Friday | September 11, 2026 |

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ ನಿಯಮ ಮತ್ತು ರಾಜ್ಯದಲ್ಲಿ ಜಾರಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಅಳವಡಿಸಿಕೊಳ್ಳದೆಯೇ ಉಲ್ಲಂಘಿಸಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುತ್ತಿವೆ ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ ಎಂ ಸಿ ಸುಧಾಕರ್ ಅವರು ಒಪ್ಪಿಕೊಂಡಿದ್ದಾರೆ.

ಅಲ್ಲದೇ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಮೂರು ಸಾವಿರ ಬೋಧಕರು ಮತ್ತು ಆರು ಸಾವಿರ ಬೋಧಕೇತರ ಹುದ್ದೆಗಳು ಖಾಲಿ ಇರುವುದು ಸರ್ಕಾರದ ಗಮನದಲ್ಲಿದೆ. ಮತ್ತು ಈ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ  ಎಂದು ಒಪ್ಪಿಕೊಂಡಿದ್ದಾರೆ.

ಇದೇ ಮಾರ್ಚ್‌ 6ರಿಂದ ಆರಂಭವಾಗಲಿರುವ ಬಜೆಟ್‌ ಅಧಿವೇಶನದಲ್ಲಿ ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಅವರು  ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಮೂಲಭೂತ ಸೌಕರ್ಯಗಳ ಕೊರತೆಗಳ ಬಗ್ಗೆ ಕೇಳಿರುವ ಚುಕ್ಕೆ ಗುರುತಿನ ಪ್ರಶ್ನೆ (ಸಂಖ್ಯೆ 598)ಗೆ ಉನ್ನತ ಶಿಕ್ಷಣ ಇಲಾಖೆಯು ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ. ಈ ಪ್ರಶ್ನೆಯು 2026ರ ಮಾರ್ಚ್‌ 9ರಂದು ಅಧಿವೇಶನದಲ್ಲಿ ಮಂಡನೆಯಾಗಲಿದೆ ಎಂದು ಗೊತ್ತಾಗಿದೆ.

ವಿಶ್ವವಿದ್ಯಾಲಯದ ಧನಸಹಾಯ ಆಯೋಗದ 2018ರ ಜುಲೈ 18ರಂದು ಹೊರಡಿಸಿರುವ ಅಧಿಸೂಚನೆ ಅನ್ವಯ ಜಾರಿಗೊಳಿಸಿರುವ 2018ರ ಯುಜಿಸಿ ನಿಯಮಗಳನ್ನು ಅಳವಡಿಸಿಕೊಂಡು ರಾಜ್ಯದ ವಿಶ್ವವಿದ್ಯಾಲಯಗಳು ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆ ಕೈಗೊಳ್ಳಬೇಕಿದೆ.

‘ಆದರೆ ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ ನಿಯಮಗಳನ್ನು ಹಾಗೂ ರಾಜ್ಯದಲ್ಲಿ ಜಾರಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಮತ್ತು ಈ ಸಂಬಂಧವಾಗಿ ಸರ್ಕಾರವು ಕಾಲಕಾಲಕ್ಕೆ ಹೊರಡಿಸಿರುವ ಆದೇಶ, ಸುತ್ತೋಲೆ, ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುತ್ತಿದೆ. ಹೀಗಾಗಿ ನ್ಯಾಯಾಲಯಗಳಲ್ಲಿ ಸಾರ್ವಜನಿಕ ಲೆಕ್ಕಪತರ ಸಮಿತಿ, ಅರ್ಜಿ ಸಮಿತಿ ಸೇರಿದಂತೆ ಇನ್ನಿತರೆ ಶಾಸನಬದ್ಧ ಸಮಿತಿಗಳಲ್ಲಿ ಆಕ್ಷೇಪಣೆಗಳು ಉಂಟಾಗುತ್ತಿವೆ,’ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಅವರು ಉತ್ತರದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

