Thursday | March 19, 2026 |

‘ಚಿಲುಮೆ’ ಹಗರಣ; ಕಡತಕ್ಕೆ ಸಿಗದ ಮುಕ್ತಿ, ಒಂದು ವರ್ಷದಿಂದ ಒಬ್ಬೇ ಒಬ್ಬ ಅಧಿಕಾರಿ ಲಾಗಿನ್‌ನಲ್ಲೇಕಿದೆ?

Support THE-FILE

spot_img

ಬೆಂಗಳೂರು;  ಚಿಲುಮೆ ಎಜುಕೇಷನಲ್‌ ಕಲ್ಚರಲ್‌ ಅಂಡ್‌ ರೂರಲ್‌ ಡೆವಲಪ್‌ಮೆಂಟ್‌ ಟ್ರಸ್ಟ್‌ ಅಕ್ರಮವಾಗಿ ಮತದಾರರಿಗೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕಡತವು ಕಳೆದ ಒಂದು ವರ್ಷದಿಂದಲೂ ಒಬ್ಬೇ ಒಬ್ಬ ಅಧಿಕಾರಿ ಲಾಗಿನ್‌ನಲ್ಲೇ ಇದೆ.

 

ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌ ಪಕ್ಷವು ಈ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡಿತ್ತು. ಇದಕ್ಕೆ ವೋಟರ್‍‌ ಗೇಟ್‌ ಎಂದು ಹೆಸರನ್ನೂ ಸಹ ನೀಡಿತ್ತು. ಆದರೀಗ ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಎರಡು ವರ್ಷಗಳಾದರೂ ಸಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಕಡತಕ್ಕೆ ಒಂದು ವರ್ಷವಾದರೂ ಮುಕ್ತಿ ನೀಡಿಲ್ಲ. ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಕಡತದ ಚಲನವಹಿ ಲಭ್ಯವಾಗಿದೆ.

 

ಈ ಪ್ರಕರಣವು ಬಹಿರಂಗವಾದ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಸಂಬಂಧ ನಗರಾಭಿವೃದ್ಧಿ ಇಲಾಖೆಯಲ್ಲಿ 2022ರ ಡಿಸೆಂಬರ್‍‌ 2ರಂದು ಕಡತ ತೆರೆದಿತ್ತು.

 

 

ಇಲಾಖೆಯ ವಿವಿಧ ಅಧಿಕಾರಿಗಳ ಲಾಗಿನ್‌ನಲ್ಲಿ ಈ ಕಡತವಿತ್ತು.

 

2023ರ ಜನವರಿ 18ರಂದು ಬಿಬಿಎಂಪಿ ವಿಭಾಗದ ಅಧಿಕಾರಿ ನಾಗರಾಜಯ್ಯ ಅವರ ಬಳಿ ಇತ್ತು.

 

ಸದ್ಯ ಈ ಕಡತವು 2024ರ ಫೆ.28ರಿಂದಲೂ ನಾಗರಾಜಯ್ಯ ಅವರ ಲಾಗಿನ್‌ನಲ್ಲೇ ಇದೆ. ಕಳೆದ ಒಂದು ವರ್ಷದಿಂದಲೂ ಅವರ ಲಾಗಿನ್‌ನಲ್ಲಿ ಪಾರ್ಕ್ ಮಾಡಿಟ್ಟಿರುವುದು ಗೊತ್ತಾಗಿದೆ.

 

 

ಈ ಹಗರಣದ ಬಗ್ಗೆ ಕಾಂಗ್ರೆಸ್‌ ಪಕ್ಷವು   ದೊಡ್ಡ ಮಟ್ಟದಲ್ಲಿ ಅಬ್ಬರಿಸಿತ್ತು.  ಇದೀಗ ತನ್ನದೇ ಆಡಳಿತದ ಅವಧಿಯಲ್ಲಿ ಇದಕ್ಕೆ ಸಂಬಂಧಿಸಿದ ಮಾಹಿತಿಯ ಕಡತವನ್ನು ಒದಗಿಸಲು ನಿರಾಕರಿಸಿತ್ತು.

