Thursday | May 14, 2026 |

ಆರ್‍‌ಎಸ್‌ಎಸ್‌, ಯಾದವ ಸ್ಮೃತಿ, ರಾಷ್ಟ್ರೋತ್ಥಾನ ಕಟ್ಟಡಗಳಿಗೆ ಪೊಲೀಸ್‌ ರಕ್ಷಣೆ; ಸದನಕ್ಕೆ ಉತ್ತರಿಸಿದ ಸರ್ಕಾರ

ಬೆಂಗಳೂರು; ರಾಷ್ಟ್ರೋತ್ಥಾನ ಮತ್ತು ಯಾದವ ಸ್ಮೃತಿ ಕಟ್ಟಡಗಳ ಭದ್ರತೆ ದೃಷ್ಟಿಯಿಂದ ಬೆಂಗಳೂರು ನಗರದ ಸಿಎಆರ್ (ಕೇಂದ್ರ) ಘಟಕದಿಂದ ರಕ್ಷಣೆ ಒದಗಿಸಲಾಗಿದೆ ಎಂಬುದನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ಒಪ್ಪಿಕೊಂಡಿದೆ.

 

ಆರ್‍‌ಎಸ್‌ಎಸ್‌ ಮತ್ತು ಅದರ ಸಂಘ ಸಂಸ್ಥೆಗಳ ವಿರುದ್ಧ ಸದಾ ಕಿಡಿ ಕಾರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು,  ರಾಷ್ಟ್ರೋತ್ಥಾನ ಮತ್ತು ಯಾದವ ಸ್ಮೃತಿ ಕಟ್ಟಡಗಳ ಭದ್ರತೆ ದೃಷ್ಟಿಯಿಇಂದ ಬೆಂಗಳೂರು ನಗರದ ಸಿಎಆರ್ (ಕೇಂದ್ರ) ಘಟಕದಿಂದ ರಕ್ಷಣೆ ಒದಗಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಈ ಕುರಿತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ  ಗೃಹ ಸಚಿವ ಡಾ ಜಿ ಪರಮೇಶ್ವರ್‍‌ ಅವರು ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.

 

ಅಲ್ಲದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್‍‌ಎಸ್‌ಎಸ್‌) ನೋಂದಾಯಿತವಲ್ಲದ ಸಂಸ್ಥೆಯಾಗಿರದೆ ನೂರಾರು ಸಭೆ ಸಮಾರಂಭ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಸಹ  ಸರ್ಕಾರದ ಗಮನದಲ್ಲಿದೆ ಎಂದು ಸಚಿವ ಡಾ ಜಿ ಪರಮೇಶ್ವರ್‍‌ ಅವರು ಉತ್ತರದಲ್ಲಿ ಮಾಹಿತಿ ನೀಡಿರುವುದು ತಿಳಿದು ಬಂದಿದೆ.

 

ಪ್ರಶ್ನೆ-ಉತ್ತರವೇನು?

 

ಪ್ರಶ್ನೆ; ರಾಜ್ಯದಲ್ಲಿ ಸಂಘ ಸಂಸ್ಥೆಗಳಿಂದ ನಡೆಸುವ ಸಭೆ, ಸಮಾರಂಭ ಕಾರ್ಯಕ್ರಮಮೆರವಣಿಗೆಗಳಿಗೆ ಪೊಲೀಸ್‌ ಅನುಮತಿ ಪಡೆಯುತ್ತಿಲ್ಲ ಎಂಬ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳು ಸರ್ಕಾರದ ಗಮನಕ್ಕೆ ಬಂದಿವೆಯೇ, ಬಂದಿದ್ದರೇ ಸರ್ಕಾರ ಕೈಗೊಂಡ ಕ್ರಮಗಳೇನು?

 

ಉತ್ತರ; ಸಂಘ ಸಂಸ್ಥೆಗಳು ನಡೆಸುವ ಬಹಿರಂಗ ಸಭೆ, ಸಮಾರಂಭ, ಕಾರ್ಯಕ್ರಮ, ಮೆರವಣೀಗಳೀಗೆ ಪೊಲೀಸ್‌ ಅನುಮತಿಯೊಂದಿಗೆ ನಡೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಒಂದು ವೇಳೆ ಪೊಲೀಸ್‌ ಅನುಮತಿ ಪಡೆಯದೇ ಸಭೆ, ಸಮಾರಂಭ ನಡೆಸಿದ್ದಲ್ಲಿ ಅಂತಹವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ.

