Saturday | March 21, 2026 |

ಸೌಜನ್ಯ ಕೊಲೆ ಮರು ತನಿಖೆ; ಸಿಐಡಿ ಡಿಜಿಪಿ ಸಲೀಂ ಅವರ ಅಭಿಪ್ರಾಯ ವರದಿ ಬಹಿರಂಗ

Support THE-FILE

spot_img

ಬೆಂಗಳೂರು: ಬೆಳ್ತಂಗಡಿ ತಾಲೂಕು  ಉಜಿರೆ ಗ್ರಾಮದ ಕುಮಾರಿ  ಸೌಜನ್ಯ  ಕೊಲೆ ಪ್ರಕರಣವನ್ನು ಕೊನೆಯದಾಗಿ ತನಿಖೆಯನ್ನು ಸಿಬಿಐ ಸಂಸ್ಥೆಯೇ ಕೈಗೊಂಡಿದ್ದರಿಂದ ಮರು ತನಿಖೆಯ ಅಭಿಪ್ರಾಯವನ್ನು ಸಿಬಿಐನಿಂದಲೇ ಪಡೆಯಬೇಕು ಎಂದು ಪೊಲೀಸ್‌ ಮಹಾನಿರ್ದೇಶಕರಾಗಿದ್ದ ಡಾ ಎಂ ಎ ಸಲೀಂ ಅವರು ರಾಜ್ಯ ಡಿಜಿಐಜಿಪಿ ಅವರಿಗೆ 2 ವರ್ಷದ ಹಿಂದೆಯೇ ಅಭಿಪ್ರಾಯದ ವರದಿ ಸಲ್ಲಿಸಿದ್ದರು.

 

ಕುಮಾರಿ ಸೌಜನ್ಯ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವ ಸಂಬಂಧ  ಒಳಾಡಳಿತ ಇಲಾಖೆಯು ಕೈಗೊಂಡಿರುವ ನಿರ್ಣಯದ ಕುರಿತು   ‘ದಿ ಫೈಲ್‌’ ಆರ್‍‌ಟಿಐ ಮೂಲಕ ಪಡೆದುಕೊಂಡಿರುವ 325 ಪುಟಗಳಲ್ಲಿ ಡಾ ಎಂ ಎ ಸಲೀಂ ಅವರು ರಾಜ್ಯ ಡಿಜಿಐಜಿಪಿ ಅವರಿಗೆ 2 ವರ್ಷದ ಹಿಂದೆಯೇ ಸಲ್ಲಿಸಿದ್ದ ಅಭಿಪ್ರಾಯದ ವರದಿಯೂ ಸಹ ಇದೆ.

 

ಕುಮಾರಿ ಸೌಜನ್ಯ ಅವರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವ ಕುರಿತು ಪೊಲೀಸ್‌ ಮಹಾನಿರ್ದೇಶಕರಾಗಿದ್ದ ಡಾ ಎಂ ಎ ಸಲೀಂ ಅವರು 2023ರ ಡಿಸೆಂಬರ್‍‌ ರಂದು ವರದಿ ಸಲ್ಲಿಸಿದ್ದರು.

 

ಸಲೀಂ ಅಭಿಪ್ರಾಯ ವರದಿಯಲ್ಲೇನಿದೆ?

 

ತನಿಖೆಯಲ್ಲಿ ಸಂಗ್ರಹಿಸಿದ ಸಾಕ್ಷ್ಯಾಧಾರಗಳ ಮೇರೆಗೆ ಆರೋಪಿ ಸಂತೋಷ್‌ ರಾವ್ ವಿರುದ್ದ ಕಲಂ 376, 201 ಐಪಿಸಿ ಅಡಿಯಲ್ಲಿ 2013ರ ಜನವರಿ 10ರಂದು ಬೆಳ್ತಂಗಡಿಯ ಸಿವಿಲ್‌ ಜಡ್ಜ್‌ ಮತ್ತು ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಪ್ರಾಥಮಿಕ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದು ಅದನ್ನು ಸಿಸಿ ನಂ 27/2013ರಲ್ಲಿ ವಿಚಾರಣೆಗೆ ಅಂಗೀಕರಿಸಿರುತ್ತದೆ. ಈ ಪ್ರಕರಣದ ಹೆಚ್ಚುವರಿ ತನಿಖೆಯನ್ನು ಕಲಂ 173 (8) ಸಿಆರ್‍‌ಪಿಸಿ ರೀತಿ ಮುಂದುವರೆಸಲಾಗಿತ್ತು ಎಂದು ಮಾಹಿತಿ ಒದಗಿಸಿರುವುದು ವರದಿಯಿಂದ ಗೊತ್ತಾಗಿದೆ.

