Saturday | March 21, 2026 |

ವೀರಪ್ಪನ್‌ ಹತ್ಯೆ ಕಾರ್ಯಾಚರಣೆಯಲ್ಲಿ ತೊಡಗಿದ್ದವರು ಬಹುಮಾನಕ್ಕೆ ಅರ್ಹರೇ?; ವರದಿ ಕೇಳಿದ ಸರ್ಕಾರ

Support THE-FILE

spot_img

ಬೆಂಗಳೂರು; ನರಹಂತಕ ವೀರಪ್ಪನ್‌ ವಿಶೇಷ ಕಾರ್ಯಾಚರಣೆಯಲ್ಲಿ ಕಾರ್ಯನಿರ್ವಹಿಸಿದ್ದ ಅಧಿಕಾರಿ, ಸಿಬ್ಬಂದಿಗಳು ಬಹುಮಾನಕ್ಕೆ ಅರ್ಹರಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಖಚಿತಪಡಿಸಿಕೊಂಡು ಪರಿಶೀಲನಾ ವರದಿಯನ್ನು ಸಲ್ಲಿಸಬೇಕು ಎಂದು ಅರಣ್ಯ,ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 

ಅಲ್ಲದೇ 1993ರ ಆದೇಶದಲ್ಲಿ ಸತತ 15 ವರ್ಷಗಳಿಂದ ಕಾರ್ಯಾಚರಣೆಯಲ್ಲಿ ತೊಡಗಿದವರಿಗೆ ಬಹುಮಾನ ನೀಡಲು ಅವಕಾಶ ನೀಡಿರುವ ಬಗ್ಗೆ ನಮೂದಿಸಿಲ್ಲ ಎಂಬ ಸಂಗತಿಯೂ ಇದೀಗ ಬಹಿರಂಗವಾಗಿದೆ.

 

ಎಂ ರಾಜೇಂದ್ರ ಮತ್ತು ಎ ಟಿ ವೆಂಕಟೇಗೌಡ ಮತ್ತಿತರರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್‌ ಅರ್ಜಿ (10982/2018, c/w 50155-167 dated 14.08.2024) ಗೆ ಸಂಬಂಧಿಸಿದಂತೆ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ವರದಿ ಸಲ್ಲಿಸಲು ನಿರ್ದೇಶಿಸಿದೆ.

 

2025ರ ಮೇ 2ರಂದು ಅಧಿಕಾರಿಗಳ ಸಭೆ ನಡೆದಿತ್ತು. ಈ ಸಭೆಯ ನಡವಳಿಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

 

‘ನರಹಂತಕ ವೀರಪ್ಪನ್‌ನ್ನು 2004ರ ಅಕ್ಟೋಬರ್‍‌ 18ರಂದು ಸಂಹಾರ ಮಾಡಿದ ದಿನದಂದು ಎಸ್‌ಟಿಎಫ್‌ನಲ್ಲಿ ಕೆಲಸ ನಿರ್ವಹಿಸಿದಂತಹ ಅಧಿಕಾರಿ ಸಿಬ್ಬಂದಿಗಳ ಪೈಕಿ ನ್ಯಾಯಾಲಯದ ಆದೇಶದಲ್ಲಿನ ಒಟ್ಟು 24 ಅಧಿಕಾರಿ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸಲಾಗಿದೆಯೇ, ಸರ್ಕಾರವು 2005ರ ಜುಲೈ 8ರಂದು ಹೊರಡಿಸಿದ್ದ ಆದೇಶದಂತೆ ಬಹುಮಾನಕ್ಕೆ ಅರ್ಹರಿರುವ ಬಗ್ಗೆ ಪರಿಶೀಲಿಸಿ ಖಚಿತಪಡಿಸಿಕೊಂಡು ಎರಡು ದಿನದೊಳಗಾಗಿ ಆರ್ಥಿಕ ಇಲಾಖೆಯು ಕೋರಿರುವ ಮಾಹಿತಿ ಅನುಸಾರ ಮಾಹಿತಿ ಒದಗಿಸಬೇಕು,’ ಎಂದು ಚಾಮರಾಜನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಸಿಬ್ಬಂದಿ ಮತ್ತು ನೇಮಕಾತಿ ವಿಭಾಗದ ಎಪಿಸಿಸಿಎಫ್ ಅವರಿಗೆ ಸೂಚಿಸಿರುವುದು ನಡವಳಿಯಿಂದ ಗೊತ್ತಾಗಿದೆ.

