ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾಗಿ ಆರ್ಥಿಕ ನೆರವು ನೀಡುವ ಉದ್ದೇಶ ಹೊಂದಿರುವ ವಿದ್ಯಾಸಿರಿ ಯೋಜನೆಗೆ ಹಂಚಿಕೆಯಾಗಿದ್ದ ಒಟ್ಟು 24.99 ಕೋಟಿ ರು.ನಲ್ಲಿ 2025ರ ಫೆ.12ರ ಅಂತ್ಯಕ್ಕೆ 8.62 ಕೋಟಿಯಷ್ಟೇ ಬಿಡುಗಡೆಯಾಗಿತ್ತು. ವಿಶೇಷವೆಂದರೇ 2024-25ನೇ ಸಾಲಿನ ಆಯವ್ಯಯದಲ್ಲಿ ವಿದ್ಯಾಸಿರಿಗೆ ಹಂಚಿಕೆಯಾಗಿದ್ದ ಅನುದಾನವನ್ನು ಡಿಸೆಂಬರ್ 2ರವರೆಗೆ ಖರ್ಚು ಮಾಡದೇ ಹಾಗೇ ಇಟ್ಟಿತ್ತು.
2024-25ರ ಆಯವ್ಯಯದಲ್ಲಿ ಒದಗಿಸಿದ್ದ 2,101.20 ಕೋಟಿ ರು. ಪೈಕಿ ಅಕ್ಟೋಬರ್ ಅಂತ್ಯಕ್ಕೆ ಕೇವಲ 421.60 ಕೋಟಿಯಷ್ಟೇ ಬಿಡುಗಡೆಯಾಗಿತ್ತು. ಅಲ್ಲದೇ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳಿಗೆ ಆಯವ್ಯಯದಲ್ಲಿ ಅನುದಾನ ಒದಗಿಸಿದೆಯಾದರೂ ಅತ್ಯಂತ ಕನಿಷ್ಠ ಪ್ರಮಾಣದಲ್ಲಿ ಬಿಡುಗಡೆ ಮಾಡಿತ್ತು. ಇದರ ನಡುವೆಯೂ ಬಿಡುಗಡೆಯಾಗಿದ್ದ ಅನುದಾನವನ್ನೂ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡುವುದರಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ತೀವ್ರ ಹಿನ್ನಡೆ ಸಾಧಿಸಿದೆ.
2024-25ನೇ ಸಾಲಿನ ಆರ್ಥಿಕ ವರ್ಷ ಅಂತ್ಯವು ಪೂರ್ಣಗೊಳ್ಳುತ್ತಿದ್ದರೂ ಸಹ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಬಹುಕೋಟಿ ಅನುದಾನವನ್ನು ಖರ್ಚು ಮಾಡಿಲ್ಲ. ಇದರಿಂದಾಗಿ ಶೈಕ್ಷಣಿಕ ಯೋಜನೆಗಳೂ ಸೇರಿದಂತೆ ಹಲವು ಯೋಜನೆಗಳಿಂದ ಫಲಾನುಭವಿಗಳನ್ನು ವಂಚಿಸಿದಂತಾಗಿದೆ.
ಈ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹಲವು ಬಾರಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರೂ ಸಹ ವಿದ್ಯಾಸಿರಿ ಯೋಜನೆಯಡಿಯಲ್ಲಿನ ಅನುದಾನ ಬಳಕೆ ಮಾಡುವಲ್ಲಿ ಇಲಾಖೆಯು ಹಿನ್ನಡೆ ಹೊಂದಿರುವುದು ಕಂಡು ಬಂದಿದೆ.
ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್’ಗೆ ದಾಖಲೆಗಳು ಮತ್ತು ಅಂಕಿ ಅಂಶಗಳು ಲಭ್ಯವಾಗಿವೆ.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಉದ್ದೇಶದ ವಿದ್ಯಾಸಿರಿ ಯೋಜನೆಗೆ 24,99,00,000 ರು ಹಂಚಿಕೆಯಾಗಿತ್ತು. ಈ ಪೈಕಿ 2024ರ ಡಿಸೆಂಬರ್ 2ರ ಅಂತ್ಯಕ್ಕೆ 18,74,25,000 ರು ಅನುದಾನ ಸ್ವೀಕೃತವಾಗಿತ್ತು. ಬಿಡುಗಡೆಯಾಗಿದ್ದ ಈ ಅನುದಾನದ ಪೈಕಿ ನಯಾ ಪೈಸೆಯನ್ನೂ ಇಲಾಖೆಯು ಖರ್ಚು ಮಾಡಿಲ್ಲ. ಬದಲಿಗೆ ತನ್ನ ಬಳಿಯೇ ಇಟ್ಟುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಅದೇ ರೀತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಉದ್ದೇಶದಿಂದ 17,15,00,000 ರು.ಗಳ ಅನುದಾನ ಹಂಚಿಕೆಯಾಗಿತ್ತು. ಇದರಲ್ಲಿ 12,86,25,000 ರು ಬಿಡುಗಡೆಯಾಗಿತ್ತು. 2024ರ ಡಿಸೆಂಬರ್ 2ರ ಅಂತ್ಯಕ್ಕೆ ಇದರಲ್ಲಿ 6,31,31,287 ರು ಮಾತ್ರ ಖರ್ಚು ಮಾಡಿದೆ. ಬಿಡುಗಡೆಯಾಗಿದ್ದ ಅನುದಾನದ ಪೈಕಿ ಅರ್ಧಕ್ಕರ್ಧ ಮೊತ್ತವನ್ನು ಖರ್ಚು ಮಾಡದೇ ಹಾಗೇ ಇಟ್ಟುಕೊಂಡಿತ್ತು. ಬಿಡುಗಡೆಯಾಗಿದ್ದ ಅನುದಾನದಲ್ಲಿ ಶೇ.48ರಷ್ಟೇ ಪ್ರಗತಿ ಸಾಧಿಸಿತ್ತು.
ಒಟ್ಟಾರೆಯಾಗಿ ಅಲ್ಪಸಂಖ್ಯಾತರ ಸಮುದಾಯ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ 100 ಕೋಟಿ ರು. ಅನುದಾನ ನೀಡಿದ್ದರೂ ಸಹ ಇದರಲ್ಲಿ ಇನ್ನೂ 46.00 ಕೋಟ ರು.ಗಳನ್ನು ಖರ್ಚು ಮಾಡದೇ ಹಾಗೇ ಇಟ್ಟುಕೊಂಡಿತ್ತು.
24.99 ಕೋಟಿ ರು ಪೈಕಿ 2025ರ ಫೆಬ್ರುವರಿ 12ರ ಅಂತ್ಯಕ್ಕೆ 8,62,95,000 ರು.ಗಳನ್ನು ಬಿಡುಗಡೆ ಮಾಡಿತ್ತು. ಬಿಡುಗಡೆ ಮಾಡಿದ್ದ ಹಣವನ್ನು ಖರ್ಚು ಮಾಡಿದೆ ಎಂದು ಹೇಳಿರುವ ಇಲಾಖೆಯು ಇನ್ನೂ 16,36,05,000 ರು.ಗಳನ್ನು ತನ್ನ ಬಳಿಯೇ ಇಟ್ಟುಕೊಂಡಿದೆ.
ಈ ಕುರಿತು ‘ದಿ ಫೈಲ್’ ವರದಿ ಪ್ರಕಟಿಸಿದ ನಂತರ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಈಗಾಗಲೇ 6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ 180 ಕೋಟಿ ರು ವರ್ಗಾವಣೆ ಮಾಡಲಾಗಿದೆ. 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ರು ಅನುದಾನ ಅಗತ್ಯ ಇರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವಿದ್ಯಾ ಸಿರಿ ಯೋಜನೆಯಡಿಯಲ್ಲಿ ಜನವರಿ ಅಂತ್ಯದವರೆಗೆ ಹಾಸ್ಟೆಲ್‌ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದ್ದು ಹಾಸ್ಟೆಲ್‌ನಲ್ಲಿ ಪ್ರವೇಶ ಸಿಗದ 5,753 ವಿದ್ಯಾರ್ಥಿಗಳಿಗೆ ಮಾಸಿಕ 1,500 ರು. ನಂತೆ ಹತ್ತು ತಿಂಗಳ ಮೊತ್ತ 15 ಸಾವಿರ ರು ವರ್ಗಾವಣೆ ಮಾಡಲಾಗಿದೆ. ಅದಕ್ಕಾಗಿ 8.63 ಕೋಟಿ ರು ವೆಚ್ಚ ಮಾಡಲಾಗಿದೆ ಎಂದು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಇನ್ನೂ 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದೆ. ಅದು ಸರಿ ಹೋದ ನಂತರ ಅವರಿಗೂ ಹಣ ವರ್ಗಾವಣೆ ಆಗಲಿದೆ. ಶೇ. 100 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದಂತಾಗಲಿದೆ ಎಂದಿದ್ದಾರೆ.
