Wednesday | April 29, 2026 |

ಅರ್ಧ ವರ್ಷ ಕಳೆದರೂ 22 ಇಲಾಖೆಗಳಲ್ಲಿ ಖರ್ಚೇ ಆಗದ 32,250.02 ಕೋಟಿ; ಕುಸಿದ ಆಡಳಿತ ಯಂತ್ರ?

ಬೆಂಗಳೂರು; ಇಲಾಖೆಗಳಲ್ಲಿ ವಿಲೇವಾರಿ ಆಗದೇ ಇರುವ ಕಡತಗಳ ಸಂಖ್ಯೆ ಬೆಟ್ಟದಷ್ಟು ಬೆಳೆದು ನಿಂತಿದ್ದರೇ ಇತ್ತ ಬಿಡುಗಡೆ ಮಾಡಿದ್ದ  ಅನುದಾನದ ಪೈಕಿ  22 ಇಲಾಖೆಗಳು ಅರ್ಥಿಕ ಸಾಲಿನ ಅರ್ಧ ವರ್ಷ ಕಳೆದರೂ  32,250.02 ಕೋಟಿಯಷ್ಟು ಖರ್ಚು ಮಾಡದೇ ಹಾಗೇ ಇಟ್ಟಿವೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ಅಧ್ಯಕ್ಷತೆಯಲ್ಲಿ 2024ರ ಅಕ್ಟೋಬರ್‍‌ 1ರಂದು ನಡೆದಿದ್ದ ಸರ್ಕಾರದ ಎಲ್ಲಾ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳ ಸಭೆಯಲ್ಲಿ 32,250.02 ಕೋಟಿ ರು. ಖರ್ಚಾಗದೇ ಬಾಕಿ ಇರುವ ಸಂಗತಿ ಕುರಿತು ಚರ್ಚೆಯಾಗಿದೆ.

ಈ ಸಭೆಗೆ ಇಲಾಖೆಗಳು ಮಂಡಿಸಿದ್ದ ಅಂಕಿ ಅಂಶಗಳ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಕಡತಗಳನ್ನು ಬಾಕಿ ಉಳಿಸಿಕೊಳ್ಳುವುದರಲ್ಲಿ ಪೈಪೋಟಿ ಒಡ್ಡಿರುವ ಇಲಾಖೆಗಳು, ಅನುದಾನವನ್ನು ಖರ್ಚು ಮಾಡುವುದರಲ್ಲಿ ಮಾತ್ರ ಹಿಂದೆ ಬಿದ್ದಿವೆ. 22 ಇಲಾಖೆಗಳ ಪೈಕಿ ಒಂದು ಇಲಾಖೆಯೂ ಶೇ.50ರ ಗಡಿಯನ್ನೂ ದಾಟಿಲ್ಲ.

ಸಚಿವ ಜಮೀರ್‍‌ ಅಹ್ಮದ್‌ ಖಾನ್‌, ಬೋಸರಾಜು, ಡಾ ಶರಣ ಪ್ರಕಾಶ್‌ ಪಾಟೀಲ್‌, ಕೆ ಹೆಚ್‌ ಮುನಿಯಪ್ಪ, ಹೆಚ್‌ ಕೆ ಪಾಟೀಲ್‌, ಸಂತೋಷ್‌ ಲಾಡ್‌, ಎಂ ಬಿ ಪಾಟೀಲ್‌, ಕೆ ವೆಂಕಟೇಶ್‌ ಅವರು ಸಚಿವರಾಗಿರುವ ಇಲಾಖೆಗಳೇ ಅತೀ ಹೆಚ್ಚಿನ ಮೊತ್ತವನ್ನು ಉಳಿಸಿಕೊಂಡಿದೆ.

