Monday | March 23, 2026 |

ದ್ವಿತೀಯ ಪಿಯುಸಿ; ಪರೀಕ್ಷಾ ಸಿಬ್ಬಂದಿಗಳ ಸಂಭಾವನೆ ಪಾವತಿಗೂ ಅನುದಾನ ಕೊರತೆ, ಪ್ರಸ್ತಾವ ನೆನೆಗುದಿಗೆ!

Support THE-FILE

spot_img

ಬೆಂಗಳೂರು; 2025ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಜಾಗೃತ ದಳದ ಸದಸ್ಯರು, ಕೊಠಡಿ ಸೂಪರ್‍‌ವೈಸರ್‍, ಪ್ರಾಯೋಗಿಕ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿ ‌ ಸೇರಿದಂತೆ ಇನ್ನಿತರೆ ಸಿಬ್ಬಂದಿಗಳಿಗೆ ಸಂಭಾವನೆ ಪಾವತಿಸಲು ಅನುದಾನ ಕೊರತೆ ಎದುರಾಗಿದೆ.

 

ಅನುದಾನ ಕೊರತೆ ಎದುರಾಗಿರುವ ಕಾರಣ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯು ಹೆಚ್ಚುವರಿ ಅನುದಾನ ಕೋರಿದೆ. ಹೆಚ್ಚುವರಿ ಅನುದಾನ ಕೋರಿ ಪ್ರಸ್ತಾವ ಸಲ್ಲಿಕೆಯಾಗಿ ಹಲವು ತಿಂಗಳಾದರೂ ಸಹ ಇನ್ನೂ ಅನುದಾನ ಬಿಡುಗಡೆಯಾಗಿಲ್ಲ. ಈ ಕುರಿತು ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಅಧಿಕಾರಿಗಳು ಹಲವು ಬಾರಿ ಚರ್ಚಿಸಿದ್ದರೂ ಸಹ ಇನ್ನೂ ಅನುದಾನ ಬಿಡುಗಡೆಗೊಂಡಿಲ್ಲ.

 

2025-26ನೇ ಸಾಲಿನ ಪಿಯುಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಗೊಂಡಿರುವ ನಡುವೆಯೇ ಪರೀಕ್ಷೆ ಕಾರ್ಯಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದ ಸಿಬ್ಬಂದಿಗಳಿಗೆ ಸಂಭಾವನೆ ಪಾವತಿಯಾಗದಿರುವುದು ಮುನ್ನೆಲೆಗೆ ಬಂದಿದೆ.

 

ಬೆಳಗಾವಿಯಲ್ಲಿ ಇದೇ ಡಿಸೆಂಬರ್‍‌ 8ರಿಂದ ನಡೆಯಲಿರುವ ವಿಧಾನಮಂಡಲದ ಅಧಿವೇಶನಕ್ಕೆ ವಿಧಾನ ಪರಿಷತ್‌ನ ಸದಸ್ಯರಾದ ಎಸ್‌ ವಿ ಸಂಕನೂರು ಅವರು ಈ ಕುರಿತು ಪ್ರಶ್ನೆ ಕೇಳಿದ್ದರು. ಅನುದಾನ ಕೊರತೆಯಾಗಿರುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ.

 

ಮಂಡಳಿಯು ಸರ್ಕಾರಕ್ಕೆ ಒದಗಿಸಿರುವ ಟಿಪ್ಪಣಿ ಮಾಹಿತಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.
2025ನೇ ಸಾಲಿಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ 1,2 ಹಾಗೂ 3ಕ್ಕೆ ಸಂಬಂಧಿಸಿದಂತೆ ಜಾಗೃತ ದಳ, ಮುಖ್ಯ ಪರೀಕ್ಷಕ, ಜಂಟಿ ಮುಖ್ಯ ಪರೀಕ್ಷಕ, ಕೊಠಡಿ ಸೂಪರ್‍‌ ವೈಸರ್‍‌ ಆಗಿ ರ್ಕಾನಿರ್ವಹಿಸಿದ ಸಿಬ್ಬಂದಿಗೆ ಸಂಭಾವನೆ ವಿತರಿಸಿರಲಿಲ್ಲ. ಅಲ್ಲದೇ ಪ್ರಾಯೋಗಿಕ ಪರೀಕ್ಷೆಗಳ ಸಂಭಾವನೆಯನ್ನೂ ಪಾವತಿ ಮಾಡಿರಲಿಲ್ಲ.

