Wednesday | March 25, 2026 |

ವಕ್ಫ್‌ ಆಸ್ತಿ; ಕಂದಾಯ ಇಲಾಖೆಯೊಂದರಲ್ಲೇ ಬದಲಾವಣೆಯಾಗಿಲ್ಲ 21,767 ಆಸ್ತಿಗಳ ಖಾತೆ

Support THE-FILE

spot_img

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಖಾತೆ ಬದಲಾವಣೆ ಪ್ರಕ್ರಿಯೆಗಳಿಗೆ ರಾಜ್ಯದಲ್ಲಿ ಇನ್ನೂ ಬಿರುಸಿನ ಚಾಲನೆ ದೊರೆತಿಲ್ಲ. ಕಂದಾಯ ಇಲಾಖೆಯೊಂದರಲ್ಲೇ 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆಯಾಗಿಲ್ಲ.

ವಕ್ಫ್‌ ಗೆ ಸಂಬಂಧಿಸಿದಂತೆ ಕಾಯ್ದೆ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಹೊರಟಿರುವ ಬೆನ್ನಲ್ಲೇ ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆ ಪ್ರಕ್ರಿಯೆಗಳು ಆಮೆಗತಿಯಲ್ಲಿರುವುದು ಮುನ್ನೆಲೆಗೆ ಬಂದಿದೆ.

ರಾಜ್ಯಮಟ್ಟದ ವಕ್ಫ್‌ ಆಸ್ತಿಗಳ ಕಾರ್ಯಪಡೆಯು ಸಾಧಿಸಿರುವ ಕುರಿತು ಪ್ರಗತಿ ಪರಿಶೀಲನೆ ಕುರಿತು 2024ರ ಏಪ್ರಿಲ್‌ 15ರಂದು ಸಭೆ ನಡೆದಿತ್ತು. ಈ  ಸಭೆಯಲ್ಲಿ ಕಂದಾಯ ಇಲಾಖೆಯೊಂದರಲ್ಲೇ 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆಯಾಗಿಲ್ಲ ಎಂಬ ಸಂಗತಿಯ ಕುರಿತು ಚರ್ಚೆಯಾಗಿದೆ.

ಈ ಕುರಿತು ಅಭಿವೃದ್ಧಿ ಆಯುಕ್ತರಾಗಿದ್ದ ಡಾ ಶಾಲಿನಿ ರಜನೀಶ್‌ ಅವರು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್‍‌ ಕುಮಾರ್‍‌ ಕಟಾರಿಯಾ ಅವರಿಗೆ 2024ರ ಏಪ್ರಿಲ್‌ 16ರಂದು ಪತ್ರವೊಂದನ್ನು ಬರೆದಿದ್ದರು.  ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಕಂದಾಯ ಇಲಾಖೆಯಲ್ಲಿ ಒಟ್ಟು 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆಯಾಗಬೇಕಿದ್ದು ಈ ವಕ್ಫ್‌ ಆಸ್ತಿಗಳ ಮಾಹಿತಿಯನ್ನು ಭೂಮಿ ತಂತ್ರಾಂಶದಡಿಯಲ್ಲಿ ನೋಂದಾಯಿಸಬೇಕಿದೆ,’ ಎಂದು ಪತ್ರದಲ್ಲಿ ತಿಳಿಸಿದ್ದರು ಎಂಬುದು  ಗೊತ್ತಾಗಿದೆ.

ಈ ಕುರಿತು ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ಸಚಿವ ಬಿ ಝಡ್‌ ಜಮೀರ್‍‌ ಅಹ್ಮದ್‌ ಖಾನ್‌ ಅವರೊಂದಿಗೆ ಎರಡೂ ಇಲಾಖೆಗಳ ಅಧಿಕಾರಿಗಳು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೇ ನೋಂದಾಯಿಸಲ್ಪಡದ ಆಸ್ತಿಗಳ ವಿವರಗಳನ್ನು ಆಡಳಿತಾತ್ಮಕವಾಗಿ ಅಧಿನಿಯಮದಡಿ ತರಬೇಕು. ಕಂದಾಯ ಇಲಾಖೆಗೆ ಸಲ್ಲಿಸಿರುವ 328 ಪ್ರಸ್ತಾವನೆಗಳ ಬಗ್ಗೆ ಪರಿಶೀಲಿಸಿ, ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ಖಬರಸ್ತಾನ್‌ ಜಮೀನುಗಳಿಗೆ ಮಂಜೂರಾತಿ ನೀಡಬೇಕು. ಹಾಗೂ ಲಭ್ಯವಿಲ್ಲದ ಸಂದಭ್ದಲ್ಲಿ ನಿಯಮಾನುಸಾರ ಖಾಸಗಿ ಜಮೀನು ಖರೀದಿಸಿ ವಿತರಿಸಲು ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿರುವುದು ಪತ್ರದಿಂದ ತಿಳಿದು ಬಂದಿದೆ.

ಅದೇ ರೀತಿ ‘ಕರ್ನಾಟಕ ಭೂ ಕಬಳಿಕೆ ನಿಯಂತ್ರಣಾ ಕಾಯ್ದೆ ಹಾಗೂ ವಕ್ಫ್‌ ಕಾಯ್ದೆ ಕಲಂ 52(ಎ) ಪ್ರಕಾರ ವಕ್ಫ್‌ ಆಸ್ತಿಗಳ ಭೂಮಿ ಅತಿಕ್ರಮಣವಾಗಿರುವ ವಿಷಯವನ್ನು ಇಲಾಖೆಯ ಮಾಸಿಕ ಸಭೆ ಮತ್ತು ಸಚಿವರ ಅಧ್ಯಕ್ಷತೆಯ ತ್ರೈಮಾಸಿಕ ಸಭೆಗಳಲ್ಲಿ ಕಾರ್ಯಸೂಚಿಯನ್ನಾಗಿ ಇಡಬೇಕು,’ ಎಂದೂ ನಿರ್ದೇಶಿಸಿರುವುದು ಗೊತ್ತಾಗಿದೆ.

