Wednesday | July 22, 2026 |

21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆ; 7 ತಿಂಗಳ ಹಿಂದೆಯೇ ಕಂದಾಯ ಇಲಾಖೆಗೆ ಸೂಚನೆ, ಪತ್ರ ಬಹಿರಂಗ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆ ಮಾಡಲು 7 ತಿಂಗಳ ಹಿಂದೆಯೇ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಗಿತ್ತು. ಈಗಿನ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾಗಿದ್ದ ಸಂದರ್ಭದಲ್ಲೇ ವಕ್ಪ್‌ ಆಸ್ತಿ ಖಾತೆ ಬದಲಾವಣೆ ಮಾಡಲು  ಪತ್ರವನ್ನು ಬರೆದಿದ್ದರು.

 

ರೈತರು ಅನುಭವ ಮತ್ತು ಸ್ವಾಧೀನದಲ್ಲಿರುವ ಜಮೀನುಗಳ ಆರ್ ಟಿ ಸಿ ಗಳಲ್ಲಿ ವಕ್ಫ್‌ ಎಂದು ನಮೂದಿಸಲು ಸೂಚಿಸಿರುವ  ಕುರಿತು ಪ್ರತಿಪಕ್ಷ ಬಿಜೆಪಿಯು ಕಾಂಗ್ರೆಸ್‌ ಮೇಲೆ ಮುಗಿ ಬಿದ್ದಿದೆ. ರೈತರ ಪ್ರತಿರೋಧ ಹೆಚ್ಚಾಗುತ್ತಿದ್ದಂತೆ ರೈತರಿಗೆ ನೀಡಿರುವ ನೋಟೀಸ್‌ ಹಿಂಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆಯೊಂದರಲ್ಲೇ 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆ ಮಾಡಬೇಕು ಮತ್ತು ಅವುಗಳ ಮಾಹಿತಿಯನ್ನು  ಭೂಮಿ ತಂತ್ರಾಂಶದಲ್ಲಿ ನೋಂದಾಯಿಸಬೇಕು ಎಂದು ಶಾಲಿನಿ ರಜನೀಶ್‌ ಅವರು ಸೂಚಿಸಿದ್ದ ಪತ್ರವು ಮುನ್ನೆಲೆಗೆ ಬಂದಿದೆ.

 

ರಾಜ್ಯಮಟ್ಟದ ವಕ್ಫ್‌ ಆಸ್ತಿಗಳ ಕಾರ್ಯಪಡೆಯು ಸಾಧಿಸಿರುವ ಕುರಿತು ಪ್ರಗತಿ ಪರಿಶೀಲನೆ ಕುರಿತು 2024ರ ಏಪ್ರಿಲ್‌ 15ರಂದೇ ಸಭೆ ನಡೆದಿತ್ತು. ಈ  ಸಭೆಯಲ್ಲಿ ಕಂದಾಯ ಇಲಾಖೆಯೊಂದರಲ್ಲೇ 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆಯಾಗಿಲ್ಲ ಎಂಬ ಸಂಗತಿಯ ಕುರಿತು ಚರ್ಚೆಯಾಗಿತ್ತು.

 

ಈ ಕುರಿತು ಅಭಿವೃದ್ಧಿ ಆಯುಕ್ತರಾಗಿದ್ದ ಡಾ ಶಾಲಿನಿ ರಜನೀಶ್‌ ಅವರು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್‍‌ ಕುಮಾರ್‍‌ ಕಟಾರಿಯಾ ಅವರಿಗೆ 2024ರ ಏಪ್ರಿಲ್‌ 16ರಂದು ಪತ್ರವೊಂದನ್ನು ಬರೆದಿದ್ದರು.  ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಕಂದಾಯ ಇಲಾಖೆಯಲ್ಲಿ ಒಟ್ಟು 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆಯಾಗಬೇಕಿದ್ದು ಈ ವಕ್ಫ್‌ ಆಸ್ತಿಗಳ ಮಾಹಿತಿಯನ್ನು ಭೂಮಿ ತಂತ್ರಾಂಶದಡಿಯಲ್ಲಿ ನೋಂದಾಯಿಸಬೇಕಿದೆ,’ ಎಂದು ಪತ್ರದಲ್ಲಿ ತಿಳಿಸಿದ್ದರು ಎಂಬುದು  ಗೊತ್ತಾಗಿದೆ.