 

ಈ ಟ್ರಸ್ಟ್‌ನೊಂದಿಗೆ ಭಾಗಿಯಾಗಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಹೇಳಲಾಗಿದ್ದ ಅಧಿಕಾರಿಗಳ ಪಟ್ಟಿಯನ್ನು ನಗರಾಭಿವೃದ್ದಿ ಇಲಾಖೆಯು ಸಿದ್ಧಪಡಿಸಿತ್ತು. ಕಂದಾಯ ಅಧಿಕಾರಿ ಕೆ ಚಂದ್ರಶೇಖರ್‍‌, ವಿಶೇಷ ಕರ್ತವ್ಯಾಧಿಕಾರಿ ವಿ ಬಿ ಭೀಮಾಶಂಕರ್, ಸುಹೇಲ್‌ ಅಹ್ಮದ್‌, ಉಪ ಕಂದಾಯ ಅಧಿಕಾರಿಗಳಾದ ಗುಲ್ತಾಜ್‌ ಫಾತಿಮಾ ಅವರ ವಿರುದ್ಧ ಜಂಟಿ ಇಲಾಖೆ ವಿಚಾರಣೆ ನಡೆಸಲು ಕಾರಣ ಕೇಳುವ ನೋಟೀಸ್‌ ಜಾರಿಗೊಳಿಸಿತ್ತು. ಅಲ್ಲದೇ ಅದರೊಂದಿಗೇ ಆರೋಪಿತ ಅಧಿಕಾರಿಗಳಿಗೆ ದೋಷಾರೋಪಣೆ ಪಟ್ಟಿಯನ್ನು ಜಾರಿ ಮಾಡಿತ್ತು.

 

ಚಿಲುಮೆ ‘ವೋಟರ್ ಗೇಟ್‌ ‘ಹಗರಣದಲ್ಲಿ ಬೊಬ್ಬೆ ಹೊಡೆದು ಈಗ ಮಾಹಿತಿ ನೀಡಲು ನಿರಾಕರಿಸಿದ ಕಾಂಗ್ರೆಸ್

 

ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯು 2024ರ ಫೆಬ್ರುವರಿಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರವನ್ನೂ ಬರೆದಿತ್ತು. ಈ ಪತ್ರವನ್ನಾಧರಿಸಿ ಇಲಾಖೆಯಲ್ಲಿ ತೆರೆದಿದ್ದ ಕಡತವು ಕಳೆದ ಒಂದು ವರ್ಷದಿಂದಲೂ ಒಂದೇ ಕಡೇ ಪಾರ್ಕ್‌ ಮಾಡಿಡಲಾಗಿದೆ.
ಇದೇ ಕಡತಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ 2025ರ ಜನವರಿ 16ರಂದು ಆರ್‍‌ಟಿಐ ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಿತ್ತು. ಈ ಕಡತಕ್ಕೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲು ಅವಕಾಶವಿಲ್ಲ ಎಂದು ನಗರಾಭಿವೃದ್ಧಿ ಇಲಾಖೆಯು 2025ರ ಜನವರಿ 22ರಂದು ಹಿಂಬರಹ ನೀಡಿತ್ತು.

 

 

 

ಹಿಂದಿನ ಬಿಜೆಪಿ ಸರ್ಕಾರದ ಕಡೇ ದಿನಗಳಲ್ಲಿ ಈ ಪ್ರಕರಣವು ಬಹಿರಂಗಗೊಂಡಿತ್ತು ಇದನ್ನು ಪ್ರಬಲ ರಾಜಕೀಯ ಅಸ್ತ್ರವನ್ನಾಗಿಸಿಕೊಂಡಿದ್ದ ಕಾಂಗ್ರೆಸ್‌ ಇದನ್ನು ವೋಟರ್‍‌ ಗೇಟ್‌ ಹಗರಣ ಎಂದು ಬೊಬ್ಬೆ ಹೊಡೆದಿತ್ತು. ಬಿಬಿಎಂಪಿಯಿಂದ ಬಿ ಎಲ್ ಓ ( ಬೂತ್ ಮಟ್ಟದ ಅಧಿಕಾರಿ) ಎಂದು ಗುರುತಿನ ಚೀಟಿ ಹಾಕಿಕೊಂಡು ಈ ಅಕ್ರಮ ಎಸೆಯಲಾಗಿದೆ. ಈ ಅಕ್ರಮದ ಹಿಂದೆ ಸಚಿವರು ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ ಎಂಬುದು ಕಾಂಗ್ರೆಸ್ ಆರೋಪಿಸಿತ್ತು.

 

ಅದೇ ರೀತಿ ರಾಜ್ಯ ಕಾಂಗ್ರೆಸ್ ನಾಯಕರು ಅಂದಿನ ಸಿಎಂ ಬೊಮ್ಮಾಯಿ ಸೇರಿದಂತೆ ಇತರರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷರಾಗಿದ್ದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಪ್ರಧಾನ ಕಾರ್ಯದರ್ಶಿ ವಿಜಯ್ ಮುಳುಗುಂದ್ ಅವರ ಜತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ಮತದಾರರ ಪಟ್ಟಿ ಅಕ್ರಮ ಸಂಬಂಧ ದೂರು ನೀಡಿದ್ದರು.

