Saturday | May 2, 2026 |

ವಿಶ್ವವಿದ್ಯಾಲಯವೇ ಒಂದು ಘಟಕ; ಉಪಸಮಿತಿ ಶಿಫಾರಸ್ಸಿಗೆ ಸತೀಶ್ ಜಾರಕಿಹೊಳಿ ವಿರೋಧ, ಸಿಎಂಗೆ ಪತ್ರ

ಬೆಂಗಳೂರು; ಉದ್ಯೋಗ ನೇಮಕಾತಿ ಸಮಯದಲ್ಲಿ ವಿಶ್ವವಿದ್ಯಾಲಯವನ್ನೇ ಒಂದು ಘಟಕವಾಗಿ ಪರಿಗಣಿಸಿ ಮೀಸಲಾತಿ ನಿಗದಿಪಡಿಸಲು ಸರ್ಕಾರವು ಮುಂದಾಗಿರುವ ಹೊತ್ತಿನಲ್ಲೇ ಸಚಿವರಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತಮ್ಮ ವಿರೋಧವನ್ನು ದಾಖಲಿಸಿದ್ದಾರೆ.

 

ಉದ್ಯೋಗ ನೇಮಕಾತಿ ಸಮಯದಲ್ಲಿ ವಿಶ್ವವಿದ್ಯಾಲಯವನ್ನೇ ಒಂದು ಘಟಕವಾಗಿ ಪರಿಗಣಿಸಿ ಮೀಸಲಾತಿ ನಿಗದಿಪಡಿಸುವುದು ಪರಿಶಿಷ್ಟ ಜಾತಿಯವರಿಗೆ ಮರಣ ಶಾಸನವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೂ ಸಮಾಜ ಕಲ್ಯಾಣ ಸಚಿವ ಡಾ ಹೆಚ್‌ ಸಿ ಮಹದೇವಪ್ಪ ಅವರು ವಿಶ್ವವಿದ್ಯಾಲಯವನ್ನೇ ಒಂದು ಘಟಕವಾಗಿ ಪರಿಗಣಿಸಿ ಮೀಸಲಾತಿ ನಿಗದಿಪಡಿಸಲು ತರಾತುರಿಯಲ್ಲಿ ಮುಂದಾಗಿರುವ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಅವರು ಬರೆದಿರುವ ಪತ್ರವು ಮುನ್ನೆಲೆಗೆ ಬಂದಿದೆ.

 

ಸತೀಶ್ ಜಾರಕಿಹೊಳಿ ಅವರ ಪತ್ರದಲ್ಲೇನಿದೆ?

 

ನಿಯಮಾವಳಿಗಳ ಅನ್ವಯ ಪ್ರಸ್ತುತ ವಿಶ್ವವಿದ್ಯಾಲಯದಲ್ಲಿ ವಿಭಾಗವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಪ್ರತಿ ಸಣ್ಣ ಘಠಕದ ವಿಷಯದಲ್ಲೂ ಕನಿಷ್ಟ 04 ಹುದ್ದೆಗಳು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿದ್ದಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಿದ್ದಲ್ಲಿ ತಲಾ ಒಂದು ವಿಭಾಗಕ್ಕೆ ಒಂದು ಹುದ್ದೆಯೂ ಪರಿಶಿಷ್ಟ ಪಂಗಡಕ್ಕೆ ಲಭ್ಯವಾಗುತ್ತದೆ. ಇದರ ಅನ್ವಯ 25 ವಿಭಾಗದಲ್ಲಿನ ಸಹಾಯಕ ಪ್ರಾಧ್ಯಾಪಕರ ಒಟ್ಟು 100 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದಲ್ಲಿ ಪರಿಶಿಷ್ಟ ಪಂಗಡಕ್ಕೆ ಪ್ರತಿ ವಿಭಾಗವಾರು ತಲಾ 01ರಂತೆ ಒಟ್ಟು 25 ಹುದ್ದೆಗಳು ಲಭ್ಯವಾಗುತ್ತವೆ ಎಂದು ಪತ್ರದಲ್ಲಿ ತಿಳಿಸಿರುವುದು ಗೊತ್ತಾಗಿದೆ.

 

