Saturday | August 22, 2026 |

ಲೋಕಾ ಎಸ್ಪಿ ಜೋಷಿ, ನಿಂಗಪ್ಪನೊಂದಿಗೆ ಅಬಕಾರಿ ಸಚಿವ ತಿಮ್ಮಾಪುರ ನಂಟು; ಐಷಾರಾಮಿ ಹೋಟೆಲ್‌ನಲ್ಲಿ ಭೇಟಿ?

ಬೆಂಗಳೂರು;  ಲೋಕಾಯುಕ್ತ ಹೆಸರು ಹೇಳಿ ಹಣ ವಸೂಲಿ ಮಾಡುತ್ತಿದ್ದ ಎಂಬ ಆರೋಪದ ಮೇರೆಗೆ ಬಂಧಿತನಾಗಿರುವ ಆರೋಪಿ ನಿಂಗಪ್ಪನ ಪ್ರಕರಣವು ಅಧಿಕಾರಿಗಳ ವರ್ಗದಲ್ಲಿ ಭಾರೀ ಸಂಚಲನ ಮೂಡಿಸಿರುವ ಹೊತ್ತಿನಲ್ಲೇ ಇದೀಗ ನೇರವಾಗಿ ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರ ಹೆಸರು ತಳಕು ಹಾಕಿಕೊಂಡಿದೆ.

 

ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ಪಿ ಶ್ರೀನಾಥ ಜೋಷಿ  ಅವರನ್ನು ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರೊಂದಿಗೆ ಆರೋಪಿ ನಿಂಗಪ್ಪ ಭೇಟಿ ಮಾಡಿಸಿದ್ದ ಎಂಬ ಸಂಗತಿಯು ಇದೀಗ ಗೊತ್ತಾಗಿದೆ.
ಈ ಕುರಿತು ‘ದಿ ಫೈಲ್‌’ಗೆ ಸರ್ಕಾರದ ಉನ್ನತ ಮೂಲಗಳು ಖಚಿತಪಡಿಸಿವೆ.

 

ಈ ಪ್ರಕರಣದಲ್ಲಿ ಸಚಿವರ ಮೂವರು ಆಪ್ತ ಕಾರ್ಯದರ್ಶಿಗಳ ಹೆಸರು ಸಹ ತಳಕು ಹಾಕಿಕೊಂಡಿದ್ದು ಅಧಿಕಾರಿವರ್ಗದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರ ಹೆಸರು ಸಹ ಸೇರ್ಪಡೆಗೊಂಡಿರುವುದು ರಾಜಕೀಯ ವಲಯದಲ್ಲಿ ಮತ್ತೊಂದು ಸುತ್ತಿನ ಸಂಚಲನ ಉಂಟಾಗುವ ಸಾಧ್ಯತೆಗಳಿವೆ.

 

ಅಬಕಾರಿ ಆಯುಕ್ತರು, ಡಿ ಸಿ, ಡಿವೈಎಸ್ಪಿಗಳ ವರ್ಗಾವಣೆಗೆ ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂದು ಅಬಕಾರಿ ಸಚಿವ ತಿಮ್ಮಾಪುರ ಅವರ ವಿರುದ್ಧ ಈಗಾಗಲೇ ಆರೋಪ ಕೇಳಿ ಬಂದಿತ್ತು. ಪ್ರತಿಪಕ್ಷ ಬಿಜೆಪಿಯೂ ಸಹ ಅಬಕಾರಿ ಸಚಿವರ ರಾಜೀನಾಮೆಗೆ ಒತ್ತಾಯಿಸಿತ್ತು. ಈ ಬೆಳವಣಿಗೆ ನಡುವೆಯೇ ಲೋಕಾಯುಕ್ತ ಎಸ್‌ ಪಿ ಶ್ರೀನಾಥ ಜೋಷಿ ಅವರನ್ನೂ ವರ್ಗಾವಣೆ ವಿಚಾರವಾಗಿಯೇ ಆರೋಪಿ ನಿಂಗಪ್ಪ, ಸಚಿವ ತಿಮ್ಮಾಪುರ ಅವರನ್ನು ಭೇಟಿ ಮಾಡಿಸಿದ್ದ ಎಂಬ ಸಂಗತಿಯು ಮುನ್ನೆಲೆಗೆ ಬಂದಿದೆ.

