Wednesday | August 26, 2026 |

ಪ್ರೋತ್ಸಾಹ ಧನ ಮಂಜೂರಾತಿಯಲ್ಲೂ ತಾರತಮ್ಯ; ಹೈಕೋರ್ಟ್‌ ಮೆಟ್ಟಿಲೇರಿದ ದಲಿತ ವಿದ್ಯಾರ್ಥಿನಿ

ಬೆಂಗಳೂರು; ಪ್ರತಿಭಾನ್ವಿತ ವಿದ್ಯಾರ್ಥಿಗಳು ಸರ್ಕಾರದ ಆರ್ಥಿಕ ಸಹಾಯದ ಕೊರತೆಯಿಂದ ಬಳಲಬಾರದು ಎಂದು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ ಹಲವಾರು ಪ್ರಕರಣಗಳಲ್ಲಿ ತೀರ್ಪು ನೀಡಿದ್ದರೂ ಸಹ ಸೂಕ್ತ ಪ್ರೋತ್ಸಾಹ ಧನ ದೊರಕಿಲ್ಲ  ಎಂದು ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ದಲಿತ ಸಮುದಾಯದ ನಿವೇದಿತ ವೆಂಕಟೇಶ್‌ ಎಂಬುವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

 

ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ನಿವೇದಿತ ವೆಂಕಟೇಶ್‌ ಅವರು ಸೂಕ್ತ ವಿದ್ಯಾರ್ಥಿ ವೇತನ ಪಡೆಯಲು ಇಲಾಖೆ ಮತ್ತು ಸಚಿವರುಗಳಿಗೆ ಕೋರಿಕೆ ಸಲ್ಲಿಸಿ 2-3 ವರ್ಷಗಳಾದರೂ ಸಹ ಸೂಕ್ತ ಪ್ರೋತ್ಸಾಹ ಧನ ದೊರಕಿಲ್ಲ. ಮತ್ತು ಈ ವಿಚಾರದಲ್ಲಿ ಸಮಾನವಾಗಿ ಕಾಣುತ್ತಿಲ್ಲ. ಅಲ್ಲದೇ ಪ್ರೋತ್ಸಾಹ ಧನ   ಮಂಜೂರು ಮಾಡುವಲ್ಲಿಯೂ ಸರ್ಕಾರವು ತಾರತಮ್ಯ ಎಸಗಿದೆ. ಹೀಗಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಗಳಿಗೆ ಹಂಚಿಕೆ ಮಾಡಿದ್ದ ಅನುದಾನದ ಪೈಕಿ 2,892 ಕೋಟಿ ರು. ವೆಚ್ಚ ಮಾಡದೇ ಬಾಕಿ ಉಳಿಸಿಕೊಂಡಿದ್ದರೂ ಸಹ ದಲಿತ ಸಮುದಾಯದ ವಿದ್ಯಾರ್ಥಿನಿಗೆ ಪ್ರೋತ್ಸಾಹ ಧನ ದೊರಕಿಲ್ಲ. ಈ ಸಂಬಂಧ ನಿವೇದಿತಾ ವೆಂಕಟೇಶ್‌ ಅವರು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್‌ ಆಫ್‌ ಮ್ಯಾಂಡಮಸ್‌ ಅರ್ಜಿಯಲ್ಲಿ ವಿವರಿಸಿದ್ದಾರೆ.

 

ಇದರ ಪ್ರತಿ ಮತ್ತು ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಈ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್‌ ಇದೇ 27ರಂದು ವಿಚಾರಣೆ ನಡೆಸಲಿದೆ. ಈ ಸಂಬಂಧ ಪ್ರತಿವಾದಿಗಳಾದ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್‌ ಮತ್ತು ಇಲಾಖೆಯ ಆಯುಕ್ತರಿಗೆ ನೋಟೀಸ್‌ ಜಾರಿಗೊಳಿಸಿದೆ.

 

 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾರ್ಹತೆ ಪಡೆಯುವ ಉದ್ದೇಶದಿಂದ ಶಿಕ್ಷಣ ನಿಧಿ ಸ್ಥಾಪಿಸಲಾಗಿದೆ. ಈ ನಿಧಿ ಮೂಲಕ ಕಾಲೇಜು ಶುಲ್ಕದ ಮೊತ್ತ 1.05 ಕೋಟಿ ರು. ಅನುದಾನ ಬಿಡುಗಡೆ ಮಾಡಬೇಕು ಎಂದು ನಿವೇದಿತ ವೆಂಕಟೇಶ್‌ ಅವರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಿಂದಲೂ ಕೋರುತ್ತಲೇ ಬಂದಿದ್ದಾರೆ.