 

 

 

ಪ್ರಶ್ನೆ; ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್‍‌ಎಸ್‌ಎಸ್‌) ನೋಂದಾಯಿತವಲ್ಲದ ಸಂಸ್ಥೆಯಾಗಿರದೆ ನೂರಾರು ಸಭೆ ಸಮಾರಂಭ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?

 

ಉತ್ತರ; ಹೌದು

 

ಪ್ರಶ್ನೆ; ಆರ್‍‌ಎಸ್‌ಎಸ್‌ನ ಈ ಕಾರ್ಯಕ್ರಮಗಳಿಗೆ ಅನುಮತಿ ಕೇಳದೇ ಮಾಹಿತಿಗಾಗಿ  ಎಂದು ಕೊಟ್ಟ ಪತ್ರದ ಆಧಾರದ ಮೇಲೆ ಪೊಲೀಸ್‌ ಅಧಿಕಾರಿಗಳು ಮೈಕ್‌ ಅನುಮತಿಯಾಗಲಿ ಕೊಡೆದೆ ಭದ್ರತೆ ಕೊಡುತ್ತಿದ್ದಾರೆಂಬ ಬಗ್ಗೆ ಸರ್ಕಾರಕ್ಕೆ ಅರಿವಿದೆಯೇ?

 

ಉತ್ತರ; ಅನುಮತಿ ಪಡೆದ ನಂತರ ಅಗತ್ಯವಿದ್ದಲ್ಲಿ ಭದ್ರತೆ ಒದಗಿಸಲಾಗುವುದು

 

ಪ್ರಶ್ನೆ; ಈ ಕಾರ್ಯಕ್ರಮಗಳಿಗೆ ಅನುಮತಿಗಾಗಿ ಮನವಿ ಕೊಟ್ಟರೂ ಪೊಲೀಸ್‌ ಅದಿಆರಿಗಳು ಆರ್‍‌ಎಸ್‌ಎಸ್‌ ನವರಿಗೆ ಪರೋಕ್ಷವಾಗಿ ಸಹಕರಿಸುವಂತೆ ಅನುಮತಿ ಕೊಡದೇ ಪೊಲೀಸ್‌ ಭದ್ರತೆ ಒದಗಿಸುತ್ತಿದ್ದಾರೆಂಬ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಅದ ವಿಷಯಗಳು ಗುಪ್ತಚರ ವಿಭಾಗದಿಂದ ಸರ್ಕಾರಕ್ಕೆ ಸಿಕ್ಕಿದೆಯೇ? ಸಿಕ್ಕಿದ್ದರೇ ಸರ್ಕಾರ ಕೈಗೊಂಡ ಕ್ರಮಗಳೇನು?

 

ಪ್ರಶ್ನೆ; ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‍‌ಎಸ್‌ಎಸ್‌) ನೋಂದಾಯಿತವಲ್ಲದ ಹಾಗೂ ಸ್ವಂತ ಅಥವಾ ಬಾಡಿಗೆ ಕಚೇರಿಗಳು ಇಲ್ಲವೆಂಬ ಮಾಹಿತಿ ಇದ್ದು, ಸರ್ಕಾರದಿಂದ ಕೇಶವಕೃಪ , ರಾಷ್ಟ್ರೋತ್ಥಾನ ಮತ್ತು ಯಾದವ ಸ್ಮೃತಿ ಕಟ್ಟಡಗಳಿಗೆ ಪೊಲೀಸ್‌ ರಕ್ಷಣೆ ಕೊಟ್ಟಿರುವುದು ನಿಜವೇ? ಈ ಕಟ್ಟಡಗಳಿಗೆ ಪೊಲೀಸ್‌ ರಕ್ಷಣೆ ಕೊಟ್ಟಿರುವುದು ಉದ್ದೇಶವೇನು?