 

 

ಈ ಬಹುಮಾನಕ್ಕೆ ಅರ್ಹರಿರುವ ಅಧಿಕಾರಿ ಸಿಬ್ಬಂದಿಗಳು ಮತ್ತು ಇದಕ್ಕೆ ಎಷ್ಟು ವೆಚ್ಚವಾಗಲಿದೆ ಎಂಬ ಸಂಪೂರ್ಣ ಮಾಹಿತಿ ಒದಗಿಸಬೇಕು ಎಂದೂ ನಿರ್ದೇಶಿಸಲಾಗಿದೆ. ಮತ್ತು 2004ರ ಅಕ್ಟೋಬರ್‍‌ 18ರಂದು ಕೆಲಸ ನಿರ್ವಹಿಸಿರುವ ಬಗ್ಗೆ ಹಾಜರಾತಿ ಪುಸ್ತಕ ಅಥವಾ ಟಾಸ್ಕ್‌ ಪೋರ್ಸ್‌ ಗೆ ನಿಯುಕ್ತಿಗೊಳಿಸಿದ ಆದೇಶದ ಅನ್ವಯ ಖಚಿತಪಡಿಸಿಕೊಳ್ಳಬೇಕು ಎಂದೂ ಸಹ ಸೂಚಿಸಿರುವುದು ತಿಳಿದು ಬಂದಿದೆ.

 

ಅದೇ ರೀತಿ 2005ರ ಜುಲೈ 8ರಂದು ಒಳಾಡಳಿತ ಇಲಾಖೆಯು ಹೊರಡಿಸಿದ್ದ ಆದೇಶ (ಹೆಚ್‌ಡಿ 33 ಪಿಒಪಿ 2005) ಅನ್ವಯ ಒಟ್ಟು 754 ಅಧಿಕಾರಿ ಸಿಬ್ಬಂದಿಗಳ ಪೈಕಿ ಎಲ್ಲಾ ಅಧಿಕಾರಿಗಳಿಗೆ ನಿವೇಶನ ಹಂಚಲಾಗಿದೆಯೇ, ಹಂಚಿದ್ದಲ್ಲಿ ಯಾವ ಮಾನದಂಡಗಳನ್ನು ಅನ್ವಯಿಸಲಾಗಿದೆ, ನಿವೇಶನ ಹಂಚದಿದ್ದಲ್ಲಿ ಯಾವ ರೀತಿ ಕ್ರಮವಹಿಸಲಾಗಿದೆ ಮತ್ತು ಈ ಸಂಬಂಧ ಯಾವುದಾದರೂ ನ್ಯಾಯಾಲಯ ಪ್ರಕರಣ ಬಾಕಿ ಇದೆಯೇ, ಇದ್ದಲ್ಲಿ ಪ್ರಸ್ತುತ ಹಂತದ ಮಾಹಿತಿಯನ್ನು ಒದಗಿಸಬೇಕು ಎಂದು ಒಳಾಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದು ಗೊತ್ತಾಗಿದೆ.