2024-25ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಒಟ್ಟಾರೆ 3,059.84 ಕೋಟಿ ರು ಅನುದಾನ ಹಂಚಿಕೆಯಾಗಿತ್ತು. ಡಿಸೆಂಬರ್ ಅಂತ್ಯಕ್ಕೆ ಒಟ್ಟಾರೆ 1,505.72 ಕೋಟಿ ರು. ಬಿಡುಗಡೆಯಾಗಿತ್ತು. ಇದರಲ್ಲಿ 1,276.29 ಕೋಟಿ ರು ವೆಚ್ಚವಾಗಿತ್ತು. ಒಟ್ಟು ಅನುದಾನದಲ್ಲಿ ಶೇ.41.71ರಷ್ಟೇ ವೆಚ್ಚವಾಗಿತ್ತು ಎಂಬುದು ಕೆಡಿಪಿ ಸಭೆಗೆ ಮಂಡಿಸಿದ್ದ ಅಂಕಿ ಅಂಶದಿಂದ ತಿಳಿದು ಬಂದಿದೆ.
2023ರ ನವೆಂಬರ್ 18ರಂದು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಇಲಾಖಾ ಮುಖ್ಯಸ್ಥರು ಆಯವ್ಯಯ ವಾಸ್ತವಿಕ ಬಿಡುಗಡೆ, ವೆಚ್ಚದ ವಿವರಗಳನ್ನು ಮುಂದಿರಿಸಿದ್ದರು.
ಡಿಸೆಂಬರ್ ಅಂತ್ಯಕ್ಕೆ ಶೇ.57.34ರಷ್ಟು ಮಾತ್ರ ವೆಚ್ಚ, ಕಳೆದ ಸಾಲಿಗೆ ಹೋಲಿಸಿದರೆ ಕೇವಲ ಶೇ.2.3ರಷ್ಟೇ ಪ್ರಗತಿ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನದ ಪೈಕಿ ಬಿಡಿಗಾಸನ್ನೂ ಒದಗಿಸಿಲ್ಲ. ಇಲಾಖಾವಾರು ಫಲಾನುಭವಿ ಆಧರಿತ ಕಾರ್ಯಕ್ರಮಗಳಲ್ಲೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಅತ್ಯಂತ ಕನಿಷ್ಠ ಪ್ರಮಾಣದ ಅನುದಾನ ಬಿಡುಗಡೆಯಾಗಿತ್ತು.
ಆಯವ್ಯಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಒಟ್ಟಾರೆ 2,101.20 ಕೋಟಿ ರು. ಅನುದಾನ ಒದಗಿಸಿದೆ. ಈ ಪೈಕಿ ಅಕ್ಟೋಬರ್ ಅಂತ್ಯಕ್ಕೆ 421.06 ಕೋಟಿಯಷ್ಟೇ ಬಿಡುಗಡೆಯಾಗಿದೆ. ಇದು ಒಟ್ಟು ಅನುದಾನಕ್ಕೆ ಶೇ.20ರಷ್ಟು ಮಾತ್ರ ಬಿಡುಗಡೆಯಾದಂತಾಗಿದೆ. ಇದರಲ್ಲಿ 303.58 ಕೋಟಿ ರು. ಖರ್ಚಾಗಿತ್ತು.
