Sunday | September 6, 2026 |

ಕಾನೂನುಬಾಹಿರವಾಗಿ 1,257.17 ಕೋಟಿ ರು. ಪಾವತಿ; ವರ್ಷ ಕಳೆದರೂ ಸಲ್ಲಿಕೆಯಾಗದ ವರದಿ, ಮೈಮರೆತ ಸರ್ಕಾರ

ಬೆಂಗಳೂರು; ಗುತ್ತಿಗೆದಾರರಿಂದ ಕಟಾಯಿಸಿದ್ದ ಭದ್ರತಾ ಠೇವಣಿ ಇಎಂಡಿ ಮತ್ತು ಎಫ್‌ಎಸ್‌ಡಿ ಸಂಪೂರ್ಣ ಮೊತ್ತವನ್ನು ಕಾಮಗಾರಿಗಳ ಬಿಲ್‌ಗಳ ಪಾವತಿಗೆ ಬಳಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ನೀರಾವರಿ ನಿಗಮವು ವರ್ಷ ಕಳೆದರೂ ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ. ಸರ್ಕಾರವೂ ಸಹ ವರದಿ ಕೇಳಿ ವರ್ಷ ಕಳೆದರೂ ಯಾವುದೇ ನೆನಪೋಲೆಗಳನ್ನೂ ಸಹ ಬರೆದಿಲ್ಲ.

 

ಇಎಂಡಿ ಮತ್ತು ಎಫ್‌ಎಸ್‌ಡಿ ಶೀರ್ಷಿಕೆಯಲ್ಲಿದ್ದ 1,257.17  ಕೋಟಿ ರು.ಗಳನ್ನು ಕಾನೂನುಬಾಹಿರವಾಗಿ ಪಾವತಿಸಲಾಗಿತ್ತು. ಕರ್ನಾಟಕ ನೀರಾವರಿ ನಿಗಮವು  ಈ ಮೊತ್ತವನ್ನು  ಕಾಮಗಾರಿಗಳ ಬಿಲ್‌ ಪಾವತಿಗೆ ಉಪಯೋಗಿಸಿಕೊಂಡಿತ್ತು. ಈ ಮೊತ್ತವನ್ನು ಯಾವ ಮಾನದಂಡಗಳ ಅನ್ವಯ ಪಾವತಿಸಲಾಗಿದೆ ಎಂದು ಸರ್ಕಾರವು, ನೀರಾವರಿ ನಿಗಮವನ್ನು ಕೇಳಿತ್ತು.

 

ಈ ಸಂಬಂಧ 2024ರ ಫೆ.7ರಂದೇ ಪತ್ರವನ್ನೂ ಬರೆದಿತ್ತು. ಆದರೆ ಈ ಪತ್ರವನ್ನು ನಿಗಮವು ಕಸದ ಬುಟ್ಟಿಗೆ ಎಸೆದಿದೆ. ಈ ಸಂಬಂಧ ಒಂದೇ ಒಂದು ಪತ್ರ ಬರೆದಿರುವ ಸರ್ಕಾರವೂ ಸಹ ಮೈ ಮರೆತು ಕುಳಿತಿದೆ.

 

ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ ಆರ್‍‌ಟಿಐ ಅಡಿಯಲ್ಲಿ ದಾಖಲಾತಿಗಳನ್ನು ಪಡೆದುಕೊಂಡಿದೆ.

 

ಗುತ್ತಿಗೆದಾರರಿಂದ ಕಟಾಯಿಸಿದ್ದ ಇಎಂಡಿ ಮತ್ತು ಎಫ್‌ಎಸ್‌ಡಿ ಮೊತ್ತವನ್ನೇ  ಕಾಮಗಾರಿಗಳ ಬಿಲ್‌ಗಳ ಪಾವತಿಗೆ ಹಿಂದಿನ  ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ  ಬಳಸಿಕೊಂಡಿದ್ದರೂ ಈಗಿನ ಕಾಂಗ್ರೆಸ್‌ ಸರ್ಕಾರವು 2 ವರ್ಷ ಕಳೆದರೂ ತನಿಖೆಗೊಳಪಡಿಸಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳನ್ನೂ ತನಿಖೆಗೊಳಪಡಿಸಲಾಗುವುದು ಎಂದು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‍‌ ಕೂಡ ಅಬ್ಬರಿಸಿದ್ದರು.

