Wednesday | March 25, 2026 |

ಅಕ್ರಮ ವಲಸಿಗರ ಮನೆಗಳ ತೆರವು ಕಾರ್ಯಾಚರಣೆ; ಬಿಎಸ್‌ಡಬ್ಲ್ಯೂಎಂಎಲ್‌ಗೆ ಅಧಿಕಾರವೇ ಇಲ್ಲ

Support THE-FILE

spot_img

ಬೆಂಗಳೂರು; ಯಲಹಂಕದಲ್ಲಿನ ಕೋಗಿಲು ಕ್ರಾಸ್‌ ಬಳಿ ಈಚೆಗಷ್ಟೇ ಮನೆಗಳನ್ನು ತೆರವು ಕಾರ್ಯಾಚರಣೆ ನಡೆಸಿದ್ದ ಪ್ರಕರಣದಲ್ಲಿ ಕೇರಳ ಮುಖ್ಯಮಂತ್ರಿ ಮತ್ತು ಎಐಸಿಸಿ ಕೆ ಸಿ ವೇಣುಗೋಪಾಲ್ ಅವರು ಮಧ್ಯ ಪ್ರವೇಶಿಸಿದ್ದರ ಬೆನ್ನಲ್ಲೇ ಇದೇ ಪ್ರಕರಣದಲ್ಲಿ ಬಿಎಸ್‌ಡಬ್ಲ್ಯೂಎಂಎಲ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಐಎಎಸ್ ಅಧಿಕಾರಿ ಕರೀಗೌಡ ಅವರ ವಿರುದ್ಧವೂ ಆರೋಪ ಕೇಳಿ ಬಂದಿದೆ.

 

ಗ್ರೇಟರ್ ಬೆಂಗಳೂರು ಉತ್ತರ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ವಾಸಿಸುತ್ತಿರುವ ನಾಗರೀಕರ ಮನೆಗಳನ್ನು ಅತಿಕ್ರಮಣವಾಗಿ ತೆರವುಗೊಳಿಸಿರುವ ಬಿಎಸ್ಡಬ್ಲ್ಯೂಎಂಎಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರಿಗೌಡ ಐಎಎಸ್ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಅವರಿಗೆ ನೈಜ ಹೋರಾಟಗಾರರ ವೇದಿಕೆಯು ಇ-ಮೈಲ್ ಮೂಲಕ ದೂರು ಸಲ್ಲಿಸಿದೆ.

 

ಈ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಕಾನೂನು ಮತ್ತು ನಿಯಮಗಳನ್ನು ಮೀರಿ ವಾಸ ಮಾಡುತ್ತಿರುವ ನಾಗರೀಕರ ಮನೆಗಳನ್ನು ತೆರವು ಕಾರ್ಯಾಚರಣೆಗೆ ಸರ್ಕಾರವು ಕಾನೂನು ಮತ್ತು ನಿಯಮಗಳನ್ನು ರೂಪಿಸಿದೆ. ಆದರೆ ಕೋಗಿಲು ಕ್ರಾಸ್‌ನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ವಲಸಿಗರನ್ನು ತೆರವುಗೊಳಿಸಲು ನಡೆಸಿದ್ದ ಕಾರ್ಯಾಚರಣೆಯು, ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ತೀವ್ರ ಮುಜುಗರಕ್ಕೀಡು ಮಾಡಿತ್ತು.

 

ವಲಸಿಗರ ಮನೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದ ಬಿ ಎಸ್ ಡಬ್ಲ್ಯೂ ಎಂಎಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರಿಗೌಡ ಅವರು ಕಾನೂನುಬಾಹಿರವಾಗಿ ಪ್ರಕ್ರಿಯೆ ನಡೆಸಿದ್ದರು ನೈಜ ಹೋರಾಟಗಾರರ ವೇದಿಕೆಯ ಹೆಚ್‌ ಎಂ ವೆಂಕಟೇಶ್ ಅವರು ಎಂದು ದೂರಿನಲ್ಲಿ ಆಪಾದಿಸಿದ್ದಾರೆ. ಅಲ್ಲದೇ ಕರೀಗೌಡ ಅವರು ಈ ಪ್ರಕರಣದಲ್ಲಿ ಉದ್ಧಟತನದಿಂದ ವರ್ತಿಸಿದ್ದಾರೆ. ಹಾಗೂ ಇದಿರಂದ ಸರ್ಕಾರಕ್ಕೆ ಮುಜುಗರ ಉಂಟಾಗಿದೆ ಎಂದು ಆರೋಪಿಸಿರುವುದು ದೂರಿನಿಂದ ಗೊತ್ತಾಗಿದೆ.