 

 

ಈ ಪ್ರಕರಣವು ಸಿಐಡಿಯಲ್ಲಿ ಹೆಚ್ಚುವರಿ ತನಿಖೆಗಾಗಿ ಬಾಕಿ ಇದ್ದ ಸಮಯದಲ್ಲಿ ಈ ಪ್ರಕರಣದ ತನಿಖೆಯನ್ನು ಸರ್ಕಾರವು 2013ರ ನವೆಂಬರ್‍‌ 6ರಂದು ಸಿಬಿಐಗೆ ವಹಿಸಿ ಆದೇಶಿಸಿದೆ. ಅದರಂತೆ ಸಿಬಿಐ ಸಂಸ್ಥೆಯು ಈ ಪ್ರಕರಣದ ತನಿಖೆಯನ್ನು ಕೈಗೊಂಡು 2015ರ ಅಕ್ಟೋಬರ್‍‌ 26ರಂದು ಆರೋಪಿ ಸಂತೋಷ್‌ರಾವ್‌ ವಿರುದ್ಧ ಕಲಂ 376, 302 ಐಪಿಸಿ ರೀತಿ ದೋಷಾರೋಪಣೆ ಪಟ್ಟಿಯನ್ನು ಬೆಂಗಳೂರು ನಗರದ  17ನೇ ಹೆಚ್ಚುವರಿ ಮುಖ್ ಮಹಾನಗರ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಸಲ್ಲಿಸಿದೆ.

 

ನಂತರ ಈ ದೋಷಾರೋಪಣೆ ಪಟ್ಟಿಯನ್ನು ಬೆಂಗಳೂರು ನಗರದಲ್ಲಿರುವ 50ನೇ ಹೆಚ್ಚುವರಿ ಸಿಟಿ ಸಿವಿಲ್‌ ನ್ಯಾಯಾಲಯ, ಮಕ್ಕಳ ನ್ಯಾಯಾಲಯ (ವಿಶೇಷ) (ಸಿಸಿ ನಂ 203/2016) ವಿಚಾರಣೆ ಕೈಗೊಂಡು 2023ರ ಜೂನ್‌ 16ರಂದು ಆರೋಪಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

 

‘ಆದ್ದರಿಂದ ಈ ಪ್ರಕರಣದಲ್ಲಿ ಕೊನೆಯದಾಗಿ ತನಿಖೆಯನ್ನು ಸಿಬಿಐ ಸಂಸ್ಥೆ ಕೈಗೊಂಡಿದ್ದರಿಂದ ಮರು ತನಿಖೆಯ ಬಗ್ಗೆ ಅಭಿಪ್ರಾಯವನ್ನು ಸಿಬಿಐ ರವರಿಂದ ಪಡೆಯುವುದು ಸೂಕ್ತ,’ ಎಂದು ಪೊಲೀಸ್‌ ಮಹಾನಿರ್ದೇಶಕ ಡಾ ಎಂ ಎ ಸಲೀಂ ಅವರು ಅಭಿಪ್ರಾಯದ ವರದಿಯಲ್ಲಿ ವಿವರಿಸಿದ್ದರು.

 

 

ಇದೇ ಪ್ರಕರಣಕ್ಕೆ   ಸಂಬಂಧಿಸಿದಂತೆ ಡಾ ಆದಂ ಉಸ್ಮಾನ್‌ ಮತ್ತು ಡಾ ಎನ್‌ ರಶ್ಮಿ ಅವರ ವಿರುದ್ಧ ಕಠಿಣ ದಂಡನೆ ವಿಧಿಸಬೇಕು ಎಂದು  ಸಿಬಿಐ ಸಂಸ್ಥೆಯು 2017ರಲ್ಲೇ  ಶಿಫಾರಸ್ಸು ಮಾಡಿತ್ತು.