 

 

ಉತ್ತರ; ರಾಷ್ಟ್ರೋತ್ಥಾನ ಮತ್ತು ಯಾದವ ಸ್ಮೃತಿ ಕಟ್ಟಡಗಳ ಭದ್ರತೆ ದೃಷ್ಟಿಯಿಂದ ಬೆಂಗಳೂರು ನಗರದ ಸಿಎಆರ್ (ಕೇಂದ್ರ) ಘಟಕದಿಂದ ರಕ್ಷಣೆ ಒದಗಿಸಲಾಗಿರುತ್ತದೆ.

 

ವಿಶೇಷವೆಂದರೇ ಗೃಹ ಸಚಿವ ಡಾ ಪರಮೇಶ್ವರ್ ಅವರು ನೀಡಿರುವ ಉತ್ತರದಲ್ಲಿ ಕೇಶವ ಕೃಪ ಎಂದು ಸ್ಪಷ್ಟ ಮತ್ತು ನಿರ್ದಿಷ್ಟವಾಗಿ ಹೆಸರಿಸಿಲ್ಲ.

 

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌), ಹಿಂದೂ ಮಹಾಸಭಾ, ಬಜರಂಗದಳ, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳ ನಿಷೇಧಿಸುವ ಕುರಿತು ಮಾಹಿತಿ ಒದಗಿಸುವುದಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರವು  ‘ವಿನಾಯಿತಿ’ ಹೆಸರಿನಲ್ಲಿ ರಕ್ಷಣೆ ಪಡೆದಿತ್ತು.

 

ಬೆಂಗಳೂರಿನ ಕಾಡುಗೊಂಡನಹಳ್ಳಿ, ಡಿ ಜೆ ಹಳ್ಳಿ ಮತ್ತು ಕಾವಲ್‌ ಬೈರಸಂದ್ರದಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದ್ದ ಗಲಭೆಯಲ್ಲಿ ಕೈವಾಡವಿದೆ ಎಂಬ ಆರೋಪದಡಿಯಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ ಎಂಬ ಸಚಿವ ಈಶ್ವರಪ್ಪ ಅವರ ಹೇಳಿಕೆ ಬೆನ್ನಲ್ಲೇ ಸರ್ಕಾರ ಒದಗಿಸಿರುವ ಆರ್‌ಟಿಐ ಮಾಹಿತಿಯು ಚರ್ಚೆಗೆ ಗ್ರಾಸವಾಗಿತ್ತು.

 

ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಹಿಂದೂ ಮಹಾಸಭಾ, ಬಜರಂಗದಳ, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸುವುದಕ್ಕೆ ಸಂಬಂಧಿಸಿದಂತೆ ನಡೆದಿದ್ದ ಸಭೆಗಳು ಮತ್ತು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಲಾಖೆಯಲ್ಲಿ ಕಡತವನ್ನು ತೆರೆದಿದ್ದರೆ ಅದರಲ್ಲಿರುವ ಸಂಪೂರ್ಣ ಹಾಳೆಗಳನ್ನು ಒದಗಿಸುವ ಕುರಿತು ‘ದಿ ಫೈಲ್‌’ ಆರ್‌ಟಿಐ ಅಡಿ 2020ರ ಜನವರಿ 20ರಂದು ಒಳಾಡಳಿತ ಮತ್ತು ಕಾನೂನು ಸುವ್ಯವಸ್ಥೆ ಇಲಾಖೆಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿತ್ತು.

 

ಒಳಾಡಳಿತ ಇಲಾಖೆಯು ಎರಡೂ ಅರ್ಜಿಗಳನ್ನು 2020ರ ಜನವರಿ 23ರಂದು ಪೊಲೀಸ್‌ ಮಹಾನಿರ್ದೇಶಕರ ಕಚೇರಿಗೆ ವರ್ಗಾಯಿಸಿತ್ತು. ಆದರೆ ಡಿಜಿಐಜಿ ಕಚೇರಿಯ ಕಾನೂನು ಸುವ್ಯವಸ್ಥೆ ಶಾಖೆಯು ಈ ಅರ್ಜಿಗಳನ್ನು ಸ್ವೀಕರಿಸಲು ನಿರಾಕರಿಸಿತ್ತು.