 

 

ವೀರಪ್ಪನ್‌ ವಿಶೇಷ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಒಟ್ಟು 299 ನೌಕರರಲ್ಲಿ ಎಂ ರಾಜೇಂದ್ರ ಮತ್ತು ಎ ಟಿ ವೆಂಕಟೇಗೌಡ ಮತ್ತಿತರರು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ (10982/2018, c/w 50155-167 dated 14.08.2024) ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಒಟ್ಟು 14 ಅರ್ಜಿದಾರರು ಹಾಗೂ ಕಾಳೇಗೌಡ ಮತ್ತು ಇತರರು ಹೈಕೋರ್ಟ್‌ನಲ್ಲಿ (ರಿಟ್‌ ಅರ್ಜಿ 31605/2024) ಪ್ರಕರಣದಲ್ಲಿ 10 ಅರ್ಜಿದಾರರು ಸೇರಿ ಒಟ್ಟಾರೆ 24 ಅಧಿಕಾರಿ ನೌಕರರ ಮಾಹಿತಿಯನ್ನು ಒದಗಿಸಿತ್ತು.

 

ಅರ್ಜಿದಾರರುಗಳಿಗೆ ಪ್ರೋತ್ಸಾಹ ಧನ 35.00 ಲಕ್ಷ ರು. ಹಾಗೂ 2010ರ ಸರ್ಕಾರದ ಆದೇಶದ ಅನ್ವಯ ನಿವೇಶನದ ಮಂಜೂರಾತಿಗಾಗಿ ಪ್ರತಿ ಚದರ ಅಡಿಗೆ 210 ರು ರ ನಂತೆ 63.00 ಲಕ್ಷ ಮತ್ತು ವಾರ್ಷಿಕ ವೇತನ ಬಡ್ತಿಗಾಗಿ 5.06 ಲಕ್ಷ ರು ಸೇರಿ ಒಟ್ಟಾರೆ 103.60 ಲಕ್ಷ ರು.ಗಳ ಅವಶ್ಯಕತೆ ಇದೆ ಎಂದು ಅಂದಾಜಿಸಿರುವುದು ತಿಳಿದು ಬಂದಿದೆ.

 

 

‘ವೀರಪ್ಪನ್‌ ವಿಶೇಷ ಕಾರ್ಯಾಚರಣೆಯಲ್ಲಿ ಸತತವಾಗಿ 15 ವರ್ಷಗಳಿಂದ ಭಾಗವಹಿಸಿದ್ದ ಹಾಗೂ ಎಸ್‌ಟಿಎಫ್‌ನಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿ ಸೇರಿ ಒಟ್ಟಾರೆ 299 ಮಂದಿ ಭಾಗವಹಿಸಿದ್ದಾರೆ. ಇವರೆಲ್ಲರಿಗೂ ಬಹುಮಾನ ನೀಡಲು 1993ರ ಸರ್ಕಾರ ಆದೇಶದ ಅನ್ವಯ ಅಂದಾಜಿಸಲಾಗುತ್ತಿದೆ,’ ಎಂದು ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಭೆಗೆ ಮಾಹಿತಿ ಒದಗಿಸಿರುವುದು ಗೊತ್ತಾಗಿದೆ.

 

ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರು ‘ಸತತ 15 ವರ್ಷಗಳಿಂದ ಕಾರ್ಯಾಚರಣೆಯಲ್ಲಿ ತೊಡಗಿದವರಿಗೆ ಬಹುಮಾನ ನೀಡಲು ಅವಕಾಶ ನೀಡಿರುವ ಬಗ್ಗೆ ಆದೇಶದಲ್ಲಿ ನಮೂದಿಸಿಲ್ಲ,’ ಎಂದು ಸಭೆಯ ಗಮನಕ್ಕೆ ತಂದಿರುವುದು ತಿಳಿದು ಬಂದಿದೆ.

 

ಸಭೆಯಲ್ಲಿ ಕೈಗೊಂಡಿರುವ ತೀರ್ಮಾನಗಳ ಕುರಿತು ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ ಅಧಿಕಾರಿಗಳು ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

Hot this week

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

Topics

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

Related Articles

Popular Categories

error: Content is protected !!