Thursday | March 26, 2026 |

ಮೈಷುಗರ್ಸ್‌ನಲ್ಲಿ ಅಕ್ರಮ; ಮಹಾರಾಷ್ಟ್ರದ ನಿವೃತ್ತ ಐಎಎಸ್‌ ಅಧಿಕಾರಿ ನೇತೃತ್ವದ ತನಿಖಾ ಸಮಿತಿ ರಚನೆ

Support THE-FILE

spot_img

ಬೆಂಗಳೂರು;  ಕಬ್ಬು ಕಟಾವು ಮುಂಗಡ ಪಾವತಿ, ಕಬ್ಬಿನ ತೂಕ ಮತ್ತು ಹಣ ಪಾವತಿಯಲ್ಲಿ ಅಕ್ರಮವೆಸಗಿ ಅಪಾರ ಪ್ರಮಾಣದಲ್ಲಿ ನಷ್ಟವುಂಟಾಗಿರುವ ಪ್ರಕರಣದಲ್ಲಿ ಮಂಡ್ಯದಲ್ಲಿರುವ  ಮೈಷುಗರ್ಸ್ ಕಂಪನಿಯ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಐಎಎಸ್‌ ರವಿಕುಮಾರ್ ಅವರೂ ಸೇರಿದಂತೆ ಒಟ್ಟಾರೆ 7 ಮಂದಿ ಅಧಿಕಾರಿ, ನೌಕರರ ವಿರುದ್ಧ ತನಿಖೆಗೆ ಸರ್ಕಾರವು ಆದೇಶ ಹೊರಡಿಸಿದೆ.

 

ದಿ ಮೈಸೂರು ಷುಗರ್ ಕಂಪನಿ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾಗಿದ್ದ ಹಲವು ಅವ್ಯವಹಾರ ಮತ್ತು ಅಕ್ರಮ ನೇಮಕಾತಿ ಮತ್ತು ಆರ್ಥಿಕ ನಷ್ಟವಾಗಿದೆ ಎಂದು ಸರ್ಕಾರಕ್ಕೆ ಹಲವರು ದೂರು ಸಲ್ಲಿಸಿದ್ದರು. ಈ ದೂರುಗಳನ್ನು ಪರಿಶೀಲನೆ ನಡೆಸಿದ್ದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಮಹಾರಾಷ್ಟ್ರದ ನಿವೃತತ ಐಎಎಸ್‌ ಅಧಿಕಾರಿ ಶೇಖರ್ ಗಾಯಕವಾಡ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿದೆ.

 

ಈ ಸಂಬಂಧ 2026ರ ಜನವರಿ 14ರಂದು ಆದೇಶ ಹೊರಡಿಸಿದೆ. ಈ ಅದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಮಹಾರಾಷ್ಟ್ರದ ನಿವೃತ್ತ ಐಎಎಸ್‌ ಅಧಿಕಾರಿ ಶೇಖರ್ ಗಾಯಕವಾಡ ಅವರು ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಮಹಾರಾಷ್ಟ್ರದ ಶುಗರ್ಸ್ ಎಂಜಿನಿಯರಿಂಗ್‌ ಇಂಜಿನಿಯರಿಂಗ್‌ ಇನ್ಸಿಟಿಟ್ಯೂಟ್‌ನ ಮುಖ್ಯಸ್ಥ ರಾಜೇಂದ್ರ ಚಾಂದಗುಡ್ಡೆ, ಬಡಗಲಪುರ ನಾಗೇಂದ್ರ, ಎಸ್‌ ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಬಿ ಎಸ್ ರಾಜಗೋಪಾಲ್, ತಾಂತ್ರಿಕ ಸಲಹೆಗಾರ ಸಿ ಬಿ ಪಾಟೀಲ, ಮುಜಾವರ ಬಹದೂರಲಿ ಇಬ್ರಾಹಿಂ ಲಾತೂರು ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ.

