Monday | October 5, 2026 |

ಅಲ್ಪಸಂಖ್ಯಾತರ ವಸತಿ ಶಾಲೆ, ಹಾಸ್ಟೆಲ್‌ಗಳಲ್ಲಿ ಪ್ರವೇಶ ಕುಸಿತ; ಕುರಾನ್‌ ಪಠಣ ಆರಂಭಕ್ಕೆ ಅಜೀಮ್‌ ಪತ್ರ

ಬೆಂಗಳೂರು; ರಾಜ್ಯದ ಅಲ್ಪಸಂಖ್ಯಾತರ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಬೆಳಿಗ್ಗೆ ಹಾಗೂ ಸಂಜೆ ಅವಧಿಯಲ್ಲಿ ಕುರಾನ್‌ ಪಠಣಕ್ಕೆ ಸಮರ್ಥ ಗುರುಗಳನ್ನು ರಾಜ್ಯಾದ್ಯಂತ  ನೇಮಿಸಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್‌ ಅಜೀಮ್‌ ಅವರು ಪತ್ರ ಬರೆದಿದ್ದಾರೆ.

 

ಅಲ್ಪಸಂಖ್ಯಾತರ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಕುರಾನ್‌ ಪಠಣ ಮಾಡಿಸದ ಕಾರಣ ವಿದ್ಯಾರ್ಥಿಗಳ ದಾಖಲಿಸಲು ಪೋಷಕರು  ಆಸಕ್ತಿವಹಿಸಿಲ್ಲ. ಹೀಗಾಗಿ ಧಾರ್ಮಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಗುರುಗಳನ್ನು ನೇಮಿಸಿದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಳವಾಗಲಿದೆ ಎಂಬ ಕಾರಣಗಳನ್ನು ಆಯೋಗವು ಸರ್ಕಾರದ ಮುಂದಿಟ್ಟಿದೆ.

 

ಆಯೋಗದ ಅಧ್ಯಕ್ಷ ಅಬ್ದುಲ್‌ ಅಜೀಮ್‌ ಅವರು ಸಚಿವ ಬಿ ಝಡ್‌ ಜಮೀರ್‍‌ ಅಹ್ಮದ್‌ ಖಾನ್‌ ಅವರಿಗೆ 2024ರ ಫೆ.3ರಂದೇ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕೊಡಗು ಜಿಲ್ಲೆಯ ಮಡಿಕೇರಿ ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಿದ್ದ ವೇಳೆಯಲ್ಲಿ ವಿರಾಜಪೇಟೆ ತಾಲೂಕಿನಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕುಸಿತವಾಗಿತ್ತು. ಮಂಜೂರಾಗಿದ್ದ 250 ಸಂಖ್ಯೆಯ ವಿದ್ಯಾರ್ಥಿಗಳ ಬದಲಿಗೆ ಕೇವಲ 160 ವಿದ್ಯಾರ್ಥಿಗಳು ಮಾತ್ರ ದಾಖಲಾಗಿದ್ದರು.

 

ಅಲ್ಲದೇ ಸೋಮವಾರಪೇಟೆಯ ಕೂಡ್ಲಿಪೇಟೆಯ ಡಾ ಎಪಿಜೆ ಅಬ್ದುಲ್‌ ಕಲಾಂ ವಸತಿ ಶಾಲೆಯಲ್ಲಿ 310 ಸಂಖ್ಯೆಯ ವಿದ್ಯಾರ್ಥಿಗಳ ಸಂಖ್ಯೆಗೆ ಮಂಜೂರಾತಿಯಾಗಿದ್ದರೂ ಕೇವಲ 203 ವಿದ್ಯಾರ್ಥಿಗಳು ದಾಖಲಾಗಿದ್ದರು.

 

ಅದೇ ರೀತಿ ಕುಶಾಲನಗರದ ಮೌಲಾನಾ ಆಜಾದ್‌ ಮಾದರಿ ಶಾಲೆಯಲ್ಲಿ 300 ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಮಂಜೂರಾಗಿದ್ದರೂ ಕೇವಲ 2024 ವಿದ್ಯಾರ್ಥಿಗಳು ಮಾತ್ರ ದಾಖಲಾಗಿದ್ದರು ಎಂದು ಅಜೀಮ್‌ ಅವರು ಪತ್ರದಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಅಜೀಮ್‌ ಅವರ ಪತ್ರದಲ್ಲೇನಿದೆ?