ರಾಜ್ಯದಲ್ಲಿ ಅನಧಿಕೃತ ಒತ್ತುವರಿ ವಿಚಾರವಾಗಿ ಈವರೆಗೆ ಒಟ್ಟು 3,720 ಪ್ರಕರಣ ದಾಖಲಾಗಿದೆ. ಒತ್ತುವರಿಯನ್ನು ತೆರವುಗೊಳಿಸುವ ನಿಟ್ಟಿನಲ್ಲಿ ವಕ್ಫ್ ಕಾಯ್ದೆ ಕಲಂ – 54 ರ ಪ್ರಕಾರ ಈಗಾಗಲೇ ಪ್ರಕರಣ ದಾಖಲು ಮಾಡಿದೆ. ಕರ್ನಾಟಕ ವಕ್ಫ್‌ ನ್ಯಾಯಾಧೀಕರಣಕ್ಕೆ ಒತ್ತುವರಿ ತೆರವು ಆದೇಶಕ್ಕಾಗಿ ಒಟ್ಟು 1458 ಅರ್ಜಿ ಸಲ್ಲಿಕೆಯಾಗಿವೆ.

ಈವರೆಗೆ ಒಟ್ಟು 319 ಎಕರೆ ಹಾಗೂ 9 ಗುಂಟೆ ಹಾಗೂ 128453.9 ಚದರ ಅಡಿ ವಕ್ಫ್‌ ಅಸ್ತಿಯನ್ನು ಒತ್ತುವರಿದಾರರಿಂದ ತೆರವುಗೊಳಿಸಿ ಸಂಬಂಧಪಟ್ಟ ವಕ್ಫ್‌ ಸಂಸ್ಥೆಯ ಸ್ವಾಧೀನಕ್ಕೆ ಪಡೆದಿದೆ.

ರಾಯಚೂರು ಜಿಲ್ಲೆಯೊಂದರಲ್ಲೇ 423 ಎಕರೆ 17 ಗುಂಟೆ ಮತ್ತು 89649 ಚದರ ಅಡಿ ವಕ್ಫ್ ಬೋರ್ಡ್ ಆಸ್ತಿಯನ್ನು ಅತಿಕ್ರಮಣವಾಗಿದೆ. ವಕ್ಫ್‌ ಆಸ್ತಿ ವಿಚಾರವಾಗಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್‍‌ ಮಾಣಿಪ್ಪಾಡಿ ಅವರು ದನಿ ಎತ್ತಿದ್ದರು. ಅಲ್ಲದೇ ವಕ್ಫ್‌ ಆಸ್ತಿ ಅತಿಕ್ರಮಣದಲ್ಲಿ 2ರಿಂದ 3 ಲಕ್ಷ ಕೋಟಿ ರು ಅಕ್ರಮ ನಡೆದಿದೆ ಎಂಬ ಆರೋಪವೂ ಕೇಳಿ ಬಂದಿತ್ತು.

ಒಂದು ಬಾರಿ ವಕ್ಫ್‌ ಸ್ವತ್ತು ಎಂದು ಘೋಷಿಸಿದ ಮೇಲೆ ಅದು ಎಂದೆಂದಿಗೂ ವಕ್ಫ್‌ ಸ್ವತ್ತಾಗಿಯೇ ಉಳಿಯುತ್ತದೆ ಎಂದು ಸರ್ವೋಚ್ಛ ನ್ಯಾಯಾಲಯವು ಆಂಧ್ರಪ್ರದೇಶ ವಕ್ಫ್‌ ಮಂಡಳಿ ಹಾಘೂ ಇತರರು ಪ್ರಕರಣದಲ್ಲಿ ತಿಳಿಸಿತ್ತು. ಆದರೆ ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಕಚೇರಿಗಳಲ್ಲಿ ರಾಜ್ಯದ ವಕ್ಫ್‌ ಆಸ್ತಿಗಳ ಹಕ್ಕುಗಳ ವರ್ಗಾವಣೆ ಮಾಡುತ್ತಿದ್ದರು. ಇದು ಸರ್ಕಾರದ ಗಮನಕ್ಕೂ ಬಂದಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರೂ ಸಹ ವಿಧಾನಸಭೆಗೆ ಲಿಖಿತ ಉತ್ತರ ನೀಡಿದ್ದರು.

ಪೌರಾಡಳಿತ ನಿರ್ದೇಶನದ ಸುತ್ತೋಲೆ ಮೇರೆಗೆ 2023ರ ಆಗಸ್ಟ್‌ 1ರಿಂದ ಅನ್ವಯವಾಗುವಂತೆ ಸ್ಥಳೀಯ ಸಂಸ್ಥೆ ಮತ್ತು ವಕ್ಫ್‌ ಬೋರ್ಡ್‌ ಆಸ್ತಿಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ಹಕ್ಕು ವರ್ಗಾವಣೆಗೆ ಕೋರಿಕೆ ಸಲ್ಲಿಸಿದಲ್ಲಿ ಮಾತ್ರ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ಹಕ್ಕು ವರ್ಗಾವಣೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ಒದಗಿಸಿದ್ದರು.

Hot this week

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

Topics

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Related Articles

Popular Categories

error: Content is protected !!