 

ಆರೋಪಿ ನಿಂಗಪ್ಪನು ಲೋಕಾಯುಕ್ತ ಎಸ್‌ ಪಿ ಶ್ರೀನಾಥ್ ಜೋಷಿ ಅವರನ್ನು ಬೆಂಗಳೂರಿನ ಐಷಾರಾಮಿ ಹೋಟೆಲ್‌ವೊಂದರಲ್ಲಿ ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರನ್ನು ಭೇಟಿ ಮಾಡಿಸಿದ್ದ ಎಂದು ಗೊತ್ತಾಗಿದೆ. ಆರೋಪಿ ನಿಂಗಪ್ಪನಿಗೆ ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರ ಆಪ್ತ ಸಹಾಯಕ ಎಂದು ಹೇಳಲಾಗಿರುವ ರಮೇಶ್‌ ಎಂಬಾತನೂ ಪರಿಚಯವಿದ್ದ ಎಂದು ತಿಳಿದು ಬಂದಿದೆ.

 

ಏಪ್ರಿಲ್‌ ಮೊದಲನೇ ವಾರದಲ್ಲಿ ಶ್ರೀನಾಥ್‌ ಜೋಷಿ ಅವರನ್ನು ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರನ್ನು ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಭೇಟಿಯಾಗಿದ್ದರು.

 

ಆರೋಪಿ ನಿಂಗಪ್ಪ, ಎಸ್‌ ಪಿ ಶ್ರೀನಾಥ ಜೋಷಿ ಅವರನ್ನು ಕಳೆದ 2 ವರ್ಷದಲ್ಲಿ 7-8 ಬಾರಿ ಅವರ ಕಚೇರಿಯಲ್ಲಿಯೇ ಭೇಟಿ ಮಾಡಿದ್ದ ಎಂದು ತಿಳಿದು ಬಂದಿದೆ. 2025ರ ಜನವರಿ 1ರಂದು ಹೊಸ ವರ್ಷದ ಪ್ರಯುಕ್ತ ಜೋಷಿ ಅವರನ್ನು ಅವರ ಕಚೇರಿಯಲ್ಲಿಯೇ ಭೇಟಿಯಾಗಿದ್ದ. ಹಾಗೂ ನಿಂಗಪ್ಪ ತನ್ನ ಹುಟ್ಟು ಹಬ್ಬದಂದು (ಜುಲೈ 10) ಭೇಟಿ ಆಗಿದ್ದ. ಅಲ್ಲದೇ ನಿಂಗಪ್ಪ, ಒಂದು ಬಾರಿ ಶ್ರೀನಾಥ ಜೋಷಿ ಅವರ ಮನೆಯಲ್ಲಿಯೂ ಭೇಟಿ ಆಗಿದ್ದ ಎಂದು ಗೊತ್ತಾಗಿದೆ.

 

ಅಲ್ಲದೇ ಆರೋಪಿ ನಿಂಗಪ್ಪ, ಎಸ್‌ ಪಿ ಜೋಷಿ ಅವರಿಗೆ ಸಿಸಿಬಿಯಲ್ಲಿ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಿಸಲೂ ಆಹ್ವಾನ ನೀಡಿದ್ದ. ಆದರೆ ಜೋಷಿ ಅವರು ಡಿಸಿಪಿ-1 ಹುದ್ದೆ ಕೊಡಿಸಿದರೇ ಬರಲು ಸಿದ್ಧ ಎಂದು ಆರೋಪಿ ನಿಂಗಪ್ಪನಿಗೆ ತಿಳಿಸಿದ್ದರು ಎಂದು ತಿಳಿದು ಬಂದಿದೆ.

 

ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ  ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ 6 ತಿಂಗಳಿನಿಂದಲೂ  ಹಣವನ್ನು ವಸೂಲಿ ಮಾಡಿರುವುದಾಗಿ ಒಪ್ಪಿಕೊಂಡಿದ್ದ ಎಂದು  ಲೋಕಾಯುಕ್ತ ಪೊಲೀಸ್‌ ವಿಭಾಗವು ಇದೀಗ ಅಧಿಕೃತವಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿತ್ತು.

 

ಹಣ ವಸೂಲಿ, ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಬಿಡುಗಡೆಯಾದ ಪತ್ರಿಕಾ ಹೇಳಿಕೆ

ಅಲ್ಲದೇ ಆರೋಪಿ ನಿಂಗಪ್ಪ ಎಂಬಾತನು 6 ತಿಂಗಳಿನಿಂದಲೂ  ಅಧಿಕಾರಿಗಳಿಂದ ವಸೂಲಿ ಮಾಡಿದ್ದ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ ಮಾಡಿದ್ದ ಎಂದು ‘ದಿ ಫೈಲ್‌’, ವರದಿ ಪ್ರಕಟಿಸಿತ್ತು. ಈ  ವರದಿಯು ಅಧಿಕಾರಿ ವರ್ಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

 

 

ಇದೀಗ ಲೋಕಾಯುಕ್ತ ಪೊಲೀಸ್‌ ವಿಭಾಗವು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿಯೂ ಕ್ರಿಪ್ಟೋ ಕರೆನ್ಸಿಯಲ್ಲಿ ಆರೋಪಿಯು ಹೂಡಿಕೆ ಮಾಡಿದ್ದಾನೆ ಎಂದು ಅಧಿಕೃತವಾಗಿ ಹೇಳಿತ್ತು.