 

 

‘ಐಎಎಸ್ ಕರಿಗೌಡ ಅವರು ಕಾನೂನುಬಾಹಿರ ಪ್ರಕ್ರಿಯೆ ಮೂಲಕ ಉದ್ಧಟತನದಿಂದ ವರ್ತಿಸಿದ ಪರಿಣಾಮ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಇವರ ಕಾನೂನು ಬಾಹಿರ ಪ್ರಕ್ರಿಯೆಯಿಂದ ಚುನಾಯಿತ ಸರ್ಕಾರ ಮತ್ತು ಆಡಳಿತರೂಢ ಕಾಂಗ್ರೆಸ್ ಪಕ್ಷದ ಮೇಲೆ ವಿರೋಧ ಪಕ್ಷಗಳಿಗೆ ಈ ಅತಿಕ್ರಮಣ ತೆರವು ಕಾರ್ಯಾಚರಣೆಯು ಅಸ್ತ್ರವಾಗಿ ಆಡಳಿತರೂಢ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ತಂದೊಡ್ಡಿರುವ ಇವರನ್ನು ಹೊಂದಿರುವ ಹುದ್ದೆಯಿಂದ ಅಮಾನತ್ತುಗೊಳಿಸಬೇಕು. ಸರ್ಕಾರವು ಅವರ ಮೇಲೆ ಕಾನೂನು ಕ್ರಮ ಕೈಗೊಂಡು ಅವರಿಂದ ಆಗಿರುವ ಅಕ್ರಮಗಳ ಬಗ್ಗೆ ವಿಚಾರಣೆ ನಡೆಸಿ ಸರ್ಕಾರಕ್ಕೆ ಉಂಟಾದ ನಷ್ಟವನ್ನು ಮತ್ತು ಕೋಗಿಲು ಬಡಾವಣೆಯಲ್ಲಿ ವಾಸಿಸುತ್ತಿರುವ ನಾಗರೀಕರ ಆರ್ಥಿಕ ಸಂಕಷ್ಟಕ್ಕೆ ಕಾರಣರಾಗಿರುವ ಈ ಅಧಿಕಾರಿಯಿಂದಲೇ ಹಣವನ್ನು ವಸೂಲಿ ಮಾಡಿ ಕ್ರಮ ಕೈಗೊಳ್ಳಬೇಕು,’ ಎಂದು ನೈಜ ಹೋರಾಟಗಾರರ ವೇದಿಕೆಯು ಕೋರಿದೆ.

 

 

ಬಿ ಎಸ್ ಡಬ್ಲ್ಯೂ ಎಂ ಎಲ್ ಕಂಪನಿಗಳ ಕಾಯ್ದೆ ಅಡಿಯಲ್ಲಿ 2021ರಲ್ಲಿ ರಚಿಸಲಾದ ಕಂಪನಿ ಯಾಗಿದೆ. ಅದು ಸ್ವತಂತ್ರವಾಗಿ ಅತಿಕ್ರಮಣ ತೆರವುಗೊಳಿಸುವ ಕಾರ್ಯಾಚರಣೆಯನ್ನು ನಡೆಸುವ ಅಧಿಕಾರ ಹೊಂದಿಲ್ಲ ಆದರೂ ಸಹಿತ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರಿಗೌಡ ಅವರು ಕಾನೂನನ್ನು ಕೈಗೆ ತೆಗೆದುಕೊಂಡು ತೆರವು ಕಾರ್ಯಾಚರಣೆ ನಡೆಸುವಂತೆ ನಿರ್ದೇಶನವನ್ನು ನೀಡಿದ್ದಾರೆ. ಮತ್ತು ಇದಕ್ಕೆ ಸಂಬಂಧಿಸಿದ ಆದೇಶವನ್ನು ಹೊರಡಿಸಿದ್ದಾರೆ ಎಂದು ಸರ್ಕಾರದ ಗಮನ ಸೆಳೆದಿರುವುದು ಗೊತ್ತಾಗಿದೆ.

