Saturday | March 21, 2026 |

ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯುತ್‌ ಬಾಕಿ; ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ನಕಾರ, ಆದೇಶ ಹಿಂಪಡೆಯಲು ಸೂಚನೆ

Support THE-FILE

spot_img

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ  30 ಕೋಟಿ ಕೊಡಲು ಆರ್ಥಿಕ ಇಲಾಖೆಯು ಸಹಮತಿಸಿಲ್ಲ!

 

ವಸತಿ ಶಾಲೆಗಳಿಗೆ ಉಚಿತ ವಿದ್ಯುತ್‌ ಪೂರೈಸಲು ಅಂದಾಜು ವೆಚ್ಚ ನಿಗದಿಪಡಿಸಿ ಸಮಾಜ ಕಲ್ಯಾಣ ಇಲಾಖೆಯು ವರ್ಷದ ಹಿಂದೆ ಹೊರಡಿಸಿದ್ದ ಆದೇಶವು ಗೃಹಜ್ಯೋತಿ ಉದ್ದೇಶಕ್ಕೆ ವಿರುದ್ಧವಾಗಿದೆ ಎಂದು ಆರ್ಥಿಕ ಇಲಾಖೆಯು ಹೇಳಿದೆ.

 

ಇಂಧನ ಇಲಾಖೆಗೆ 1,000 ಕೋಟಿಗೂ ಹೆಚ್ಚು ಅನುದಾನವನ್ನು ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ ನೀಡಲಾಗುತ್ತಿದೆ. ಈ ಮೊತ್ತದಲ್ಲಿ ವರ್ಷಕ್ಕೆ ಕೇವಲ 30 ಕೋಟಿ ರು.ಗಳನ್ನು ಹೊಂದಾಣಿಕೆ ಮಾಡಲು ಆರ್ಥಿಕ ಇಲಾಖೆಯು ಒಪ್ಪಿಲ್ಲ.

 

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ, ಪದವಿಪೂರ್ವ ವಸತಿ ಕಾಲೇಜುಗಳಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ ಇಂಧನ ಇಲಾಖೆಗೆ ಒದಗಿಸಿದ್ದ ಅನುದಾನದಲ್ಲಿಯೇ ವೆಚ್ಚ ಭರಿಸಿ ಉಚಿತ ವಿದ್ಯುತ್‌ ಸೌಲಭ್ಯ ವಿಸ್ತರಿಸಲು ಸೂಚಿಸಿತ್ತು. ಈ ಸಂಬಂಧ ಆದೇಶವನ್ನೂ ಹೊರಡಿಸಿತ್ತು.

 

ಆದರೀಗ ಈ ಆದೇಶವೇ ಗೃಹಜ್ಯೋತಿ ಉದ್ದೇಶಗಳಿಗೆ ವಿರುದ್ಧವಾಗಿದೆ ಎಂದು ಆರ್ಥಿಕ ಇಲಾಖೆಯು ಅಭಿಪ್ರಾಯ ನೀಡಿದೆ.

 

ಇಂಧನ ಇಲಾಖೆಯು ಈ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವ (EN/231/PSR/2024)  ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು 2025ರ ಸೆ. 15ರಂದು ತನ್ನ ಅಭಿಪ್ರಾಯ  ( FD/11/EXP-1/2024, DATED 15/09/2025) ನೀಡಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಆರ್ಥಿಕ ಇಲಾಖೆಯ ಅಭಿಪ್ರಾಯದಲ್ಲೇನಿದೆ?

 

ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಇಂಧನ ಇಲಾಖೆಯು ಸಲ್ಲಿಸಿರುವ ಪ್ರಸ್ತಾವನೆಗೆ ಹಣಕಾಸು ಇಲಾಖೆಯು ವಿಷಾದ ವ್ಯಕ್ತಪಡಿಸುತ್ತದೆ. ಗೃಹ ಜ್ಯೋತಿ ಲೆಕ್ಕಾಚಾರದಲ್ಲಿ ಕೊರತೆಯಿದೆ. ಹೀಗಾಗಿ ಯಾವುದೇ ಹೆಚ್ಚುವರಿ ಅನುದಾನವನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಈ ವರ್ಷ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೆಚ್ಚುವರಿಯಾಗಿ 1000 ಕೋಟಿ ರೂ.ಗಳನ್ನು ಪ್ರಸ್ತಾಪಿಸಲಾಗಿದೆ. ಇಲಾಖೆಯು ಅದರಿಂದಲೇ ಪ್ರಸಕ್ತ ವರ್ಷದಲ್ಲಿ ಪಾವತಿಗಳನ್ನು ಮಾಡಬಹುದು. ಗೃಹ ಜ್ಯೋತಿಯ ಉದ್ದೇಶಕ್ಕೆ ವಿರುದ್ಧವಾಗಿ ಸರ್ಕಾರಿ ಆದೇಶ ಇರುವುದರಿಂದ ಇಲಾಖೆಯು ಅದನ್ನು ಹಿಂಪಡೆಯಬಹುದು ಎಂದು ಅಭಿಪ್ರಾಯದಲ್ಲಿ ನಿರ್ದೇಶನ ನೀಡಿರುವುದು ತಿಳಿದು ಬಂದಿದೆ.

