ಹಿಂದುಳಿದ ಪ್ರವರ್ಗಗಳ ಗುತ್ತಿಗೆದಾರರಿಗೆ ಮೀಸಲಾತಿ; ಆದಾಯ ನಮೂದಿಸದವರಿಗೆ ಜಾತಿ ಪ್ರಮಾಣಪತ್ರವಿಲ್ಲ

ಬೆಂಗಳೂರು; ಹಿಂದುಳಿದ ವರ್ಗಗಳ ಪ್ರವರ್ಗ 1 ಮತ್ತು 2 ಎ ಸಮುದಾಯಗಳಿಗೆ ಸೇರಿದವರಿಗೆ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಸಂಬಂಧ ಆದಾಯವನ್ನು ನಮೂದಿಸದೇ ಜಾತಿ ಪ್ರಮಾಣ ಪತ್ರಗಳನ್ನು ನೀಡಲು ತಹಶೀಲ್ದಾರ್‍‌ಗಳು ತಕರಾರು ಎತ್ತಿರುವುದು ಇದೀಗ ಬಹಿರಂಗವಾಗಿದೆ.

 

ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲೀಂ ಸಮುದಾಯದವರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಸಂಬಂಧ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಲು ತಕರಾರು ಎತ್ತಿರುವ ಬೆನ್ನಲ್ಲೇ ಹಿಂದುಳಿದ ಪ್ರವರ್ಗ 1 ಮತ್ತು 2 ಸಮುದಾಯಗಳ ಗುತ್ತಿಗೆದಾರರಿಗೆ ಆದಾಯ ನಮೂದಿಸದೇ ಜಾತಿ ಪ್ರಮಾಣ ಪತ್ರ ನೀಡುವುದಿಲ್ಲ ಎಂದು ತಹಶೀಲ್ದಾರ್‍‌ಗಳು ತಿಳಿಸುತ್ತಿರುವುದು ಮುನ್ನೆಲೆಗೆ ಬಂದಿದೆ.

 

ಪ್ರವರ್ಗ 1 ಮತ್ತು 2 ಎ ಜಾತಿಗಳಿಗೆ ಸೇರಿದ ಟೆಂಡರ್‍‌ದಾರರು ಗುತ್ತಿಗೆಗಳಲ್ಲ ಮೀಸಲಾತಿ ಪಡೆಯುವ ಸಂಬಂಧ ತಹಶೀಲ್ದಾರ್‍‌ಗಳು ನೀಡುತ್ತಿರುವ ಹಿಂಬರಹಗಳ ಕುರಿತು ಸ್ಪಷ್ಟವಾದ ಅಭಿಪ್ರಾಯ ನೀಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸರ್ಕಾರದ ಕಾರ್ಯದರ್ಶಿಗಳು, ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

 

ಈ ಕುರಿತು ಸಚಿವ ಶಿವರಾಜ ತಂಗಡಗಿ ಅವರೊಂದಿಗೆ ಅಧಿಕಾರಿಗಳು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

 

2025ರ ಜೂನ್‌ 2ರಂದು ಬರೆದಿರುವ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಹಿಂದುಳಿದ ವರ್ಗಗಳ ಪ್ರವರ್ಗ 1 ಮತ್ತು 2 ಎ ಸಮುದಾಯಗಳಿಗೆ ಸೇರಿದವರಿಗೆ ಸಿವಿಲ್‌ ಗುತ್ತಿಗೆ ಕಾಮಗಾರಿಗಳಲ್ಲಿ 1 ಕೋಟಿವರೆಗೆ ಮೀಸಲಾತಿ ನೀಡಲಾಗಿತ್ತು. ಈ ಸಂಬಂಧ 2024ರ ಜೂನ್‌ 10ರಂದು ಅಧಿಸೂಚನೆಯನ್ನೂ ಹೊರಡಿಸಿತ್ತು. ಅದರಂತೆ ಪ್ರವರ್ಗ 1 ಮತ್ತು 2 ಎ ಸಮುದಾಯಗಳಿಗೆ ಸೇರಿದ ಟೆಂಡರ್‍‌ದಾರರು ಗುತ್ತಿಗೆಗಳಲ್ಲಿ ಮೀಸಲಾತಿ ಪಡೆಯಲು ಅರ್ಜಿ ಸಲ್ಲಿಸಿದ್ದರು.

 

ಆದರೆ ತಹಶೀಲ್ದಾರ್‍‌ಗಳ ಕಚೇರಿಗಳಲ್ಲಿ ಆದಾಯವನ್ನು ನಮೂದಿಸದೇ ಜಾತಿ ಪ್ರಮಾಣ ಪತ್ರವನ್ನು ಕೊಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ಪ್ರವರ್ಗ 1 ಮತ್ತು 2 ಎ ಸಮುದಾಯಗಳಿಗೆ ಪ್ರವರ್ಗವಾರು ಜಾತಿ ಪ್ರಮಾಣ ಪತ್ರವನ್ನು ಗುತ್ತಿಗೆಗಳಲ್ಲಿ ಮೀಸಲಾತಿ ಪಡೆಯಲು ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿರುವುದು ಪತ್ರದಿಂದ ಗೊತ್ತಾಗಿದೆ.