 

ಅನುದಾನ ಕೊರತೆ

 

ಒಂದೇ ಕಂತಿನಲ್ಲಿ ಪದವಿ ಪೂರ್ವ ವೆಚ್ಚಕ್ಕಾಗಿ (ಲೆಕ್ಕ ಶೀರ್ಷಿಕೆ 2202-02-001-0-07-015 (ಪೂರಕ ವೆಚ್ಚ) ಅಡಿ 28.80 ಕೋಟಿ ರು ಹಾಗೂ (ಲೆಕ್ಕ ಶೀರ್ಷಿಕೆ 2202–02–001-07-041, ಪ್ರಯಾಣ ವೆಚ್ಚ) ಅಡಿ 24.80 ಕೋಟಿ ರು ಬಿಡುಗಡೆಯಾಗಿದೆ. ಈ ಅನುದಾನವನ್ನು ಆದ್ಯತೆ ಮೇರೆಗೆ ಪರೀಕ್ಷೆ 1,2 ಹಾಗೂ 3ರ ಮೌಲ್ಯಮಾಪನ ಕಾರ್ಯ ನಿರ್ವಹಿಸಿದ ಒಟ್ಟು 39,095 ಮೌಲ್ಯಮಾಪಕರುಗಳಿಗೆ ಒಟ್ಟು 48.74 ಕೋಟಿ ರು ಸಂಭಾವನೆ ಹಾಗೂ ಟಿಎ, ಡಿಎ ವೆಚ್ಚ ಭರಿಸಿದೆ ಎಂದು ಮಂಡಳಿಯು ತಿಳಿಸಿರುವುದು ಗೊತ್ತಾಗಿದೆ.

 

‘ಹೀಗಾಗಿ ಸದರಿ ಪರೀಕ್ಷೆಗಳಲ್ಲಿ ಜಾಗೃತ ದಳ, ಮುಖ್ಯ ಪರೀಕ್ಷಕ, ಜಂಟಿ ಮುಖ್ಯ ಪರೀಕ್ಷಕ, ಕೊಠಡಿ ಸೂಪರ್‍‌ವೈಸರ್‍‌ಗಳಾಗಿ ಕಾರ್ಯನಿರ್ವಹಿಸಿದ ಸಿಬ್ಬಂದಿಗೆ ಸಂಭಾವನೆ ಪಾವತಿಗೆ ಅನುದಾನ ಕೊರತೆಯಾಗಿದೆ. ಹೀಗಾಗಿ ಸಂಭಾವನೆ ವಿತರಿಸಲು ವಿಳಂಬವಾಗಿದೆ,’ ಎಂದು ಮಂಡಳಿ ನಿರ್ದೇಶಕರು ಸರ್ಕಾರಕ್ಕೆ ಮಾಹಿತಿ ಒದಗಿಸಿರುವುದು ತಿಳಿದು ಬಂದಿದೆ.

 

ಎರಡನೇ ಕಂತಿನಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಈ ಅನುದಾನದಲ್ಲಿ ಪರೀಕ್ಷೆ 1ರಲ್ಲಿ ಜಾಗೃತ ದಳದಲ್ಲಿ ಕಾರ್ಯನಿರ್ವಹಿಸಿದ 3,389 ಮಂದಿ ಸಿಬ್ಬಂದಿಗೆ 5,29,78,975 ರು.ಗಳ ಮೊತ್ತಕ್ಕೆ ಬಿಲ್‌ ಸಿದ್ಧಪಡಿಸಿದೆ. ಪರೀಕ್ಷೆ2 ಮತ್ತು 3ರಲ್ಲಿ ಜಾಗೃತ ದಳದಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗೆ ಸಂಭಾವನೆ ಪಾವತಿಸಲು ಕ್ರಮ ವಹಿಸುತ್ತಿದೆ ಎಂದು ಮಾಹಿತಿ ನೀಡಿದೆ.

 

 

ಪರೀಕ್ಷೆ 1, 2 ಮತ್ತು  3ರ ಮುಖ್ಯ ಪರೀಕ್ಷಕ, ಜಂಟಿ ಮುಖ್ಯ ಪರೀಕ್ಷಕ ಮತ್ತು ಕೊಠಡಿ ಸೂಪರ್‍‌ವೈಸರ್‍‌ಗಳ ಸಂಭಾವನೆ ಹಾಗೂ ಪ್ರಾಯೋಗಿಕ ಪರೀಕ್ಷೆಗಳ ಸಂಭಾವನೆ ಮತ್ತು ಇತರೆ ಚಟುವಟಿಕೆಗಳಿಗೆ ಅನುದಾನ ಕೊರತೆಯಾಗಿದೆ. ಹೀಗಾಗಿ 22.52 ಕೋಟಿ ರು ಮೊತ್ತದ ಹೆಚ್ಚುವರಿ ಅನುದಾನ ಬಿಡುಗಡೆಗೆ ಮಂಡಳಿಯು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ ಎಂದು ಮಂಡಳಿಯು ಮಾಹಿತಿ ಒದಗಿಸಿರುವುದು ಉತ್ತರದಿಂದ ಗೊತ್ತಾಗಿದೆ.

 

‘ಹೆಚ್ಚುವರಿ ಅನುದಾನ ಬಿಡುಗಡೆ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಸರ್ಕಾರದಿಂದ ಅನುದಾನ ಬಿಡುಗಡೆಯಾದ ಕೂಡಲೇ ಪಾವತಿಗೆ ಕ್ರಮವಹಿಸಲಾಗುವುದು,’ ಎಂದು ಮಂಡಳಿಯು ಉತ್ತರದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 1, 2 ಮತ್ತು 3ರ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಸಂಭಾವನೆ ಇನ್ನು ಸಂದಾಯವಾಗದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಮೌಲ್ಯಮಾಪಕರು ತೀವ್ರ ಅಸಮಾಧಾನಗೊಂಡಿದ್ದರು.