ಸಣ್ಣ ನೀರಾವರಿ, ತೋಟಗಾರಿಕೆ, ಪಶು ಸಂಗೋಪನೆ, ಕರ್ನಾಟಕ ವಿಧಾನಸಭೆ, ಪರಿಷತ್‌, ವೈದ್ಯಕೀಯ ಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ, ಆಹಾರ, ಯುವ ಸಬಲೀಕರಣ, ಪ್ರವಾಸೋದ್ಯಮ, ರೇಷ್ಮೆ, ಮೀನುಗಾರಿಕೆ, ವಾರ್ತಾ, ವಾಣಿಜ್ಯ ಕೈಗಾರಿಕೆ, ಮೂಲಭೂತ ಸೌಕರ್ಯ, ಪರಿಶಿಷ್ಟ ಪಂಗಡ, ಇಂಧನ, ಕನ್ನಡ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ, ಕಾರ್ಮಿಕ ಇಲಾಖೆಯಲ್ಲಿ  ಒಟ್ಟಾರೆಯಾಗಿ 2024ರ ಸೆ.21ರ ಅಂತ್ಯಕ್ಕೆ 32,250.02 ಕೋಟಿ ರು. ಖರ್ಚಾಗದೇ ಹಾಗೇ ಉಳಿದುಕೊಂಡಿರುವುದು ಗೊತ್ತಾಗಿದೆ.

2024-25ನೇ ಸಾಲಿನಲ್ಲಿ ಒಟ್ಟು 3.28 ಲಕ್ಷ ಕೋಟಿ ರು ಅನುದಾನವನ್ನು ಬಜೆಟ್‌ನಲ್ಲಿ ಹಂಚಿಕೆ ಮಾಡಲಾಗಿತ್ತು. ಈ ಪೈಕಿ ಸೆ.21ರ ಅಂತ್ಯಕ್ಕೆ 1.26 ಲಕ್ಷ ಕೋಟಿ ರು. ಬಿಡುಗಡೆ ಆಗಿತ್ತು. ಇದು ಒಟ್ಟು ಅನುದಾನಕ್ಕೆ ಶೇ. 40.67ರಷ್ಟಿತ್ತು ಈ ಪೈಕಿ 1.11 ಲಕ್ಷ ಕೋಟಿ ರು. ಒಟ್ಟು ವೆಚ್ಚವಾಗಿದೆ. ಇದು ಸಹ ಒಟ್ಟು ಅನುದಾನಕ್ಕೆ ಶೇ. 34.00 ರಷ್ಟಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಗೆ ಬಿಡುಗಡೆಯಾಗಿದ್ದ ಒಟ್ಟು ಅನುದಾನದ ಪೈಕಿ ಶೇ. 27.37ರಷ್ಟು ಮಾತ್ರ ವೆಚ್ಚವಾಗಿದೆ ಎಂದು ತಿಳಿದು ಬಂದಿದೆ.

ಸಣ್ಣ ನೀರಾವರಿ ಇಲಾಖೆಗೆ ಹಂಚಿಕೆಯಾಗಿದ್ದ ಒಟ್ಟು 2,388.49 ಕೋಟಿ ರು. ಅನುದಾನದ ಪೈಕಿ 1,003.54 ಕೋಟಿ ರು (ಶೇ.42.02) ಬಿಡುಗಡೆಯಾಗಿದೆ. ಇದರಲ್ಲಿ ಸೆ.21ರ ಅಂತ್ಯಕ್ಕೆ 761.92 ಕೋಟಿ ರು. ಮಾತ್ರ ಖರ್ಚಾಗಿದೆ. ಖರ್ಚು ಮಾಡಲು ಇನ್ನೂ 241.63 ಕೋಟಿ ರು. ಬಾಕಿ ಇರುವುದು ಗೊತ್ತಾಗಿದೆ.

