿ ಹಣವಿಲ್ಲ, ದಾನಿಗಳ ಬಳಿ ಕೈಯೊಡ್ಡಿಸಿದ ಸರ್ಕಾರ

2024ರ ಮೇ  29ರಂದು ಹೊರಡಿಸಿರುವ ಸುತ್ತೋಲೆ ಪ್ರಕಾರ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 265 ರು., 6ರಿಂದ 8ನೇ ತರಗತಿ  ವಿದ್ಯಾರ್ಥಿಗಳಿಗೆ ತಲಾ 295 ರು., 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳೀಗೆ ತಲಾ 325 ರು. ಎಂದು ದರ ನಿಗದಿಪಡಿಸಿರುವುದು ಆದೇಶದಿಂದ ಗೊತ್ತಾಗಿದೆ.

 

‘ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿಂತೆ ಸೇವಾ ದೃಷ್ಟಿಯಿಂದ ದಾನಿಗಳು, ಖಾಸಗಿ ಸಂಘ ಸಂಸ್ಥೆಗಳು ಹೆಚ್ಚುವರಿ ಧನ ಸಹಾಯ ಮಾಡಿದಲ್ಲಿ ಅದನ್ನೂ ಬಳಸಿಕೊಂಡು ಇನ್ನೂ ಉತ್ತಮ ಗುಣಮಟ್ಟದ ‍ಷೂ ಮತ್ತು ಸಾಕ್ಸ್‌ಗಳನ್ನು ಖರೀದಿಸಬಹುದು. ರಾಷ್ಟ್ರ ಮಟ್ಟದ ಪ್ರತಿಷ್ಠಿತ ಕಂಪನಿ, ಸಂಸ್ಥೆಗಳ ಮೊದಲ ಗುಣಮಟ್ಟ (FIRST QUALITY)ದಿಂದ ಕೂಡಿರುವ ಶೂ, ಸಾಕ್ಸ್‌ಗಳನ್ನೇ ಕಡ್ಡಾಯವಾಗಿ ಖರೀದಿಸಬೇಕು,’ ಎಂದು ಆದೇಶದಲ್ಲಿ ಹೇಳಿದೆ.  ಆದರೆ 2023ರ ಜೂನ್‌ 22ರಂದು ಹೊರಡಿಸಿರುವ ಅದೇಶದಲ್ಲಿ ರಾಷ್ಟ್ರಮಟ್ಟದ ಪ್ರತಿಷ್ಠಿತ ಕಂಪನಿ/ಸಂಸ್ಥೆಗಳ ಮೊದಲ ಗುಣಮಟ್ಟದಿಂದ ಕೂಡಿರುವ ಶೂ, ಸಾಕ್ಸ್‌ಗಳನ್ನು ಖರೀದಿ ಮಾಡಬೇಕು ಎಂದು ಹೇಳಿರುವುದು ಶಿಕ್ಷಕರನ್ನು ಪೇಚಿಗೆ ಸಿಲುಕಿಸಿದೆ.

 

2019ರ ಮೇ 6ರಲ್ಲಿಯೂ ಸರ್ಕಾರ ಹೊರಡಿಸಿದ್ದ ಆದೇಶದಲ್ಲಿ ರಾಷ್ಟ್ರಮಟ್ಟದ ಹೆಸರಾಂತ ಕಂಪನಿಗಳ ಪ್ರತಿಷ್ಠಿತ ಬ್ರ್ಯಾಂಡ್‌ಗಳಾದ ಬಾಟಾ, ಲಿಬರ್ಟಿ, ಲ್ಯಾನ್ಸರ್‌, ಪ್ಯಾರಾಗಾನ್‌,ಕರೋನ, ಆಕ್ಷನ್‌, ಲಕಾನಿ ಕಂಪನಿಗಳ ಅಧಿಕೃತ ಮಾರಾಟಗಾರರಿಂದ ಶೂ- ಸಾಕ್ಸ್‌ಗಳನ್ನು ಖರೀದಿಸಬೇಕು ಎಂದು ಸೂಚಿಸಿತ್ತು. 2022ರ ಜುಲೈ 8ರಂದು ಹೊರಡಿಸಿರುವ ಆದೇಶದಲ್ಲಿ ಬ್ರ್ಯಾಂಡೆಡ್‌ ಉತ್ಪನ್ನಗಳ ಕುರಿತು ಉಲ್ಲೇಖಿಸಿರಲಿಲ್ಲ. ಅಲ್ಲದೆ ಹಿಂದಿನ  ಸರ್ಕಾರ ಬಿಡುಗಡೆ ಮಾಡಿದ್ದ ಹಣದಲ್ಲಿ ಉತ್ತಮ ಗುಣಮಟ್ಟದ ಶೂ ಮತ್ತು ಸಾಕ್ಸ್‌ಗಳನ್ನು ಖರೀದಿಸಲು ಸಾಧ್ಯವಾಗುವುದಿಲ್ಲ ಎಂದು ಹಲವು ಶಿಕ್ಷಕರು ಹೇಳಿದ್ದರು.