 

ಈ ಸಮಿತಿಯು ಕಂಪನಿಗೆ ಭೇಟಿ ನೀಡಿ ದೂರಿನಲ್ಲಿರುವ ಎಲ್ಲಾ ಅಂಶಗಳ ಕುರಿತು ಪರಿಶೀಲನೆ ನಡೆಸಿ 15 ದಿನಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯು ಸೂಚಿಸಿರುವುದು ಆದೇಶದಿಂದ ಗೊತ್ತಾಗಿದೆ.

 

 

ಮಂಡ್ಯದ ಮೈಷುಗರ್ಸ್‌ನಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಪ್ಪಾಸಾಹೇಬ್ ಪಾಟೀಲ್, ರವಿಕುಮಾರ್ ಎಂ ಆರ್‍‌, ಎಚ್‌ ಎಲ್‌ ನಾಗರಾಜು, ಹಾಲಿ ವ್ಯವಸ್ಥಾಪಕ ನಿರ್ದೇಶಕ ಮಂಗಲ್ ದಾಸ್‌, ಕಬ್ಬು ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ತೇಜಸ್ವಿನಿ, ಸಿಬ್ಬಂದಿ ಅಧಿಕಾರಿ ರಮೇಶ್‌ ಚೆಲ್ಲಾಪುರ ಇವರ ಅಧಿಕಾರಾವಧಿಯಲ್ಲಿ ಸಾಕಷ್ಟು ಅಕ್ರಮಗಳು, ಅವ್ಯವಹಾರಗಳು ನಡೆದಿವೆ ಎಂದು ಹಲವರು ಸರ್ಕಾರಕ್ಕೆ ದೂರು ಸಲ್ಲಿಸಿದ್ದರು.

 

 

ಪ್ರಮುಖವಾಗಿ ಕ್ಷೇತ್ರ ಸಹಾಯಕರ ಆಯ್ಕೆ, ಕಬ್ಬು ಕಟಾವು ಮುಂಗಡ ಪಾವತಿ, ಕಬ್ಬು ಕಟಾವು ಮತ್ತು ಸಾಗಣೆ, ಕಬ್ಬಿನ ತೂಕ, ಹಣ ಪಾವತಿ, ಹೊರಗುತ್ತಿಗೆ ನೌಕರರ ನೇಮಕಾತಿ, ಸಕ್ಕರೆ ಮಾರಾಟ, ಕಾರ್ಖಾನೆ ಆವರಣದಲ್ಲಿನ ಮರಗಳ ಕಟಾವು, ಕಾಮಗಾರಿಗಳ ನಿರ್ವಹಣೆ, ನಿವೃತ್ತ ಮತ್ತು ಸ್ವಯಂ ನಿವೃತ್ತಿ ಪಡೆದ ನೌಕರರ ನೇಮಕ, ಕರ್ತವ್ಯ ನಿರ್ಲಕ್ಷ್ಯತೆ, ಕಂಪನಿಯ ಖಾಲಿ ಜಾಗವನ್ನು ಗುತ್ತಿಗೆ ನೀಡುವಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ, ಅವ್ಯವಹಾರಗಳು ನಡೆದಿವೆ ಎಂದು ದೂರುಗಳಲ್ಲಿ ವಿವರಿಸಲಾಗಿತ್ತು.

 

ಅಲ್ಲದೇ ಸಭೆ ನಡವಳಿಗಳಿಗೆ ನಿಯಮಬಾಹಿರವಾಗಿ ಸಹಿ ಮಾಡಿರುವುದು ಮತ್ತು ನಿಯಮಬಾಹಿರವಾಗಿ ತನಿಖಾ ಸಮಿತಿ ರಚಿಸಲಾಗಿತ್ತು. ಈ ಎಲ್ಲದರ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿತ್ತು.