 

ವರ್ಷ ಕಳೆದರೂ ಈ ಪ್ರಕರಣವನ್ನು ತನಿಖೆಗೊಳಪಡಿಸಿಲ್ಲ ಮತ್ತು ವರದಿ ಪಡೆಯಲೂ ಸಹ ಆಸಕ್ತಿ ವಹಿಸಿಲ್ಲ.  ಕಾಂಗ್ರೆಸ್‌ ಸರ್ಕಾರದ ಈ ನಡೆಯು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಂತಾಗಿದೆ.

 

ಸರ್ಕಾರದ ಪತ್ರದಲ್ಲೇನಿದೆ?

 

ನಿಗಮದಲ್ಲಿ ಗುತ್ತಿಗೆದಾರರಿಂದ ಕಟಾಯಿಸಲಾದ ಭದ್ರತಾ ಠೇವಣಿ ಇಎಂಡಿ/ಎಫ್‌ಎಸ್‌ಡಿ ಸಂಪೂರ್ಣ ಮೊತ್ತವನ್ನು ಕಾಮಗಾರಿಗಳ ಬಿಲ್‌ಗಳ ಪಾವತಿಗೆ ಉಪಯೋಗಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದು ಇದನ್ನು ಯಾವ ಮಾನದಂಡಗಳ ಅನ್ವಯ ಅನುಸರಿಸಲಾಗಿದೆ ಎಂಬ ಬಗ್ಗೆ ವರದಿಯನ್ನು ನೀಡಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದರು.

 

 

ಈ ಪತ್ರದ ಆಧಾರದ ಮೇಲೆ ಕರ್ನಾಟಕ ನೀರಾವರಿ ನಿಗಮವು ಇದುವರೆಗೂ ಯಾವುದೇ ವರದಿಯನ್ನು ಸಲ್ಲಿಸಿಲ್ಲ. ಮತ್ತು 2024ರ ಫೆ.7ರಂದು ಬರೆದಿದ್ದ ನೆನಪೋಲೆ ಹೊರತುಪಡಿಸಿ ಮತ್ಯಾವುದೇ ಪತ್ರ ವ್ಯವಹಾರ ನಡೆಸಿಲ್ಲ  ಎಂದು ಗೊತ್ತಾಗಿದೆ.

 

 

ಪ್ರಕರಣದ ವಿವರ

 

ಕರ್ನಾಟಕ ನೀರಾವರಿ ನಿಗಮದಲ್ಲಿ ಗುತ್ತಿಗೆದಾರರಿಂದ ನಿರ್ವಹಿಸಿದ್ದ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದ ಗುತ್ತಿಗೆದಾರರು ಬಿಲ್‌ಗಳ ಕ್ಲೈಮ್‌ ಅರ್ಜಿಗಳನ್ನು ಸಲ್ಲಿಸಿದ್ದರು. 2023ರ ಮಾರ್ಚ್‌ 31ರ ಅಂತ್ಯಕ್ಕೆ ಗುತ್ತಿಗೆದಾರರು ಸಲ್ಲಿಸಿದ್ದ ಬಿಲ್‌ ಕ್ಲೈಮ್‌ನ ಮೊತ್ತವು 1,257.17 ಕೋಟಿ ರು.ಗಳಷ್ಟಿತ್ತು. ಅಲ್ಲದೇ 2023ರ ಮಾರ್ಚ್‌ 31ರ ಅಂತ್ಯಕ್ಕೆ 74.09 ಕೋಟಿ ರು.ಗಳ ಇಎಂಡಿ/ಎಫ್‌ಎಸ್‌ಡಿ ಮೊತ್ತಗಳ ಇಂಡೆಂಟ್‌ ಕೂಡ ಸ್ವೀಕರಿಸಿತ್ತು.