 

ಸಿದ್ದರಾಮಯ್ಯ ನೇತೃತ್ವದಲ್ಲಿ ದೂರು ನೀಡಿದ್ದ ಚಿತ್ರ

 

ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು/ ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ, ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ ಎಂದು ಅಂದು ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ ಮಾಡಿ ಪ್ರಶ್ನಿಸಿದ್ದರು.

 

 

ಹಾಗೆಯೇ ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ, ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿfಲಲವೇ, ಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಘ ಮತದಾರರ ಪಟ್ಟಿಯನ್ನು ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶ ಅರಿವು ಬಿಬಿಎಂಪಿಗೆ ಆಗಬೇಕಿತ್ತು ಎಂದೂ ಸಿದ್ದರಾಮಯ್ಯ ಅವರು ತಿವಿದಿದ್ದರು.

 

ಸಿದ್ದರಾಮಯ್ಯ ಅವರು ಇಷ್ಟಕ್ಕೇ ಸುಮ್ಮನಿರಲಿಲ್ಲ. ‘ಮತದಾರರ ಮಾಹಿತಿಯ ಕಳ್ಳತನ ಮತ್ತು ಒಂದು ನಿರ್ದಿಷ್ಟ ಸಮುದಾಯದ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಕಿತ್ತು ಹಾಕುವ ದುರುದ್ದೇಶದಿಂದಲೇ ರಾಜ್ಯ ಬಿಜೆಪಿ ಸರ್ಕಾರ ಮತದಾರರ ಪಟ್ಟಿ ಪರಿಷ್ಕರಣೆಯ ಕೆಲಸವನ್ನು ವಂಚಕ ಕಂಪನಿಗೆ ಕೊಟ್ಟಿದೆ. ಅಮೇರಿದಾದ ವಾಟರ್‍‌ಗೇಟ್‌ ಪ್ರಕರಣದಂತೆ ಇದು ವೋಟರ್‍‌ ಗೇಟ್ ಪ್ರಕರಣ. ಈ ಹಗರಣದಲ್ಲಿ ನೇರವಾಗಿ ಬಸವರಾಜ ಬೊಮ್ಮಾಯಿ ಶಾಮೀಲಾಗಿದ್ದಾರೆ. ಈ ಹಗರಣದಲ್ಲಿ ಬಡಪಾಯಿಗಳ ಮೇಲೆ ಮೊಕದ್ದಮೆ ದಾಖಲು ಮಾಡಿಕೊಂಡು ಬಂಧಿಸಿ ನೈಜ ಅಪರಾಧಿಗಳನ್ನು ರಕ್ಷಣೆ ಮಾಡಲಾಗುತ್ತಿದೆ,’ ಎಂದು ಹೂಂಕರಿಸಿದ್ದರು.

 

 

ಅಷ್ಟೇ ಅಲ್ಲ ಸಿದ್ದರಾಮಯ್ಯ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದರು. ‘ ಮತದಾರರ ಪಟ್ಟಿ ಪರಿಷ್ಕರಣೆಯ ಅಕ್ರಮದ ಬಗ್ಗೆ ಚುನಾವಣೆ ಆಯೋಗಕ್ಕೆ ದೂರು ನೀಡಿ ನ್ಯಾಯಾಂಗ ತನಿಖೆಗೆ ನೀವೇ ಒಪ್ಪಿಸಬಹುದು ಎಂದು ಮನವರಿಕೆ ಮಾಡಿಕೊಟ್ಟಿದ್ದೇವೆ. ಆಯೋಗ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಕೇಂದ್ರ ಚುನಾವಣೆ ಆಯೋಗ ಬಳಿ ನ್ಯಾಯಕ್ಕಾಗಿ ಮೊರೆ ಹೋಗುತ್ತೇವೆ.,’ ಎಂದೂ ಹೇಳಿದ್ದರು.