ತೋಟಗಾರಿಕೆ ಇಲಾಖೆಯಲ್ಲಿ 221.35 ಕೋಟಿ, ಪಶು ಸಂಗೋಪನೆಯಲ್ಲಿ 162.16 ಕೋಟಿ, ಕರ್ನಾಟಕ ವಿಧಾನಸಭೆ, ಪರಿಷತ್‌ 159.69 ಕೋಟಿ, ವೈದ್ಯಕೀಯ ಶಿಕ್ಷಣದಲ್ಲಿ 140.07 ಕೋಟಿ, ವಾಣಿಜ್ಯ ಕೈಗಾರಿಕೆ (ಬೃಹತ್‌) 134.70 ಕೋಟಿ, ಅಲ್ಪಸಂಖ್ಯಾತರ ಕಲ್ಯಾಣದಲ್ಲಿ 133.05 ಕೋಟಿ, ಆಹಾರ ಇಲಾಖೆ 94.82 ಕೋಟಿ, ವಾಣಿಜ್ಯ ಕೈಗಾರಿಕೆ (ಸಣ್ಣ, ಜವಳಿ, ಗಣಿ) 82.86 ಕೋಟಿ, ಕಾರ್ಮಿಕ ಇಲಾಖೆ 76.25 ಕೋಟಿ ರು ಬಾಕಿ ಇದೆ.

ಯುವಸಬಲೀಕರಣದಲ್ಲಿ 72.78 ಕೋಟಿ, ಮೂಲಭೂತ ಸೌಕರ್ಯ 58.07 ಕೋಟಿ, ಪ್ರವಾಸೋದ್ಯಮ 45.12 ಕೋಟಿ, ಪರಿಶಿಷ್ಟ ಪಂಗಡಗಳು 33.01 ಕೋಟಿ, ರೇಷ್ಮೆ 30.49 ಕೋಟಿ, ಇಂಧನ 23.26 ಕೋಟಿ, ಮೀನುಗಾರಿಕೆ 20.30 ಕೋಟಿ, ಇ-ಆಡಳಿತ16.04 ಕೋಟಿ, ಸಿಬ್ಬಂದಿ ಆಡಳಿತ ಸುಧಾರಣೆ (ಆಡಳಿತ ಸುಧಾರಣೆ) 13.24 ಕೋಟಿ, ಕನ್ನಡ ಸಂಸ್ಕೃತಿ 11.78 ಕೋಟಿ, ವಾರ್ತಾ 9.12 ಕೋಟಿ, ಮಾಹಿತಿ ತಂತ್ರಜ್ಞಾನ 1.46 ಕೋಟಿ ರು. ಖರ್ಚಾಗದೇ ಬಾಕಿ ಇರುವುದು ತಿಳಿದು ಬಂದಿದೆ.

2023-24ನೇ ಸಾಲಿಗೆ ಹೋಲಿಸಿದರೇ ಸೆಪ್ಟಂಬರ್‍‌ ಅಂತ್ಯಕ್ಕೆ ಶೇ. 31ರಷ್ಟು ಅನುದಾನ ಖರ್ಚು ಮಾಡಿತ್ತು. 2024-25ನೇ ಸಾಲಿನ ಸೆಪ್ಟಂಬರ್‍‌ ಅಂತ್ಯಕ್ಕೆ ಶೇ. 34.96ರಷ್ಟಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದೇ ಅವಧಿಯಲ್ಲಿ ಶೇ.3ರಷ್ಟು ಮಾತ್ರ ಖರ್ಚಾಗಿರುವುದು ಗೊತ್ತಾಗಿದೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Topics

ಈಜಿಪುರ ಮೇಲ್ಸೇತುವೆ ಕಾಮಗಾರಿ; ಪರಿಷ್ಕೃತ ಅಂದಾಜಿನಲ್ಲಿಯೇ ಲೋಪ ಪತ್ತೆ, 8.80 ಕೋಟಿ ಮೊತ್ತಕ್ಕೆ ಲೆಕ್ಕ ಪರಿಶೋಧಕರ ಆಕ್ಷೇಪಣೆ

ಬೆಂಗಳೂರು;  ಈಜಿಪುರ ಎಲಿವೇಟೆಡ್ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಮಾಡಿದ್ದ...

Related Articles

Popular Categories

error: Content is protected !!