ಪ್ರಸ್ತುತ ವಿಶ್ವವಿದ್ಯಾಲಯವನ್ನು ಒಂದು ಘಟಕವೆಂದು ಪರಿಗಣಿಸಬೇಕು ಎಂದು ಸಚಿವ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿದೆ. ಈ ಶಿಫಾರಸ್ಸಿನಿಂದಾಗಿ ಪ್ರಸ್ತುತ 100 ನೇಮಕಾತಿಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಿಗುವಂತಹ 25 ಹುದ್ದೆಗಳ ಬದಲಾಗಿ ಕೇವಲ 07 ಹುದ್ದೆಗಳಳು ಮಾತ್ರ ದೊರಕಲಿದೆ. ಈ ಪ್ರಸ್ತಾವನೆಯಿಂದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಪ್ರಾತಿನಿಧ್ಯವನ್ನು ವಿಶ್ವವಿದ್ಯಾಲಯಗಳ ನೇಮಕಾತಿಯಲ್ಲಿ ಕುಗ್ಗಿಸುವ ಪ್ರಯತ್ನವಾಗಲಿದೆ ಎಂದು ಸತೀಶ್ ಜಾರಕಿಹೊಳಿ ಅವರು ಪತ್ರದಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ವಿಶ್ವವಿದ್ಯಾಲಯವನ್ನು ಒಂದು ಘಟಕವೆಂದು ಪರಿಗಣಿಸುವ ಪ್ರಸ್ತಾವನೆಯನ್ನು ಕೈಬಿಡಬೇಕು. ಹಾಲಿ ಇರುವ ನಿಯಮಾವಳಿಗಳ ಅನ್ವಯವೇ ವಿಷಯವಾರು, ವಿಭಾಗವಾರು ಘಟಕವನ್ನೇ ಮುಂದುವರೆಸುವುದು ಅತೀ ಅವಶ್ಯವಾಗಿದೆ. ಹೀಗಾಗಿ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸನ್ನು ಮತ್ತೊಮ್ಮೆ ಪರಾಮರ್ಶಿಸಬೇಕು. ಪರಿಶಿಷ್ಟ ಪಂಗಡದ ಸ್ನಾತಕೋತ್ತರ ಅಭ್ಯರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ವಿಶ್ವವಿದ್ಯಾಲಯವನ್ನು ಒಂದು ಘಟಕವೆಂದು ಪರಿಗಣಿಸುವ ಪ್ರಸ್ತಾವನೆಯನ್ನು ಕೈ ಬಿಡಲು ನಿರ್ದೇಶನ ನೀಡಬೇಕು ಎಂದು ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿರುವುದು ತಿಳಿದು ಬಂದಿದೆ.

 

ಮರಣ ಶಾಸನವಾಗಲಿದೆಯೇ?

 

ವಿಶ್ವವಿದ್ಯಾಲಯವನ್ನು ಘಟಕ ಮಾಡುವುದರಿಂದ ವಿಶ್ವವಿದ್ಯಾಲಯಗಳನ್ನು ಪ್ರತ್ಯೇಕ ಘಟಕಗಳನ್ನಾಗಿ ಪರಿವರ್ತಿಸುತ್ತಿರುವುದು ಮತ್ತೊಂದು ಸಮಸ್ಯೆಗೆ ದಾರಿಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಒಂದು ವಿಶ್ವವಿದ್ಯಾಲಯದಲ್ಲಿ 45 ವಿಭಾಗಗಳಿದ್ದರೇ ಒಟ್ಟು 45 ಎಸ್ಸಿ ಹುದ್ದೆಗಳು ಇರಲಿವೆ. ಈಗ ಘಟಕ ಮಾಡಿದರೆ 45 ರಲ್ಲಿ ಶೇ.‌ 15 ಹುದ್ದೆಗಳನ್ನು ಮಾತ್ರ ಮೀಸಲಾತಿಗೆ ಪರಿಗಣಿಸಲಾಗುತ್ತದೆ. ಇದರಿಂದ ಹುದ್ದೆಗಳು ಸಂಖ್ಯೆಯೇ ಕಡಿತವಾಗಲಿದೆ. ಪರಿಶಿಷ್ಟ ಜಾತಿಯ ಎಲ್ಲಾ ವರ್ಗಕ್ಕೂ ಅನ್ಯಾಯವಾಗಲಿದೆ. ಹೀಗಾಗಿ ಪರಿಶಿಷ್ಟ ಜಾತಿಯ ಎಲ್ಲರಿಗೂ ಇದು ಮರಣ ಶಾಸನವಾಗಲಿದೆ ಎಂಬ ಮಾತುಗಳು ಕೇಳಿ ಬಂದಿವೆ.

 

ಅಸಂವಿಧಾನಿಕವೇ?

 

ಉದ್ಯೋಗ ನೇಮಕಾತಿ ಸಮಯದಲ್ಲಿ ವಿಶ್ವವಿದ್ಯಾಲಯವನ್ನೇ ಒಂದು ಘಟಕವಾಗಿ ಪರಿಗಣಿಸಿ ಮೀಸಲಾತಿ ನಿಗದಿಪಡಿಸುವ ಸರ್ಕಾರದ ನಿರ್ಧಾರವೇ ಸರಿಯಿಲ್ಲ. ಆದರೂ ರಾಜ್ಯ ಸಚಿವ ಸಂಪುಟ ಉಪ ಸಮಿತಿಯು ತಾತ್ವಿಕ ಒಪ್ಪಿಗೆ ನೀಡಿದೆ. ಇದು ಅಸಂವಿಧಾನಿಕ ಹಾಗೂ ಮೀಸಲಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಹುನ್ನಾರವಾಗಿದೆ ಎಂಬ ಆರೋಪಗಳೂ ಕೇಳಿ ಬಂದಿವೆ.

