Saturday | March 7, 2026 |

ಲೋಕಾ ಹೆಸರಿನಲ್ಲಿ ಸುಲಿಗೆ; ವಿಧಾನಸಭೆ ಅಧಿವೇಶನದಲ್ಲಿ ದಿ ಫೈಲ್ ದಾಖಲೆ ಪ್ರದರ್ಶಿಸಿದ ಪ್ರತಿಪಕ್ಷ ನಾಯಕ ಅಶೋಕ್

Support THE-FILE

spot_img

ಬೆಂಗಳೂರು;  ಅಬಕಾರಿ ಸಚಿವರ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪಗಳ ಕುರಿತಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್‌ ಅವರು ವಿಧಾನಸಭೆ ಅಧಿವೇಶನದಲ್ಲಿ  ದಿ ಫೈಲ್‌ ಪ್ರಕಟಿಸಿದ್ದ ವರದಿಯಲ್ಲಿನ ದಾಖಲೆಗಳನ್ನು ಪ್ರದರ್ಶಿಸಿದರು.

 

ಲೋಕಾಯುಕ್ತ ಹೆಸರು ಹೇಳಿ ಹಣ ವಸೂಲಿ ಮಾಡುತ್ತಿದ್ದ ಎಂಬ ಆರೋಪದ ಮೇರೆಗೆ ಬಂಧಿತನಾಗಿದ್ದ ಆರೋಪಿ ನಿಂಗಪ್ಪನ ಪ್ರಕರಣವು ಅಧಿಕಾರಿಗಳ ವರ್ಗದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಇದೇ ಪ್ರಕರಣದಲ್ಲಿ  ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರ ಹೆಸರು ತಳಕು ಹಾಕಿಕೊಂಡಿತ್ತು. ಈ ಕುರಿತು ದಿ ಫೈಲ್‌ 2025ರ ಜೂನ್‌ 19ರಂದು ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

 

ಲೋಕಾ ಎಸ್ಪಿ ಜೋಷಿ, ನಿಂಗಪ್ಪನೊಂದಿಗೆ ಅಬಕಾರಿ ಸಚಿವ ತಿಮ್ಮಾಪುರ ನಂಟು; ಐಷಾರಾಮಿ ಹೋಟೆಲ್‌ನಲ್ಲಿ ಭೇಟಿ?

 

ಈ ವರದಿಯಲ್ಲಿ ಆರೋಪಿ ನಿಂಗಪ್ಪನ ಸ್ವ ಇಚ್ಚಾ ಹೇಳಿಕೆಯ ಕುರಿತಾದ ದಾಖಲೆಯನ್ನೂ ಪ್ರಕಟಿಸಿತ್ತು. ಇದೀಗ ಇದೇ ದಾಖಲೆಗಳನ್ನು ಪ್ರತಿಪಕ್ಷ ನಾಯಕ ಆರ್‍‌ ಅಶೋಕ್‌ ಅವರು ವಿಧಾನಸಭೆಯಲ್ಲಿ ಇಂದು ನಡೆದ (2026ರ ಜೂನ್‌ 23) ಅಧಿವೇಶನದಲ್ಲಿ  ಪ್ರದರ್ಶಿಸಿದ್ದಾರೆ.

 

 

‘ಭ್ರಷ್ಟಾಚಾರದ ವಿಚಾರವಾಗಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಸಚಿವರು ಇನ್ನೂ ಅಧಿಕಾರ ಅನುಭವಿಸುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಮೊದಲು ರಾಜೀನಾಮೆ, ಆಮೇಲೆ ತನಿಖೆ ಎಂದಾದರೆ ಕಾಂಗ್ರೆಸ್‌ ಸಚಿವರ ವಿಚಾರದಲ್ಲೂ ಅದೇ ನಿಯಮ ಪಾಲಿಸಬೇಕು. ಅಬಕಾರಿ ಸಚಿವರು ಮೊದಲು ರಾಜೀನಾಮೆ ನೀಡಲಿ, ಆಮೇಲೆ ತನಿಖೆ ಎದುರಿಸಲಿ,’ ಎಂದು ವಿಧಾನಸಭೆ ಅಧಿವೇಶನದಲ್ಲಿ ಒತ್ತಾಯಿಸಿದರು.

