ಪಾಲಿ ಟ್ರಸ್ಟ್‌ ವಿರುದ್ಧ ಸಿ ಎಸ್‌ ಕಚೇರಿ ಮೆಟ್ಟಿಲೇರಿದ್ದ ಮಣಿಕಂಠ; ಸುಪಾರಿ ಆರೋಪ ಬೆನ್ನಲ್ಲೇ ದೂರು ಮುನ್ನೆಲೆಗೆ

ಬೆಂಗಳೂರು;  ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿದ್ದಾರೆ ಎನ್ನಲಾದ ಡೆತ್‌ ನೋಟ್‌ನಲ್ಲಿ ಉಲ್ಲೇಖವಾಗಿರುವ ಮಣಿಕಂಠ ರಾಠೋಡ್ ಎಂಬಾತ ಸಿದ್ಧಾರ್ಥ ವಿಹಾರ್‍‌ ಟ್ರಸ್ಟ್‌ನ ಭಾಗವಾಗಿರುವ ಅಂತರಾಷ್ಟ್ರೀಯ ಪಾಲಿ, ಸಂಸ್ಕೃತ ತೌಲನಿಕ ತತ್ವಶಾಸ್ತ್ರ ಟ್ರಸ್ಟ್‌ಗೆ ಮಂಜೂರಾಗಿದ್ದ ಜಮೀನಿನ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಎರಡು ವರ್ಷದ ಹಿಂದೆಯೇ ದೂರು ಸಲ್ಲಿಸಿದ್ದರು.

 

ಅಂತರಾಷ್ಟ್ರೀಯ ಪಾಲಿ, ಸಂಸ್ಕೃತ ತೌಲನಿಕ ತತ್ವಶಾಸ್ತ್ರ ಟ್ರಸ್ಟ್‌ಗೆ ಮಂಜೂರಾಗಿದ್ದ ಜಮೀನನ್ನು ಹಿಂಪಡೆದುಕೊಳ್ಳಬೇಕು ಎಂದೂ ದೂರಿನಲ್ಲಿ ಒತ್ತಾಯಿಸಿದ್ದ. 2022ರಲ್ಲಿ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಸಿದ್ದಲಿಂಗಸ್ವಾಮಿ, ಶಾಸಕ ಬಸವರಾಜ ಮತ್ತಿಮಡು, ಮಣಿಕಂಠ ರಾಠೋಡ ಅವರನ್ನುಕೊಲೆ ಮಾಡಲು ಆರೋಪಿಗಳು ಸುಪಾರಿ ನೀಡಿದ್ದಾರೆ ಎಂದು ಸಚಿನ್ ಪಾಂಚಾಳ್‌ ಡೆತ್‌ ನೋಟ್‌ನಲ್ಲಿ ವಿವರಿಸಿದ್ದರು. ಇದರ ಬೆನ್ನಲ್ಲೇ ಮಣಿಕಂಠ ನೀಡಿದ್ದ ದೂರು ಮುನ್ನೆಲೆಗೆ ಬಂದಿದೆ.

 

ಕಳೆದ ಎರಡು ವರ್ಷದ ಹಿಂದೆಯೇ ಅಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಸಲ್ಲಿಕೆಯಾಗಿದ್ದ ದೂರಿನ ಮೇಲೆ ಕ್ರಮಕೈಗೊಳ್ಳಲು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಕಲ್ಬುರ್ಗಿಯ ಜಿಲ್ಲಾಧಿಕಾರಿಗೆ ಮುಖ್ಯ ಕಾರ್ಯದರ್ಶಿ ಸೂಚಿಸಿರುವುದು ಗೊತ್ತಾಗಿದೆ. ಈ ಸಂಬಂಧ ಕ್ರಮ ವಹಿಸಲಾಗಿದೆಯೇ ಅಥವಾ ಇಲ್ಲವೇ ಎಂಬ ಕುರಿತು ಮುಖ್ಯ ಕಾರ್ಯದರ್ಶಿಗಳ ಕಚೇರಿಯಲ್ಲಿ ಯಾವ ಮಾಹಿತಿಯೂ  ಇಲ್ಲ.