 

2013 ರಿಂದಲೂ ಕೋಗಿಲು ಬಡಾವಣೆಯಲ್ಲಿ ನಾಗರಿಕರು ಅತಿಕ್ರಮಣವಾಗಿ ವಾಸ ಮಾಡುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ದಾಖಲೆಗಳನ್ನು ಸಲ್ಲಿಸಲಾಗಿದೆ. ಹಾಗಿದ್ದಲ್ಲಿ ಭೂಮಿಯನ್ನು ಬಿ ಎಸ್ ಡಬ್ಲ್ಯೂ ಎಂ.ಎಲ್ 2021ರ ನಂತರ ಸ್ವಾಧೀನ ಪಡಿಸಿಕೊಳ್ಳುವಾಗ ನಾಗರಿಕರು ಈ ಜಮೀನಿನಲ್ಲಿ ಅತಿಕ್ರಮವಾಗಿ ವಾಸಿಸುತ್ತಿದ್ದಾರೆ ಎಂಬುದನ್ನು ಗಮನಿಸಿರಲಿಲ್ಲವೇ ಎಂದು ದೂರಿನಲ್ಲಿ ಪ್ರಶ್ನಿಸಿರುವುದು ತಿಳಿದು ಬಂದಿದೆ.

 

 

 

‘ಇದರಿಂದಾಗಿ ಅಧಿಕಾರಿಗಳು ಸದರಿ ಸ್ಥಳಕ್ಕೆ ಭೇಟಿ ನೀಡದೆ ಸ್ವಾಧೀನ ಪಡಿಸಿಕೊಂಡಿರುತ್ತಾರೆ ಎನ್ನುವುದು ಸಿದ್ಧಗೊಳ್ಳುತ್ತದೆ. ಸ್ಥಳಕ್ಕೆ ಭೇಟಿ ನೀಡದೇ ಭೂಮಿಯನ್ನು ಸುಪರ್ದಿಗೆ ತೆಗೆದುಕೊಳ್ಳುವುದು ನಿಯಮಬಾಹಿರ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ಕರ್ತವ್ಯನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಬಿಎಸ್ ಡಬ್ಲ್ಯೂ ಎಂ ಎಲ್ ಅಧಿಕಾರಿಗಳು ತಮ್ಮ ಸ್ವಾಧೀನದಲ್ಲಿದೆ ಎಂದು ಹೇಳುವ ಜಮೀನಿನಲ್ಲಿ ನಾಗರೀಕರು ಅವರ ಸ್ವಾಧೀನದ ಮನೆಗಳಲ್ಲಿ ಅತಿಕ್ರಮವಾಗಿ ವಾಸ ಮಾಡುತ್ತಿರುವ ಬಗ್ಗೆ ಸರ್ಕಾರಕ್ಕೆ ಮಾಹಿತಿಯನ್ನು ನೀಡಿರುವುದಿಲ್ಲ. ಹಾಗಿದ್ದರೆ ಜಮೀನು . ಸಾರ್ವಜನಿಕರು ಮೊದಲೇ ಮನೆ ಕಟ್ಟಿಕೊಂಡಿದ್ದಲ್ಲಿ ಆ ಜಮೀನು ಬಿಎಸ್ ಡಬ್ಲ್ಯೂ ಎಂ ಎಲ್ ಸ್ವಾಧೀನದಲ್ಲಿರಲಿಲ್ಲ,’ ಎಂಬುದನ್ನು ನಿರೂಪಿಸುತ್ತದೆ ಎಂದು ದೂರಿನಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಈ ಬಡಾವಣೆಯಲ್ಲಿ ವಾಸಿಸುವ ಮನೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಬಳಸಲಾದ ಜೆಸಿಬಿ ಮತ್ತು ಕಾರ್ಮಿಕರು ಬಿ ಎಸ್ ಡಬ್ಲ್ಯೂ ಎಂ ಎಲ್ ಕಂಪನಿಗೆ ಸೇರಿದವರಲ್ಲ. ಮತ್ತು ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಯಾವುದೇ ಸಂಸ್ಥೆಗೆ ಕಾರ್ಯ ಆದೇಶವನ್ನು ನೀಡಿಲ್ಲ. ಅಧಿಕೃತ ಸಿದ್ಧತೆಗಳನ್ನು ಮಾಡದೆ ಅನಧಿಕೃತ ಮತ್ತು ಖಾಸಗಿ ವ್ಯಕ್ತಿಗಳ ಮೂಲಕ ಕಾನೂನು ಬಾಹಿರವಾಗಿ ತೆರವು ಕಾರ್ಯಾಚರಣೆ ನಡೆದಿದೆ. ಇದಕ್ಕೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರಿಗೌಡ ಇವರು ನೇರ ಹೊಣೆಗಾರರು ಎಂದು ಆಪಾದಿಸಿರುವುದು ತಿಳಿದು ಬಂದಿದೆ.