 

 

 

ಏನಿದು ಪ್ರಕರಣ?

 

ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ಪಿ ಶ್ರೀನಾಥ ಜೋಷಿ  ಅವರನ್ನು ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರೊಂದಿಗೆ ಆರೋಪಿ ನಿಂಗಪ್ಪ ಭೇಟಿ ಮಾಡಿಸಿದ್ದ.   ಆರೋಪಿ ನಿಂಗಪ್ಪನು ಲೋಕಾಯುಕ್ತ ಎಸ್‌ ಪಿ ಶ್ರೀನಾಥ್ ಜೋಷಿ ಅವರನ್ನು ಬೆಂಗಳೂರಿನ ಐಷಾರಾಮಿ ಹೋಟೆಲ್‌ವೊಂದರಲ್ಲಿ ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರನ್ನು ಭೇಟಿ ಮಾಡಿಸಿದ್ದ ಎಂದು ಗೊತ್ತಾಗಿದೆ.

 

 

ಆರೋಪಿ ನಿಂಗಪ್ಪನಿಗೆ ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರ ಆಪ್ತ ಸಹಾಯಕ ಎಂದು ಹೇಳಲಾಗಿರುವ ರಮೇಶ್‌ ಎಂಬಾತನೂ ಪರಿಚಯವಿದ್ದ ಎಂದು ಆರೋಪಿ ನಿಂಗಪ್ಪ ತನ್ನ ಸ್ವ ಇಚ್ಚಾ ಹೇಳಿಕೆಯಲ್ಲಿ ವಿವರಿಸಿದ್ದ.

 

ಏಪ್ರಿಲ್‌ ಮೊದಲನೇ ವಾರದಲ್ಲಿ ಶ್ರೀನಾಥ್‌ ಜೋಷಿ ಅವರನ್ನು ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರನ್ನು ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಭೇಟಿಯಾಗಿದ್ದರು.

 

 

ಆರೋಪಿ ನಿಂಗಪ್ಪ, ಎಸ್‌ ಪಿ ಶ್ರೀನಾಥ ಜೋಷಿ ಅವರನ್ನು ಕಳೆದ 2 ವರ್ಷದಲ್ಲಿ 7-8 ಬಾರಿ ಅವರ ಕಚೇರಿಯಲ್ಲಿಯೇ ಭೇಟಿ ಮಾಡಿದ್ದ ಎಂದು ತಿಳಿದು ಬಂದಿದೆ. 2025ರ ಜನವರಿ 1ರಂದು ಹೊಸ ವರ್ಷದ ಪ್ರಯುಕ್ತ ಜೋಷಿ ಅವರನ್ನು ಅವರ ಕಚೇರಿಯಲ್ಲಿಯೇ ಭೇಟಿಯಾಗಿದ್ದ. ಹಾಗೂ ನಿಂಗಪ್ಪ ತನ್ನ ಹುಟ್ಟು ಹಬ್ಬದಂದು (ಜುಲೈ 10) ಭೇಟಿ ಆಗಿದ್ದ. ಅಲ್ಲದೇ ನಿಂಗಪ್ಪ, ಒಂದು ಬಾರಿ ಶ್ರೀನಾಥ ಜೋಷಿ ಅವರ ಮನೆಯಲ್ಲಿಯೂ ಭೇಟಿ ಆಗಿದ್ದ ಎಂದು ಸ್ವ ಇಚ್ಛಾ ಹೇಳಿಕೆಯಲ್ಲಿ ವಿವರಿಸಲಾಗಿತ್ತು.

