Sunday | October 4, 2026 |

ಒತ್ತುವರಿ; ಅರಣ್ಯ ಇಲಾಖೆ ಕೈ ಸೇರಿದ ಕೆ ಆರ್ ರಮೇಶ್‌ ಕುಮಾರ್ ವಿರುದ್ಧ ಪ್ರಕರಣದ ಸರ್ವೆ ವರದಿ

ಬೆಂಗಳೂರು; ಕೋಲಾರ ಅರಣ್ಯ ವಿಭಾಗದಲ್ಲಿನ ಜಿನಗುಲಕುಂಟೆ ಅರಣ್ಯ ಪ್ರದೇಶದಲ್ಲಿನ 61.39 ಎಕರೆ ಒತ್ತುವರಿಗೆ ಸಂಬಂಧಿಸಿದಂತೆ  ಅರಣ್ಯಾಧಿಕಾರಿಗಳು ನಡೆಸಿದ್ದ ಜಂಟಿ ಸರ್ವೆಗೆ ಸಂಬಂಧಿಸಿದ ನಕ್ಷೆ , ವರದಿ ಮತ್ತು ದಾಖಲೆಗಳನ್ನು ಕಂದಾಯ ಇಲಾಖೆಯು ಇದೀಗ ಅರಣ್ಯ ಇಲಾಖೆಗೆ ವರ್ಗಾಯಿಸಿದೆ.

 

ಭೂಮಾಪನ ಇಲಾಖೆಯು, ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೆಜ್ ಅವರಿಗೆ  ವರದಿ, ದಾಖಲೆಗಳನ್ನು ರವಾನಿಸಿದೆ. ಈ ಸಂಬಂಧ ಭೂಮಾಪನ ಇಲಾಖೆಯು  2025ರ ಜನವರಿ 27ರಂದು ಪತ್ರ (ಅ.ಸ.ಪತ್ರ ಸಂಖ್ಯೆ; ಕಂಇ 23 ಪ್ರ.ಕಾ (ಭೂಮಾಪನ)  ಬರೆದಿದೆ. ಈ ಪತ್ರದ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.

 

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಹೋಬಳಿ ಹೊಸಹುಡ್ಯ ಗ್ರಾಮದ ಸರ್ವೆ ನಂಬರ್‍‌ 1 ಮತ್ತು 2 ರ ಜಮೀನಿನ ಜಂಟಿ ಸರ್ವೆ ನಡೆಸಬೇಕು ಎಂದು ಉಚ್ಛ  ನ್ಯಾಯಾಲಯದಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ ರಿಟ್‌ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯವು ಜಂಟಿ ಸರ್ವೇ ನಡೆಸಲು ಆದೇಶಿಸಿತ್ತು. ಮತ್ತು ಇದನ್ನು 2025ರ ಜನವರಿ 30ರೊಳಗೆ ಸಲ್ಲಿಸಬೇಕು ಎಂದೂ ನಿರ್ದೇಶಿಸಿ ಪ್ರಕರಣವನ್ನು 2025ರ ಫೆ.6ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು.

 

ಹೈಕೋರ್ಟ್‌ ಸೂಚನೆ ಮೇರೆಗೆ ಭೂಮಾಪನ ಇಲಾಖೆಯು ಈ ಪ್ರಕರಣದ 9ನೇ ಪ್ರತಿವಾದಿಯಾಗಿರು ಮಾಜಿ ಸಚಿವ ಹಾಗೂ ಸ್ಫೀಕರ್ ಆಗಿದ್ದ ಕೆ ಅರ್ ರಮೇಶ್ ಕುಮಾರ್ ಅವರಿಗೂ ನಿಗದಿತ ಕಾಲಾವಧಿಯಲ್ಲಿ ನೋಟೀಸ್‌ ಜಾರಿಗೊಳಿಸಿತ್ತು. 2025ರ ಜನವರಿ 15 ಮತ್ತು 16ರಂದು ಈ ಸರ್ವೆ ನಂಬರ್‍‌ಗಳ ಜಮೀನಿನ ಕುರಿತು ಜಂಟಿ ಸರ್ವೇ ಕಾರ್ಯ ನಡೆಸಿತ್ತು.

