Saturday | March 14, 2026 |

ಅಮೃತ್ 2.0; ಜನಸಂಖ್ಯೆಗೆ ತಕ್ಕಂತೆ ಬಿಡುಗಡೆಯಾಗದ ಅನುದಾನ, ಸರ್ಕಾರದ ಕದ ತಟ್ಟಿದ ಕಾಂಗ್ರೆಸ್ ಶಾಸಕ

Support THE-FILE

spot_img

ಬೆಂಗಳೂರು; ಕೇಂದ್ರ ಪುರಸ್ಕೃತ ಅಮೃತ್  2.0 ಯೋಜನೆಯಡಿ ವಿಜಯಪುರ ಜಿಲ್ಲೆಯ ಹಲವು ತಾಲೂಕುಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಬಿಡುಗಡೆಯಾಗಿಲ್ಲ. ಈ ಜಿಲ್ಲೆಯ ಮುದ್ದೇಬಿಹಾಳ ಸೇರಿದಂತೆ ಇನ್ನಿತರೆ ತಾಲೂಕುಗಳಿಗೆ ಒಟ್ಟಾರೆ 98.40 ಕೋಟಿ ರು ಮಾತ್ರ ಬಿಡುಗಡೆ ಮಾಡಿದೆ. ಆದರೆ ಇದು ಕೇವಲ ಕಾಗದದ ಮೇಲಷ್ಟೇ ಉಳಿದಿದೆಯೇ ವಿನಃ ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ.

 

ಈ ಸಂಬಂಧ ಕಾಂಗ್ರೆಸ್ ಶಾಸಕ ಅಪ್ಪಾಜಿ ಸಿ ಎಸ್ ನಾಡಗೌಡ ಅವರು 2026ರ ಜನವರಿ 1ರಂದು ಪತ್ರ ಬರೆದಿದ್ದಾರೆ. ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಅವರು ಸಹ ಅನುದಾನ ನೀಡುತ್ತಿಲ್ಲ ಅಲವತ್ತುಕೊಂಡಿದ್ದರು. ಇದೀಗ ಕಾಂಗ್ರೆಸ್‌ನ ಮತ್ತೊಬ್ಬ ಶಾಸಕ ಅಪ್ಪಾಜಿ ಸಿ ಎಸ್ ನಾಡಗೌಡ ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಪತ್ರ ಬರೆದು ಅಲವತ್ತುಕೊಂಡಿದ್ದಾರೆ.

 

ಈ ಪತ್ರವನ್ನಾಧರಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅವರು ಬಜೆಟ್‌ನಲ್ಲಿ ಅನುದಾನ ಕೋರಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ 2026ರ ಫೆ.9ರಂದು  ಪತ್ರ ಬರೆದಿದ್ದಾರೆ.  ಈ ಎರಡೂ ಪತ್ರಗಳೂ ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಶಾಸಕರ ಪತ್ರದಲ್ಲೇನಿದೆ?

 

ಕೇಂದ್ರ ಪುರಸ್ಕೃತ ಅಮೃತ್‌ 2.0 ಯೋಜನೆಯಡಿ ಮುದ್ದೇಬಿಹಾಳ, ತಾಳಿಕೋಟೆ, ನಾಲತವಾಡ ಪಟ್ಟಣಗಳಿಗೆ ನಿರಂತರ ಒತ್ತಡಯುಕ್ತ ನೀರು ಸರಬರಾಜು ಯೋಜನೆಯನ್ನು ವಿಸ್ತರಿಸಬೇಕು. ಈ ಯೋಜನೆಯಡಿಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು ಬಾಕಿ ಉಳಿದಿದ್ದವು. ಇದಕ್ಕೆ ಅನುದಾನದ ಕೊರತೆಯೇ ಕಾರಣವಾಗಿತ್ತು. ಹೀಗಾಗಿ ಬಾಕಿ ಉಳಿದ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 42.00 ಕೋಟಿ ರು ಅನುದಾನವನ್ನು 2026-27ನೇ ಸಾಲಿನ ಆಯವ್ಯಯದಲ್ಲಿ ಸೇರ್ಪಡೆ ಮಾಡಿ ಬಿಡುಗಡೆಗೊಳಿಸಬೇಕು ಎಂದು ಶಾಸಕ ಅಪ್ಪಾಜಿ ಸಿ ಎಸ್‌ ನಾಡಗೌಡ ಅವರು ಪತ್ರದಲ್ಲಿ ಕೋರಿದ್ದರು.