 

ಅಲ್ಲದೇ ಆರೋಪಿ ನಿಂಗಪ್ಪ, ಎಸ್‌ ಪಿ ಜೋಷಿ ಅವರಿಗೆ ಸಿಸಿಬಿಯಲ್ಲಿ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಿಸಲೂ ಆಹ್ವಾನ ನೀಡಿದ್ದ. ಆದರೆ ಜೋಷಿ ಅವರು ಡಿಸಿಪಿ-1 ಹುದ್ದೆ ಕೊಡಿಸಿದರೇ ಬರಲು ಸಿದ್ಧ ಎಂದು ಆರೋಪಿ ನಿಂಗಪ್ಪನಿಗೆ ತಿಳಿಸಿದ್ದರು.

 

 

ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ  ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ 6 ತಿಂಗಳಿನಿಂದಲೂ  ಹಣವನ್ನು ವಸೂಲಿ ಮಾಡಿರುವುದಾಗಿ ಒಪ್ಪಿಕೊಂಡಿದ್ದ ಎಂದು  ಲೋಕಾಯುಕ್ತ ಪೊಲೀಸ್‌ ವಿಭಾಗವು ಇದೀಗ ಅಧಿಕೃತವಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿತ್ತು.

 

ಹಣ ವಸೂಲಿ, ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಬಿಡುಗಡೆಯಾದ ಪತ್ರಿಕಾ ಹೇಳಿಕೆ

ಅಲ್ಲದೇ ಆರೋಪಿ ನಿಂಗಪ್ಪ ಎಂಬಾತನು 6 ತಿಂಗಳಿನಿಂದಲೂ  ಅಧಿಕಾರಿಗಳಿಂದ ವಸೂಲಿ ಮಾಡಿದ್ದ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ ಮಾಡಿದ್ದ ಎಂದು 'ದಿ ಫೈಲ್‌', ವರದಿ ಪ್ರಕಟಿಸಿತ್ತು. ಈ  ವರದಿಯು ಅಧಿಕಾರಿ ವರ್ಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

 

 

ಇದೀಗ ಲೋಕಾಯುಕ್ತ ಪೊಲೀಸ್‌ ವಿಭಾಗವು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿಯೂ ಕ್ರಿಪ್ಟೋ ಕರೆನ್ಸಿಯಲ್ಲಿ ಆರೋಪಿಯು ಹೂಡಿಕೆ ಮಾಡಿದ್ದಾನೆ ಎಂದು ಅಧಿಕೃತವಾಗಿ ಹೇಳಿತ್ತು.

 

 

ಇದು 'ದಿ ಫೈಲ್‌', ವರದಿಗೆ ಮತ್ತಷ್ಟು ಬಲ ಬಂದಂತಾಗಿದೆ.

 

ಲೋಕಾ ಹೆಸರಿನಲ್ಲಿ ವಸೂಲಿ; ಬಂಧಿತ ಆರೋಪಿಯೊಂದಿಗೆ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ನಂಟು?

 

ಪತ್ರಿಕಾ ಹೇಳಿಕೆಯಲ್ಲೇನಿತ್ತು?

 

ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ 6 ತಿಂಗಳಿನಿಂದ ಹಣವನ್ನು ವಸೂಲಿ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈ ರೀತಿ ವಸೂಲಿ ಮಾಡಿದ ಹಣವನ್ನು ತನ್ನ ಹಾಗೂ ತನ್ನಸಂಬಂಧಿಕರುಗಳ ಹೆಸರಿನಲ್ಲಿ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುತ್ತೇನೆಂದು ಒಪ್ಪಿಕೊಂಡಿರುತ್ತಾನೆ ಎಂದು ಹೇಳಲಾಗಿದೆ.