 

 

ಇದು ‘ದಿ ಫೈಲ್‌’, ವರದಿಗೆ ಮತ್ತಷ್ಟು ಬಲ ಬಂದಂತಾಗಿದೆ.

 

ಲೋಕಾ ಹೆಸರಿನಲ್ಲಿ ವಸೂಲಿ; ಬಂಧಿತ ಆರೋಪಿಯೊಂದಿಗೆ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ನಂಟು?

 

ಪತ್ರಿಕಾ ಹೇಳಿಕೆಯಲ್ಲೇನಿತ್ತು?

 

ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ 6 ತಿಂಗಳಿನಿಂದ ಹಣವನ್ನು ವಸೂಲಿ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈ ರೀತಿ ವಸೂಲಿ ಮಾಡಿದ ಹಣವನ್ನು ತನ್ನ ಹಾಗೂ ತನ್ನಸಂಬಂಧಿಕರುಗಳ ಹೆಸರಿನಲ್ಲಿ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುತ್ತೇನೆಂದು ಒಪ್ಪಿಕೊಂಡಿರುತ್ತಾನೆ ಎಂದು ಹೇಳಲಾಗಿದೆ.

 

ಹಣ ವಸೂಲಿ, ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಬಿಡುಗಡೆಯಾದ ಪತ್ರಿಕಾ ಹೇಳಿಕೆ

 

‘ಆತನ ಮೊಬೈಲ್‌ನ್ನು ಪರಿಶೀಲಿಸಲಾಗಿ ಸುಮಾರು 13 ಕ್ರಿಪ್ಟೋ ವ್ಯಾಲೆಟ್‌ಗಳಲ್ಲಿ ಹಣವನ್ನು ಹೂಡಿಕೆ ಮಾಡಿರುವುದು ಕಂಡು ಬಂದಿದೆ. ಹಣದ ಮೂಲ ಪತ್ತೆ ಹಚ್ಚುವ ಸಲುವಾಗಿ ಸದರಿ ವ್ಯಾಲೆಟ್‌ಗಳನ್ನು ಫ್ರೀಜ್‌ ಆಡಿ ತನಿಖೆ ಮುಂದುವರೆಸಲಾಗಿದೆ,’ ಎಂದು ವಿವರಿಸಿತ್ತು.

 

ಅಬಕಾರಿ ಇಲಾಖೆಯ ಯಾವ ಯಾವ ಅಧಿಕಾರಿಗಳು ಆರೋಪಿ ನಿಂಗಪ್ಪನಿಗೆ ಎಷ್ಟೆಷ್ಟು  ಹಣ ನೀಡುರುತ್ತಾರೆ ಎಂಬ ಬಗ್ಗೆ ತನಿಖೆಯನ್ನು ಮುಂದುವರೆಸಲಾಗಿದೆ. ಆರೋಪಿಯೊಂದಿಗೆ ಬೇರೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ವಾಟ್ಸ್‌ಪ್ ಸಂದೇಶಗಳು, ಕರೆಗಳ ವಿವರಗಳು ಮತ್ತು ವಾಟ್ಸ್‌ಪ್ ಕರೆಗಳ ವಿವರಗಳನ್ನು ಪರಿಶೀಲಿಸುತ್ತಿದ್ದು ಶಾಮೀಲಾಗಿರುವ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿರುತ್ತದೆ ಎಂದು ತಿಳಿಸಿತ್ತು.

 

ವಜಾಗೊಂಡಿರುವ ಮುಖ್ಯ ಪೇದೆ ನಿಂಗಪ್ಪ ಎಂಬಾತನು  8ಕ್ಕೂ ಹೆಚ್ಚು ಕೆಎಎಸ್‌ ಅಧಿಕಾರಿಗಳಿಂದ ಹಣ ವಸೂಲು ಮಾಡಿದ್ದ ಎಂದು ಹೇಳಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಮುಂದೆ,  ಸಚಿವರುಗಳ ಆಪ್ತ ಕಾರ್ಯದರ್ಶಿಗಳ ಹೆಸರು ಸೇರಿದಂತೆ ಹಲವರ ಹೆಸರುಗಳನ್ನು ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿತ್ತು.