 

ಮುಖ್ಯ ಕಾರ್ಯದರ್ಶಿಗೆ ಸಲ್ಲಿಕೆಯಾಗಿದ್ದ ದೂರಿನಲ್ಲೇನಿದೆ?

 

ಕಲ್ಬುರ್ಗಿ ತಾಲೂಕಿನ ಕುಸನೂರು ಗ್ರಾಮದ ಸರ್ವೆ ನಂಬರ್‍‌ 88/1ರಲ್ಲಿನ ಜಮೀನನ್ನು ಗುಲ್ಬರ್ಗಾ ವಿಶ್ವವಿದ್ಯಾಲಯ ಸಂಶೋಧನಾ ಕೇಂದ್ರ ನಡೆಸಲು ನಿಗದಿಪಡಿಸಲಾಗಿತ್ತು. ಆದರೆ ಈ ಜಮೀನಿನಲ್ಲಿ ಸಂಶೋಧನಾ ಕಟ್ಟಡ ನಿರ್ಮಾಣವಾಗಿಲ್ಲ. ಹೀಗಾಗಿ ಈ ಸರ್ಕಾರಿ ಜಮೀನನ್ನು ಗುಳುಂ ಮಾಡಲು ಸಿದ್ದಾರ್ಥ ವಿಹಾರ ಟ್ರಸ್ಟ್‌, 30 ವರ್ಷಗಳ ಅವಧಿಗೆ ಪಾಲಿ ಸಂಸ್ಕೃತ, ಭಾಷೆ ಸಂಶೋಧನಾ ಕೇಂದ್ರ ನಡೆಸಲು ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಂಡಿದೆ.

 

ಆದರೆ ಗುತ್ತಿಗೆ ಮೊತ್ತ ಸುಮಾರು 66.94 ಲಕ್ಷ ರು.ಗಳನ್ನು ಭರಿಸದೇ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದೆ ಎಂದು ದೂರಿನಲ್ಲಿ ಮಣಿಕಂಠ ನರೇಂದ್ರ ರಾಠೋಡ ಎಂಬುವರು ದೂರಿನಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

 

 

‘ಕಾನೂನುಬಾಹಿರವಾಗಿ ಕರ್ನಾಟಕ ಲ್ಯಾಂಡ್‌ ಗ್ರಾಂಟ್‌ ನಿಯಮ 1969 ಕಲಂ 15(5)(i)ರಂತೆ ಯಾವುದೇ ಖಾಸಗಿ ಸಂಸ್ಥೆಗೆ ಸರ್ಕಾರಿ ಜಮೀನು ಉಚಿತವಾಗಿ ನೀಡಬೇಕಾದಲ್ಲಿ ಕಡ್ಡಾಯವಾಗಿ 5 ವರ್ಷಗಳ ಅವಧಿ ಪೂರ್ಣಗೊಳಿಸಿರಬೇಕು.ಮತ್ತು ಹಣಕಾಸಿನ ವ್ಯವಹಾರ ಸಹ ಹೊಂದಿರಬೇಕು ಎಂದು ಆಡಿಟರ್‍‌ ಜನರಲ್‌ ಅವರು 2017ರ ಜೂನ್‌ 17ರಂದು ತಿಳಿಸಿದ್ದರು,’ ಎಂದು ವರದಿ ಕುರಿತು ಮಾಹಿತಿ ಒದಗಿಸಿರುವುದು ತಿಳಿದು ಬಂದಿದೆ.

 

ಸಾಮಾಜಿಕ ಚಟುವಟಿಕೆಗಳು ಮಾಡಿದಲ್ಲಿ ಮಾತ್ರ ಸರ್ಕಾರಿ ಜಮೀನನ್ನು ಉಚಿತವಾಗಿ ನೀಡಬೇಕು ಎಂಬ ನಿಯಮವಿದೆ. ಆದರೆ ಖರ್ಗೆ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಕಾರ್ಯದರ್ಶಿ ರಾಧಾಕೃಷ್ಣ ಮತ್ತು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ ಅವರ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿರುವುದು ಗೊತ್ತಾಗಿದೆ.

