ಬಿಬಿಸಿಗೆ ಸಂಪನ್ಮೂಲವಿಲ್ಲವೆಂದಿದ್ದ ಬಿಡಿಎ,ಅವಳಿ ಸುರಂಗ ಮಾರ್ಗ ನಿರ್ಮಾಣಕ್ಕೆ ಆರ್ಥಿಕ ಸಬಲತೆ ಹೊಂದಿದೆಯೇ?

ಬೆಂಗಳೂರು; ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯ ಭಾಗವಾಗಿರುವ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಯೋಜನೆಗೆ  7,000 ಕೋಟಿ ರು.ಗಳಷ್ಟು  ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಏದುಸಿರು ಬಿಡುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮೂರು ಪಥದ ಅವಳಿ ಸುರಂಗ ಮಾರ್ಗಕ್ಕೆ 2,215 ಕೋಟಿ ರುಗಳನ್ನು ಆಂತರಿಕ ಸಂಪನ್ಮೂಲದಿಂದ ಸಂಗ್ರಹಿಸಲಿದೆ ಎಂದು ಸಮರ್ಥಿಸಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.   ಈ ಯೋಜನೆಗೆ ಶೇ.25ರಷ್ಟು ಅಂದರೇ 7,000 ಕೋಟಿಗಳನ್ನು ಒದಗಿಸುವಷ್ಟರ ಮಟ್ಟಿಗೆ ಬಿಡಿಎನಲ್ಲಿ ಆರ್ಥಿಕ ಸಂಪನ್ಮೂಲವಿಲ್ಲ. ಈ ಸಂಬಂಧ 2024ರ ಆಗಸ್ಟ್‌ 16ರಂದೇ  ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ … Continue reading ಬಿಬಿಸಿಗೆ ಸಂಪನ್ಮೂಲವಿಲ್ಲವೆಂದಿದ್ದ ಬಿಡಿಎ,ಅವಳಿ ಸುರಂಗ ಮಾರ್ಗ ನಿರ್ಮಾಣಕ್ಕೆ ಆರ್ಥಿಕ ಸಬಲತೆ ಹೊಂದಿದೆಯೇ?