 

ಬಂಧಿತ ಆರೋಪಿ ಕೋಟ್ಯಂತರ ರೂ.ವಸೂಲಿ ಮಾಡಿರುವ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯು ಹಲವು ಪುರಾವೆ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಅವರನ್ನು ಎತ್ತಂಗಡಿ ಮಾಡಲಾಗಿತ್ತು.

 

ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ?

 

ಹಣ ವಸೂಲು ಮಾಡುತ್ತಿದ್ದ ಎಂದು ಹೇಳಲಾಗಿರುವ ಆರೋಪಿತ ನಿಂಗಪ್ಪ , ಲೋಕಾಯುಕ್ತದ ಕೆಲವು ಅಧಿಕಾರಿಗಳಿಂದ ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ ಮಾಡಿಸಿದ್ದ. ಬೆಂಗಳೂರು ನಗರ ಹೊರತುಪಡಿಸಿ ಉಳಿದ ಜಿಲ್ಲೆಗಳ ಲೋಕಾ ಎಸ್ಪಿಗಳಿಂದಲೂ ಕ್ರಿಪ್ಟೋ ಕರೆನ್ಸಿಯಲ್ಲಿ ಮಧ್ಯವರ್ತಿಗಳ ಮೂಲಕ ಹೂಡಿಕೆ ಮಾಡಿಸಿದ್ದ ಎಂಬ ಆಪಾದನೆ ಕೇಳಿ ಬಂದಿತ್ತು.

 

ಅಬಕಾರಿ ಡಿಸಿಗಳಿಂದ ತಿಂಗಳಿಗೆ ಲಕ್ಷಕ್ಕೂ ಹೆಚ್ಚು ವಸೂಲಿ!

 

ಹಣಕ್ಕಾಗಿ ಬೇಡಿಕೆ ಮತ್ತು ಹಣ ನೀಡದೇ ಇದ್ದ ಹಲವು ಅಧಿಕಾರಿಗಳಿಗೆ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿತನಾಗಿರುವ ನಿಂಗಪ್ಪ, ಅಬಕಾರಿ ಡಿಸಿಗಳಿಂದ ತಿಂಗಳಿಗೆ ಲಕ್ಷಕ್ಕೂ ಹೆಚ್ಚು ವಸೂಲು ಮಾಡಿದ್ದಾನೆ ಎಂಬ ಆಪಾದನೆ ಕೇಳಿ ಬಂದಿದೆ. ವಿಜಯನಗರ ಮೆಟ್ರೋ ಸ್ಟೇಷನ್‌, ಜೀವನ್‌ ಭೀಮಾ ನಗರ, ಎಂ ಜಿ ರಸ್ತೆ, ಜೆಡಿಎಸ್‌ನ ಹಳೇ ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಹಣವನ್ನು ವಸೂಲು ಮಾಡಿದ್ದ ಎಂದು ಹೇಳಲಾಗಿತ್ತು.

 

ಅಬಕಾರಿ ಹಗರಣವೊಂದರಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗಿರುವ 100ಕ್ಕೂ ಹೆಚ್ಚು ಅಬಕಾರಿ ಅಧಿಕಾರಿಗಳಿಂದ ತಿಂಗಳಿಗೆ ತಲಾ 1 ಲಕ್ಷ ರು ನಂತೆ ವಸೂಲು ಮಾಡಲಾಗುತ್ತಿತ್ತು. ಈ ಮಧ್ಯೆ ಇದೇ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ಅಬಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸ್‌ ವಿಭಾಗದ ಮತ್ತೊಬ್ಬ ಎಸ್‌ಪಿಯೊಬ್ಬರು ಮೊಕದ್ದಮೆ ದಾಖಲಿಸಿದ್ದರು ಎಂದು ತಿಳಿದು ಬಂದಿತ್ತು.

 

ಕೋಟ್ಯಂತರ ರು. ಕಪ್ಪುಹಣ ವರ್ಗಾವಣೆ; ಅಶ್ವಿನ್‌ ಕುಕೃತ್ಯದ ಬಗ್ಗೆ ಸಾಕ್ಷ್ಯ ನುಡಿದ ಇ ಡಿ ಉಪ ನಿರ್ದೇಶಕ

 

ಪ್ರತಿ ತಿಂಗಳೂ ತಲಾ 1 ಲಕ್ಷ ರು ನೀಡುತ್ತಿದ್ದರೂ ಸಹ ಮೊಕದ್ದಮೆ ದಾಖಲಾಗಿದ್ದಕ್ಕೆ ಈಗಾಗಲೇ ಹಣ ಕೊಟ್ಟಿದ್ದ ಅಧಿಕಾರಿಗಳು ಆರೋಪಿತ ನಿಂಗಪ್ಪ ವಿರುದ್ಧ ತಿರುಗಿ ಬಿದ್ದಿದ್ದರು ಎಂದು ಗೊತ್ತಾಗಿದೆ.