 

ಜಂಟಿ ಸರ್ವೆ, ನಕ್ಷೆ, ದಾಖಲೆಗಳನ್ನು  2025ರ ಜನವರಿ 24ರಂದು ಕೋಲಾರ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ( ಎಲ್‌ಎನ್‌ಡಿ/ಸಿಆರ್/89/2024-25)  ಸಲ್ಲಿಸಿದ್ದರು. ಇದೇ ವರದಿಯ ಮೇಲೆ ಮುಂದಿನ ಕ್ರಮ ಕೈಗೊಳ್ಳಲು  ಅರಣ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ರವಾನಿಸಿರುವುದು ಪತ್ರದಿಂದ ತಿಳಿದು ಬಂದಿದೆ. ಈ ವರದಿ ಕುರಿತು ಅಧಿಕಾರಿಗಳು ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

 

ಮಾಜಿ ಸಚಿವ ಹಾಗೂ ಸ್ಪೀಕರ್‍‌ ಆಗಿದ್ದ ಕೆ ರಮೇಶ್‌ ಕುಮಾರ್‍‌ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿರುವ 61.39 ಎಕರೆ ಅರಣ್ಯ ಪ್ರದೇಶದ ಕುರಿತು   ಜಂಟಿ ಸರ್ವೆ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಬೆಂಗಳೂರು ಪ್ರಾದೇಶಿಕ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಯವರು ಕೋಲಾರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು.

 

ಬೆಂಗಳೂರು ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಯವರು 2024ರ ಡಿಸೆಂಬರ್‍‌ 14ರಂದು ಕೋಲಾರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು.

 

 

ಅರಣ್ಯ ಇಲಾಖೆಯ ಮತ್ತು ರಮೇಶ್‌ ಕುಮಾರ್‌ ಮಧ್ಯೆ ನಡೆಯುತ್ತಿದ್ದ ಕಾನೂನು ಹೋರಾಟ ಇದೀಗ ತಾರ್ಕಿಕ ಹಂತಕ್ಕೆ ಬಂದು ತಲುಪಿತ್ತು.

 

61.39 ಎಕರೆ ಅರಣ್ಯ ಪ್ರದೇಶ ಒತ್ತುವರಿ; ಡಿ.20ರಂದು ಜಂಟಿ ಸರ್ವೆ, ಇನ್ನಾದರೂ ತಾರ್ಕಿಕ ಅಂತ್ಯ ಕಾಣುವುದೇ?

 

ಒತ್ತುವರಿಯಾಗಿದೆ ಎಂದು ಹೇಳಲಾಗಿರುವ ಜಿನಗುಲಕುಂಟೆ ಅರಣ್ಯ ಪ್ರದೇಶವನ್ನು 2024ರ ಡಿಸೆಂಬರ್‍‌ 20ರಂದು ಬೆಳಿಗ್ಗೆ ಜಂಟಿ ಸರ್ವೆ ನಡೆಸಲು ಮುಂದಾಗಿತ್ತು. ಇದೇ ದಿನದಂದು ರಮೇಶ್‌ ಕುಮಾರ್‍‌ ಅವರೂ ಸಹ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಸೂಚಿಸಿತ್ತು.

 

 

ಕೋಲಾರ ವಿಭಾಗದ ಶ್ರೀನಿವಾಸಪುರ ವಲಯದ ಜಿನಗಲಕುಂಟೆ ಅರಣ್ಯ ಪ್ರದೇಶದ ಹೊಸ ಹುಡ್ಯ ಗ್ರಾಮದ ಸರ್ವೆ ನಂಬರ್ 1 ಮತ್ತು 2ರಲ್ಲಿ 61.39 ಎಕರೆ ಅರಣ್ಯ ಪ್ರದೇಶವು ಒತ್ತುವರಿಯಾಗಿದೆ. ಈ ಕುರಿತು ನ್ಯಾಯಾಲಯದಲ್ಲಿ ರಿಟ್‌ ಅರ್ಜಿ ಕೂಡ (ಸಂಖ್ಯೆ; 12996/2012) ದಾಖಲಾಗಿತ್ತು. ಈ ಕುರಿತು ಜಂಟಿ ಸರ್ವೆಯನ್ನು ಶೀಘ್ರವಾಗಿ ಕೈಗೆತ್ತಿಗೊಳ್ಳಬೇಕು ಎಂದು ಹೈಕೋರ್ಟ್‌ 2013ರ ಜುಲೈ 11ರಂದು ಆದೇಶ ಹೊರಡಿಸಿತ್ತು.

 

 

ಅಲ್ಲದೇ ಈ ವರದಿಯ ಅನುಸಾರ ಅರಣ್ಯ ಪ್ರದೇಶದ ಒತ್ತುವರಿ ಇದ್ದಲ್ಲಿ ನಿಯಮಾನುಸಾರ ಒತ್ತುವರಿ ತೆರವುಗೊಳಿಸಿ ಕೈಗೊಂಡದ ಕ್ರಮದ ಬಗ್ಗೆ ವರದಿ ಸಲ್ಲಿಸಬೇಕು ಎಂದು ಕೆಂದ್ರ ಸರ್ಕಾರವೂ ಸಹ ಸೂಚಿಸಿತ್ತು. ಆದರೆ ಜಂಟಿ ಸರ್ವೆ ಕಾರ್ಯಕ್ಕೆ ಚಾಲನೆ ದೊರೆತಿರಲಿಲ್ಲ. ಹೀಗಾಗಿ ಬೆಂಗಳೂರು ಪ್ರಾದೇಶಿಕ ಅರಣ್ಯ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಯವರು ಅತಿ ಜರೂರು ಎಂದು ನೆನಪೋಲೆ ಬರೆದಿತ್ತು.