 

 

ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು 2 ತಾಲೂಕು, 2 ಪುರಸಭೆ, ಒಂದು ಪಟ್ಟಣ ಪಂಚಾಯ್ತಿ ಇದೆ. ಕೇಂದ್ರ ಪುರಸ್ಕೃತ ಅಮೃತ್‌ 2.0 ಯೋಜನೆಯಡಿ ಹಂತ -1 ಮತ್ತು ಹಂತ 2ಕ್ಕೆ ಮುದ್ದೆಬಿಹಾಳ ಪಟ್ಟಣಕ್ಕೆ 47.45 ಕೋಟಿ ರು., ತಾಳಿಕೋಟೆ ಪಟ್ಟಣಕ್ಕೆ 31.75 ಕೋಟಿ ಮತ್ತು ನಾಲತವಾಡ ಪಟ್ಟಣಕ್ಕೆ 19.20 ಕೋಟಿ ರು ಸೇರಿ ಒಟ್ಟಾರೆ 98.40 ಕೊಟಿ ರು ಅನುದಾನವನ್ನು ಮಿತಗೊಳಿಸಿ ಬಿಡುಗಡೆ ಮಾಡಿದೆ ಎಂದು ಸಚಿವರ ಗಮನ ಸೆಳೆದಿರುವುದು ಪತ್ರದಿಂದ ತಿಳಿದು ಬಂದಿದೆ.

 

ಜನಸಂಖ್ಯೆಗೆ ಅನುಗುಣವಾಗಿ ಬಿಡುಗಡೆಯಾಗದ ಅನುದಾನ

 

ಈ ಮೂರು ಪಟ್ಟಣಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಬಿಡುಗಡೆಯಾಗಿಲ್ಲ. ಬದಲಿಗೆ ಮುದ್ದೆಬಿಹಾಳ ಪಟ್ಟಣಕ್ಕೆ 15.00 ಕೊಟಿ ರು., ತಾಳಿಕೋಟೆ ಪಟ್ಟಣಕ್ಕೆ 24.00 ಕೋಟಿ, ನಾಲತವಾಡ ಪಟ್ಟಣಕ್ಕೆ 3.00 ಕೋಟಿ ರುಪಾಯಿ ಮಾತ್ರ ಬಿಡುಗಡೆ ಮಾಡಿದೆ. ಅನುದಾನವನ್ನು ಮಿತಗೊಳಿಸಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದ್ದ 98.40 ಕೋಟಿ ರುಪಾಯಿ ಪೂರ್ಣ ಪ್ರಮಾಣದಲ್ಲಿ ಬಿಡುಗಡೆಯಾಗಿಲ್ಲ ಎಂಬುದು ಪತ್ರದಿಂದ ಗೊತ್ತಾಗಿದೆ.

 

‘ನಗರಾಭಿವೃದ್ದಿ ಸಚಿವರು ಈ ಬಗ್ಗೆ ಅಗತ್ಯವಾಗಿ ಕ್ರಮ ಕೈಗೊಳ್ಳುವುದು ಎಂದು ಷರಾ ಬರೆದಿರುತ್ತೀರಿ. ಆದರೆ ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ. ಸಾರ್ವಜನಿಕರ ಬಹು ದಿನದ ಬೇಡಿಕೆಯಾದ ಅತೀ ಅವಶ್ಯಕವಿರುವ ಕುಡಿಯುವ ನೀರಿನ ಯೋಜನೆಗೆ ತಾವು ಆದ್ಯತೆ ಮೇಲೆ 42.00 ಕೋಟಿ ರುಪಾಯಿಗಳನ್ನು 2026-27ರ ಆಯವ್ಯಯದಲ್ಲಿ ಸೇರ್ಪಡೆ ಮಾಡಿ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು,’ ಎಂದು ಶಾಸಕ ಅಪ್ಪಾಜಿ ಸಿ ಎಸ್ ನಾಡಗೌಡ ಅವರು ಪತ್ರದಲ್ಲಿ ಕೋರಿರುವುದು ತಿಳಿದು ಬಂದಿದೆ.