 

ಸೌಜನ್ಯ ಕೊಲೆ; ಆದಂ ಉಸ್ಮಾನ್‌, ಡಾ ಎನ್‌ ರಶ್ಮಿ ವಿರುದ್ಧ ಕಠಿಣ ದಂಡನೆ, ಸಿಬಿಐ ಶಿಫಾರಸ್ಸು ಪತ್ರ ಮುಚ್ಚಿಟ್ಟಿದೆಯೇ?

 

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ, ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪ್‌ಸಿಂಹ್‌ ನಾಯಕ್‌, ಕರ್ನಾಟಕ ರಾಷ್ಟ್ರಸಮಿತಿಯ ರಾಜ್ಯಾಧ್ಯಕ್ಷ  ರವಿಕೃಷ್ಣಾರೆಡ್ಡಿ ಸೇರಿದಂತೆ  ಹಲವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದನ್ನು ಸ್ಮರಿಸಬಹುದು.

 

ಶಾಸಕರಿಬ್ಬರ ಕೋರಿಕೆ ಸಂಬಂಧ ಒಳಾಡಳಿತ ಇಲಾಖೆಯಲ್ಲಿ ತೆರೆದಿದ್ದ ಕಡತವು ಕಳೆದ 18 ತಿಂಗಳಿನಿಂದಲೂ  ತೆವಳಿತ್ತು.   2023ರಲ್ಲಿ ತೆರೆದಿದ್ದ ಕಡತವನ್ನು 2025ರ ಜನವರಿಯಲ್ಲಿ ಮುಕ್ತಾಯಗೊಳಿಸಿತ್ತು.

 

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ; 18 ತಿಂಗಳಿನಿಂದಲೂ ತೆವಳಿದ ಕಡತ, ಹೊರಬೀಳದ ತೀರ್ಮಾನ

 

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ, ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪ್‌ಸಿಂಹ್‌ ನಾಯಕ್‌ ಅವರು ಈ ಪ್ರಕರಣದ ಕುರಿತು ಮರು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮರು ತನಿಖೆ ನಡೆಸಲು ಸಿಬಿಐಗೆ ನಿರ್ದೇಶನ ನೀಡಲು ಹೈಕೋರ್ಟ್‌ ಕೂಡ  ನಿರಾಕರಿಸಿತ್ತು.

 

ಹೀಗಾಗಿ ಪ್ರಕರಣದ ಕುರಿತು ಮರು ತನಿಖೆ ನಡೆಸಬೇಕು ಎಂದು ಸರ್ಕಾರದ ಮೇಲೆ ಸಾರ್ವಜನಿಕ  ಒತ್ತಡ ಹೆಚ್ಚಿದ್ದ ಸಂದರ್ಭದಲ್ಲೇ  ಈ ಕುರಿತು ತೀರ್ಮಾನ ಕೈಗೊಳ್ಳಲು  ಗೃಹ ಇಲಾಖೆಯು ಕಾನೂನು ಇಲಾಖೆಯ ಮೊರೆ ಹೊಕ್ಕಿತ್ತು.

 

ಸೌಜನ್ಯ ಪ್ರಕರಣ ಮರು ತನಿಖೆಗೆ ಹೆಚ್ಚಿದ ಒತ್ತಡ; ಕಾನೂನು ಅಭಿಪ್ರಾಯ ಪಡೆಯಲು ಮುಂದಾದ ಗೃಹ ಇಲಾಖೆ

 