 

ಹಣ ವಸೂಲಿ, ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಬಿಡುಗಡೆಯಾದ ಪತ್ರಿಕಾ ಹೇಳಿಕೆ

 

'ಆತನ ಮೊಬೈಲ್‌ನ್ನು ಪರಿಶೀಲಿಸಲಾಗಿ ಸುಮಾರು 13 ಕ್ರಿಪ್ಟೋ ವ್ಯಾಲೆಟ್‌ಗಳಲ್ಲಿ ಹಣವನ್ನು ಹೂಡಿಕೆ ಮಾಡಿರುವುದು ಕಂಡು ಬಂದಿದೆ. ಹಣದ ಮೂಲ ಪತ್ತೆ ಹಚ್ಚುವ ಸಲುವಾಗಿ ಸದರಿ ವ್ಯಾಲೆಟ್‌ಗಳನ್ನು ಫ್ರೀಜ್‌ ಆಡಿ ತನಿಖೆ ಮುಂದುವರೆಸಲಾಗಿದೆ,' ಎಂದು ವಿವರಿಸಿತ್ತು.

 

ಅಬಕಾರಿ ಇಲಾಖೆಯ ಯಾವ ಯಾವ ಅಧಿಕಾರಿಗಳು ಆರೋಪಿ ನಿಂಗಪ್ಪನಿಗೆ ಎಷ್ಟೆಷ್ಟು  ಹಣ ನೀಡುರುತ್ತಾರೆ ಎಂಬ ಬಗ್ಗೆ ತನಿಖೆಯನ್ನು ಮುಂದುವರೆಸಲಾಗಿದೆ. ಆರೋಪಿಯೊಂದಿಗೆ ಬೇರೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ವಾಟ್ಸ್‌ಪ್ ಸಂದೇಶಗಳು, ಕರೆಗಳ ವಿವರಗಳು ಮತ್ತು ವಾಟ್ಸ್‌ಪ್ ಕರೆಗಳ ವಿವರಗಳನ್ನು ಪರಿಶೀಲಿಸುತ್ತಿದ್ದು ಶಾಮೀಲಾಗಿರುವ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿರುತ್ತದೆ ಎಂದು ತಿಳಿಸಿತ್ತು.

 

ವಜಾಗೊಂಡಿರುವ ಮುಖ್ಯ ಪೇದೆ ನಿಂಗಪ್ಪ ಎಂಬಾತನು  8ಕ್ಕೂ ಹೆಚ್ಚು ಕೆಎಎಸ್‌ ಅಧಿಕಾರಿಗಳಿಂದ ಹಣ ವಸೂಲು ಮಾಡಿದ್ದ ಎಂದು ಹೇಳಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಮುಂದೆ,  ಸಚಿವರುಗಳ ಆಪ್ತ ಕಾರ್ಯದರ್ಶಿಗಳ ಹೆಸರು ಸೇರಿದಂತೆ ಹಲವರ ಹೆಸರುಗಳನ್ನು ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿತ್ತು.

 

ಬಂಧಿತ ಆರೋಪಿ ಕೋಟ್ಯಂತರ ರೂ.ವಸೂಲಿ ಮಾಡಿರುವ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯು ಹಲವು ಪುರಾವೆ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಅವರನ್ನು ಎತ್ತಂಗಡಿ ಮಾಡಲಾಗಿತ್ತು.

 

ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ?

 

ಹಣ ವಸೂಲು ಮಾಡುತ್ತಿದ್ದ ಎಂದು ಹೇಳಲಾಗಿರುವ ಆರೋಪಿತ ನಿಂಗಪ್ಪ , ಲೋಕಾಯುಕ್ತದ ಕೆಲವು ಅಧಿಕಾರಿಗಳಿಂದ ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ ಮಾಡಿಸಿದ್ದ. ಬೆಂಗಳೂರು ನಗರ ಹೊರತುಪಡಿಸಿ ಉಳಿದ ಜಿಲ್ಲೆಗಳ ಲೋಕಾ ಎಸ್ಪಿಗಳಿಂದಲೂ ಕ್ರಿಪ್ಟೋ ಕರೆನ್ಸಿಯಲ್ಲಿ ಮಧ್ಯವರ್ತಿಗಳ ಮೂಲಕ ಹೂಡಿಕೆ ಮಾಡಿಸಿದ್ದ ಎಂಬ ಆಪಾದನೆ ಕೇಳಿ ಬಂದಿತ್ತು.

