Thursday | July 16, 2026 |

ಚಿಲುಮೆ ‘ವೋಟರ್ ಗೇಟ್‌ ‘ಹಗರಣದಲ್ಲಿ ಬೊಬ್ಬೆ ಹೊಡೆದು ಈಗ ಮಾಹಿತಿ ನೀಡಲು ನಿರಾಕರಿಸಿದ ಕಾಂಗ್ರೆಸ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತದಾರರ ಜಾಗೃತಿ ಮತ್ತು ಪರಿಷ್ಕರಣೆ ಹೆಸರಿನಲ್ಲಿ ಮತದಾರರಿಗೆ ಸಂಬಂಧಿಸಿದ ದತ್ತಾಂಶಗಳನ್ನು ಚಿಲುಮೆ ಎಜುಕೇಷನಲ್‌ ಕಲ್ಚರಲ್‌ ಅಂಡ್‌ ರೂರಲ್‌ ಡೆವಲಪ್‌ಮೆಂಟ್‌ ಟ್ರಸ್ಟ್‌ ಅಕ್ರಮವಾಗಿ ಸಂಗ್ರಹಿಸಿತ್ತು ಎಂಬ ಪ್ರಕರಣದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಬ್ಬರಿಸಿದ್ದ ಕಾಂಗ್ರೆಸ್‌ ಪಕ್ಷವು ಇದೀಗ ತನ್ನದೇ ಆಡಳಿತದ ಅವಧಿಯಲ್ಲಿ ಇದಕ್ಕೆ ಸಂಬಂಧಿಸಿದ ಮಾಹಿತಿಯ ಕಡತವನ್ನು ಒದಗಿಸಲು ನಿರಾಕರಿಸಿದೆ.

 

ಅಲ್ಲದೇ  ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದು 2 ವರ್ಷಗಳನ್ನು ಪೂರ್ಣಗೊಳಿಸಿದ್ದರೂ ಸಹ ಚಿಲುಮೆ ಹಗರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿಲ್ಲ.

 

ಚಿಲುಮೆ ಎಜುಕೇಷನಲ್‌ ಕಲ್ಚರಲ್ ಅಂಡ್‌ ರೂರಲ್‌ ಡೆವಲಪ್‌ಮೆಂಟ್‌ ಟ್ರಸ್ಟ್‌ ಸಂಸ್ಥೆಯೊಂದಿಗೆ ಭಾಗಿಯಾಗಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಅರೋಪಕ್ಕೆ ಬಿಬಿಎಂಪಿ ಅಧಿಕಾರಿಗಳು ಗುರಿಯಾಗಿದ್ದರು. ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಗರಾಭಿವೃದ್ದಿ ಇಲಾಖೆಯಲ್ಲಿ ಕಡತ ತೆರೆದಿತ್ತು.

 

ಈ ಟ್ರಸ್ಟ್‌ನೊಂದಿಗೆ ಭಾಗಿಯಾಗಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಹೇಳಲಾಗಿದ್ದ ಅಧಿಕಾರಿಗಳ ಪಟ್ಟಿಯನ್ನು ನಗರಾಭಿವೃದ್ದಿ ಇಲಾಖೆಯು ಸಿದ್ಧಪಡಿಸಿತ್ತು. ಕಂದಾಯ ಅಧಿಕಾರಿ ಕೆ ಚಂದ್ರಶೇಖರ್‍‌, ವಿಶೇಷ ಕರ್ತವ್ಯಾಧಿಕಾರಿ ವಿ ಬಿ ಭೀಮಾಶಂಕರ್, ಸುಹೇಲ್‌ ಅಹ್ಮದ್‌, ಉಪ ಕಂದಾಯ ಅಧಿಕಾರಿಗಳಾದ ಗುಲ್ತಾಜ್‌ ಫಾತಿಮಾ ಅವರ ವಿರುದ್ಧ ಜಂಟಿ ಇಲಾಖೆ ವಿಚಾರಣೆ ನಡೆಸಲು ಕಾರಣ ಕೇಳುವ ನೋಟೀಸ್‌ ಜಾರಿಗೊಳಿಸಿತ್ತು. ಅಲ್ಲದೇ ಅದರೊಂದಿಗೇ ಆರೋಪಿತ ಅಧಿಕಾರಿಗಳಿಗೆ ದೋಷಾರೋಪಣೆ ಪಟ್ಟಿಯನ್ನು ಜಾರಿ ಮಾಡಿತ್ತು.