 

 

ಜಿಎಸ್‌ಟಿ ಅನುಷ್ಠಾನಕ್ಕೂ ಮುನ್ನ ಮತ್ತು ಅನುಷ್ಠಾನಗೊಂಡ ನಂತರದ ಅವಧಿಯಲ್ಲಿ (2017 ಜುಲೈ 1ರ ಪೂರ್ವದಲ್ಲಿ) ಬಾಕಿ ಕಾಮಗಾರಿಗಳ ಮೊತ್ತ ಪಾವತಿ ಸಂಬಂಧ 2018ರ ಆಗಸ್ಟ್‌ 27ರಂದು ನಿಗಮದ 85ನೇ ಮಂಡಳಿ ಸಭೆಯಲ್ಲಿ ಚರ್ಚಿಸಿತ್ತು. ಜಿಎಸ್‌ಟಿ ಮತ್ತು ಅದರ ಪೂರ್ವದಲ್ಲಿನ ದರಗಳ ವ್ಯತ್ಯಾಸದ ಮೊತ್ತವು ಗುತ್ತಿಗೆದಾರರಿಂದ ಬರಬೇಕಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆಯಾ ಗುತ್ತಿಗೆದಾರರಿಗೆ ಇಎಂಡಿ ಮತ್ತು ಎಫ್‌ಎಸ್‌ಡಿ ಮರು ಪಾವತಿಯನ್ನು ತಡೆ ಹಿಡಿದಿತ್ತು.

ಇಎಂಡಿ, ಎಫ್‌ಎಸ್‌ಡಿ ಮರು ಪಾವತಿಯಲ್ಲಿ ಭ್ರಷ್ಟಾಚಾರ; 1,250 ಕೋಟಿ ರು ಅಕ್ರಮ ಪಾವತಿ ಆರೋಪ

ಇದನ್ನು ಪ್ರಶ್ನಿಸಿದ್ದ  ಕೆಲ ಗುತ್ತಿಗೆದಾರರು ಇಎಂಡಿ ಮತ್ತು ಎಫ್‌ಎಸ್‌ಡಿ ಮರು ಪಾವತಿ ಕುರಿತು ಉಚ್ಛ ನ್ಯಾಯಾಲಯದ ಮೊರೆ (ರಿಟ್‌ ಪಿಟಿಷನ್ 9721/2019) ಹೊಕ್ಕಿದ್ದರು.

 

 

ಜಿಎಸ್‌ಟಿ ಪೂರ್ವದಲ್ಲಿ ಕಾರ್ಯಗತಗೊಳಿಸಿದ್ದ ಕಾಮಗಾರಿಗಳ ಬಿಲ್‌ಗಳನ್ನು ಕೆ-ವ್ಯಾಟ್‌ ಅಡಿಯಲ್ಲಿ ಲೆಕ್ಕಚಾರ ಮಾಡಲು ರಾಜ್ಯ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಹೈಕೋರ್ಟ್‌ ನೀಡಿದ್ದ ಈ ನಿರ್ದೇಶನ ಆಧರಿಸಿ ಗುತ್ತಿಗೆದಾರರು ಇಎಂಡಿ ಮತ್ತು ಎಫ್‌ಎಸ್‌ಡಿ ಮರು ಪಾವತಿಸಬೆಕು ಎಂದು ನಿಗಮಕ್ಕೆ ಕೋರಿಕೆ ಸಲ್ಲಿಸಿದ್ದರು.