 

ಈ ಶಾಲೆಗಳಲ್ಲಿ ಒಟ್ಟು 560 ವಿದ್ಯಾರ್ಥಿಗಳ ಪೈಕಿ 84 ವಿದ್ಯಾರ್ಥಿಗಳು ಮಾತ್ರ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದವರು. ಉಳಿದವರು ಇತರೆ ವರ್ಗಗಳಿಗೆ ಸೇರಿದವರು. 2019ನೇ ಸಾಲಿಗಿಂತ ಮೊದಲು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮುಂಜಾನೆ ಮತ್ತು ಸಾಯಂಕಾಲದ ಸಮಯದಲ್ಲಿ ಕುರಾನ್‌ ಪಠಣ ಇತ್ಯಾದಿ ಕಲಿಸಲಾಗುತ್ತಿತ್ತು.

 

ಕೋವಿಡ್‌ 19ರ ನಂತರ ಈ ಸೌಲಭ್ಯವನ್ನು ಕೈ ಬಿಡಲಾಗಿದೆ. ಹೀಗಾಗಿ ಅಲ್ಪಸಂಖ್ಯಾತರು ತಮ್ಮ ಮಕ್ಕಳನ್ನು ವಸತಿ ಶಾಲೆಗಳಲ್ಲಿ ದಾಖಲು ಮಾಡಲು ಆಸಕ್ತಿ ವಹಿಸುತ್ತಿಲ್ಲ. ಹೀಗಾಗಿ ಧಾರ್ಮಿಕ ಶಿಕ್ಷಣಕ್ಕೆ ಸಂಬಂಧಿಸಿದ ಗುರುಗಳನ್ನು ನೇಮಿಸಿದಲ್ಲಿ ದಾಖಲಾತಿ ಸಂಖ್ಯೆ ಹೆಚ್ಚಳವಾಗಲಿದೆ ಎಂದು ಅಜೀಮ್‌ ಅವರು ಪತ್ರದಲ್ಲಿ ತಿಳಿಸಿದ್ದರು.

 

 

ಈ ಹಿನ್ನೆಲೆಯಲ್ಲಿ 2024-25ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಸತಿ ಶಾಲೆ, ವಸತಿ ನಿಲಯಗಳಲ್ಲಿ ಮುಂಜಾನೆ ಹಾಗೂ ಸಾಯಂಕಾಲ 1 ಗಂಟೆ ಅವಧಿವರೆಗೆ ಕುರಾನ್‌ ಪಠಣಕ್ಕಾಗಿ ಸ್ಥಳೀಯ ಸಮರ್ಥ ಗುರುಗಳನ್ನು ರಾಜ್ಯದಾದ್ಯಂತ ನೇಮಿಸಬೇಕು ಎಂದು ಪತ್ರದಲ್ಲಿ ಅಜೀಮ್‌ ಅವರು ಕೋರಿರುವುದು ಗೊತ್ತಾಗಿದೆ.

 

ಮದರಸಗಳಲ್ಲಿ ಪಾಠ ಮಾಡುತ್ತಿರುವ ಕುರ್‌ಆನ್‌  ಪುಸ್ತಕದಲ್ಲಿನ ಸುರ ಅಯತ್‌ 3.85 ಸುರ ವರ್ಸೆ 9;5, 8;12, 3;118, 3;28, 9;23, 66;9 ಮುಂತಾದ ಕುರಾನ್‌ನಲ್ಲಿರುವ ವಾಕ್ಯಗಳು ಭಾರತದ ಸಂವಿಧಾನ ಆಶಯಕ್ಕೆ ವಿರುದ್ಧವಾಗಿರುವುದಿಲ್ಲ ಎಂದು ಹಿಂದಿನ  ರಾಜ್ಯ ಬಿಜೆಪಿ ಸರ್ಕಾರವೇ  ಅಧಿಕೃತವಾಗಿ ಉತ್ತರಿಸಿತ್ತು. ರಾಜ್ಯದ ಮದರಸಾಗಳ ಶಿಕ್ಷಣದ ಚಟುವಟಿಕೆಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಮದರಸಾಗಳ ಶಿಕ್ಷಣ ವ್ಯವಸ್ಥೆಗಾಗಿ ವಿಶೇಷ ಮಂಡಳಿ ರಚನೆಗೆ ಹಿಂದಿನ  ರಾಜ್ಯ ಸರ್ಕಾರವು  ನಿರ್ಧರಿಸಿತ್ತು.

