Monday | March 16, 2026 |

ಕಲ್ಲಡ್ಕ, ರಾಘವೇಶ್ವರ ವಿರುದ್ಧ ಚಾರ್ಜ್‌ಶೀಟ್‌ ರದ್ದು; ಮೇಲ್ಮನವಿಗೆ ‘ಯೋಗ್ಯ ಪ್ರಕರಣವಲ್ಲ’ವೆಂದ ಸರ್ಕಾರ

Support THE-FILE

spot_img

ಬೆಂಗಳೂರು; ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಮೂರನೇ ಆರೋಪಿ ಆರ್‍‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್‍‌ ಭಟ್‌ ವಿರುದ್ಧದ ದೋಷಾರೋಪಣೆ ಪಟ್ಟಿ  ರದ್ದುಪಡಿಸಿ ಹೈಕೋರ್ಟ್‌ ನೀಡಿರುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ‘ಯೋಗ್ಯ ಪ್ರಕರಣವಲ್ಲ’ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರವು ತೀರ್ಮಾನಿಸಿದೆ.

 

ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ನಂತರ ನಾಲ್ಕೇ ನಾಲ್ಕು ತಿಂಗಳಲ್ಲಿ ಈ ಆದೇಶ ಹೊರಬಿದ್ದಿದೆ.  ಗೃಹ ಇಲಾಖೆಯಡಿಯಲ್ಲಿರುವ ಪ್ರಾಸಿಕ್ಯೂಷನ್‌ ಇಲಾಖೆಯು  2023ರ ಸೆ.22ರಂದು ಹೊರಡಿಸಿರುವ ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅಭಿಯೋಜನಾ ಇಲಾಖೆ ಮಾತ್ರವಲ್ಲ, ಸರ್ಕಾರಿ ವಕೀಲರು ಸಹ ಮೇಲ್ಮನವಿ ಸಲ್ಲಿಸಲು ಯೋಗ್ಯ ಪ್ರಕರಣವಲ್ಲ ಎಂದು ಅಭಿಪ್ರಾಯಿಸಿದ್ದರು. ಸರ್ಕಾರಿ ವಕೀಲರ ಅಭಿಪ್ರಾಯವನ್ನೇ ಎತ್ತಿ ಹಿಡಿದಿದ್ದ ಸರ್ಕಾರವು ಈ ಸಂಬಂಧ ಆದೇಶವನ್ನೂ (HD/11172/HCP1/2023 (COMPUTER NUMBER 1182854) (3571/AG-G-CRL/23-24- Letter Number 3110/AG-CRL/23/24) C/W 7760/2018 HKCK-Bengaluru Shreemad Jagadguru Shankaracharya v/s state and anr)  ಹೊರಡಿಸಿರುವುದು ಇದೀಗ ಬಹಿರಂಗವಾಗಿದೆ.

 

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ದೂರುದಾರರಾದ ಸಂಧ್ಯಾಲಕ್ಷ್ಮಿ ಎಂಬುವರು ಉಚ್ಛ ನ್ಯಾಯಾಲಯದ ಆದೇಶದ ವಿರುದ್ಧ ಸರ್ವೋಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ (ಎಸ್‌ಎಲ್‌ಪಿ ಕ್ರಿಮಿನಲ್‌ ಅರ್ಜಿ ಸಂಖ್ಯೆ 4309-4310/2024) ಸಲ್ಲಿಸಿದ್ದಾರೆ. ಇದರಲ್ಲಿ ಕರ್ನಾಟಕ ಸರ್ಕಾರವನ್ನು ಎರಡನೇ ಪ್ರತಿವಾದಿಯನ್ನಾಗಿಸಿದ್ದಾರೆ.

 

ಈ ಸಂಬಂಧ ಸುಪ್ರೀಂ ಕೋರ್ಟ್‌ ಕೂಡ ರಾಜ್ಯ ಸರ್ಕಾರಕ್ಕೆ 2024ರ ಮಾರ್ಚ್‌ 19ರಂದು ನೋಟೀಸ್‌ ಕೂಡ ಜಾರಿಗೊಳಿಸಿದೆ. ಈ ಪ್ರಕರಣವನ್ನು ಹಿರಿಯ ವಕೀಲ ಡಿ ಎಲ್‌ ಚಿದಾನಂದ ಅವರಿಗೆ ವಹಿಸಿ 2024ರ ಏಪ್ರಿಲ್‌ 5ರಂದು ಆದೇಶ ಹೊರಡಿಸಿದೆ.

 

ಹೀಗಾಗಿ 2023ರ ಸೆ.22ರಂದು ಹೊರಡಿಸಿರುವ ಆದೇಶವನ್ನು ಪುನರಾವಲೋಕಿಸಬೇಕು ಮತ್ತು 2023ರ ಏಪ್ರಿಲ್‌ 20ರಂದು ಹೈಕೋರ್ಟ್‌ ನೀಡಿರುವ ಆದೇಶದ ವಿರುದ್ಧ ಸರ್ವೋಚ್ಛ ನ್ಯಾಯಾಲಯಕ್ಕೆ ಎಸ್‌ಎಲ್‌ಪಿ ಪರ ವಹಿಸಿಕೊಳ್ಳುವುದು ನ್ಯಾಯಸಮ್ಮತವಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯ ಸಲ್ಲಿಸಿದ್ದಾರೆ.