 

ಡಿಜಿಐಜಿ ಕಚೇರಿಯ ಕಾನೂನು ಸುವ್ಯವಸ್ಥೆ ಶಾಖೆಯು ಅರ್ಜಿಗಳನ್ನು ತೆಗೆದುಕೊಳ್ಳದ ಕಾರಣ ಒಳಾಡಳಿತ ಇಲಾಖೆಯು 2020ರ ಫೆ.4ರಂದು ರಾಜ್ಯ ಗುಪ್ತವಾರ್ತೆ ವಿಭಾಗಕ್ಕೆ ವರ್ಗಾಯಿಸಿತ್ತು. ಆದರೆ ಈ ವಿಭಾಗವೂ ಆರ್‌ಟಿಐ ಅರ್ಜಿಗೆ ಯಾವುದೇ ಮಾಹಿತಿ ಒದಗಿಸಿರಲಿಲ್ಲ.

 

ಆರ್‌ಎಸ್‌ಎಸ್‌, ಎಸ್‌ಡಿಪಿಐ ಸಂಘಟನೆ ನಿಷೇಧ; ಮಾಹಿತಿ ನೀಡಲು ‘ವಿನಾಯಿತಿ’ ರಕ್ಷಣೆ ಪಡೆದ ಬಿಜೆಪಿ ಸರ್ಕಾರ

 

ಮಾಹಿತಿ ನೀಡಲು ‘ವಿನಾಯಿತಿ’ ರಕ್ಷಣೆ

 

‘ಮಾಹಿತಿ ಹಕ್ಕು ಅಧಿನಿಯಮ 2005ರ ಅಡಿಯಲ್ಲಿ ಕೋರಿರುವ ಮಾಹಿತಿಯನ್ನು ಅರ್ಜಿದಾರರಿಗೆ ಒದಗಿಸುವಂತೆ ಸೂಚಿಸಲಾಗಿರುತ್ತದೆ. ಉಲ್ಲೇಖ-2(ಸರ್ಕಾರದ ಅಧಿಸೂಚನೆ ಸಂಖ್ಯೆ ಡಿಪಿಎಆರ್‌;44;ಆರ್‌ಟಿಐ;2004, ದಿನಾಂಕ 05-12-2015)ರ ಸರ್ಕಾರದ ಅಧಿಸೂಚನೆ ಅಡಿಯಲ್ಲಿ ಮಾಹಿತಿ ಹಕ್ಕು ಅಧಿನಿಯಮ 2005ರ ಅಡಿಯಲ್ಲಿ ರಾಜ್ಯ ಗುಪ್ತವಾರ್ತೆ ಘಟಕಕ್ಕೆ ವಿನಾಯಿತಿ ನೀಡಲಾಗಿದೆ,’ ಎಂದು ರಾಜ್ಯ ಗುಪ್ತವಾರ್ತೆಯ ಎಸ್‌ ಪಿ (ಭದ್ರತೆ) ಟಿ ಶ್ರೀಧರ್‌ ಅವರು 2020ರ ಫೆ.26ರಂದು ಮಾಹಿತಿ ಒದಗಿಸಿದ್ದರು.

 

 

ರಾಜ್ಯದಲ್ಲಿ ಬೆಂಗಳೂರು, ಮಂಗಳೂರು ಸೇರಿದಂತೆ ವಿವಿಧೆಡೆಗಳಲ್ಲಿ ಈ ಹಿಂದೆ ಹಲವು ಬಾರಿ ಕೋಮು ಗಲಭೆಗಳು ನಡೆದಿವೆ. ಈ ಗಲಭೆಗಳು ನಡೆದಾಗಲೆಲ್ಲ ವಿವಿಧ ಧಾರ್ಮಿಕ ಸಂಘಟನೆಗಳ ಕೈವಾಡವಿದೆ ಎಂದು ರಾಜಕೀಯ ಪಕ್ಷಗಳು ಆರೋಪಿಸುತ್ತಲೇ ಬಂದಿವೆ.