 

 

‘ಆದ್ದರಿಂದ ಈ ಕುರಿತು ಪರಿಶೀಲಿಸಿ ಕೂಡಲೇ ಸ್ಪಷ್ಟವಾದ ಅಭಿಪ್ರಾಯ ನೀಡಬೇಕು,’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಿಗೆ, ಸರ್ಕಾರದ ಪ್ರಧಾನ ಕಾರ್ಯದರ್ಶಿ ನಿರ್ದೇಶಿಸಿರುವುದು ಪತ್ರದಿಂದ ತಿಳಿದು ಬಂದಿದೆ.

 

ಪ್ರವರ್ಗ 2 ‘ಬಿ’ ಸೇರಿದವರಿಗೆ ಶೇ.4ರಷ್ಟು ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ(ತಿದ್ದುಪಡಿ)ವಿಧೇಯಕ-2025 ಜಾರಿಗೆ ಬಂದಿದೆ.

 

ಸರ್ಕಾರಿ ಕಾಮಗಾರಿಗಳ ಪೈಕಿ ಎರಡು ಕೋಟಿ ರೂ.ಮೊತ್ತದ ವರೆಗೆ ಶೇ.4ರಷ್ಟನ್ನು ಮೀರದಂತೆ ಹಿಂದುಳಿದವರ ಪ್ರವರ್ಗ 2 ‘ಬಿ’ಗೆ ಸೇರಿದ ವ್ಯಕ್ತಿಗಳಿಗೆ ಪಾಲ್ಗೊಳ್ಳಲು ಪ್ರೋತ್ಸಾಹಿಸುವ ಉದ್ದೇಶವನ್ನು ವಿಧೇಯಕ ಮಂಡಿಸಲಾಗಿದೆ.

 

ಸುಮಾರು 2ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಪ್ರವರ್ಗ 2 ‘ಬಿ’ ಸಮುದಾಯದವರಿಗೆ ವಿಧೇಯಕ ಮೀಸಲಾತಿ ಕಲ್ಪಿಸುತ್ತದೆ. ಜತೆಗೆ, ಜಿಎಸ್‍ಟಿ ಸಂಬಂಧಿಸಿದ 1 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಈ ವರ್ಗದವರಿಗೆ ಅವಕಾಶ ದೊರೆಯಲಿದೆ.

 

ಇನ್ನೂ, ಅಧಿಸೂಚನಾ ಇಲಾಖೆಗಳಲ್ಲಿ ನಿರ್ಮಾಣ ಕಾಮಗಾರಿಗಳ ಹೊರತಾಗಿ ಸರಕು ಮತ್ತು ಸೇವೆಗಳ ಸಂಗ್ರಹಣೆಯಲ್ಲಿ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳು ಹಾಗೂ ಹಿಂದುಳಿದ ವರ್ಗಗಳಲ್ಲಿ ಶೇ.1 ಕೋಟಿ ರೂ.ವರೆಗೂ ಸರಕು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ.

 

ಪರಿಶಿಷ್ಟ ಜಾತಿಗಳಿಗೆ ಶೇ.17.15 ರಷ್ಟು, ಪರಿಶಿಷ್ಟ ಪಂಗಡಗಳಿಗೆ ಶೇ.6.95 ರಷ್ಟು, ಪ್ರವರ್ಗ 2ಎ ಗೆ ಶೇ.15 ರಷ್ಟು, ಪ್ರವರ್ಗ 2ಬಿಗೆ ಶೇ.4 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಸರಕಾರಿ ನಿರ್ಮಾಣ ಕಾಮಗಾರಿಗಳಲ್ಲಿ 1 ಕೋಟಿ ರೂ.ಗಳ ಮೀಸಲಾತಿಯನ್ನು 2 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿತ್ತು.

 

ಇದರಲ್ಲಿ ಈವರೆಗೂ ಎಸ್ಸಿ,ಎಸ್ಟಿಗಳಿಗೆ ಮಾತ್ರ ಮೀಸಲಾತಿ ಇತ್ತು. ಈಗ ಪ್ರವರ್ಗ 2 ಬಿಗೂ ಅವಕಾಶ ಕಲ್ಪಿಸಲಾಗಿದೆ. ನಿರ್ದಿಷ್ಟ ಸಮುದಾಯದ ವ್ಯಕ್ತಿಗಳಿಂದ ಟೆಂಡರ್ ಸ್ವೀಕರಿಸದಿದ್ದಲ್ಲಿ ಅಂತಹ ಸರಕು ಮತ್ತು ಸೇವೆಗಳ ಸಂಗ್ರಹಣೆಯ ಆಹ್ವಾನಗಳಿಗೆ ಪ್ರತಿಕ್ರಿಯಿಸಿದ ಇತರ ಟೆಂಡರ್‌ ದಾರರಿಗೆ ಅವಕಾಶ ನೀಡಲು ಮಸೂದೆಯಲ್ಲಿ ಪ್ರಸ್ತಾವಿಸಿರುವುದನ್ನು ಸ್ಮರಿಸಬಹುದು.

SUPPORT THE FILE

Latest News

Related Posts