 

ಅದೇ ರೀತಿ ಕೇವಲ ಒಂದು ತಿಂಗಳ ಹಿಂದೆಯೇ ನೋಂದಣಿಯಾದ ಸಂಸ್ಥೆಗೆ ಅಂದರೆ 2014ರ ಮಾರ್ಚ್‌ 14ರಂದು ಒಟ್ಟು 19 ಎಕರೆ ವಿಸ್ತೀರ್ಣದ ಸಕಾfರಿ ಜಮೀನನ್ನು ಉಚಿತವಾಗಿ ಪಡೆದು ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇರುವುದಿಲ್ಲ ಎಂದು ಎ ಜಿ ವರದಿ ಹೇಳಿದ್ದರೂ ಸಹ ಇದುವರೆಗೂ ಹಿಂಪಡೆದುಕೊಂಡಿಲ್ಲ ಎಂದು ಆಪಾದಿಸಿರುವುದು ತಿಳಿದು ಬಂದಿದೆ.

 

‘ಸರ್ಕಾರಿ ಜಮೀನನ್ನು ಗುಳುಂ ಮಾಡುವ ಹುನ್ನಾರದಿಂದ ಅಧಿಕಾರ ದುರುಪಯೋಗ ಪಡಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಮತ್ತು ಸಾರ್ವಜನಿಕರ ತೆರಿಗೆ ಹಣ ಅನಾವಶ್ಯಕವಾಗಿ  ಖರ್ಚು ಮಾಡಿ ಕೋಟ್ಯಂತರ ರುಪಾಯಿ ನಷ್ಟವುಂಟು ಮಾಡಲಾಗಿದೆ. ಜಮೀನಿಗೆ ನಿಗದಿಪಡಿಸಿದ ಗುತ್ತಿಗೆ ಮೊತ್ತ 66.94 ಲಕ್ಷ ರು.ಗಳನ್ನು ಪಾವತಿಸದೇ ಸರ್ಕಾರಕ್ಕೆ ಮೋಸ, ವಂಚನೆ ಮಾಡಿರುವ ಟ್ರಸ್ಟ್‌ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ, ರಾಧಾಕೃಷ್ಣ ಅವರ ವಿರುದ್ಧ ಮೊಕದ್ದಮೆ ದಾಖಲಿಸಬೇಕು,’ ಎಂದು ಮಣಿಕಂಠ ರಾಠೋಡ್‌ ಎಂಬುವರು ಒತ್ತಾಯಿಸಿರುವುದು ಗೊತ್ತಾಗಿದೆ.

 

 

ಹಾಗೆಯೇ ಗುಲ್ಬರ್ಗಾ ವಿಶ್ವವಿದ್ಯಾಲಯದ ಗಮನಕ್ಕೆ ತರದೆಯೇ ಕಾನೂನುಬಾಹಿರವಾಗಿ ಕಬಳಿಕೆ ಆಗಿರುವ ಸರ್ಕಾರಿ ಜಮೀನನ್ನು ಕೂಡಲೇ ಹಿಂಪಡೆಯಬೇಕು ಮತ್ತು ಬಾಕಿ ಇರುವ ಗುತ್ತಿಗೆ ಮೊತ್ತಕ್ಕೆ ಬಡ್ಡಿ ಸೇರಿಸಿ ವಸೂಲು ಮಾಡಬೇಕು. ಹಾಗೂ ಈ ಜಮೀನನ್ನು ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ನೀಡಿ ಜಿಲ್ಲೆಯ ಬಡ, ದಲಿತ, ಹಿಂದುಳಿದ ಶೋಷಿತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಸಂಶೋಧನಾ ಕೇಂದ್ರ ತೆರೆಯಬೇಕು ಎಂದೂ ಆಗ್ರಹಿಸಿರುವುದು ತಿಳಿದು ಬಂದಿದೆ.

 

ಸಿದ್ಧಾರ್ಥ ವಿಹಾರ್‍‌ ಟ್ರಸ್ಟ್‌ನ ಭಾಗವಾಗಿರುವ  ಅಂತರಾಷ್ಟ್ರೀಯ ಪಾಲಿ, ಸಂಸ್ಕೃತ,  ತೌಲನಿಕ ತತ್ವಶಾಸ್ತ್ರ ಟ್ರಸ್ಟ್‌ಗೆ 19 ಎಕರೆ ವಿಸ್ತೀರ್ಣದ ಜಮೀನನ್ನು ಉಚಿತವಾಗಿ ಮಂಜೂರು ಮಾಡಿರುವುದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇರಲಿಲ್ಲ ಎಂದು ಇಂಡಿಯನ್‌ ಆಡಿಟ್‌ ಅಂಡ್‌ ಅಕೌಂಟೆಂಟ್‌ ಜನರಲ್‌  ಅಭಿಪ್ರಾಯಿಸಿದ್ದರು.