 

ಮಂಗಳೂರು ಮತ್ತು ಇದಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ನಡೆದಿದ್ದ ಗಲಭೆಗಳಲ್ಲಿ ಆರ್‌ಎಸ್‌ಎಸ್‌, ಹಿಂದೂ ಮಹಾ ಸಭಾ, ಬಜರಂಗ ದಳದಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದ್ದ ಹಲವರ ಹೆಸರುಗಳು ಪ್ರಸ್ತಾಪವಾಗಿದ್ದವು. ಅಲ್ಲದೆ ಇದಕ್ಕೆ ಸಮಾನಾಂತರವಾಗಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳಲ್ಲಿ ತೊಡಗಿಸಿಕೊಂಡವರು ಎಂದು ಆರೋಪಿಸಲಾಗಿದ್ದ ಹಲವರ ವಿರುದ್ಧವೂ ಆರೋಪಗಳು ಕೇಳಿಬಂದಿದ್ದವು.

 

 

ಇಂತಹ ಘಟನೆಗಳು ನಡೆದಾಗಲೆಲ್ಲ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಉಭಯ ಧಾರ್ಮಿಕ ಮುಖಂಡರಿಂದ ಒತ್ತಾಯಗಳು ಕೇಳಿ ಬರುತ್ತಲೇ ಇವೆ. ಅಲ್ಲದೆ ಇಂತಹ ಘಟನೆಗಳನ್ನು ರಾಜಕೀಯವಾಗಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ರಾಜಕೀಯ ಪಕ್ಷಗಳು ಕೂಡ ಬಳಸಿಕೊಂಡಿರುವುದಕ್ಕೆ ಹಲವು ನಿದರ್ಶನಗಳೂ ರಾಜ್ಯದಲ್ಲಿವೆ.

 

 

ರಾಷ್ಟ್ರೀಯ ಸ್ವಯಂಸೇವಾ ಸಂಘ (ಆರ್‌ಎಸ್‌ಎಸ್‌) ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಿ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಹಿಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಆರ್‌ಎಸ್‌ಎಸ್‌ ಕೂಡ ಇಂತಹದ್ದೇ ಕೆಲಸಗಳನ್ನು ಮಾಡುತ್ತಿದೆ ಅದನ್ನು ಏನು ಮಾಡಬೇಕು ಎಂದು 2016ರ ಅಕ್ಟೋಬರ್‌ 30ರಂದು ಪ್ರಶ್ನಿಸಿದ್ದರು.

 

ಹೈಕಮಾಂಡ್ ಸಲಹೆ ಪಡೆದು ಆರ್‍ಎಸ್‍ಎಸ್ ನಿಷೇಧದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ 2018ರ ಜನವರಿ 5ರಂದು ಕಾರ್ಯಕ್ರಮವೊಂದರಲ್ಲಿ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ಈ ಹೇಳಿಕೆಯ್ನು ಖಂಡಿಸಿದ್ದ ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕರಾಗಿದ್ದ ಹಿಂದಿನ  ಸಚಿವ ಕೆ ಎಸ್‌ ಈಶ್ವರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ಆರ್‍ಎಸ್‍ಎಸ್ ಸಂಘಟನೆಗೆ ನಿಷೇಧ ಹೇರಲಿ ಎಂದು ಸವಾಲು ಹಾಕಿದ್ದರು.

 

 

ವಿಜಯನಗರದ ಬಿಜಿಎಸ್ ಮೈದಾನದಲ್ಲಿ ನಡೆದಿದ್ದ ಬಿಜೆಪಿಯ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ್ದ ಈಶ್ವರಪ್ಪ ಅವರು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡುತ್ತಿರುವ ಕೆಎಫ್‍ಡಿ, ಪಿಎಫ್‍ಐ ಮತ್ತು ಎಸ್‍ಡಿಪಿಐ ಸಂಘಟನೆಗಳನ್ನು ನಿಷೇಧ ಮಾಡುವಂತೆ ಒತ್ತಾಯಿಸಿದರೆ ಆರ್‍ಎಸ್‍ಎಸ್ ಸಂಘಟನೆಯನ್ನೂ ನಿಷೇಧ ಮಾಡುವುದಾಗಿ ಹೇಳಿದ್ದಾರೆ. ತಾಕತ್ತಿದ್ದರೆ ನಿಷೇಧಿಸಿ ಎಂದು ಅಬ್ಬರಿಸಿದ್ದರು.