 

‘ಬಹಳ ಮುಖ್ಯವಾಗಿ ಬಿಎಸ್ಡಬ್ಲ್ಯೂಎಂಎಲ್ ಕಂಪನಿಯು ಸದರಿ ಜಮೀನನ್ನು ವಶ ಪಡಿಸಿಕೊಂಡಿದೆ ಎಂದು ಹೇಳುವ ಅಥವಾ ಸಾಬೀತುಪಡಿಸುವ ಯಾವುದೇ ದಾಖಲೆಗಳು ಅವರ ಬಳಿ ಲಭ್ಯವಿಲ್ಲವೆಂಬ ಮಾಹಿತಿ ಇದೆ. ಬಿಬಿಎಂಪಿ ಹೆಸರಿನಲ್ಲಿದೆ ಎಂದು ಮೂಲತ ಹೇಳಲಾಗುವ ಜಮೀನು ಬಿ ಎಸ್ ಡಬ್ಲ್ಯೂ ಎಂ ಎಲ್ ನವರು ತನ್ನ ವಶಕ್ಕೆ ಪಡೆಯದೆ ಅತಿಕ್ರಮಣ ಮಾಡಿರುವ ನಾಗರಿಕರನ್ನು ತೆರವುಗೊಳಿಸುವುದು ಕಾನೂನುಬಾಹಿರವಾಗಿದೆ,’ ಎಂದು ವಿವರಿಸಿರುವುದು ದೂರಿನಿಂದ ಗೊತ್ತಾಗಿದೆ.

 

ಮುಖ್ಯವಾಗಿ ಘನತ್ಯಾಜ್ಯ ನಿರ್ವಹಣೆ ನಿಯಮಗಳ ಪ್ರಕಾರ ದೇಶಾದ್ಯಂತ ಕ್ವಾರಿಪೀಟ್ಗಳಲ್ಲಿ ಕಸ ಸುರಿಯುವುದು ನಿಷೇಧಿಸಲ್ಪಟ್ಟಿದೆ. ಹೀಗಾಗಿ ಈ ಪ್ರದೇಶವು ಕ್ವಾರಿಪೀಟ್ ಆಗಿದೆ. ಆದರೂ ಸಹ ಘನತ್ಯಾಜ್ಯ ವಿಲೇವಾರಿಗೆ ಬಳಸಲು ಸಾಧ್ಯವಿಲ್ಲ ಎಂಬ ಸಾಮಾನ್ಯ ಜ್ಞಾನವು ಅಧಿಕಾರಿಗಳಿಗೆ ಇಲ್ಲ. ಮತ್ತು ವಸತಿ ಪ್ರದೇಶದ ಬಡಾವಣೆಯ ಸಮೀಪದಲ್ಲಿರುವುದರಿಂದ ಈ ಪ್ರದೇಶವನ್ನು ಯಾವುದೇ ಸಂದರ್ಭದಲ್ಲಿ ಘನತ್ಯಾಜ್ಯ ವಿಲೇವಾರಿಗೆ ಸೂಕ್ತವೆಂದು ಗುರುತಿಸುವುದು ಚಾಲ್ತಿಯಲ್ಲಿರುವ ಕಾನೂನುಗಳ ಉಲ್ಲಂಘನೆ ಆಗಲಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

 

ಬಿ ಎಸ್ ಡಬ್ಲ್ಯೂ ಎಂ ಎಲ್ ಅಥವಾ ಜಿಬಿಎ ಕರ್ನಾಟಕ ಸರ್ಕಾರದಿಂದ ನ್ಯಾಯಾಲಯಗಳಿಗೆ ನೀಡಿದ ಸೃಷ್ಟಿಕರಣಗಳು ಮತ್ತು ದಾಖಲೆಗಳ ಪ್ರಕಾರ ಈ ಪ್ರದೇಶವು ಘನ ತ್ಯಾಜ್ಯ ವಿಲೇವಾರಿಗಾಗಿ ಬಿಬಿಎಂಪಿಗೆ ಹಸ್ತಾಂತರಿಸಲಾದ ಕ್ವಾರಿ ಪಿಟ್ ಆಗಿತ್ತು. ಆದರೆ ಕ್ವಾರಿಪಿಟ್‌ಗಳು ಆಳವಾದ ಗುಂಡಿಗಳಾಗಿರಬೇಕಾಗಿತ್ತು. ಈ ಪ್ರದೇಶವು ಸಮತಟ್ಟಾದ ಭೂಮಿಯಾಗಿರುವ ಕಾರಣಕ್ಕಾಗಿ ಅದು ಕ್ವಾರಿ ಪಿಟ್ ಅಲ್ಲವೆಂಬುದು ಅಲ್ಲಿನ ನಾಗರಿಕರು ವಾಸ ಮಾಡುತ್ತಿರುವ ಮನೆಗಳಿಂದ ತಿಳಿದು ಬರುತ್ತದೆ ಎಂದು ವಿವರಿಸಿದ್ದಾರೆ.