‘ ನಾಗರಿಕರ ಭಾವನೆಗಳನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರವು ಕು.ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ಸೌಜನ್ಯಗಳಿಗೆ ಮತ್ತು ಮೃತಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಕೋರಿರುವುದರಿಂದ ಆಡಳಿತ ಇಲಾಖೆಯವರು ಈ ಕುರಿತ ಸಿಬಿಐನಲ್ಲಿ ಮುಕ್ತಾಯಗೊಂಡಿರುವ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ವಹಿಸಲು ಅವಕಾಶವಿದೆಯೇ ಎಂಬ ಬಗ್ಗೆ ಅಭಿಪ್ರಾಯ ಕೋರಿ ಕಡತವನ್ನು ಸಲ್ಲಿಸಲಾಗಿದೆ,’ ಎಂದು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಿತ್ತು.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಪ್ರಾಯ ನೀಡುವ ಸಲುವಾಗಿ ಪ್ರಕರಣದಲ್ಲಿ ಸಾಕ್ಷಿಗಳು ನೀಡಿರುವ ಹೇಳಿಕೆಯ ಪ್ರತಿ ಮತ್ತು ಬೆಂಗಳೂರಿನಲ್ಲಿರುವ ಹೆಚ್ಚುವರಿ ಸಿಟಿ ಸಿವಿಲ್‌ ಸೆಷನ್ಸ್‌ ನ್ಯಾಯಾಲಯ (children’s court (special bengaluru (cch-51)ದಲ್ಲಿ ದಾಖಲಾಗಿರುವ ಪ್ರಕರಣ (Spl. CC NO 203/2016)ದಲ್ಲಿ 2021ರ ಅಕ್ಟೊಬರ್‍‌ 4ರಂದು ನೀಡಿರುವ ಆದೇಶದ ಪ್ರತಿಗಳನ್ನು ಪರಿಶೀಲಿಸುವುದು ಅವಶ್ಯಕವಾಗಿದೆ ಎಂದು ಕಾನೂನು ಇಲಾಖೆಯು ಅಭಿಪ್ರಾಯಿಸಿತ್ತು.

 

ಈ ಪ್ರಕರಣದ ಕುರಿತು ಅಭಿಪ್ರಾಯ ನೀಡಲು ದಾಖಲೆಗಳನ್ನು ಒದಗಿಸಬೇಕು ಎಂದು ಗೃಹ ಇಲಾಖೆಗೆ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯು ಪತ್ರ ಬರೆದಿದೆ. ಪ್ರಕರಣದಲ್ಲಿ ಕಾನೂನು ಇಲಾಖೆ ಅಭಿಪ್ರಾಯ ಕೋರುವ ಸಂಬಂಧ ಗೃಹ ಸಚಿವ ಡಾ ಜಿ ಪರಮೇಶ್ವರ್‍‌ ಮತ್ತು ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ಚರ್ಚಿಸಿದ್ದರು.

 

 

ಮೃತ ವಿದ್ಯಾರ್ಥಿನಿ ತಂದೆ ಚಂದ್ರಪ್ಪಗೌಡ 2018ರಲ್ಲಿ ಪ್ರಕರಣದ ಮರು ತನಿಖೆಗೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ಕುರಿತು ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ಕೆ.ಸೋಮಶೇಖರ್‌ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ಈಗಾಗಲೇ ವಜಾಗೊಳಿಸಿದೆ. ಪ್ರಕರಣವನ್ನು ಮೊದಲಿಗೆ ಸಿಐಡಿ, ಆನಂತರ ಸಿಬಿಐ ತನಿಖೆ ನಡೆಸಿತ್ತು.

 

ಪ್ರಕರಣದಲ್ಲಿಸಾಕ್ಷಿಗಳಾಗಿರುವ ಧೀರಜ್‌ ಜೈನ್‌, ಮಲ್ಲಿಕ್‌ ಜೈನ್‌ ಮತ್ತು ಉದಯ್‌ ಜೈನ್‌ ವಿರುದ್ಧ ಸಂಶಯ ವ್ಯಕ್ತಪಡಿಸಿ ಅರ್ಜಿದಾರರು ಮರು ತನಿಖೆಗೆ ಆದೇಶಿಸಲು ಕೋರಿದ್ದರು. ಆ ಶಂಕೆಯನ್ನು ಪುಷ್ಟೀಕರಿಸುವ ಯಾವುದೇ ಸಾಕ್ಷ್ಯಧಾರ ಒದಗಿಸಿಲ್ಲ. ಸಿಬಿಐ ಸರಿಯಾಗಿಯೇ ತನಿಖೆಗೆ ನಡೆಸಿದ್ದು, ಮತ್ತೆ ತನಿಖೆ ನಡೆಸುವ ಅಗತ್ಯವಿಲ್ಲವೆಂದು ನ್ಯಾಯಪೀಠ ಆದೇಶಿಸಿರುವುದನ್ನು ಸ್ಮರಿಸಬಹುದು.

Hot this week

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

Topics

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

Related Articles

Popular Categories

error: Content is protected !!