 

 

ಆರ್‍ಎಸ್‍ಎಸ್ ಒಂದು ದೇಶಭಕ್ತ ಸಂಘಟನೆಯಾಗಿದೆ. ದೇಶದ ಸಂಸ್ಕøತಿ, ಭಾಷೆ, ಆಚಾರ, ವಿಚಾರ ಸಂಪ್ರದಾಯಗಳನ್ನು ಪಾಲನೆ ಮಾಡುವುದು ಆರ್‍ಎಸ್‍ಎಸ್ ಧ್ಯೇಯೋದ್ದೇಶ. ಇಂತಹ ಸಂಘಟನೆಗೆ ನಿಷೇಧ ಹೇರಿದರೆ ದೇಶಭಕ್ತರು ಬೀದಿಗಿಳಿಯಲಿದ್ದಾರೆ ಎಂದು ಎಚ್ಚರಿಸಿದ್ದರು. ಕರಾವಳಿ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಹೆಚ್ಚುತ್ತಿರುವ ಗಲಭೆಗೆ ಕೆಲವು ಮೂಲಭೂತ ಸಂಘಟನೆಗಳೇ ನೇರ ಕಾರಣ. ನಿಮ್ಮ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ವಿಷ ಬೀಜವನ್ನು ಬಿತ್ತುತ್ತಿದ್ದೀರಿ. ಇದು ನಿಮಗೆ ಮುಂದೊಂದಿನ ಮುಳುವಾಗಲಿದೆ ಎಂದು ಗುಡುಗಿದ್ದನ್ನು ಸ್ಮರಿಸಬಹುದು.

 

 

ಆದರೆ ಇವೆಲ್ಲವೂ ರಾಜಕೀಯ ಹೇಳಿಕೆಗಳಾಗಿದ್ದವೇ ಹೊರತು ಈ ಹಿಂದಿನ ಸರ್ಕಾರವೂ ಆರ್‌ಎಸ್‌ಎಸ್‌ ಸಂಘಟನೆಯನ್ನು ನಿಷೇಧಿಸಲು ಯಾವ ಕ್ರಮವನ್ನೂ ಕೈಗೊಂಡಿರಲಿಲ್ಲ. ಹಾಗೆಯೇ ಕೇಂದ್ರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ಅವರು ಸಹ ಮಹಾತ್ಮ ಗಾಂಧಿ ಹತ್ಯೆಯಾದ ದಿನ ಗೋಡ್ಸೆ ಪ್ರತಿಮೆ ಮತ್ತು ಭಾವಚಿತ್ರಕ್ಕೆ ಹಾರ ಹಾಕಲು ಮುಂದಾಗಿರುವ ಹಿಂದೂ ಮಹಾಸಭಾಕ್ಕೆ ದೇಶಾದ್ಯಂತ ನಿಷೇಧ ಹೇರಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಆಳ್ವಿಕೆಯಲ್ಲಿರುವ ರಾಜ್ಯಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

 

 

2008ರಿಂದ ಈವರೆವಿಗೆ ನಡೆದಿರುವ 17 ಕೊಲೆ ಹಾಗೂ ಅಪಹರಣ ಪ್ರಕರಣಗಳಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಾರ್ಯಕರ್ತರು ಭಾಗಿಯಾದ ಬಗ್ಗೆ ಪುರಾವೆಗಳಿವೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಅವರು ಹೇಳಿಕೆ ನೀಡಿದ್ದರು. ಮೈಸೂರಿನ ರಾಜು, ಮಡಿಕೇರಿಯ ಪುಟ್ಟಪ್ಪ, ಪ್ರವೀಣ್‌ ಪೂಜಾರಿ, ಶಿವಾಜಿನಗರದ ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್‌, ಶರತ್‌ ಮಡಿವಾಳ ಕೊಲೆ ಪ್ರಕರಣಗಳನ್ನು ಸಚಿವ ಅಶೋಕ್‌ ಅವರು ಉಲ್ಲೇಖಿಸಿರುವುದನ್ನು ಸ್ಮರಿಸಬಹುದು.

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!