 

ಕುರಾನ್‌ನಲ್ಲಿರುವ ವಾಕ್ಯಗಳು ಭಾರತದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿರುವುದಿಲ್ಲ. ಕುರಾನ್‌ನಲ್ಲಿನ ವಾಕ್ಯಗಳನ್ನು ಅವುಗಳ ಹಿನ್ನೆಲೆಯೊಂದಿಗೆ ಧಾರ್ಮಿಕ ವಿದ್ವಾಂಸರು ಮಾತ್ರ ಅರ್ಥೈಯಿಸಬಹುದಾಗಿದೆ. ಮದರಸಗಳಲ್ಲಿ 3ರಿಂದ 10 ವರ್ಷಗಳ ಒಳಗಿನ ಮಕ್ಕಳಲ್ಲಿ ಸಮಾಜದ ಇತರ ಧರ್ಮಗಳ ವಿರುದ್ಧವಾದ ದ್ವೇ‍ಷ ಭಾವನೆಗಳನ್ನು ತುಂಬುವ ಇಂತಹ ಪಾಠಗಳನ್ನು ಮದರಸರಗಳಲ್ಲಿ ಮಾಡುವುದುದರಿಂದ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗವುಂಟಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದೂ ಉತ್ತರಿಸಿತ್ತು.

 

ಮದರಸಗಳಲ್ಲಿ ಇಂತಹ ಶಿಕ್ಷಣ ಅತೀ ಸಣ್ಣ ವಯಸ್ಸಿನಲ್ಲೇ ಪಡೆಯುವ ಮಕ್ಕಳು ಸಮಾಜ ಕಂಟಕರಾಗಿ ದೇಶದ ಆಸ್ತಿ ಪಾಸ್ತಿಗಳನ್ನು ನಾಶಪಡಿಸುವುದಲ್ಲಿ ಪ್ರಮುಖರಾಗಿರುವುದು ಕೂಡ ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ಲಿಖಿತ ಉತ್ತರ ನೀಡಿತ್ತು.

ಕುರ್‌ಆನ್‌ ವಾಕ್ಯಗಳು ಸಂವಿಧಾನ ಆಶಯಕ್ಕೆ ವಿರುದ್ಧವಾಗಿಲ್ಲ; ಮಹತ್ವಪಡೆದುಕೊಂಡ ಸರ್ಕಾರದ ಉತ್ತರ

ಸಂಪೂರ್ಣ ಮದರಸಗಳ ಮಾಹಿತಿ ಪಡೆಯಲು ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಮದರಸಾಗಳ ಕುರಿತು 15 ದಿನಗಳಲ್ಲಿ ವರದಿ ನೀಡುವಂತೆ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಸೂಚನೆ ನೀಡಿದ್ದರು. ಅಧಿಕಾರಿಗಳ ವರದಿ ಬಳಿಕ ಮುಂದಿನ ತೀರ್ಮಾನ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು.

 

ಮದರಸಾ ಶಿಕ್ಷಣದ ಬಗ್ಗೆ ಕರ್ನಾಟಕ ದಲ್ಲಿ ದೊಡ್ಡ ಮಟ್ಟದಲ್ಲಿ ಹಿಂದೂಸಂಘಟನೆಗಳು ಕೆಲವರು ಸಿಡಿದೆದ್ದಿದ್ದರು. ಮದರಸಾದಲ್ಲಿ ಭಯೋತ್ಪಾದನೆಯ ಪಾಠ ಹೇಳಲಾಗುತ್ತಿದೆ. ಇಸ್ಲಾಂ ಮೂಲಭೂತವಾದ ಕಲಿಸಿಕೊಡಲಾಗುತ್ತದೆ. ಅಂಕುಶ ಹಾಕಿ ಇಲ್ಲವೇ ಬ್ಯಾನ್ ಮಾಡಿ ಎನ್ನುವ ಕೂಗು ದೊಡ್ಡದಾಗಿ ಕೇಳಿಬಂದಿತ್ತು. ಬಿಜೆಪಿ ಮುಖಂಡ ಸಿಟಿ ರವಿ ಟ್ವೀಟ್ ಮಾಡಿ ಮದರಸಾ ಶಿಕ್ಷಣದ ಬಗ್ಗೆ ಬಹಿರಂಗ ಆಕ್ಷೇಪ ವ್ಯಕ್ತವಾಗಿತ್ತು.