 

ಉಚಿತವಾಗಿ 19 ಎಕರೆ ಮಂಜೂರು; ಸಾರ್ವಜನಿಕ ಹಿತಾಸಕ್ತಿಯಿಲ್ಲ, ನಿಯಮ ಪಾಲನೆಯಾಗಿಲ್ಲವೆಂದ ಎಜಿ

ಆದರೆ ಇಲಾಖೆಯು ಈ ಪ್ರಕರಣದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಮಾರ್ಗಸೂಚಿ ಬೆಲೆಯನ್ನು ಪರಿಗಣಿಸಿತ್ತು. ಮಾರ್ಗಸೂಚಿ ಬೆಲೆಯಾದ ಎಕರೆಗೆ 15,60,000 ರು ಪರಿಗಣಿಸಿದ್ದಾರೆ. ಅದರಂತೆ 16 ಎಕರೆಗೆ 24,60,000 ರು.ಗಳನ್ನು 2014-15 ಸಾಲಿಗೆ ಬಾಡಿಗೆಯನ್ನು ಪಡೆಯಲಾಗಿದೆ ಎಂದು ವಿವರಿಸಿತ್ತು.

 

 

ಪಾಲಿ, ಸಂಸ್ಕೃತ, ತತ್ವಶಾಸ್ತ್ರದ ಟ್ರಸ್ಟ್‌ಗೂ 19 ಎಕರೆ; ಗುತ್ತಿಗೆ ಆದೇಶ ಮಾರ್ಪಾಡಿಸಿ ಉಚಿತವಾಗಿ ಮಂಜೂರು

ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ಕೆಎಐಡಿಬಿಯಿಂದ ಮಂಜೂರಾಗಿದ್ದ   5 ಎಕರೆ ವಿಸ್ತೀರ್ಣದ ಸಿ ಎ ನಿವೇಶನದ   ಪ್ರಕರಣವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.  ರಾಷ್ಟ್ರೋತ್ಥಾನ ಪರಿಷತ್‌ಗೆ ಶೈಕ್ಷಣಿಕ ಉದ್ದೇಶಗಳಿಗಾಗಿ ರಿಯಾಯಿತಿ ದರದಲ್ಲಿ ಜಮೀನುಗಳನ್ನು ನೀಡಿರುವ ಬಗ್ಗೆ ಪ್ರಸ್ತಾಪಿಸಿದ್ದ  ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ್‌ ಖರ್ಗೆ, ಎಂ ಬಿ ಪಾಟೀಲ್‌ ಅವರು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದರು ಮತ್ತು ಸಿ ಎ ನಿವೇಶನ ಹಂಚಿಕೆಯನ್ನು  ಸಮರ್ಥಿಸಿಕೊಂಡಿದ್ದರು.

 

ಖರ್ಗೆ ಕುಟುಂಬ ಸದಸ್ಯರ ಟ್ರಸ್ಟ್‌ಗೆ 5 ಎಕರೆ ಜಮೀನು; ಅಧಿಕಾರ ದುರುಪಯೋಗ, ಹಿತಾಸಕ್ತಿ ಸಂಘರ್ಷ?