 

ಈ ಪತ್ರವನ್ನಾಧರಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಯೂ ಸಹ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ವ್ಯವಸ್ಥಾಪಕ ನಿರ್ದೇಶಕರಿಗೆ 2026ರ ಫೆ.9ರಂದು ಪತ್ರ ಬರೆದಿದ್ದಾರೆ. ಬಜೆಟ್‌ನಲ್ಲಿ ಅನುದಾನ ಕೋರಬೇಕು ಎಂದು ಮುಖ್ಯಮಂತ್ರಿಗಳನ್ನು ಕೋರಬೇಕು ಎಂದು ಪತ್ರದಲ್ಲಿ ನಿರ್ದೇಶಿಸಿದ್ದಾರೆ.

 

 

ಅಮೃತ್‌ 2.0 ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡಲು ವಿಜಯಪುರ ಜಿಲ್ಲೆಗೆ   400 ಕೋಟಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರವು 2024-25ನೇ ಸಾಲಿನಲ್ಲಿ  ಜಂಟಿಯಾಗಿ ಮಂಜೂರು ಮಾಡಿದೆ.

 

2025ರ ಡಿಸೆಂಬರ್‍‌ನಲ್ಲಿ ನಡೆದಿದ್ದ ರಾಜ್ಯಸಭೆ ಅಧಿವೇಶನಕ್ಕೆ  ರಾಜ್ಯ ಸರ್ಕಾರವು ನೀಡಿರುವ ಉತ್ತರದ ಪ್ರಕಾರ ಅಮೃತ್ 2.0 ಯೋಜನೆಗಾಗಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳಕ್ಕೆ 28.79 ಕೋಟಿ, ನಲತವಾಡಕ್ಕೆ 18.04 ಕೋಟಿ , ತಾಳಿಕೋಟೆ ಪಟ್ಟಣಕ್ಕೆ 15.12 ಕೋಟಿ ರು ಅನುದಾನ ನಿಗದಿಯಾಗಿದೆ.

 

 

ಅಲ್ಲದೇ ರಾಜ್ಯದ 101 ಸ್ಥಳೀಯ ಸಂಸ್ಥೆಗಳಿಗೆ ಅಮೃತ್‌ 2.0 ಯೋಜನೆಗೆ ಕೇಂದ್ರ ಸರ್ಕಾರವು   4,628 ಕೋಟಿ ರು ಅನುದಾನ ನಿಗದಿಪಡಿಸಿದೆ. ಇಲ್ಲಿಯವರೆಗೆ ರಾಜ್ಯ ಸರ್ಕಾರವು 648 ಯೋಜನೆಗಳಿಗೆ ಪ್ರಸ್ತಾವ ಸಲ್ಲಿಸಿದೆ. ಇದರ ಒಟ್ಟು ಮೊತ್ತ 10.258.46 ಕೋಟಿಯಷ್ಟಿದೆ. ಇದನ್ನು ವಸತಿ ಮತ್ತು ನಗರ ಸಚಿವಾಲಯವು ಸಮ್ಮತಿಸಿದೆ. ಈ ಪೈಕಿ 214 ಯೋಜನೆಗಳ ಸಂಬಂಧ 8,559.59 ಕೋಟಿ ರು ಮೊತ್ತದ ಟೆಂಡರ್ ಕರೆಯಲಾಗಿತ್ತು. ಇದರಲ್ಲಿ 2,636.71 ಕೋಟಿ ರುಪಾಯಿ ಮೊತ್ತದ ಟೆಂಡರ್ ಪ್ರಕ್ರಿಯೆಗಳನ್ನು  ಭೌತಿಕವಾಗಿ ಪೂರ್ಣಗೊಳಿಸಿದೆ.