 

 

ಈ ಕುರಿತು ‘ದಿ ಫೈಲ್‌’, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್‌ ಅವರನ್ನು ದೂರವಾಣಿ ಮುಖೇನ ಸಂಪರ್ಕಿಸಿತು. ಈ ಸಂಬಂಧ ಪ್ರತಿಕ್ರಿಯಿಸಿರುವ ಮಣಿವಣ್ಣನ್‌ ಅವರು, ಆರ್ಥಿಕ ಇಲಾಖೆಯು ನೀಡಿರುವ ಅಭಿಪ್ರಾಯವನ್ನು ಪರಿಶೀಲಿಸಲಾಗುತ್ತಿದೆ, ಇಲಾಖೆ ಸಚಿವರು, ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಚರ್ಚಿಸುತ್ತೇವೆ ಎಂದು ಮಾಹಿತಿ ನೀಡಿದರು.

 

ಈ ಕುರಿತು ಸಚಿವ ಕೆ ಜೆ ಜಾರ್ಜ್‌ ಮತ್ತು ಡಾ ಹೆಚ್‌ ಸಿ ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

 

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಸಲು ಅಂದಾಜು ವೆಚ್ಚ ನಿಗದಿಪಡಿಸಿ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿತ್ತು.

 

ಕರ್ನಾಟಕದ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ‘ಗೃಹ ಜ್ಯೋತಿ’ ಮಾದರಿಯಲ್ಲಿ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಈ ಯೋಜನೆಯು 2024-25ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆಯಾಗಿತ್ತು.

 

 

ಇದರಡಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ಸಂಪರ್ಕ ಒದಗಿಸಲಾಗುತ್ತದೆ. ವಿದ್ಯುತ್ ಮತ್ತು ನೀರಿನ ಬಿಲ್‌ಗಳಿಗಾಗಿ ಖರ್ಚಾಗುವ ಹಣವನ್ನು ಉಳಿಸಿ, ಶಿಕ್ಷಣದ ಗುಣಮಟ್ಟ ಮತ್ತು ಮೂಲಸೌಕರ್ಯ ಸುಧಾರಿಸಲು ಬಳಸಿಕೊಳ್ಳಲು ಮುಂದಾಗಿತ್ತು.

 

ಈ ಸೌಲಭ್ಯವನ್ನು ಕಲ್ಪಿಸಲು ₹ 25 ಕೋಟಿ ಅನುದಾನವನ್ನು ನೀಡಲಾಗಿತ್ತು. ಸಂಘದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ 503 ವಸತಿ ಶಾಲೆ ಗಳು, ಪರಿಶಿಷ್ಟ ಪಂಗಡದ 144, ಹಿಂದುಳಿದ ವರ್ಗದ 174 ಸೇರಿ ಒಟ್ಟಾರೆ 821 ವಸತಿ ಶಾಲಾ, ಕಾಲೇಜುಗಳಿವೆ. ಇವುಗಳಿಗೆ ಉಚಿತ ವಿದ್ಯುತ್ ಪೂರೈಸಲು ವಾರ್ಷಿಕ ಅಂದಾಜು 36 ಕೋಟಿ ರು. ಬೇಕಾಗುತ್ತದೆ. 3 ಇಲಾಖೆಗಳು ಕ್ರಮವಾಗಿ 23 ಕೋಟಿ ರು., 6 ಕೋಟಿ ರು. ಮತ್ತು 7 ಕೋಟಿ ರು. ಭರಿಸಬೇಕಾಗುತ್ತದೆ. ಎಸ್ಸಿ, ಎಸ್ಟಿ ವಸತಿ ಶಾಲೆಗಳ 29 ಕೋಟಿ ರು. ವಿದ್ಯುತ್ ಬಿಲ್ ಅನ್ನು ಎಸ್‌ಸಿಎಸ್‌ಪಿ / ಟಿಎಸ್‌ಪಿ ಯೋಜನೆಯಡಿ ಒದಗಿಸುವ ಅನುದಾನದ ಮೂಲಕ ಭರಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿತ್ತು.

 

 

ಹಿಂದುಳಿದ ವರ್ಗಗಳ ವಸತಿ ಶಾಲೆಗಳ 7 ಕೋಟಿ ರು. ಬಿಲ್ ಅನ್ನು ಇದೇ ಇಲಾಖೆಯ ನಿರ್ವಹಣಾ ಲೆಕ್ಕ ಶೀರ್ಷಿಕೆಯಡಿ ಒದಗಿಸಲಾಗುವ ಅನುದಾನದಲ್ಲಿ ತ್ರೈಮಾಸಿಕವಾರು ಇಂಧನ ಇಲಾಖೆಗೆ ಮರುಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಿತ್ತು. ಉಚಿತ ವಿದ್ಯುತ್‌ ಸೌಲಭ್ಯವನ್ನು ಮಿತವಾಗಿ, ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಕೆ ಮಾಡಬೇಕೆಂದು ಪ್ರಾಂಶುಪಾಲರು, ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಆದೇಶದಲ್ಲಿ ವಿವರಿಸಿತ್ತು.

 

https://the-file.in/2025/05/rti/31695/

 

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ದಾಖಲಾತಿಯನ್ನು ಹೆಚ್ಚಿಸುವ ಸಂಬಂಧವೂ ಆರ್ಥಿಕ ಇಲಾಖೆಯು ಆರ್ಥಿಕ ಕ್ಲಿಷ್ಟತೆ ಎಂದು ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಈ ಕುರಿತು ‘ದಿ ಫೈಲ್‌’   ಕಳೆದ 2 ವರ್ಷದ ಹಿಂದೆಯೇ ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!