 

 

ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯು 2024ರ ಫೆಬ್ರುವರಿಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರವನ್ನೂ ಬರೆದಿತ್ತು. ಈ ಪತ್ರವನ್ನಾಧರಿಸಿ ಇಲಾಖೆಯಲ್ಲಿ ತೆರೆದಿದ್ದ ಕಡತವು ಕಳೆದ ಒಂದು ವರ್ಷದಿಂದಲೂ ಒಂದೇ ಕಡೇ ಪಾರ್ಕ್‌ ಮಾಡಿಡಲಾಗಿದೆ.

 

ಇದೇ ಕಡತಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ 2025ರ ಜನವರಿ 16ರಂದು ಆರ್‍‌ಟಿಐ ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಿತ್ತು. ಈ ಕಡತಕ್ಕೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲು ಅವಕಾಶವಿಲ್ಲ ಎಂದು ನಗರಾಭಿವೃದ್ಧಿ ಇಲಾಖೆಯು 2025ರ ಜನವರಿ 22ರಂದು ಹಿಂಬರಹ ನೀಡಿದೆ.

 

ಹಿಂಬರಹದಲ್ಲೇನಿದೆ?

 

ಮಾಹಿತಿ ಕೋರಿರುವ ಕಡತ ಸಂಖ್ಯೆ ನಅಇ 207 ಬಿಬಿಎಸ್‌ 2022ರಲ್ಲಿ ಇಲಾಖೆ ವಿಚಾರಣೆ ಪ್ರಕ್ರಿಯೆಗೆ ಸಂಬಂಧಿಸಿದೆ. ಈ ಕಡತದಲ್ಲಿ ಅಧಿಕಾರಿ, ನೌಕರರ ವೈಯಕ್ತಿಕ ಮಾಹಿತಿ ಅಡಕವಾಗಿದೆ. ಹೀಗಾಗಿ ಈ ಮಾಹಿತಿಯು ವೈಯಕ್ತಿಕ ಮಾಹಿತಿ ವ್ಯಾಪ್ತಿಗೂ ಸಹ ಬರಲಿದೆ. ಹೀಗಾಗಿ 2013ರ ಆಗಸ್ಟ್‌ 14ರ ಪ್ರಕಾರ ಈ ಮಾಹಿತಿಯನ್ನು ನೀಡಲು ವಿನಾಯಿತಿ ಇದೆ ಎಂದು ಹಿಂಬರಹದಲ್ಲಿ ತಿಳಿಸಿದೆ.

 

ಹಾಗೆಯೇ ಈ ಮಾಹಿತಿಯನ್ನು ನೀಡಲು ಮಾಹಿತಿ ಹಕ್ಕು ಅಧಿನಿಯಮ 2005ರ ಪ್ರಕರಣ 8(1)(ಹೆಚ್‌)ರಂತೆ ವಿನಾಯಿತಿ ಇದೆ ಎಂದು ಹೇಳಿದೆ.

 

 

ಹಿಂದಿನ ಬಿಜೆಪಿ ಸರ್ಕಾರದ ಕಡೇ ದಿನಗಳಲ್ಲಿ ಈ ಪ್ರಕರಣವು ಬಹಿರಂಗಗೊಂಡಿತ್ತು ಇದನ್ನು ಪ್ರಬಲ ರಾಜಕೀಯ ಅಸ್ತ್ರವನ್ನಾಗಿಸಿಕೊಂಡಿದ್ದ ಕಾಂಗ್ರೆಸ್‌ ಇದನ್ನು ವೋಟರ್‍‌ ಗೇಟ್‌ ಹಗರಣ ಎಂದು ಬೊಬ್ಬೆ ಹೊಡೆದಿತ್ತು. ಬಿಬಿಎಂಪಿಯಿಂದ ಬಿ ಎಲ್ ಓ ( ಬೂತ್ ಮಟ್ಟದ ಅಧಿಕಾರಿ) ಎಂದು ಗುರುತಿನ ಚೀಟಿ ಹಾಕಿಕೊಂಡು ಈ ಅಕ್ರಮ ಎಸೆಯಲಾಗಿದೆ. ಈ ಅಕ್ರಮದ ಹಿಂದೆ ಸಚಿವರು ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ ಎಂಬುದು ಕಾಂಗ್ರೆಸ್ ಆರೋಪಿಸಿತ್ತು.

 

ಅದೇ ರೀತಿ ರಾಜ್ಯ ಕಾಂಗ್ರೆಸ್ ನಾಯಕರು ಅಂದಿನ ಸಿಎಂ ಬೊಮ್ಮಾಯಿ ಸೇರಿದಂತೆ ಇತರರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷರಾಗಿದ್ದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಪ್ರಧಾನ ಕಾರ್ಯದರ್ಶಿ ವಿಜಯ್ ಮುಳುಗುಂದ್ ಅವರ ಜತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ಮತದಾರರ ಪಟ್ಟಿ ಅಕ್ರಮ ಸಂಬಂಧ ದೂರು ನೀಡಿದ್ದರು.