ಹಾಗೆಯೇ ಇಂತಹ ಅಕ್ರಮ, ನಿಯಮಬಾಹಿರ ನೇಮಕಾತಿಗಳನ್ನು ತಡೆಗಟ್ಟಲು ಎಲ್ಲಾ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಬೋಧಕ ಮತ್ತು ಇತರ ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿ ಕ್ರಮ ವಿಧಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಅಲ್ಲದೇ ನೇಮಕಾತಿಗೆ ಅವಶ್ಯಕವಿರುವ ಕನಿಷ್ಠ ವಿದ್ಯಾರ್ಹತೆ, ಸೇವಾ ಷರತ್ತುಗಳು, ಉನ್ನತ ಶಿಕ್ಷಣ ಗುಣಮಟ್ಟದ ನಿರ್ವಹಣೆ ಮತ್ತು ಸಂರಕ್ಷಣೆಗೆ ಮಾರ್ಗೋಪಾಯಗಳನ್ನು ಕಂಡುಹಿಡಿಯಲಾಗುತ್ತಿದೆ. ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಸಾಮ್ಯತೆ ಕಾಪಾಡಲು ಕ್ರಮ ಕೈಗೊಳ್ಳಲಿದೆ ಎಂದು ವಿವರಿಸಿರುವುದು ಗೊತ್ತಾಗಿದೆ.

2018ರ ನಿಯಮಗಳನ್ನು ಅಳವಡಿಸಿಕೊಂಡು ಉನ್ನತ ಶಿಕ್ಷಣ ಇಲಾಖೆಯು ಆರ್ಥಿಕ ಇಲಾಖೆ, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ, ಕಾನೂನು ಇಲಾಖೆ ಸಹಮತಿ ಅನ್ವಯ ಯುಜಿಸಿ ನಿಯಮಗಳು 2018ನ್ನು ರಚಿಸಿಕೊಂಡಿವೆ. ಇವಕ್ಕೆ ಕುಲಾಧಿಪತಿಗಳೂ ಅನುಮೋದನೆ ನೀಡಿದ್ದಾರೆ ಎಂದು ಮಾಹಿತಿ ಒದಗಿಸಿದ್ದಾರೆ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ 31 , ಕರ್ನಾಟಕ ಜಾನಪದ ವಿಶ್ವವಿದ್ಯಾಲಯ 08, ಬೆಂಗಳೂರು ವಿಶ್ವವಿದ್ಯಾಲಯ 20 ಬೋಧಕ ಹುದ್ದೆಗಳ ನೇಮಕಾತಿಗೆ ಭರ್ತಿ ಮಾಡಲು ಅನುಮತಿ ನೀಡಿದೆ. ಅದೇ ರೀತಿ ದಾವಣಗೆರೆ ವಿಶ್ವವಿದ್ಯಾಲಯ 10, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ 01, ಕರ್ನಾಟಕ ಜಾನಪದ ವಿಶ್ವವಿದ್ಯಾಲಯ 17 ಬೋಧಕೇತರ ಹುದ್ದೆಗಳ ನೇಮಕಾತಿಗೆ ಅನುಮತಿ ದೊರೆತಿದೆ.

 

 

ರಾಜ್ಯದಲ್ಲಿನ 32 ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಶೇ.70ರಷ್ಟು ಹುದ್ದೆಗಳು ಖಾಲಿ ಇವೆ. ಕೆಲವು ವಿಶ್ವವಿದ್ಯಾಲಯಗಳಲ್ಲಿ ಶೇ. 100ರಷ್ಟು ಹುದ್ದೆಗಳು ಖಾಲಿ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಉತ್ತರಿಸಲು ಮಾಹಿತಿ ನೀಡಿರುವ ಇಲಾಖೆಯು ವಿಶ್ವವಿದ್ಯಾಲಯಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯೂ ಸಹ ಇದೆ ಎಂದು ಹೇಳಿದೆ.

‘ಮೂಲಭೂತ ಸೌಕರ್ಯಗಳ ಕೊರತೆ, ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕೊರತೆಗಳಿವೆ. ಇವುಗಳನ್ನು ನಿವಾರಿಸಲು ರಾಜ್ಯದಲ್ಲಿರುವ ಎಲ್ಲಾ ಸಾರ್ವಜನಿಕ ವಿಶ್ವವಿದ್ಯಾಲಯಗಳ ಆರ್ಥಿಕ ಪರಿಸ್ಥಿತಿಗಳ ಬಗ್ಗೆ ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿದೆ,’  ಎಂದು ಮಾಹಿತಿ ಒದಗಿಸಿರುವುದು ತಿಳಿದು ಬಂದಿದೆ.