 

ಕೆಲ ವರ್ಷಗಳ ಹಿಂದೆ ನಿಂಗಪ್ಪ, ಸೇವೆಯಿಂದ ವಜಾಗೊಂಡಿದ್ದ. ಬಳಿಕ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳನ್ನು ಬೆದರಿಸಿ ಸುಲಿಗೆಯನ್ನೇ ವೃತ್ತಿ ಮಾಡಿಕೊಂಡಿದ್ದ. ಈ ಸಂಬಂಧ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಹಲವು ಬಾರಿ ಜೈಲು ಸೇರಿದ್ದ ಎಂದು ತಿಳಿದು ಬಂದಿದೆ.

 

ಲೋಕಾ ಪೊಲೀಸರ ಶೋಧ; ಬರಿಗೈಯಲ್ಲಿ ಮರಳಿದ ಪೊಲೀಸರು, ತಲೆಮರೆಸಿಕೊಂಡಿದ್ದಾರೆಯೇ ಜೋಷಿ?

 

ವಿಶೇಷವೆಂದರೇ ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೂ ಲೋಕಾಯುಕ್ತರಾಗಿದ್ದ ಭಾಸ್ಕರರಾವ್‌ ಅವರ ಪುತ್ರ ಮತ್ತು ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ಹಲವರಿಂದ ಹಣಕ್ಕಾಗಿ ಬೇಡಿಕೆ ಇರಿಸಿದ್ದರು. ಆ ಸಂದರ್ಭದಲ್ಲಿ ಲೋಕಾಯುಕ್ತ ಎಸ್ಪಿಯಾಗಿದ್ದ ಸೋನಿಯಾ ನಾರಂಗ್ ಅವರು ಈ ಪ್ರಕರಣವನ್ನು ಬಹಿರಂಗಪಡಿಸಿದ್ದರು. ಅಲ್ಲದೇ ಲೋಕಾಯುಕ್ತ ಹುದ್ದೆಗೆ ಭಾಸ್ಕರರಾವ್‌ ಅವರು ರಾಜೀನಾಮೆ ನೀಡಿದ್ದರು. ಹಾಗೂ ಅವರ ಪುತ್ರ ಅಶ್ವಿನ್‌ ರಾವ್‌ ಸಹ ಪೊಲೀಸರ ಬಂಧನಕ್ಕೆ ಒಳಗಾಗಿದ್ದ.

 

ಈ ಪ್ರಕರಣದ ನಂತರ ಲೋಕಾಯುಕ್ತಕ್ಕಿದ್ದ ಪೊಲೀಸ್‌ ಅಧಿಕಾರವನ್ನು ಮೊಟಕುಗೊಳಿಸಿ, ಭ್ರಷ್ಟಾಚಾರ ನಿಗ್ರಹ ದಳವನ್ನು ಸ್ಥಾಪಿಸಲಾಗಿತ್ತು. ಆ ನಂತರ ಎಸಿಬಿಯನ್ನೂ ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಗೆ ಪುನಃ ಪೊಲೀಸ್‌ ಅಧಿಕಾರವನ್ನು ಮರು ಸ್ಥಾಪಿಸಲಾಗಿತ್ತು.  ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸಿರುವ ಹೊತ್ತಿನಲ್ಲೇ  ಲೋಕಾಯುಕ್ತ ಹೆಸರಿನಲ್ಲಿ ನಿಂಗಪ್ಪ ಎಂಬಾತ ಹಣ ವಸೂಲಿ ಮಾಡಿರುವ ಪ್ರಕರಣವು ಮುನ್ನೆಲೆಗೆ ಬಂದಿದೆ. ಅಲ್ಲದೇ  ಲೋಕಾಯುಕ್ತ ಸಂಸ್ಥೆಯ ವಿಶ್ವಾಸಾರ್ಹತೆಯ ಪ್ರಶ್ನೆಯೂ ಎದುರಾಗಿದೆ.

Hot this week

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....
Please Scan to make Your Contribution

Topics

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

Related Articles

Popular Categories

error: Content is protected !!