 

‘ಎಂಬಿಬಿಎಸ್‌ಗೆ ಸಾಲ ಮಾಡಿ ವಿದ್ಯಾಭ್ಯಾಸ ಮಾಡುತ್ತಿದ್ದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುತ್ತಿದ್ದೇನೆ. ಆದ್ದರಿಂದ ನಾನು ಕಾಲೇಜಿಗೆ ಪಾವತಿಸಿರುವ ಶಿಕ್ಷಣ ಶುಲ್ಕ 1,05,00,000 ರು.ಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಂಜೂರು ಮಾಡಬೇಕು,’ ಎಂದು ನಿವೇದಿತಾ ವೆಂಕಟೇಶ್‌ ಅವರು 2024ರ ಜೂನ್‌ 6ರಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್‌ ಸಿ ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಿದ್ದರು.

 

 

ಅಲ್ಲದೇ 2021-22ರಿಂದಲೂ ಅಂದಿನ ಮತ್ತು ಇಂದಿನ ಸಚಿವರಿಗೂ ನಿವೇದಿತಾ ವೆಂಕಟೇಶ್‌ ಅವರು ಮನವಿ ಸಲ್ಲಿಸಿದ್ದರು.

 

 

ಖುದ್ದು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ 1.05 ಕೋಟಿ ರು.ಗಳ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದರು.

 

 

2024ರ ಅಕ್ಟೋಬರ್‍‌ 2ರ ಆದೇಶವನ್ನು ಪೂರ್ವಾನ್ವಯವಾಗಿ ಜಾರಿ ಮಾಡಲು ಅವಕಾಶ ಇಲ್ಲ. ಹಾಗೂ ಈಗಾಗಲೇ ವಿದ್ಯಾರ್ಥಿನಿಯು ಎಂಬಿಬಿಎಸ್‌ ಕೋರ್ಸ್‌ ಪೂರ್ಣಗೊಳಿಸಿದ್ದಾರೆ. ಸರಾಸರಿ ಶೇ.60 ಅಂಕಗಳೊಂದಿಗೆ ಉತ್ತೀರ್ಣಳಾಗಿದ್ದಲ್ಲಿ 25.00 ಲಕ್ಷ ರು. ಪ್ರೋತ್ಸಾಹ ಧನವನ್ನು ಮಂಜೂರು ಮಾಡಲು ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನಿರ್ದೇಶಿಸಿದ್ದರು.

 

ನಿವೇದಿತ ವೆಂಕಟೇಶ್‌ ಅವರ ಕೋರಿಕೆಯಂತೆ 1.05 ಕೋಟಿ ರು. ಬಿಡುಗಡೆ ಮಾಡಿಲ್ಲ. ಬದಲಿಗೆ ಸಮಾಜ ಕಲ್ಯಾಣ ಇಲಾಖೆಯು 25.00 ಲಕ್ಷ ರು.ಗಳನ್ನು ಮಾತ್ರ ಮಂಜೂರು ಮಾಡಿ 2024ರ ಡಿಸೆಂಬರ್‍‌ 5ರಂದು ಆದೇಶ ಹೊರಡಿಸಿತ್ತು.

 

 

ಆದರೆ ಮತ್ತೊಂದು ವಿಶೇಷ ಪ್ರಕರಣದಡಿಯಲ್ಲಿ ಬೆಂಗಳೂರಿನ ಆಕಾಶ್ ಮೆಡಿಕಲ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಂಕಿತಾ ಎಂಬ ವಿದ್ಯಾರ್ಥಿನಿಗೆ 57,55,684 ರು.ಗಳನ್ನು 2024ರ ಫೆಬ್ರುವರಿ 29ರಂದು ಮಂಜೂರು ಮಾಡಿತ್ತು.

 

 

ಅದೇ ರೀತಿ ಮುಂಬೈನಲ್ಲಿರುವ ಆಮಿಟಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗಮಾಡುತ್ತಿರುವ ಊರ್ಮಿಳ ಎ ಎಂಬ ವಿದ್ಯಾರ್ಥಿನಿಗೆ 2022ರ ಮಾರ್ಚ್‌ 4ರಂದು 7.53 ಲಕ್ಷ ರು.ಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.

 

 

ಈ ಅಂಶವನ್ನು ಅರ್ಜಿದಾರರಾಗಿರುವ ನಿವೇದಿತಾ ವೆಂಕಟೇಶ್‌ ಅವರು ಅರ್ಜಿಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

 

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮಂಜೂರು ಮಾಡಿರುವ ಪ್ರೋತ್ಸಾಹ ಧನ ಮಂಜೂರು ಮಾಡಿರುವುದಕ್ಕೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳನ್ನು ಪಡೆಯಬೇಕು ಮತ್ತು 2024ರ ಜೂನ್‌ ಮತ್ತು ಅಕ್ಟೋಬರ್‍‌ 24ರಂದು ಹೊರಡಿಸಿರುವ ಸರ್ಕಾರದ ಆದೇಶದ ಪ್ರಕಾರ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಿರುವುದು ತಿಳಿದು ಬಂದಿದೆ.

Hot this week

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...
Please Scan to make Your Contribution

Topics

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

Related Articles

Popular Categories

error: Content is protected !!