 

 

ಏನಿದು ಅಮೃತ್‌ ಯೋಜನೆ?

 

ಈ ಯೋಜನೆಯು ಭಾರತದ ಮೊದಲ, ಅತಿದೊಡ್ಡ ಗ್ರಾಮೀಣ ವಾಯು ಗುಣಮಟ್ಟದ ಮೇಲ್ವಿಚಾರಣಾ ಜಾಲವಾಗಿದೆ.  ಇದು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ​​ಕಚೇರಿಯ ಪ್ರಸ್ತಾವನೆಯಂತೆ ಅಕ್ಟೋಬರ್ 2022 ರಲ್ಲಿ ಐಐಟಿ ಕಾನ್ಪುರದಲ್ಲಿ ಸ್ಥಾಪಿಸಲಾದ ವಿಶ್ವ ದರ್ಜೆಯ ಸಂಶೋಧನಾ ಕೇಂದ್ರವಾದ ಸೆಂಟರ್ ಆಫ್ ಎಟಿಎಂಎಎನ್‌ನ ಪ್ರಮುಖ ಯೋಜನೆಯಾಗಿದೆ.

 

ಉತ್ತಮ ವಾಯು ಗುಣಮಟ್ಟದ ನೀತಿಗಳಿಗಾಗಿ ಭಾರತದ ರಾಜ್ಯಗಳಲ್ಲಿ ಗಾಳಿಯ ಗುಣಮಟ್ಟವನ್ನು ಮೇಲ್ವಿಚಾರಣೆ ಮಾಡುವುದು ಈ ಯೋಜನೆಯ ಗುರಿಯಾಗಿದೆ.  ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯ ‘ಅಮೃತ್ ಮಿತ್ರ’ ಕಾರ್ಯಕ್ರಮದಡಿ ಆಯ್ದ ಮಹಿಳಾ ಸ್ವಸಹಾಯ ಗುಂಪುಗಳನ್ನು ತೊಡಗಿಸಿಕೊಂಡು ವಿವಿಧ ಚಟುವಟಿಕೆಗಳಿಗೆ ಅನುದಾನ ಕೊಡುತ್ತಿದೆ. 

 

ಸ್ವಸಹಾಯ ಗುಂಪುಗಳ ಮೂಲಕ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ಅಮೃತ್ ಮಿತ್ರ ಎಂಬ ವಿಶೇಷ ಕಾರ್ಯಕ್ರಮವನ್ನೂ ಜಾರಿಗೆ ತಂದಿದೆ. ಉದ್ಯಾನ, ಆಟದ ಮೈದಾನಗಳ ನಿರ್ವಹಣೆ, ನೀರು ಶುದ್ದೀಕರಣ ಘಟಕ ಅಥವಾ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಸುತ್ತಮುತ್ತಲಿನ ಪ್ರದೇಶಗಳ ನಿರ್ವಹಣೆ ಹಾಗೂ ನೀರಿನ ಗುಣಮಟ್ಟ ಪರೀಕ್ಷೆ ಕುರಿತಂತೆ ಮಹಿಳಾ ಸ್ವ ಸಹಾಯ ಗುಂಪುಗಳನ್ನು ತೊಡಗಿಸಿಕೊಳ್ಳಲಿದೆ.

 

ರಾಜ್ಯದ 18 ಜಿಲ್ಲೆಗಳ 77 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೊದಲ ಹಂತದಲ್ಲಿ ಅಮೃತ್ ಮಿತ್ರ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಮೊದಲ ಹಂತದಲ್ಲಿ 152 ಪ್ರಸ್ತಾವನೆಗಳಿಗೆ 10.14 ಕೋಟಿ ರು ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ.

Hot this week

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

Topics

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

Related Articles

Popular Categories

error: Content is protected !!