 

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 34 ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕಾಗಿ ಸುಮಾರು 65 ಸಾವಿರ ಪ್ರಾಚಾರ್ಯರು, ಉಪನ್ಯಾಸಕರು, ಅಧಿಕಾರಿ, ಸಿಬ್ಬಂದಿ ವರ್ಗವನ್ನು ನಿಯುಕ್ತಿಗೊಳಿಸಲಾಗಿತ್ತು. ಪರೀಕ್ಷೆ 1,2 ಮತ್ತು 3 ಹೀಗೆ ವಿವಿಧ ಹಂತದಲ್ಲಿ ನಡೆದ ಮೌಲ್ಯಮಾಪನ ಪ್ರಕ್ರಿಯೆಗೆ ಒಟ್ಟು ₹75 ಕೋಟಿ ಸಂಭಾವನೆ ನೀಡಬೇಕಾಗಿತ್ತು.

 

ಈ ಪ್ರಕ್ರಿಯೆ ಪೂರ್ಣಗೊಂಡು ನಾಲ್ಕು ತಿಂಗಳು ಕಳೆಯುತ್ತಿದ್ದರೂ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಾಕಿ ಸಂಭಾವನೆ ಸಂದಾಯ ಮಾಡಿಲ್ಲ. ಇಷ್ಟೇ ಅಲ್ಲದೇ ಕಳೆದ 2023 ಹಾಗೂ 2024ರಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಕಾರ್ಯದಲ್ಲಿ ಜಾಗೃತದಳ, ವಿಶೇಷ ಜಾಗೃತ ದಳ ಸದಸ್ಯರಾಗಿ ಕಾರ್ಯನಿರ್ವಹಿಸಿದ ಉಪನ್ಯಾಸಕರಿಗೆ ಪರೀಕ್ಷಾ ಕಾರ್ಯ ಸಂಭಾವನೆ, ಪ್ರಯಾಣ ಭತ್ಯೆ ಮತ್ತು ದಿನಭತ್ಯೆಯನ್ನೂ ನೀಡಿರಲಿಲ್ಲ.

 

ಸುಮಾರು 65 ಸಾವಿರ ಜನರು ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದು, ₹75 ಕೋಟಿ ಸಂಭಾವನೆ ಬಿಡುಗಡೆ ಮಾಡಲು ಈಗಾಗಲೇ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಮನವಿ ಸಲ್ಲಿಸಿದ್ದನ್ನು ಸ್ಮರಿಸಬಹುದು.

 

ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಪ್ರತಿ ವಿದ್ಯಾರ್ಥಿಗೆ 675 ರು ವೆಚ್ಚವಾಗುತ್ತಿದೆ. ಆದರೆ ಪದವಿಪೂರ್ವ ಶಿಕ್ಷಣ ಇಲಾಖೆಯು ಪ್ರತಿ ವಿದ್ಯಾರ್ಥಿಯಿಂದ 400 ರುಗಳನ್ನು ಪರೀಕ್ಷಾ ಶುಲ್ಕದ ಹೆಸರಿನಲ್ಲಿ ಸಂಗ್ರಹಿಸುತ್ತಿದೆ. ಪರೀಕ್ಷೆಗಳನ್ನು ನಡೆಸಲು ತಗಲುತ್ತಿರುವ ತಲಾ 275 ರು.ಗಳ ಹೆಚ್ಚುವರಿ ವೆಚ್ಚವನ್ನು ಸರ್ಕಾರವೇ ಮಂಡಳಿಗೆ ಒದಗಿಸುತ್ತಿದ. ಹೀಗಾಗಿ ಈ ವ್ಯತ್ಯಾಸವನ್ನು ಸರಿಪಡಿಸುವ ನಿಟ್ಟಿನಲ್ಲಿ ಪರೀಕ್ಷಾ ಶುಲ್ಕ ಪರಿಷ್ಕರಣೆಗೆ ಮಂಡಳಿಯು ಸರ್ಕಾರಕ್ಕೆ ಪತ್ರ ಬರೆದಿತ್ತು.

 

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 1, ಪರೀಕ್ಷೆ 2 ಮತ್ತು ಪರೀಕ್ಷೆ 3ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದ ಮೌಲ್ಯಮಾಪಕರಿಗೆ ಗೌರವ ಸಂಭಾವನೆ ಪಾವತಿಯಾಗಿರಲಿಲ್ಲ. ಈ ವೆಚ್ಚವನ್ನೂ ಸೇರಿ ಒಟ್ಟಾರೆ 97.50 ಕೋಟಿ ರು ಒದಗಿಸಬೇಕು ಎಂದು ಪ್ರಸ್ತಾವ ಸಲ್ಲಿಸಿತ್ತು. ಈ ಪೈಕಿ ಸರ್ಕಾರವು 78 ಕೋಟಿ ರು ಗಳನ್ನು ಬಿಡುಗಡೆ ಮಾಡಿತ್ತು.

Hot this week

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

Topics

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

Related Articles

Popular Categories

error: Content is protected !!