 

ಗುತ್ತಿಗೆದಾರರಿಂದ ಕಟಾಯಿಸಿದ್ದ ಇಎಂಡಿ ಮತ್ತು ಎಫ್‌ಎಸ್‌ಡಿ ಸಂಪೂರ್ಣ ಮೊತ್ತವನ್ನು ಕಾಮಗಾರಿಗಳ ಬಿಲ್‌ ಪಾವತಿಗೆ ಉಪಯೋಗಿಸಿಕೊಂಡಿದ್ದರು.

 

‘ಈ ಹಿಂದೆ ನಿಗಮದಲ್ಲಿ ಗುತ್ತಿಗೆದಾರರಿಂದ ಕಟಾಯಿಸಿದ್ದ ಇಎಂಡಿ ಮತ್ತು ಎಫ್‌ಎಸ್‌ಡಿ ಸಂಪೂರ್ಣ ಮೊತ್ತವನ್ನು ಕಾಮಗಾರಿಗಳ ಬಿಲ್‌ಗಳ ಪಾವತಿಗೆ ಉಪಯೋಗಿಸಿಕೊಂಡಿದ್ದು ಇಎಂಡಿ, ಎಫ್‌ಎಸ್‌ಡಿಯ ಯಾವುದೇ ಮೊತ್ತವೂ ನಿಗಮದಲ್ಲಿ ಲಭ್ಯವಿರುವುದಿಲ್ಲ. ಆದ್ದರಿಂದ ಪ್ರಸ್ತುತ ಗುತ್ತಿಗೆದಾರರು ಸಲ್ಲಿಸುತ್ತಿರುವ ಇಎಂಡಿ ಮತ್ತು ಎಫ್‌ಎಸ್‌ಡಿ ಮೊತ್ತವನ್ನು ಮರುಪಾವತಿಸಲು ಕಷ್ಟ ಸಾಧ್ಯವಾಗುತ್ತಿದೆ,’ ಎಂದು ನಿಗಮದ ನಿರ್ದೇಶಕರು, ಸರ್ಕಾರಕ್ಕೆ ಬರೆದಿದ್ದ ಪತ್ರದಲ್ಲಿ ವಿವರಿಸಿದ್ದರು.

 

ನಿಯಮ ಉಲ್ಲಂಘನೆ, ಇಂಜಿನಿಯರ್‌ಗಳಿಗೆ ಅವಮಾನ; ಅನರ್ಹರನ್ನೇ ಎಂಡಿಯನ್ನಾಗಿಸಿದ ಸಿಎಂ, ಡಿಸಿಎಂ

2023ರ ಡಿಸೆಂಬರ್‍‌ 22ರ ಅಂತ್ಯಕ್ಕೆ ನಿಗಮದಲ್ಲಿ 4,102.54 ಕೋಟಿ ರು ಕಾಮಗಾರಿಗಳ ಬಿಲ್‌ಗಳು ಪಾವತಿಗೆ ಬಾಕಿ ಇತ್ತು. ಬಂಡವಾಳ ಲೆಕ್ಕ ಶೀರ್ಷಿಕೆಯಡಿ ಸರ್ಕಾರದಿಂದ 583.26 ಕೋಟಿ ರು. ಕೂಡ ಬಿಡುಗಡೆಗೆ ಬಾಕಿ ಇತ್ತು. ಈ ಹಣವನ್ನು ಬಿಡುಗಡೆ ಮಾಡಿದರೂ ಸಹ ಇನ್ನೂ 3,519.28 ಕೋಟಿ ರು. ಅನುದಾನ ಕೊರತೆ ಉಂಟಾಗಿತ್ತು. ಅಲ್ಲದೇ 2023-24ನೇ ಸಾಲಿನಲ್ಲಿಯೇ ಹೆಚ್ಚುವರಿ ಅನುದಾನದ ಅವಶ್ಯಕತೆಯೂ ಇತ್ತು. ಆದ್ದರಿಂದ ಇಎಂಡಿ ಮತ್ತು ಎಫ್‌ಎಸ್‌ಡಿ ಪಾವತಿಸಲು ಕ್ರಮ ವಹಿಸಿದ್ದಲ್ಲಿ ಕಾಮಗಾರಿ ಬಾಕಿ ಬಿಲ್‌ ಪಾವತಿಸಲು ಅನುದಾನ ಕೊರತೆ ಉಂಟಾಗುತ್ತದೆ ಎಂದೂ ಪತ್ರದಲ್ಲಿ ವಿವರಿಸಿದ್ದರು.