ಕೇಂದ್ರ ಪುರಸ್ಕೃತ ಯೋಜನೆಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ರಾಜ್ಯ ಸರ್ಕಾರವು 83.00 ಕೋಟಿ ರು.ಗಳನ್ನು ಆಯವ್ಯಯದಲ್ಲಿ ಅನುದಾನ ಒದಗಿಸಿಕೊಂಡಿದೆ. ಕೇಂದ್ರ ಸರ್ಕಾರವು 100 ಕೋಟಿ ರು. ಒದಗಿಸಿದೆ. ಒಟ್ಟಾರೆ 183 ಕೋಟಿ ರು. ಅನುದಾನವಿದ್ದರೂ ಅಕ್ಟೋಬರ್ ಅಂತ್ಯಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರವು ಬಿಡಿಗಾಸೂ ಬಿಡುಗಡೆ ಮಾಡಿರಲಿಲ್ಲ.
ಅಲ್ಪಸಂಖ್ಯಾತರಿಗೆ ಅನುದಾನ; 2,101.20 ಕೋಟಿ ರು.ನಲ್ಲಿ ಬಿಡುಗಡೆ ಮಾಡಿದ್ದು ಕೇವಲ 421.60 ಕೋಟಿ
ಅದೇ ರೀತಿ ಇದೇ ಇಲಾಖೆಗೆ ಸಂಬಂಧಿಸಿದ ಪ್ರಧಾನ ಮಂತ್ರಿ ಜನವಿಕಾಸ ಕಾರ್ಯಕ್ರಮಕ್ಕೂ ರಾಜ್ಯದಿಂದ 83 ಕೋಟಿ ರು., ಕೇಂದ್ರದಿಂದಲೂ 100 ಕೋಟಿ ರು. ಅನುದಾನ ಒದಗಿಸಿತ್ತು. ಅಕ್ಟೋಬರ್ ಅಂತ್ಯಕ್ಕೆ ನಯಾಪೈಸೆಯನ್ನೂ ನೀಡಿರಲಿಲ್ಲ.
ಇಲಾಖಾವಾರು ಫಲಾನುಭವಿ ಆಧರಿತ ಯೋಜನೆಗಳಲ್ಲಿಯೂ ಇದೇ ಸ್ಥಿತಿ ಇದೆ. ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗಾಗಿ ಆಯವ್ಯಯದಲ್ಲಿ 160 ಕೋಟಿ ರು. ಅನುದಾನ ಒದಗಿಸಿದೆ. ಅಕ್ಟೋಬರ್ ಅಂತ್ಯಕ್ಕೆ ಕೇವಲ 2.29 ಕೋಟಿ ರು ಮಾತ್ರ ಬಿಡುಗಡೆ ಮಾಡಿದೆ. ಇದರಲ್ಲಿ 0.10 ಕೋಟಿ ರು. ಮಾತ್ರ ವೆಚ್ಚವಾಗಿತ್ತು.
ಹಿಂದುಳಿದ ವರ್ಗದ 39,332 ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ದೊರೆಯದ ಪ್ರವೇಶಾತಿ
ಇದೇ ಇಲಾಖೆ ವ್ಯಾಪ್ತಿಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗೆಂದು 110 ಕೋಟಿ ರು.ಗಳನ್ನು ಆಯವ್ಯಯದಲ್ಲಿ ಒದಗಿಸಿಕೊಂಡಿದೆಯಾದರೂ ಅಕ್ಟೋಬರ್ ಅಂತ್ಯಕ್ಕೆ ಕೇವಲ 1.00 ಕೋಟಿ ರು ಮಾತ್ರ ಬಿಡುಗಡೆ ಮಾಡಿತ್ತು.
ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ, ವರ್ಷದಿಂದಲೂ ಬಾಕಿ;ಬಡಮಕ್ಕಳ ಶಿಷ್ಯ ವೇತನಕ್ಕೂ ಹಣವಿಲ್ಲವೇ?