ಇದರ ಪ್ರಕಾರ ಕುಸನೂರು ಗ್ರಾಮದ ಸರ್ವೆ ನಂಬರ್‍‌ 88/1ರಲ್ಲಿ ಪಾಲಿ ಮತ್ತು ಸಂಸ್ಕೃತ ಭಾಷೆಗಳ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಅಂತರರಾಷ್ಟ್ರೀಯ ಪಾಲಿ, ಸಂಸ್ಕೃತ ಮತ್ತು ತುಲನಾತ್ಮಕ ತತ್ವಶಾಸ್ತ್ರದ ಟ್ರಸ್ಟ್‌ಗೆ 16.00 ಎಕರೆ ಜಮೀನನ್ನು 30 ವರ್ಷಗಳ ಅವಧಿಗೆ ಪ್ರಚಲಿತ ಮಾರುಕಟ್ಟೆ ಬೆಲೆಯ ಶೇ.10ರಷ್ಟು ಗುತ್ತಿಗೆ ಮೊತ್ತ ನಿಗದಿಪಡಿಸಿತ್ತು. ನಂತರ ಪ್ರತಿ ಎರಡು ವರ್ಷಗಳಿಗೊಮ್ಮೆ ಈ ಗುತ್ತಿಗೆ ಮೊತ್ತವನ್ನು ಶೇ.10ಕ್ಕೆ ಹೆಚ್ಚಿಸುವ ಷರತ್ತಿಗೆ ಒಳಪಟ್ಟು ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಿತ್ತು.

 

ಖರ್ಗೆ ಕುಟುಂಬ ಸದಸ್ಯರ ಟ್ರಸ್ಟ್‌ಗೆ 5 ಎಕರೆ; ರಾಹುಲ್‌ಗಾಂಧಿ, ಸಿಎಂಗೆ 2 ತಿಂಗಳ ಹಿಂದೆಯೇ ಸಲ್ಲಿಕೆಯಾಗಿತ್ತು ದೂರು

ಇದಾದ ನಂತರ ಸಂಸ್ಥೆಯು 2016ರ ಮಾರ್ಚ್‌ಮತ್ತು ಆಗಸ್ಟ್‌ನಲ್ಲಿ ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿತ್ತು.

 

ಖರ್ಗೆ ಕುಟುಂಬ ಸದಸ್ಯರ ಟ್ರಸ್ಟ್‌ಗೆ 5 ಎಕರೆ; ಹಿತಾಸಕ್ತಿ ಸಂಘರ್ಷದ ಕುರಿತು ಉಸಿರೆತ್ತದ ಕಾಂಗ್ರೆಸ್‌

ಈ ಕೋರಿಕೆಯನ್ನು ಅಂದಿನ ಕಾಂಗ್ರೆಸ್‌ ಸರ್ಕಾರವು ಪರಿಗಣಿಸಿತ್ತು. ಅದರಂತೆ 2017ರ ಮಾರ್ಚ್‌ 15ರಂದು ಆದೇಶ ಹೊರಡಿಸಿತ್ತು. ಇದರ ಪ್ರಕಾರ ಸರ್ವೆ ನಂಬರ್‍‌ 88/1ರಲ್ಲಿ ಕ್ರಮವಾಗಿ 16 ಎಕರೆ ಮತ್ತು 3 ಎಕರೆ ಸೇರಿ ಒಟ್ಟು 19 ಎಕರೆ ಜಮೀನನ್ನು ಪಾಲಿ ಮತ್ತು ಸಂಸ್ಕೃತ ಭಾಷೆಗಳ ಸಂಶೋಧನಾ ಕೇಂದ್ರ ಸ್ಥಾಪಿಸಲು 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಜಮೀನು ಮಂಜೂರು ಮಾಡಿರುವುದನ್ನು ಮಾರ್ಪಡಿಸಿತ್ತು.

 

ಆಟೋಮೊಬೈಲ್‌ ವಲಯದಲ್ಲಿ ಹೂಡಿಕೆ; ಪೂರ್ವಾನುಭವ ದಾಖಲೆಯಿಲ್ಲ, ಪ್ರವರ್ತಕರ ವಿವರಗಳಿಲ್ಲ

ಅಲ್ಲದೇ  ನಿಯಮ 23ನ್ನು ಸಡಿಲಿಸಿ ಅಂತರಾಷ್ಟ್ರೀಯ ಪಾಲಿ, ಸಂಸ್ಕೃತ ಮತ್ತು ತುಲನಾತ್ಮಕ ತತ್ವಶಾಸ್ತ್ರದ ಟ್ರಸ್ಟ್‌ಗೆ ಉಚಿತವಾಗಿ ಮಂಜೂರು ಮಾಡಿ ಆದೇಶಿಸಿರುವುದನ್ನು ಸ್ಮರಿಸಬಹುದು.

SUPPORT THE FILE

Latest News

Related Posts