 

 

‘ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ 2021-22ನೇ ಸಾಲಿನಿಂದ ನವೆಂಬರ್‍‌ 23ರ ಅಂತ್ಯದವರೆಗೂ ಪಾವತಿಗೆ ಬಾಕಿ ಇರುವ ಗುತ್ತಿಗೆದಾರರ ಇಎಂಡಿ ಮತ್ತು ಎಫ್ಎಸ್‌ಡಿ ಮೊತ್ತ 74.09 ಕೋಟಿ ರು.ಗಳ ಪಾವತಿಗೆ ಹಾಗೂ ಮಾರ್ಚ್‌ 2024ರ ಅಂತ್ಯಕ್ಕೆ ಇನ್ನು ಸ್ವೀಕರಿಸಬಹುದಾದ ಇಎಂಡಿ ಮತ್ತು ಎಫ್‌ಎಸ್‌ಡಿ ಇಂಡೆಂಟ್‌ ಮೊತ್ತ 100 ಕೋಟಿ ರು ಸೇರಿ ಒಟ್ಟಾರೆ 174.09 ಕೋಟಿ ರು ತುರ್ತಾಗಿ ಅವಶ್ಯವಿದೆ. ಹೆಚ್ಚುವರಿ ಅನುದಾನವನ್ನು ಒದಗಿಸಬೇಕು,’ ಎಂದು ನಿಗಮದ ಹಾಲಿ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರವನ್ನು ಕೋರಿದ್ದರು.

 

ಈ ಎಲ್ಲಾ ವಿವರಗಳನ್ನೊಳಗೊಂಡ ಪತ್ರದ ಕುರಿತು ಜಲ ಸಂಪನ್ಮೂಲ ಇಲಾಖೆಯಲ್ಲಿ ಚರ್ಚೆಯಾಗಿತ್ತು. ಇಎಂಡಿ ಮತ್ತು ಎಫ್‌ಎಸ್‌ಡಿ ಇಂಡೆಂಟ್‌ ಮೊತ್ತ 100 ಕೋಟಿ ರು.ಗಳನ್ನು ಒಳಗೊಂಡಂತೆ ಒಟ್ಟಾರೆ 174.09 ಕೋಟಿ ರು ಗಳ ಹೆಚ್ಚುವರಿ ಅನುದಾನವನ್ನು ಒದಗಿಸುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳಿಸಲು ಇಲಾಖೆ ಅಧಿಕಾರಿಗಳು ಮುಂದಾಗಿದ್ದರು.

 

ಅಲ್ಲದೇ ಈ ರೀತಿ ಇಎಂಡಿ ಮತ್ತು ಎಫ್‌ಎಸ್‌ಡಿ ಮೊತ್ತವನ್ನು ಯಾವ ಮಾನದಂಡಗಳ ಅನ್ವಯ ಕಾಮಗಾರಿಗಳ ಬಿಲ್‌ಗಳ ಪಾವತಿಗೆ ಉಪಯೋಗಿಸಿಕೊಳ್ಳಲಾಗಿದೆ ಎಂಬ ಬಗ್ಗೆ ವರದಿ ಕೋರಲು ಮೇಲಾಧಿಕಾರಿಗಳ ಹಂತದಲ್ಲಿ ಚರ್ಚೆಯಾಗಿತ್ತು. ಅದರಂತೆ ನಿಗಮಕ್ಕೆ ಪತ್ರವನ್ನೂ ಬರೆದಿತ್ತು. ಆದರೆ ನಿಗಮದಿಂದ ವರ್ಷ ಕಳೆದರೂ ಯಾವುದೇ ವರದಿಯೂ ಬಂದಿಲ್ಲ. ಆದರೂ ಸರ್ಕಾರವು ಮೈ ಮರೆತು ಕುಳಿತಿದೆ.