 

 

ಮೈಷುಗರ್ಸ್‌ನ ಹಿಂದಿನ ವ್ಯವಸ್ಥಾಪಕ ನಿರ್ದೇಶಕ   ಅಪ್ಪಾಸಾಹೇಬ್ ಪಾಟೀಲ್ ಅವರ ಅಧಿಕಾರವಾಧಿಯಲ್ಲಿ ಭಾರೀ ಗಾತ್ರದ ಮರಗಳನ್ನು ಕಡಿದು ವಿಲೇವಾರಿ ಮಾಡಲಾಗಿತ್ತು. ಅವರನ್ನು ಅಮಾನತಿನಲ್ಲಿರಿಸಬೇಕು ಎಂದು ಶಿವಕುಮಾರ್ ಎಂಬುವರು ಮನವಿ ಸಲ್ಲಿಸಿದ್ದರು. ಅಲ್ಲದೇ ಇವರ ಅಧಿಕಾರಾವಧಿಯಲ್ಲಿಯೇ ಇವರ ಕರ್ತವ್ಯ ನಿರ್ಲಕ್ಷ್ಯತೆಯಿಂದಾಗಿ  2022-23ನೇ ಸಾಲಿನಲ್ಲಿ ಕಂಪನಿಯಲ್ಲಿ  ನಷ್ಟ ಉಂಟಾಗಿತ್ತು.

 

ಇವರ ವಿರುದ್ಧ ಮತ್ತು ಇವರಿಗೆ ತಾಂತ್ರಿಕವಾಗಿ ಸಹಕರಿಸಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು. ಅಲ್ಲದೇ ಇವರನ್ನು ಕಂಪನಿಯ ಸೇವೆಯಿಂದ ಬಿಡುಗಡೆಗೊಳಿಸಬೇಕು ಹಾಗೂ ಇವರಿಂದಲೇ ಆರ್ಥಿಕ ನಷ್ಟವನ್ನು ವಸೂಲು ಮಾಡಬೇಕು ಎಂದೂ ಕೋರಿದ್ದರು.

 

ಅದೇ ರೀತಿ ಮೈಸೂರು ಷುಗರ್ಸ್‌ ಕಂಪನಿಯಲ್ಲಿ ಸರ್ಕಾರದ ಮೀಸಲಾತಿ ನೀತಿ ಉಲ್ಲಂಘಿಸಿ ನೇಮಕಾತಿಗಳನ್ನು  ಮಾಡಲಾಗಿತ್ತು. ಸ್ವಯಂ ನಿವೃತ್ತಿ ಪಡೆದ ಮತ್ತು ನಿವೃತ್ತಿ ಹೊಂದಿದವರನ್ನು ಮರು ನೇಮಕ ಮಾಡಲಾಗಿತ್ತು. ಇಂತಹ ನೌಕರರನ್ನು ವಜಾಗೊಳಿಸಬೇಕು. ಹಾಗೂ ಕಂಪನಿಯಲ್ಲಿ ಭ್ರಷ್ಟಾಚಾರ ನಡೆಸಿರುವ ಅಪ್ಪಾಸಾಹೇಬ ಪಾಟೀಲ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ದೂರುಗಳು ಸಲ್ಲಿಕೆಯಾಗಿದ್ದವು.

 

 

ಅಪ್ಪಾಸಾಹೇಬ ಪಾಟೀಲ್ ಅವರ ವಿರುದ್ಧದ ಆರೋಪಗಳ ಕುರಿತು ಆಡಳಿತ ಮಂಡಳಿಯಲ್ಲಿಯೂ ಚರ್ಚೆ ನಡೆದಿತ್ತು. ಏಕ ಸದಸ್ಯ ನಿವೃತ್ತ ನ್ಯಾಯಾಧೀಶರ ಆಯೋಗವನ್ನು ನೇಮಿಸಿ ವರದಿ ಪಡೆಯಬೇಕು ಎಂದು ಸಭೆಯಲ್ಲಿ ನಿರ್ಣಯವಾಗಿತ್ತು. ವರದಿ ಬಂದ ನಂತರ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ವ್ಯವಸ್ಥಾಪಕ ನಿರ್ದೇಶಕರು ವರದಿ ಮಾಡಿದ್ದರು ಎಂದು ಆದೇಶದಲ್ಲಿ ವಿವರಿಸಲಾಗಿದೆ.

Hot this week

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Topics

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Related Articles

Popular Categories

error: Content is protected !!