 

ನೇಮಕಾತಿಯಲ್ಲಿ ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸುವುದು ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಲಿದೆ. ಅಲಹಾಬಾದ್ ಹೈಕೋರ್ಟ್, ಸುಪ್ರೀಂ ಕೋರ್ಟ್‌ ಸಹ ವಿಶ್ವವಿದ್ಯಾಲಯಗಳನ್ನು ಘಟಕವಾಗಿ ಪರಿಗಣಿಸಬಾರದು ಎಂದು ತೀರ್ಪು ನೀಡಿದೆ. ಸುಪ್ರೀಂಕೋರ್ಟ್ ಆದೇಶಕ್ಕೂ ಬೆಲೆ ಕೊಡದೇ ರಾಜ್ಯ ಸರ್ಕಾರವು ಕೈಗೊಂಡಿರುವ ನಿರ್ಧಾರವು ಸಾಮಾಜಿಕ ನ್ಯಾಯಕ್ಕೆ ಬಗೆಯುವ ದ್ರೋಹ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

 

ವಿಶ್ವವಿದ್ಯಾಲಯದಲ್ಲಿ ನೂರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದರೆ 25 ವಿಭಾಗಗಳಿದ್ದಲ್ಲಿ ಪ್ರತಿ ವಿಭಾಗಕ್ಕೆ 5 ಹುದ್ದೆಗಳು ರೋಸ್ಟರ್ ಬಿಂದುವಿನಂತೆ ಒಂದು ಪರಿಶಿಷ್ಟ ಜಾತಿ, ಎರಡು ಸಾಮಾನ್ಯ ವರ್ಗ, ಮೂರು ಪರಿಶೀಷ್ಟ ಪಂಗಡ ಹಾಗೂ ನಾಲ್ಕು ಸಾಮಾನ್ಯ, ಐದು ಪ್ರವರ್ಗ-1 ರನ್ನು ಪರಿಗಣಿಸದರೆ ಸಮಾನ ಅವಕಾಶಗಳು ದೊರೆಯಲು ಸಾಧ್ಯವಿದೆ.

 

ಡಾ.ಎಚ್.ಸಿ.ಮಹಾದೇವಪ್ಪ ಇವರು ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಲು ನಿರ್ಧರಿಸಿರುವ ಪ್ರಕಾರ ಪರಿಶಿಷ್ಟ ಜಾತಿಗಳಿಗೆ ಕೇವಲ 17 ಹುದ್ದೆಗಳು ಮಾತ್ರ ದೊರೆಯಲಿವೆ. ಎಸ್ಸಿಎಸ್ಟಿ ಅಭ್ಯರ್ಥಿಗಳು 26 ಹುದ್ದೆಗಳಿಂದ ವಂಚಿತವಾಗುವಂತಾಗುತ್ತದೆ. ಪರಿಶಿಷ್ಟರಲ್ಲದವರಿಗೆ ರೋಸ್ಟರ್ ಬಿಂದು ಮೀಸಲಾತಿ ಹಂಚುವ ಹುನ್ನಾರ ಅಡಗಿದೆ ಎಂಬ ಆರೋಪವೂ ಕೇಳಿ ಬಂದಿದೆ.

 

ಮಾಜಿ ಸಚಿವ ಎಚ್. ಆಂಜನೇಯ ಅವರು ಈ ನಿರ್ಧಾರವನ್ನು ಟೀಕಿಸಿದ್ದಾರೆ. ಇದು ಒಳ ಮೀಸಲಾತಿಯಡಿ ದಲಿತ ಸಮುದಾಯಗಳಿಗೆ ಅನ್ಯಾಯ ಎಸಗುತ್ತದೆ ಎಂದು ಹೇಳಿದ್ದಾರೆ. ಒಳ ಮೀಸಲಾತಿ ಎ ಗುಂಪಿನಲ್ಲಿ ಗುರುತಿಸಿಕೊಂಡಿರುವ ಮಾದಿಗ ಸಮುದಾಯದವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಸಿಗುತ್ತದೆ ಎಂಬ ದೃಷ್ಟಿಯಿಂದ ವಿ ವಿ ಗಳನ್ನು ಘಟಕವನ್ನು ಮಾಡಲು ಉಪ ಸಮಿತಿಯಲ್ಲಿ ಚರ್ಚಿಸಿರುವುದು ಮಾದಿಗ ಸಮುದಾಯದ ವಿರೋಧಿ ನೀತಿಯಾಗಿದೆ ಎಂದು ಆಪಾದಿಸಿದ್ದರು.

 

ಅಲ್ಲದೇ ವಿಶ್ವವಿದ್ಯಾಲಯಗಳ ನೇಮಕಾತಿಯಲ್ಲಿ ಘಟಕ ಮಾಡುವ ಬದಲು ಎಲ್ಲಾ ವಿ ವಿ ಗಳಲ್ಲಿ ಯಾವ ಜಾತಿಯವರು ಎಷ್ಟು ಉದ್ಯೋಗ ಪಡೆದಿದ್ದಾರೆ ಎಂಬುದರ ಮಾಹಿತಿ ಬಹಿರಂಗಪಡಿಸುವ ಕೆಲಸ ಮೊದಲು ಮಾಡಬೇಕು ಎಂದು ಹೇಳಿದ್ದನ್ನು ಸ್ಮರಿಸಬಹುದು.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Related Articles

Popular Categories

error: Content is protected !!