 

ವಿವಿಧ ಕಾಮಗಾರಿಗಳನ್ನು ನಿರ್ವಹಿಸಿದ್ದ ಗುತ್ತಿಗೆದಾರರು ನಿಗಮದಲ್ಲಿ ಭದ್ರತಾ ಮತ್ತು ಮೇಲ್ವಿಚಾರಣೆ ಠೇವಣಿ ರೂಪದಲ್ಲಿ ಬಹು ಕೋಟಿ ರು.ಗಳನ್ನು ಇರಿಸಿದ್ದರು. ಗುತ್ತಿಗೆದಾರರು ಕಾಮಗಾರಿಗಳನ್ನು ಪೂರ್ಣಗೊಳಿಸಿದ ನಂತರ ಭದ್ರತಾ ಮತ್ತು ಮೇಲ್ವಿಚಾರಣೆ ಠೇವಣಿ (ಇಎಂಡಿ ಮತ್ತು ಎಫ್‌ಎಸ್‌ಡಿ) ಪಾವತಿಸಬೇಕು. ಆದರೆ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕರು ತಮ್ಮ ಅವಧಿಯ ಕೊನೆ ದಿನದಲ್ಲಿ ತಮಗೆ ಬೇಕಾದ ಕಂಪನಿಗಳಿಗೆ ಕಾನೂನಿನ ಪಾವತಿಸಿದ್ದಾರೆ ಎಂದು ಕಿರಣ್‌ ಅವರು ಆಪಾದಿಸಿದ್ದರು.

 

‘ಕರ್ನಾಟಕ ನೀರಾವರಿ ನಿಗಮದ ನಿಯಮಿತದ ಹಿಂದಿನ ವ್ಯವಸ್ಥಾಪಕ ನಿರ್ದೇಶಕರು ತಮ್ಮ ನಿವೃತ್ತಿ ಅಂಚಿನಲ್ಲಿದ್ದಾಗ ನಿಗಮದಲ್ಲಿ ಇರಿಸಿದ ಇಎಂಡಿ ಮತ್ತು ಎಫ್‌ಎಸ್‌ಡಿ ಸುಮಾರು 1,250 ಕೋಟಿ ರು.ಗಳಷ್ಟು ಹಣವನ್ನು ತಮಗೆ ಬೇಕಾದ ಕಂಪನಿಗಳಿಗೆ ಕಾನೂನುಬಾಹಿರವಾಗಿ ನೀಡಿರುತ್ತಾರೆ. ಮತ್ತು ಸೂಕ್ತವಾದ ಅರ್ಹತೆಯುಳ್ಳ ಪರಿಣಿತ ಮೂರನೇ ವ್ಯಕ್ತಿಯ ತಪಾಸಣೆ ಸಂಸ್ಥೆಯೊಂದಿಗೆ ಸಮಾಲೋಚಿಸದೇ ಜನಪ್ರತಿನಿಧಿಗಳಿಗೆ ಮತ್ತು ಸಾರ್ವಜನಿಕರಿಗೆ ವಂಚಿಸಿದ್ದಾರೆ. ಈ ಮೂಲಕ ಸರ್ಕಾರದ ಹಣವನ್ನು ಲೂಟಿ ಮಾಡಿದ್ದಾರೆ,’ ಎಂದು ಕಿರಣ್‌ ಅವರು ದೂರಿನಲ್ಲಿ ವಿವರಿಸಿದ್ದರು.

Hot this week

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...
Please Scan to make Your Contribution

Topics

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

Related Articles

Popular Categories

error: Content is protected !!