 

‘ತಮ್ಮದೇ ಸರ್ಕಾರದ ಅಧಿಕಾರಿಯೊಬ್ಬರು ಕಾನೂನುಗಳನ್ನು ಉಲ್ಲಂಘಿಸಿ ತೆರವು ಕಾರ್ಯಾಚರಣೆ ನಡೆಸಿದ ಪರಿಣಾಮ ವಿರೋಧ ಪಕ್ಷಗಳಿಗೆ ಸರ್ಕಾರದ ವಿರುದ್ಧ ಬಳಸಿಕೊಳ್ಳುವ ಶಸ್ತ್ರಾಸ್ತ್ರ, ಆಯುಧಗಳನ್ನು ನೀಡಿದಂತಾಗಿದೆ. ಸರ್ಕಾರವನ್ನು ರಾಷ್ಟ್ರಮಟ್ಟದಲ್ಲಿ ಮುಜುಗರ ಪಡಿಸಿ, ನ್ಯಾಯಾಲಯದ ಮುಂದೆ ಸರ್ಕಾರ ತಲೆತಗ್ಗಿಸುವಂತೆ ಮಾಡಿದೆ. ಇದಕ್ಕೆ ಬಿ ಎಸ್ ಡಬ್ಲ್ಯೂ ಎಂ ಎಲ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರಿಗೌಡ ಐಎಎಸ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತಕ್ಷಣ ಜರೂರುಗಿಸಬೇಕು,’ ಎಂದು ನೈಜ ಹೋರಾಟಗಾರರ ವೇದಿಕೆಯು ಒತ್ತಾಯಿಸಿದೆ.

 

 

ಕೋಗಿಲು ಬಡಾವಣೆಯಲ್ಲಿ ವಾಸಿಸುವ ನಾಗರಿಕರ ಮನೆಗಳನ್ನು ಕಾನೂನುಬಾಹಿರವಾಗಿ ತೆರವುಗೊಳಿಸಿರುವುದರಿಂದ ಅವರಿಗೆ ಆಗಿರುವ ನಷ್ಟ, ಮಾನಸಿಕ ಹಿಂಸೆ, ದೈಹಿಕ ಹಿಂಸೆ ಮತ್ತು ಶ್ರಮಕ್ಕೆ ನ್ಯಾಯ ಮತ್ತು ಮತ್ತು ಅಲ್ಲಿ ವಾಸವಿದ್ದವರಿಗೆ ಸಾರ್ವಜನಿಕರ ತೆರಿಗೆ ಹಣದಿಂದಲೇ ಪುನರ್ವಸತಿ ಒದಗಿಸಬೇಕು ಎಂದು ಕೋರಿದ್ದಾರೆ.

 

ಇಂತಹ ಪರಿಸ್ಥಿತಿಯನ್ನು ಸೃಷ್ಟಿಸಿರುವ ಈ ಅಧಿಕಾರಿಯಿಂದಲೇ ತೆರವು ಕಾರ್ಯಾಚರಣೆ ಮತ್ತು ಪುನರ್ವಸತಿಗಾಗಿ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಮತ್ತು ನ್ಯಾಯಾಲಯದ ಖರ್ಚು ವೆಚ್ಚಗಳನ್ನು ವಸೂಲಿ ಮಾಡಬೇಕು. ಸಾರ್ವಜನಿಕರ ಕಟ್ಟಿರುವ ತೆರಿಗೆ ಹಣಕ್ಕೆ ನ್ಯಾಯ ಒದಗಿಸಿ ಕೊಡಬೇಕು ಎಂದು ನೈಜ ಹೋರಾಟಗಾರರ ವೇದಿಕೆಯು ಕೋರಿರುವುದು ಗೊತ್ತಾಗಿದೆ.

Hot this week

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

Topics

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

Related Articles

Popular Categories

error: Content is protected !!