 

ಕರ್ನಾಟಕದಲ್ಲಿ 900 ಮದರಸಾಗಳು ವಕ್ಫ್‌ ಬೋರ್ಡ್‌ ಅಡಿ ನೋಂದಣಿಯಾಗಿದ್ದು ಪ್ರತಿ ವರ್ಷ 10 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. ಈ ಅನುದಾನ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಮದರಸಾಗಳಲ್ಲಿ ಶಿಕ್ಷಣದ ಬದಲಾಗಿ ಧರ್ಮ ಬೋಧನೆಯ ಕೆಲಸ ಆಗುತ್ತಿದೆ ಎಂಬ ಆರೋಪ ಕೇಳಿ  ಬಂದಿತ್ತು.

ಮದರಸಗಳಲ್ಲಿ ಸಾಮಾಜಿಕ ಜೀವನ ಬೋಧನೆ; ಸಿಟಿಆರ್‌ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಉತ್ತರ

ಅಷ್ಟೇ ಅಲ್ಲದೇ ರಾಷ್ಟ್ರಗೀತೆ, ರಾಷ್ಟ್ರ ಭಾವೈಕ್ಯತೆಯ ಕಾರ್ಯಕ್ರಮಗಳು‌ ನಡೆಯುತ್ತಿಲ್ಲ. ಮದರಸಾಗಳಲ್ಲಿ ಕಲಿಯೋ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಕಂಪ್ಯೂಟರ್ ತರಬೇತಿ, ವಿಜ್ಞಾನದ ಲ್ಯಾಬ್ ಗಳು, ನೈತಿಕ ಶಿಕ್ಷಣದಂತಹ ಶೈಕ್ಷಣಿಕ ಚಟುವಟಿಕೆಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಮಂಡಳಿ ರಚನೆಗೆ ಸರ್ಕಾರ ಮುಂದಾಗಿದ್ದನ್ನು ಸ್ಮರಿಸಬಹುದು.

Hot this week

21 ಪ್ಯಾಕೇಜ್‌ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ; ಅಂಜುಂ ಪರ್ವೇಝ್ ಸಮಿತಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು; ಹಸಿ ತ್ಯಾಜ್ಯ, ಒಣ ತಾಜ್ಯ, ನೈರ್ಮಲ್ಯ ತ್ಯಾಜ್ಯ, ರಸ್ತೆ ಗುಡಿಸುವಿಕೆ,...

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...
Please Scan to make Your Contribution

Topics

21 ಪ್ಯಾಕೇಜ್‌ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ; ಅಂಜುಂ ಪರ್ವೇಝ್ ಸಮಿತಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು; ಹಸಿ ತ್ಯಾಜ್ಯ, ಒಣ ತಾಜ್ಯ, ನೈರ್ಮಲ್ಯ ತ್ಯಾಜ್ಯ, ರಸ್ತೆ ಗುಡಿಸುವಿಕೆ,...

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...

ಪ್ರಿಂಟರ್, ಸ್ಕ್ಯಾನರ್ ಕೂಡ ಲಭ್ಯವಿಲ್ಲ, ಇ-ಮೇಲ್‌ ಮಾಡಲೂ ಕಷ್ಟಸಾಧ್ಯ; ಸರ್ಕಾರದ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ

ಬೆಂಗಳೂರು; ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಿಗೆ ಅನುದಾನ ಹೊಂದಿಸಲು ಏದುಸಿರು ಬಿಡುತ್ತಿರುವ...

Related Articles

Popular Categories

error: Content is protected !!