 

ಆದರೆ ಅಭಿಯೋಜನಾ ಇಲಾಖೆಯು ಇದುವರೆಗೂ ಈ ಸಂಬಂಧ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಬದಲಿಗೆ 2023ರ ಏಪ್ರಿಲ್‌ 24ರಂದು ಹೈಕೋರ್ಟ್‌ ಹೊರಡಿಸಿರುವ ಆದೇಶದ ಪ್ರಕರಣದಲ್ಲಿ ಸೂಕ್ತ ಆದೇಶಕ್ಕಾಗಿ ಇಲಾಖೆಯು ಕಡತ ಮಂಡಿಸಿರುವುದು ಗೊತ್ತಾಗಿದೆ.

 

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ ಜಿ ಪರಮೇಶ್ವರ್‍‌ ಅವರು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

 

ಪ್ರಕರಣದ ಹಿನ್ನೆಲೆ

 

ರಾಮಕಥಾ ಗಾಯಕಿಯ ಪತಿಯ ಸಹೋದರ ಶ್ಯಾಮ್ ಪ್ರಸಾದ್ ಶಾಸ್ತ್ರಿ ಪುತ್ತೂರಿನ ಕೆದಿಲ ಗ್ರಾಮದಲ್ಲಿ 2014, ಸೆಪ್ಟೆಂಬರ್ 1 ರಂದು ತಮ್ಮ ಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

 

ರಾಘವೇಶ್ವರ ಶ್ರೀಗಳ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣವನ್ನು ಹಿಂಪಡೆಯುವಂತೆ ಸಂತ್ರಸ್ತೆಗೆ ಹೇಳಬೇಕು. ನೀವು ಸ್ವಾಮೀಜಿ ಪರ ನಿಲ್ಲಬೇಕು ಎಂದು ಸ್ವಾಮೀಜಿ ಕಡೆಯವರು ದೂರವಾಣಿ ಮೂಲಕ ಒತ್ತಡ ಹಾಕಿದ್ದರು ಮತ್ತು ಈ ಒತ್ತಡ ಹೇರುವ ಹಿಂದೆ ಕಲ್ಲಡ್ಕ ಪ್ರಭಾಕರ ಭಟ್ ಮತ್ತಿತರರು ಇದ್ದರು ಎಂದು ಆರೋಪಿಸಿದ್ದರು.

 

ಶ್ಯಾಮ್ ಪ್ರಸಾದ್ ಶಾಸ್ತ್ರಿ ಅವರ ಪತ್ನಿ ಸಂಧ್ಯಾಲಕ್ಷ್ಮಿ ಅವರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ, ಪುತ್ತೂರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ರಾಘವೇಶ್ವರ ಶ್ರೀಗಳು ಮತ್ತು ಕಲ್ಲಡ್ಕ ಪ್ರಭಾಕರ ಭಟ್ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

 

ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಪೀಠವು ರಾಘವೇಶ್ವರ ಭಾರತೀ ಶ್ರೀಗಳು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಿಸಲಾಗಿದ್ದ ದೋಷಾರೋಪ ಪಟ್ಟಿಯನ್ನು ಕೋರ್ಟ್​ ರದ್ದು ಮಾಡಿತ್ತು.

 

ವಿಚಾರಣೆ ವೇಳೆ ರಾಘವೇಶ್ವರ ಭಾರತೀ ಶ್ರೀಗಳ ಪರ ವಾದ ಮಂಡಿಸಿದ್ದ ವಕೀಲ ಪಿ.ಎನ್. ಮನಮೋಹನ್ ಮತ್ತು ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ಅವರು ಅರ್ಜಿದಾರರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ. ಶಾಮ್ ಪ್ರಸಾದ್ ಶಾಸ್ತ್ರಿ ಹತಾಶ ಮನೋಭಾವದಿಂದ ಆತ್ಮಹತ್ಯೆಗೆ ಶರಣಾದಂತಿದೆ ಎಂದು ಪ್ರತಿಪಾದಿಸಿದ್ದರು.

 

ಅವರು ಬರೆದಿಟ್ಟಿದ್ದ ಮರಣ ಪತ್ರದಲ್ಲಿ ಅರ್ಜಿದಾರರ ಹೆಸರುಗಳ ಉಲ್ಲೇಖವೇ ಇಲ್ಲ. ಅಂತೆಯೇ, ತನಿಖಾಧಿಕಾರಿಗಳು ಶಾಮ್ ಪ್ರಸಾದ್ ಶಾಸ್ತ್ರಿ ಮೃತಪಟ್ಟ ಒಂದು ತಿಂಗಳ ಬಳಿಕ ಹೇಳಿಕೆ ತಯಾರಿಸಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ಆಕ್ಷೇಪಿಸಿದ್ದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಪೀಠ ಅರ್ಜಿದಾರರ ವಿರುದ್ಧದ ಆರೋಪ ಪಟ್ಟಿ ರದ್ದುಪಡಿಸಿ ಆದೇಶಿಸಿರುವುದನ್ನು ಸ್ಮರಿಸಬಹುದು.

Hot this week

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

Topics

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

Related Articles

Popular Categories

error: Content is protected !!