 

ಅಬಕಾರಿ ಡಿಸಿಗಳಿಂದ ತಿಂಗಳಿಗೆ ಲಕ್ಷಕ್ಕೂ ಹೆಚ್ಚು ವಸೂಲಿ!

 

ಹಣಕ್ಕಾಗಿ ಬೇಡಿಕೆ ಮತ್ತು ಹಣ ನೀಡದೇ ಇದ್ದ ಹಲವು ಅಧಿಕಾರಿಗಳಿಗೆ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿತನಾಗಿರುವ ನಿಂಗಪ್ಪ, ಅಬಕಾರಿ ಡಿಸಿಗಳಿಂದ ತಿಂಗಳಿಗೆ ಲಕ್ಷಕ್ಕೂ ಹೆಚ್ಚು ವಸೂಲು ಮಾಡಿದ್ದಾನೆ ಎಂಬ ಆಪಾದನೆ ಕೇಳಿ ಬಂದಿದೆ. ವಿಜಯನಗರ ಮೆಟ್ರೋ ಸ್ಟೇಷನ್‌, ಜೀವನ್‌ ಭೀಮಾ ನಗರ, ಎಂ ಜಿ ರಸ್ತೆ, ಜೆಡಿಎಸ್‌ನ ಹಳೇ ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಹಣವನ್ನು ವಸೂಲು ಮಾಡಿದ್ದ ಎಂದು ಹೇಳಲಾಗಿತ್ತು.

 

ಅಬಕಾರಿ ಹಗರಣವೊಂದರಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗಿರುವ 100ಕ್ಕೂ ಹೆಚ್ಚು ಅಬಕಾರಿ ಅಧಿಕಾರಿಗಳಿಂದ ತಿಂಗಳಿಗೆ ತಲಾ 1 ಲಕ್ಷ ರು ನಂತೆ ವಸೂಲು ಮಾಡಲಾಗುತ್ತಿತ್ತು. ಈ ಮಧ್ಯೆ ಇದೇ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ಅಬಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸ್‌ ವಿಭಾಗದ ಮತ್ತೊಬ್ಬ ಎಸ್‌ಪಿಯೊಬ್ಬರು ಮೊಕದ್ದಮೆ ದಾಖಲಿಸಿದ್ದರು ಎಂದು ತಿಳಿದು ಬಂದಿತ್ತು.

 

ಕೋಟ್ಯಂತರ ರು. ಕಪ್ಪುಹಣ ವರ್ಗಾವಣೆ; ಅಶ್ವಿನ್‌ ಕುಕೃತ್ಯದ ಬಗ್ಗೆ ಸಾಕ್ಷ್ಯ ನುಡಿದ ಇ ಡಿ ಉಪ ನಿರ್ದೇಶಕ

 

ಪ್ರತಿ ತಿಂಗಳೂ ತಲಾ 1 ಲಕ್ಷ ರು ನೀಡುತ್ತಿದ್ದರೂ ಸಹ ಮೊಕದ್ದಮೆ ದಾಖಲಾಗಿದ್ದಕ್ಕೆ ಈಗಾಗಲೇ ಹಣ ಕೊಟ್ಟಿದ್ದ ಅಧಿಕಾರಿಗಳು ಆರೋಪಿತ ನಿಂಗಪ್ಪ ವಿರುದ್ಧ ತಿರುಗಿ ಬಿದ್ದಿದ್ದರು ಎಂದು ಗೊತ್ತಾಗಿದೆ.