ಶಾಲಾ ಮಕ್ಕಳಿಗೆ ಶೂ ಖರೀದಿ; 5 ವರ್ಷದ ಹಿಂದಿನ ದರ ನಮೂದು, ದಾನಿಗಳ ಬಳಿ ಕೈಯೊಡ್ಡಬೇಕಿರುವ ಶಿಕ್ಷಕರು

ಮುಕ್ತ ಮಾರುಕಟ್ಟೆಯಲ್ಲಿಯೇ ತಲಾ ಒಂದು ಜತೆ ಶೂಗೆ ಕನಿಷ್ಠ 425 ರು.ಗಳಿವೆ. ಹೀಗಾಗಿ ಸರ್ಕಾರ ತಲಾ ವಿದ್ಯಾರ್ಥಿಗೆ ಬಿಡುಗಡೆ ಮಾಡಿರುವ ಮೊತ್ತಕ್ಕೆ ಹೋಲಿಸಿದರೆ 160 ರು. ಕಡಿಮೆ ಇತ್ತು.  ಬಾಟಾ, ಲಿಬರ್ಟಿ, ಲ್ಯಾನ್ಸರ್‌, ಪ್ಯಾರಾಗಾನ್‌, ಕರೋನ, ಆಕ್ಷನ್‌, ಲಕಾನಿ ಸೇರಿದಂತೆ ರಾಷ್ಟ್ರಮಟ್ಟದ ಹೆಸರಾಂತ ಕಂಪನಿಗಳ ಪ್ರತಿಷ್ಠಿತ ಬ್ರ್ಯಾಂಡ್‌ಗಳ ದರವು ಕಳೆದ 6  ವರ್ಷಕ್ಕೆ ಹೋಲಿಸಿದರೆ ಸ್ಥಳೀಯ ಮಟ್ಟದಲ್ಲಿಯೂ ಈ ಬಾರಿ ಹೆಚ್ಚಳವಾಗಿದೆ. ಆದರೆ ಸರ್ಕಾರವು ಚಾಲ್ತಿ ದರಗಳನ್ನು ನಮೂದಿಸದಿರುವುದು ಹೆಚ್ಚುವರಿ ಹಣಕ್ಕಾಗಿ ಶಿಕ್ಷಕರು ದಾನಿಗಳು, ಖಾಸಗಿ ಸಂಸ್ಥೆಗಳ ಬಳಿ ಕೈಯೊಡ್ಡಬೇಕಾಗಿದೆ.

 

ಡೆಸ್ಕ್‌, ವಿದ್ಯುತ್‌ ಬಿಲ್‌ ಖರ್ಚುಗಳಿಗೆ ಪೋಷಕರಿಂದಲೇ 100 ರು ವಸೂಲಿ; ಸರ್ಕಾರ ದಿವಾಳಿಯಾಗಿದೆಯೇ?

 

‘7 ವರ್ಷದ ಹಿಂದಿನ ದರವನ್ನೇ ಆದೇಶದಲ್ಲಿ ನಮೂದಿಸಿದೆ. ಆದರೆ ಮಾರುಕಟ್ಟೆಯಲ್ಲಿ ಈಗಲೂ ಅದೇ ದರ ಇರುವುದಿಲ್ಲ. ಪೆಟ್ರೋಲ್‌ ಮತ್ತು ಡೀಸೆಲ್‌ ದರವು ಸುಮಾರು 40  ರಿಂದ 50 ರು. ಹೆಚ್ಚಳವಾಗಿದೆ. ಎಲ್ಲಾ ಸರಕು ಸಾಮಗ್ರಿಗಳ ದರವೂ ಏರಿಕೆಯಾಗಿರುತ್ತದೆ. ಹೀಗಿರುವಾಗ 7 ವರ್ಷದ ಹಿಂದಿನ ದರವನ್ನು ಪರಿಷ್ಕರಿಸಿ ಚಾಲ್ತಿ ದರವನ್ನು ನಮೂದಿಸಿ ಹಣ ಬಿಡುಗಡೆ ಮಾಡಬೇಕಿತ್ತು. ಆದರೆ ಈಗಿನ ಸರ್ಕಾರವು 7  ವರ್ಷದ ಹಿಂದಿನ ದರವನ್ನೇ ನಮೂದಿಸಿ ಶಿಕ್ಷಕರನ್ನು ಮತ್ತೊಮ್ಮೆ ಕೈಚಾಚುವಂತೆ ಮಾಡಿದೆ. ಒಂದೊಮ್ಮೆ ದಾನಿಗಳು, ಖಾಸಗಿ ಸಂಘ ಸಂಸ್ಥೆಗಳು ನೆರವು ನೀಡದಿದ್ದರೇ ಕೆಳದರ್ಜೆಯ ಶೂ ಗಳನ್ನು ಖರೀದಿಸುವುದು ಅನಿವಾರ್ಯವಾಗುತ್ತದೆ,’ ಎನ್ನುತ್ತಾರೆ ಮುಖ್ಯ ಶಿಕ್ಷಕರೊಬ್ಬರು.

SUPPORT THE FILE

Latest News

Related Posts