 

ಸಿದ್ದರಾಮಯ್ಯ ನೇತೃತ್ವದಲ್ಲಿ ದೂರು ನೀಡಿದ್ದ ಚಿತ್ರ

 

ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು/ ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ, ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ ಎಂದು ಅಂದು ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ ಮಾಡಿ ಪ್ರಶ್ನಿಸಿದ್ದರು.

 

 

ಹಾಗೆಯೇ ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ, ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿfಲಲವೇ, ಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಘ ಮತದಾರರ ಪಟ್ಟಿಯನ್ನು ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶ ಅರಿವು ಬಿಬಿಎಂಪಿಗೆ ಆಗಬೇಕಿತ್ತು ಎಂದೂ ಸಿದ್ದರಾಮಯ್ಯ ಅವರು ತಿವಿದಿದ್ದರು.

 

ಸಿದ್ದರಾಮಯ್ಯ ಅವರು ಇಷ್ಟಕ್ಕೇ ಸುಮ್ಮನಿರಲಿಲ್ಲ. ‘ಮತದಾರರ ಮಾಹಿತಿಯ ಕಳ್ಳತನ ಮತ್ತು ಒಂದು ನಿರ್ದಿಷ್ಟ ಸಮುದಾಯದ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಕಿತ್ತು ಹಾಕುವ ದುರುದ್ದೇಶದಿಂದಲೇ ರಾಜ್ಯ ಬಿಜೆಪಿ ಸರ್ಕಾರ ಮತದಾರರ ಪಟ್ಟಿ ಪರಿಷ್ಕರಣೆಯ ಕೆಲಸವನ್ನು ವಂಚಕ ಕಂಪನಿಗೆ ಕೊಟ್ಟಿದೆ. ಅಮೇರಿಕಾದ ವಾಟರ್‍‌ಗೇಟ್‌ ಪ್ರಕರಣದಂತೆ ಇದು ವೋಟರ್‍‌ ಗೇಟ್ ಪ್ರಕರಣ. ಈ ಹಗರಣದಲ್ಲಿ ನೇರವಾಗಿ ಬಸವರಾಜ ಬೊಮ್ಮಾಯಿ ಶಾಮೀಲಾಗಿದ್ದಾರೆ. ಈ ಹಗರಣದಲ್ಲಿ ಬಡಪಾಯಿಗಳ ಮೇಲೆ ಮೊಕದ್ದಮೆ ದಾಖಲು ಮಾಡಿಕೊಂಡು ಬಂಧಿಸಿ ನೈಜ ಅಪರಾಧಿಗಳನ್ನು ರಕ್ಷಣೆ ಮಾಡಲಾಗುತ್ತಿದೆ,’ ಎಂದು ಹೂಂಕರಿಸಿದ್ದರು.

 

 

ಅಷ್ಟೇ ಅಲ್ಲ ಸಿದ್ದರಾಮಯ್ಯ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದರು. ‘ ಮತದಾರರ ಪಟ್ಟಿ ಪರಿಷ್ಕರಣೆಯ ಅಕ್ರಮದ ಬಗ್ಗೆ ಚುನಾವಣೆ ಆಯೋಗಕ್ಕೆ ದೂರು ನೀಡಿ ನ್ಯಾಯಾಂಗ ತನಿಖೆಗೆ ನೀವೇ ಒಪ್ಪಿಸಬಹುದು ಎಂದು ಮನವರಿಕೆ ಮಾಡಿಕೊಟ್ಟಿದ್ದೇವೆ. ಆಯೋಗ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಕೇಂದ್ರ ಚುನಾವಣೆ ಆಯೋಗ ಬಳಿ ನ್ಯಾಯಕ್ಕಾಗಿ ಮೊರೆ ಹೋಗುತ್ತೇವೆ.,’ ಎಂದೂ ಹೇಳಿದ್ದರು.