ಅಲ್ಪಸಂಖ್ಯಾತರ ಸಮುದಾಯದ ಎಂ ಫಿಲ್, ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ಸಹಾಯ ಧನ ಒದಗಿಸಲು 6.0 ಕೋಟಿ ರು. ಆಯವ್ಯಯದಲ್ಲಿ ಒದಗಿಸಿಕೊಂಡಿತ್ತು. ಅಕ್ಟೋಬರ್ ಅಂತ್ಯಕ್ಕೆ 2.33 ಕೋಟಿ ರ. ಮಾತ್ರ ವೆಚ್ಚವಾಗಿತ್ತು. ಶುಲ್ಕ ಮರು ಪಾವತಿಗೆ ಸಂಬಂಧಿಸಿದಂತೆ 25 00 ಕೋಟಿ ರು. ಆಯವ್ಯಯದಲ್ಲಿ ಒದಗಿಸಿಕೊಂಡಿತ್ತು. ಆದರೂ ಅಕ್ಟೋಬರ್ ಅಂತ್ಯಕ್ಕೆ ಒಂದೇ ಒಂದು ಪೈಸೆಯನ್ನೂ ಕೊಟ್ಟಿರಲಿಲ್ಲ. 18,000 ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡಲು ವಾರ್ಷಿಕ ಗುರಿ ನೀಡಲಾಗಿತ್ತು. 6 ತಿಂಗಳವರೆಗೂ ಬಿಡಿಗಾಸನ್ನೂ ನೀಡಿರಲಿಲ್ಲ. ಹೀಗಾಗಿ ಇಷ್ಟೂ ಸಂಖ್ಯೆಯ ವಿದ್ಯಾರ್ಥಿಗಳ ಶುಲ್ಕ ಮರುಪಾವತಿಯಾಗಿರಲಿಲ್ಲ.
ಕೆಡಿಪಿ ಪ್ರಕಾರ ಶೇ.35.41ರಷ್ಟೇ ಪ್ರಗತಿ, ಸಿಎಂ ಪ್ರಕಾರ ಶೇ.46ರಷ್ಟು ವೆಚ್ಚ; ವಾಸ್ತವ ಮರೆಮಾಚಲಾಗಿದೆಯೇ?
ಇನ್ನು ಮೌಲಾನಾ ಆಜಾದ್ ಶಾಲೆ ಕಾಲೇಜು ನಿರ್ವಹಣೆ ಮತ್ತು ನೂತನ ಹಾಸ್ಟೆಲ್‌ಗಳಿಗೆಂದು 68.29 ಕೋಟಿ ರು. ಒದಗಿಸಿದೆ. ಇದರಲ್ಲಿ 43.55 ಕೋಟಿ ರು.ಬಿಡುಗಡೆ ಮಾಡಿತ್ತು. ಇದರಲ್ಲಿ 35.38 ಕೋಟಿ ರು. ವೆಚ್ಚವಾಗಿತ್ತು. ವಿದ್ಯಾರ್ಥಿನಿಲಯಗಳು ಮತ್ತು ವಸತಿ ಶಾಲೆಗಳ ನಿರ್ವಹಣೆಗೆ 347.89 ಕೋಟಿ ರು. ಅನುದಾನ ಲಭ್ಯವಾಗಿಸಿಕೊಂಡಿತ್ತು. ಇದರಲ್ಲಿ ಅಕ್ಟೋಬರ್ ಅಂತ್ಯಕ್ಕೆ 181.42 ಕೋಟಿ ರು. ಮಾತ್ರ ಬಿಡುಗಡೆ ಮಾಡಿತ್ತು. ಈ ಪೈಕಿ 123.12 ಕೋಟಿ ರು ವೆಚ್ಚ ಮಾಡಿತ್ತು.
7 ಇಲಾಖೆಗಳಲ್ಲಿ ವೆಚ್ಚವಾಗದ 29,884 ಕೋಟಿ; ಚುರುಕಾಗದೇ ತೆವಳುತ್ತಿದೆಯೇ ಆಡಳಿತ ಯಂತ್ರ?
ಶ್ರಮ ಶಕ್ತಿ ಸಾಲ ಯೋಜನೆ (ವೈಯಕ್ತಿಕ) ಯಡಿ 1,000 ವ್ಯಕ್ತಿಗಳಿಗೆ ಆರ್ಥಿಕ ನೆರವು ನೀಡಲು 5.00 ಕೋಟಿ ರು. ನೀಡಿದೆ. ಆದರೆ ಬಿಡಿಗಾಸೂ ನೀಡಿಲ್ಲ. ಆದರೆ 11.01 ಕೋಟಿ ವೆಚ್ಚವಾಗಿದೆ ಎಂದು ತೋರಿಸಿದ್ದನ್ನು ಸ್ಮರಿಸಬಹುದು.