 

ಕೆಲ ವರ್ಷಗಳ ಹಿಂದೆ ನಿಂಗಪ್ಪ, ಸೇವೆಯಿಂದ ವಜಾಗೊಂಡಿದ್ದ. ಬಳಿಕ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳನ್ನು ಬೆದರಿಸಿ ಸುಲಿಗೆಯನ್ನೇ ವೃತ್ತಿ ಮಾಡಿಕೊಂಡಿದ್ದ. ಈ ಸಂಬಂಧ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಹಲವು ಬಾರಿ ಜೈಲು ಸೇರಿದ್ದ ಎಂದು ತಿಳಿದು ಬಂದಿದೆ.

 

ಲೋಕಾ ಪೊಲೀಸರ ಶೋಧ; ಬರಿಗೈಯಲ್ಲಿ ಮರಳಿದ ಪೊಲೀಸರು, ತಲೆಮರೆಸಿಕೊಂಡಿದ್ದಾರೆಯೇ ಜೋಷಿ?

 

ವಿಶೇಷವೆಂದರೇ ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೂ ಲೋಕಾಯುಕ್ತರಾಗಿದ್ದ ಭಾಸ್ಕರರಾವ್‌ ಅವರ ಪುತ್ರ ಮತ್ತು ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ಹಲವರಿಂದ ಹಣಕ್ಕಾಗಿ ಬೇಡಿಕೆ ಇರಿಸಿದ್ದರು. ಆ ಸಂದರ್ಭದಲ್ಲಿ ಲೋಕಾಯುಕ್ತ ಎಸ್ಪಿಯಾಗಿದ್ದ ಸೋನಿಯಾ ನಾರಂಗ್ ಅವರು ಈ ಪ್ರಕರಣವನ್ನು ಬಹಿರಂಗಪಡಿಸಿದ್ದರು. ಅಲ್ಲದೇ ಲೋಕಾಯುಕ್ತ ಹುದ್ದೆಗೆ ಭಾಸ್ಕರರಾವ್‌ ಅವರು ರಾಜೀನಾಮೆ ನೀಡಿದ್ದರು. ಹಾಗೂ ಅವರ ಪುತ್ರ ಅಶ್ವಿನ್‌ ರಾವ್‌ ಸಹ ಪೊಲೀಸರ ಬಂಧನಕ್ಕೆ ಒಳಗಾಗಿದ್ದ.

 

ಈ ಪ್ರಕರಣದ ನಂತರ ಲೋಕಾಯುಕ್ತಕ್ಕಿದ್ದ ಪೊಲೀಸ್‌ ಅಧಿಕಾರವನ್ನು ಮೊಟಕುಗೊಳಿಸಿ, ಭ್ರಷ್ಟಾಚಾರ ನಿಗ್ರಹ ದಳವನ್ನು ಸ್ಥಾಪಿಸಲಾಗಿತ್ತು. ಆ ನಂತರ ಎಸಿಬಿಯನ್ನೂ ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಗೆ ಪುನಃ ಪೊಲೀಸ್‌ ಅಧಿಕಾರವನ್ನು ಮರು ಸ್ಥಾಪಿಸಲಾಗಿತ್ತು.  ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸಿರುವ ಹೊತ್ತಿನಲ್ಲೇ  ಲೋಕಾಯುಕ್ತ ಹೆಸರಿನಲ್ಲಿ ನಿಂಗಪ್ಪ ಎಂಬಾತ ಹಣ ವಸೂಲಿ ಮಾಡಿರುವ ಪ್ರಕರಣವು ಮುನ್ನೆಲೆಗೆ ಬಂದಿದೆ. ಅಲ್ಲದೇ  ಲೋಕಾಯುಕ್ತ ಸಂಸ್ಥೆಯ ವಿಶ್ವಾಸಾರ್ಹತೆಯ ಪ್ರಶ್ನೆಯೂ ಎದುರಾಗಿದೆ.

Hot this week

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

Topics

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

Related Articles

Popular Categories

spot_imgspot_img
error: Content is protected !!