 

 

ಹಾಗೆಯೇ ಕರ್ನಾಟಕ ಕಾಂಗ್ರೆಸ್‌ ಕೂಡ ಟ್ವೀಟ್‌ ಮಾಡಿತ್ತು. ‘ ಚಿಲುಮೆ ಎಜುಕೇಷನ್‌ ಇನ್ಸಿಟಿಟ್ಯುಟ್‌ ಎಂಬ ಸಂಸ್ಥೆ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳ್ಳತನ ನಡೆದಿದೆ. ಈ ಅಕ್ರಮಕ್ಕೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರೇ ನೇರ ಹೊಣೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಅಕ್ರಮ ಈಗ ಚುನಾವಣೆ ಪ್ರಕ್ರಿಯೆಗೂ ವಿಸ್ತರಿಸಿದೆ,’ ಎಂದು ಟ್ವೀಟ್‌ ಮೂಲಕ ಆರೋಪಿಸಿತ್ತು.

 

 

‘ಸರ್ಕಾರಿ ನೌಕರರೆಂದು ಐಡೆಂಟಿಟಿ ಕಾರ್ಡ್ ಕೊಟ್ಟಿದ್ದಾರೆ. ಎಲೆಕ್ಷನ್ ಕಮೀಷನ್ ಮಾಡೋ ಕೆಲಸವನ್ನು ಬೇರೆ ಖಾಸಗಿಯವರಿಗೆ ಕೊಟ್ಟಿದ್ದಾರೆ. ತುಷಾರ್ ಗಿರಿನಾಥ್ ಸೀನಿಯರ್ ಐಎಎಸ್ ಅಧಿಕಾರಿ ಆಗಿದ್ದಾರೆ. ಈ ಕೆಲಸದಿಂದ ಅವರು ಗೌರವ ಕಳೆದುಕೊಳ್ಳುತ್ತಿದ್ದಾರೆ,’ ಎಂದು ಡಿ ಕೆ ಶಿವಕುಮಾರ್‍‌ ಹೇಳಿದ್ದರು.

 

ಹಾಗೆಯೇ ‘ಒಂದು ಜಡ್ಜ್​ಗೆ ಇರುವ ಅಥಾರಿಟಿ ಕಮಿಷನರ್​ಗೆ ಇರುತ್ತೆ. ಚಿಲುಮೆ ಅಂತ ಹಿಂದೆ ಒಂದು ಹೆಸರು ಇತ್ತು. ಈಗ ಬದಲಾವಣೆ ಮಾಡಿದ್ದಾರೆ. ನಾವು ಮಾಡಿದ್ದು ಗಂಭೀರ ಆರೋಪ ಅಲ್ಲ. ಆದರೆ, ಸತ್ಯ. ಚಿಲುಮೆ ಎಂಟರ್ ಪ್ರೈಸಸ್, ಡಿಎಪಿ ಹೊಂಬಾಳೆಯಿಂದ ಮತದಾರರ ಡೇಟಾ ಸಂಗ್ರಹ ಹಿನ್ನೆಲೆ ದೂರು ಸಲ್ಲಿಸಿದ್ದೇವೆ. ಮತದಾನದ ಹಕ್ಕನ್ನೇ ಕಿತ್ತುಕೊಳ್ಳುವ ದೊಡ್ಡ ಪ್ರಯತ್ನ ನಡೆದಿದೆ. 7-8 ಸಾವಿರ ಕಾರ್ಯಕರ್ತರು ಬಿಎಲ್ಓ ಐಡಿ ಕಾರ್ಡ್ ಇಟ್ಟುಕೊಂಡು ಕೆಲಸ ಮಾಡಿದ್ದಾರೆ. ಸಚಿವ ಅಶ್ವತ್ಥನಾರಾಯಣ ಬಾಳ ಒಳ್ಳೆ ಕೆಲಸ ಮಾಡ್ತಿದ್ದಾರೆ ಎಂದು ಹರಿಹಾಯ್ದಿದ್ದನ್ನು ಸ್ಮರಿಸಬಹುದು.

 

ಚಿಲುಮೆ ಶೈಕ್ಷಣಿಕ ಸಾಮಾಜಿಕ ಸಾಂಸ್ಕತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮಾಹಿತಿ ಕದ್ದ ಆರೋಪ ಪ್ರಕರಣ ಸಂಬಂಧ ಸಂಪೂರ್ಣ ತನಿಖೆ ನಡೆಸಲು ರಾಜ್ಯ ಚುನಾವಣೆ ಆಯೋಗ ತನಿಖಾಧಿಕಾರಿಯನ್ನು ನೇಮಿಸಿತ್ತು. ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮ್ಲನ್ ಬಿಸ್ವಾಸ್​ ಅವರನ್ನು ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ನೀಡಿ ಚುನಾವಣೆ ಆಯೋಗ ಆದೇಶ ಹೊರಡಿಸಿತ್ತು.

 

ಚಿಲುಮೆ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಆ ಸಂಸ್ಥೆಯ ಕೆ.ಎಂ.ಲೋಕೇಶ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!