 

ಈ ಕುರಿತು ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ಸಚಿವ ಬಿ ಝಡ್‌ ಜಮೀರ್‍‌ ಅಹ್ಮದ್‌ ಖಾನ್‌ ಅವರೊಂದಿಗೆ ಎರಡೂ ಇಲಾಖೆಗಳ ಅಧಿಕಾರಿಗಳು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

 

ಅಲ್ಲದೇ ನೋಂದಾಯಿಸಲ್ಪಡದ ಆಸ್ತಿಗಳ ವಿವರಗಳನ್ನು ಆಡಳಿತಾತ್ಮಕವಾಗಿ ಅಧಿನಿಯಮದಡಿ ತರಬೇಕು. ಕಂದಾಯ ಇಲಾಖೆಗೆ ಸಲ್ಲಿಸಿರುವ 328 ಪ್ರಸ್ತಾವನೆಗಳ ಬಗ್ಗೆ ಪರಿಶೀಲಿಸಿ, ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ಖಬರಸ್ತಾನ್‌ ಜಮೀನುಗಳಿಗೆ ಮಂಜೂರಾತಿ ನೀಡಬೇಕು. ಹಾಗೂ ಲಭ್ಯವಿಲ್ಲದ ಸಂದಭ್ದಲ್ಲಿ ನಿಯಮಾನುಸಾರ ಖಾಸಗಿ ಜಮೀನು ಖರೀದಿಸಿ ವಿತರಿಸಲು ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿರುವುದು ಪತ್ರದಿಂದ ತಿಳಿದು ಬಂದಿದೆ.

 

 

 

ಅದೇ ರೀತಿ ‘ಕರ್ನಾಟಕ ಭೂ ಕಬಳಿಕೆ ನಿಯಂತ್ರಣಾ ಕಾಯ್ದೆ ಹಾಗೂ ವಕ್ಫ್‌ ಕಾಯ್ದೆ ಕಲಂ 52(ಎ) ಪ್ರಕಾರ ವಕ್ಫ್‌ ಆಸ್ತಿಗಳ ಭೂಮಿ ಅತಿಕ್ರಮಣವಾಗಿರುವ ವಿಷಯವನ್ನು ಇಲಾಖೆಯ ಮಾಸಿಕ ಸಭೆ ಮತ್ತು ಸಚಿವರ ಅಧ್ಯಕ್ಷತೆಯ ತ್ರೈಮಾಸಿಕ ಸಭೆಗಳಲ್ಲಿ ಕಾರ್ಯಸೂಚಿಯನ್ನಾಗಿ ಇಡಬೇಕು,’ ಎಂದೂ ನಿರ್ದೇಶಿಸಿರುವುದು ಗೊತ್ತಾಗಿದೆ.

 

ರಾಜ್ಯದಲ್ಲಿ ಅನಧಿಕೃತ ಒತ್ತುವರಿ ವಿಚಾರವಾಗಿ ಈವರೆಗೆ ಒಟ್ಟು 3,720 ಪ್ರಕರಣ ದಾಖಲಾಗಿದೆ. ಒತ್ತುವರಿಯನ್ನು ತೆರವುಗೊಳಿಸುವ ನಿಟ್ಟಿನಲ್ಲಿ ವಕ್ಫ್ ಕಾಯ್ದೆ ಕಲಂ – 54 ರ ಪ್ರಕಾರ ಈಗಾಗಲೇ ಪ್ರಕರಣ ದಾಖಲು ಮಾಡಿದೆ. ಕರ್ನಾಟಕ ವಕ್ಫ್‌ ನ್ಯಾಯಾಧೀಕರಣಕ್ಕೆ ಒತ್ತುವರಿ ತೆರವು ಆದೇಶಕ್ಕಾಗಿ ಒಟ್ಟು 1458 ಅರ್ಜಿ ಸಲ್ಲಿಕೆಯಾಗಿವೆ.