 

 

ಕೋಲಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು 2024ರ ನವೆಂಬರ್‍‌ 6ರಂದು ಜಂಟಿ ಸರ್ವೆಗೆ ದಿನಾಂಕ ನಿಗದಿಪಡಿಸಿದ್ದರು. ಆದರೆ ತಾಂತ್ರಿಕ ಕಾರಣಗಳಿಂದ ಅದನ್ನು ಹಿಂಪಡೆದುಕೊಂಡಿತ್ತು. ಅಲ್ಲದೇ ಪ್ರಸ್ತಾಪಿತ ಪ್ರದೇಶದ ಜಂಟಿ ಮೋಜಣಿ ಕಾರ್ಯವನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಸಹ ವರದಿ ಮಾಡಿದ್ದರು.

 

ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ತುರ್ತಾಗಿ ವರದಿ ಸಲ್ಲಿಸಬೇಕು ಎಂದು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹಲವಾರು ಪತ್ರಗಳನ್ನು ಬರೆದಿತ್ತು.

 

ಅಲ್ಲದೇ ನಿಗದಿತ ಅವಧಿಯೊಳಗೆ ವರದಿ ಸಲ್ಲಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರವು ಸಹ ಅಸಮಾಧಾನ ಹೊರಹಾಕಿ 2024ರ ಡಿಸೆಂಬರ್‍‌ 6 ರಂದೇ ಪತ್ರ ಬರೆದಿತ್ತು.

 

 

ಅಲ್ಲದೇ ಡಿಸೆಂಬರ್‍‌ 12ರಂದೂ ಮತ್ತೊಂದು ಪತ್ರ ಬರೆದಿತ್ತು.

 

 

 

ಹೀಗಾಗಿ ಹೈಕೋರ್ಟ್‌ 2013ರಲ್ಲೇ ನೀಡಿರುವ ಆದೇಶದಂತೆ ಜಂಟಿ ಸರ್ವೆ ನಡೆಸಲು ಸೂಕ್ತ ದಿನಾಂಕ ನಿಗದಿಪಡಿಸಬೇಕು ಎಂದು ಪತ್ರದಲ್ಲಿ ಸೂಚಿಸಿತ್ತು.

 

ಅರಣ್ಯ ಒತ್ತುವರಿ ಬಗ್ಗೆ ಆರೋಪದ ಹಿನ್ನಲೆಯಲ್ಲಿ ರಮೇಶ್‌ ಕುಮಾರ್‌ ಅವರು ಸ್ವಾಧೀನದಲ್ಲಿದ್ದ ಜಮೀನನ್ನು ದುರಸ್ತಿ ಮಾಡಿಕೊಡುವಂತೆ ಕಂದಾಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಜಮೀನಿನ ಮಾಲಿಕತ್ವಕ್ಕಾಗಿ ದಾಖಲೆಗಳನ್ನು ಮಂಡಿಸಿದ್ದನ್ನು ಸ್ಮರಿಸಬಹುದು.

Hot this week

21 ಪ್ಯಾಕೇಜ್‌ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ; ಅಂಜುಂ ಪರ್ವೇಝ್ ಸಮಿತಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು; ಹಸಿ ತ್ಯಾಜ್ಯ, ಒಣ ತಾಜ್ಯ, ನೈರ್ಮಲ್ಯ ತ್ಯಾಜ್ಯ, ರಸ್ತೆ ಗುಡಿಸುವಿಕೆ,...

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...
Please Scan to make Your Contribution

Topics

21 ಪ್ಯಾಕೇಜ್‌ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ; ಅಂಜುಂ ಪರ್ವೇಝ್ ಸಮಿತಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು; ಹಸಿ ತ್ಯಾಜ್ಯ, ಒಣ ತಾಜ್ಯ, ನೈರ್ಮಲ್ಯ ತ್ಯಾಜ್ಯ, ರಸ್ತೆ ಗುಡಿಸುವಿಕೆ,...

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...

ಪ್ರಿಂಟರ್, ಸ್ಕ್ಯಾನರ್ ಕೂಡ ಲಭ್ಯವಿಲ್ಲ, ಇ-ಮೇಲ್‌ ಮಾಡಲೂ ಕಷ್ಟಸಾಧ್ಯ; ಸರ್ಕಾರದ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ

ಬೆಂಗಳೂರು; ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಿಗೆ ಅನುದಾನ ಹೊಂದಿಸಲು ಏದುಸಿರು ಬಿಡುತ್ತಿರುವ...

Related Articles

Popular Categories

error: Content is protected !!