 

 

ಹಾಗೆಯೇ ಕರ್ನಾಟಕ ಕಾಂಗ್ರೆಸ್‌ ಕೂಡ ಟ್ವೀಟ್‌ ಮಾಡಿತ್ತು. ‘ ಚಿಲುಮೆ ಎಜುಕೇಷನ್‌ ಇನ್ಸಿಟಿಟ್ಯುಟ್‌ ಎಂಬ ಸಂಸ್ಥೆ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳ್ಳತನ ನಡೆದಿದೆ. ಈ ಅಕ್ರಮಕ್ಕೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರೇ ನೇರ ಹೊಣೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಅಕ್ರಮ ಈಗ ಚುನಾವಣೆ ಪ್ರಕ್ರಿಯೆಗೂ ವಿಸ್ತರಿಸಿದೆ,’ ಎಂದು ಟ್ವೀಟ್‌ ಮೂಲಕ ಆರೋಪಿಸಿತ್ತು.

 

 

‘ಸರ್ಕಾರಿ ನೌಕರರೆಂದು ಐಡೆಂಟಿಟಿ ಕಾರ್ಡ್ ಕೊಟ್ಟಿದ್ದಾರೆ. ಎಲೆಕ್ಷನ್ ಕಮೀಷನ್ ಮಾಡೋ ಕೆಲಸವನ್ನು ಬೇರೆ ಖಾಸಗಿಯವರಿಗೆ ಕೊಟ್ಟಿದ್ದಾರೆ. ತುಷಾರ್ ಗಿರಿನಾಥ್ ಸೀನಿಯರ್ ಐಎಎಸ್ ಅಧಿಕಾರಿ ಆಗಿದ್ದಾರೆ. ಈ ಕೆಲಸದಿಂದ ಅವರು ಗೌರವ ಕಳೆದುಕೊಳ್ಳುತ್ತಿದ್ದಾರೆ,’ ಎಂದು ಡಿ ಕೆ ಶಿವಕುಮಾರ್‍‌ ಹೇಳಿದ್ದರು.

 

ಹಾಗೆಯೇ ‘ಒಂದು ಜಡ್ಜ್​ಗೆ ಇರುವ ಅಥಾರಿಟಿ ಕಮಿಷನರ್​ಗೆ ಇರುತ್ತೆ. ಚಿಲುಮೆ ಅಂತ ಹಿಂದೆ ಒಂದು ಹೆಸರು ಇತ್ತು. ಈಗ ಬದಲಾವಣೆ ಮಾಡಿದ್ದಾರೆ. ನಾವು ಮಾಡಿದ್ದು ಗಂಭೀರ ಆರೋಪ ಅಲ್ಲ. ಆದರೆ, ಸತ್ಯ. ಚಿಲುಮೆ ಎಂಟರ್ ಪ್ರೈಸಸ್, ಡಿಎಪಿ ಹೊಂಬಾಳೆಯಿಂದ ಮತದಾರರ ಡೇಟಾ ಸಂಗ್ರಹ ಹಿನ್ನೆಲೆ ದೂರು ಸಲ್ಲಿಸಿದ್ದೇವೆ. ಮತದಾನದ ಹಕ್ಕನ್ನೇ ಕಿತ್ತುಕೊಳ್ಳುವ ದೊಡ್ಡ ಪ್ರಯತ್ನ ನಡೆದಿದೆ. 7-8 ಸಾವಿರ ಕಾರ್ಯಕರ್ತರು ಬಿಎಲ್ಓ ಐಡಿ ಕಾರ್ಡ್ ಇಟ್ಟುಕೊಂಡು ಕೆಲಸ ಮಾಡಿದ್ದಾರೆ. ಸಚಿವ ಅಶ್ವತ್ಥನಾರಾಯಣ ಬಾಳ ಒಳ್ಳೆ ಕೆಲಸ ಮಾಡ್ತಿದ್ದಾರೆ ಎಂದು ಹರಿಹಾಯ್ದಿದ್ದನ್ನು ಸ್ಮರಿಸಬಹುದು.

 

ಚಿಲುಮೆ ಶೈಕ್ಷಣಿಕ ಸಾಮಾಜಿಕ ಸಾಂಸ್ಕತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮಾಹಿತಿ ಕದ್ದ ಆರೋಪ ಪ್ರಕರಣ ಸಂಬಂಧ ಸಂಪೂರ್ಣ ತನಿಖೆ ನಡೆಸಲು ರಾಜ್ಯ ಚುನಾವಣೆ ಆಯೋಗ ತನಿಖಾಧಿಕಾರಿಯನ್ನು ನೇಮಿಸಿತ್ತು. ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮ್ಲನ್ ಬಿಸ್ವಾಸ್​ ಅವರನ್ನು ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ನೀಡಿ ಚುನಾವಣೆ ಆಯೋಗ ಆದೇಶ ಹೊರಡಿಸಿತ್ತು.

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!