 

ಈವರೆಗೆ ಒಟ್ಟು 319 ಎಕರೆ ಹಾಗೂ 9 ಗುಂಟೆ ಹಾಗೂ 128453.9 ಚದರ ಅಡಿ ವಕ್ಫ್‌ ಅಸ್ತಿಯನ್ನು ಒತ್ತುವರಿದಾರರಿಂದ ತೆರವುಗೊಳಿಸಿ ಸಂಬಂಧಪಟ್ಟ ವಕ್ಫ್‌ ಸಂಸ್ಥೆಯ ಸ್ವಾಧೀನಕ್ಕೆ ಪಡೆದಿದೆ.

 

ರಾಯಚೂರು ಜಿಲ್ಲೆಯೊಂದರಲ್ಲೇ 423 ಎಕರೆ 17 ಗುಂಟೆ ಮತ್ತು 89649 ಚದರ ಅಡಿ ವಕ್ಫ್ ಬೋರ್ಡ್ ಆಸ್ತಿಯನ್ನು ಅತಿಕ್ರಮಣವಾಗಿದೆ. ವಕ್ಫ್‌ ಆಸ್ತಿ ವಿಚಾರವಾಗಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್‍‌ ಮಾಣಿಪ್ಪಾಡಿ ಅವರು ದನಿ ಎತ್ತಿದ್ದರು. ಅಲ್ಲದೇ ವಕ್ಫ್‌ ಆಸ್ತಿ ಅತಿಕ್ರಮಣದಲ್ಲಿ 2ರಿಂದ 3 ಲಕ್ಷ ಕೋಟಿ ರು ಅಕ್ರಮ ನಡೆದಿದೆ ಎಂಬ ಆರೋಪವೂ ಕೇಳಿ ಬಂದಿತ್ತು.

 

ಒಂದು ಬಾರಿ ವಕ್ಫ್‌ ಸ್ವತ್ತು ಎಂದು ಘೋಷಿಸಿದ ಮೇಲೆ ಅದು ಎಂದೆಂದಿಗೂ ವಕ್ಫ್‌ ಸ್ವತ್ತಾಗಿಯೇ ಉಳಿಯುತ್ತದೆ ಎಂದು ಸರ್ವೋಚ್ಛ ನ್ಯಾಯಾಲಯವು ಆಂಧ್ರಪ್ರದೇಶ ವಕ್ಫ್‌ ಮಂಡಳಿ ಹಾಗೂ ಇತರರು ಪ್ರಕರಣದಲ್ಲಿ ತಿಳಿಸಿತ್ತು. ಆದರೆ ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಕಚೇರಿಗಳಲ್ಲಿ ರಾಜ್ಯದ ವಕ್ಫ್‌ ಆಸ್ತಿಗಳ ಹಕ್ಕುಗಳ ವರ್ಗಾವಣೆ ಮಾಡುತ್ತಿದ್ದರು. ಇದು ಸರ್ಕಾರದ ಗಮನಕ್ಕೂ ಬಂದಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರೂ ಸಹ ವಿಧಾನಸಭೆಗೆ ಲಿಖಿತ ಉತ್ತರ ನೀಡಿದ್ದರು.

 

 

ಪೌರಾಡಳಿತ ನಿರ್ದೇಶನದ ಸುತ್ತೋಲೆ ಮೇರೆಗೆ 2023ರ ಆಗಸ್ಟ್‌ 1ರಿಂದ ಅನ್ವಯವಾಗುವಂತೆ ಸ್ಥಳೀಯ ಸಂಸ್ಥೆ ಮತ್ತು ವಕ್ಫ್‌ ಬೋರ್ಡ್‌ ಆಸ್ತಿಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ಹಕ್ಕು ವರ್ಗಾವಣೆಗೆ ಕೋರಿಕೆ ಸಲ್ಲಿಸಿದಲ್ಲಿ ಮಾತ್ರ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ಹಕ್ಕು ವರ್ಗಾವಣೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ಒದಗಿಸಿದ್ದರು.

Hot this week

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...
Please Scan to make Your Contribution

Topics

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

Related Articles

Popular Categories

error: Content is protected !!