ಸಚಿವ ಸಂಪುಟ ಉಪ ಸಮಿತಿಯು ವಿಶ್ವವಿದ್ಯಾಲಯಗಳ ಬಲವರ್ಧನೆ ಕುರಿತು ಸಚಿವ ಸಂಪುಟದ ಮುಂದೆ ವರದಿ ಮಂಡಿಸಲಿದೆ. ಇದಕ್ಕಾಗಿ ಅಗತ್ಯ ದಾಖಲೆಗಳೊಂದಿಗೆ ಸಾರ್ವಜನಿಕ ವಿಶ್ವವಿದ್ಯಾಲಯಗಳ ಅಂಕಿ ಅಂಶಗಳನ್ನೊಳಗೊಂಡ ಸಂಪೂರ್ಣ ಚಿತ್ರಣವನ್ನು ಇಲಾಖೆಯು ಸಿದ್ಧಪಡಿಸುತ್ತಿದೆ.

ಈಚೆಗಷ್ಟೇ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ಸೇರಿತ್ತು. ಈ ಸಭೆಗೆ ಉನ್ನತ ಶಿಕ್ಷಣ ಇಲಾಖೆಯು ನೀಡಿರುವ ಮಾಹಿತಿ ಪ್ರಕಾರ 2 ಸಾರ್ವಜನಿಕ ವಿಶ್ವ ವಿದ್ಯಾಲಯಗಳಲ್ಲಿ  ಬೋಧಕ ಮತ್ತು ಬೋಧಕೇತರ 9292 ಹುದ್ದೆಗಳು ಖಾಲಿ ಇವೆ ಎಂದು ತಿಳಿದು ಬಂದಿದೆ.

ಯಾವ ವಿವಿಯಲ್ಲಿ ಎಷ್ಟೆಷ್ಟು ಹುದ್ದೆ ಖಾಲಿ ಇವೆ?

 

ಮೈಸೂರು ವಿವಿಯಲ್ಲಿ ಬೋಧಕ 391, ಬೋಧಕೇತರ 396 ಹುದ್ದೆಗಳು ಖಾಲಿ ಇವೆ. ಮಂಡ್ಯ ವಿವಿ- ಬೋಧಕ- 92, ಬೋಧಕೇತರ ವಿಭಾಗದಲ್ಲಿ 253, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಮೈಸೂರು: ಬೋಧಕ- 65, ಬೋಧಕೇತರ – 310, ಗುಲ್ಬರ್ಗಾ ವಿವಿ: ಬೋಧಕ- 171, ಬೋಧಕೇತರ -278, ಆದಿಕವಿ ಮಹರ್ಷಿ ವಾಲ್ಮೀಕಿ ವಿವಿ: ಬೋಧಕ- 0, ಬೋಧಕೇತರ-169, ವಿಜಯನಗರ ಕೃಷ್ಣದೇವರಾಯ ವಿವಿ, ಬಳ್ಳಾರಿ ಬೋಧಕ- 55, ಬೋಧಕೇತರ- 72 ಹುದ್ದೆಗಳು ಭರ್ತಿಯಾಗಿಲ್ಲ.

 

 

ಕರ್ನಾಟಕ ಸಂಸ್ಕೃತ ವಿವಿ ಚಾಮರಾಜಪೇಟೆ: ಬೋಧಕ- 33, ಬೋಧಕೇತರ- 24, ಕರ್ನಾಟಕ ಜಾನಪದ ವಿವಿ: ಬೋಧಕ- 13, ಬೋಧಕೇತರ- 18, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ: ಬೋಧಕ- 15, ಬೋಧಕೇತರ- 19, ಕುವೆಂಪು ವಿವಿ, ಶಿವಮೊಗ್ಗ: ಬೋಧಕ- 82, ಬೋಧಕೇತರ- 366 ಹುದ್ದೆಗಳು ಭರ್ತಿಗೆ ಕಾಯುತ್ತಿವೆ.

 

ದಾವಣಗೆರೆ ವಿವಿ: ಬೋಧಕ -33, ಬೋಧಕೇತರ- 141, ಮಂಗಳೂರು ವಿವಿ: ಬೋಧಕ- 150, ಬೋಧಕೇತರ -374, ಮಹಾರಾಣಿ ಕ್ಲಸ್ಟರ್ ವಿವಿ: ಬೋಧಕ- 272, ಬೋಧಕೇತರ- 168, ಕನ್ನಡ ವಿವಿ, ಹಂಪಿ: ಬೋಧಕ -37, ಬೋಧಕೇತರ- 96,

 

 

ರಾಣಿ ಚೆನ್ನಮ್ಮ ವಿವಿ, ಬೆಳಗಾವಿ: ಬೋಧಕ- 58, ಬೋಧಕೇತರ- 122, ತುಮಕೂರು ವಿವಿ: ಬೋಧಕ – 103, ಬೋಧಕೇತರ -168, ನೃಪತುಂಗಾ ವಿವಿ: ಬೋಧಕ- 100, ಬೋಧಕೇತರ- 43, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ: ಬೋಧಕ- 92, ಬೋಧಕೇತರ- 130 ಹುದ್ದೆಗಳು ಖಾಲಿ ಇರುವುದು ತಿಳಿದು ಬಂದಿದೆ.

Hot this week

ದಿ ಫೈಲ್‌ ಸಂಪಾದಕರಿಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ; ಅಪರಿಚಿತನ ವಿರುದ್ಧ ಕಡೆಗೂ ಎಫ್‌ಐಆರ್ ದಾಖಲಿಸಿದ ಪೊಲೀಸರು

ಬೆಂಗಳೂರು; ದಿ ಫೈಲ್‌ ಸುದ್ದಿ ಜಾಲತಾಣದಲ್ಲಿ ಪ್ರಕಟಿಸಿದ್ದ ವರದಿ ಉಲ್ಲೇಖಿಸಿ ಸಂಪಾದಕರಿಗೆ...

ಬಹು ದೊಡ್ಡ ಬರಗಾಲ; ಜಿಲ್ಲಾಧಿಕಾರಿಗಳ ಪಿ ಡಿ ಖಾತೆಗಳಲ್ಲಿ 310 ಕೋಟಿಯಷ್ಟೇ ಲಭ್ಯ

ಬೆಂಗಳೂರು; ರಾಜ್ಯದ ಇತಿಹಾಸದಲ್ಲಿ ಎರಡನೇ ಬಾರಿಗೆ ಕಾಣಿಸಿಕೊಂಡಿರುವ ಬಹುದೊಡ್ಡ ಬರಕ್ಕೆ ತುತ್ತಾಗಿರುವ...

ಶೇ 14 ಟೆಂಡರ್ ಪ್ರೀಮಿಯಂಗೆ ಸಮರ್ಥನೆ ಮಾಡಲು ಶೇ.10ರಷ್ಟು ಸೇವಾ ಶುಲ್ಕ ಸೇರಿಸಿದ್ದ ಬಿಎಸ್‌ಡಬ್ಲ್ಯೂಎಂಎಲ್; ಆರ್ಥಿಕ ಇಲಾಖೆ ಅವಲೋಕನ

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆ ಮಾಡುವ...
Please Scan to make Your Contribution

Topics

ದಿ ಫೈಲ್‌ ಸಂಪಾದಕರಿಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ; ಅಪರಿಚಿತನ ವಿರುದ್ಧ ಕಡೆಗೂ ಎಫ್‌ಐಆರ್ ದಾಖಲಿಸಿದ ಪೊಲೀಸರು

ಬೆಂಗಳೂರು; ದಿ ಫೈಲ್‌ ಸುದ್ದಿ ಜಾಲತಾಣದಲ್ಲಿ ಪ್ರಕಟಿಸಿದ್ದ ವರದಿ ಉಲ್ಲೇಖಿಸಿ ಸಂಪಾದಕರಿಗೆ...

ಬಹು ದೊಡ್ಡ ಬರಗಾಲ; ಜಿಲ್ಲಾಧಿಕಾರಿಗಳ ಪಿ ಡಿ ಖಾತೆಗಳಲ್ಲಿ 310 ಕೋಟಿಯಷ್ಟೇ ಲಭ್ಯ

ಬೆಂಗಳೂರು; ರಾಜ್ಯದ ಇತಿಹಾಸದಲ್ಲಿ ಎರಡನೇ ಬಾರಿಗೆ ಕಾಣಿಸಿಕೊಂಡಿರುವ ಬಹುದೊಡ್ಡ ಬರಕ್ಕೆ ತುತ್ತಾಗಿರುವ...

ಶೇ 14 ಟೆಂಡರ್ ಪ್ರೀಮಿಯಂಗೆ ಸಮರ್ಥನೆ ಮಾಡಲು ಶೇ.10ರಷ್ಟು ಸೇವಾ ಶುಲ್ಕ ಸೇರಿಸಿದ್ದ ಬಿಎಸ್‌ಡಬ್ಲ್ಯೂಎಂಎಲ್; ಆರ್ಥಿಕ ಇಲಾಖೆ ಅವಲೋಕನ

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆ ಮಾಡುವ...

ತನಿಖೆಯಿಂದ ಪತ್ತೆ ಹಚ್ಚಬಹುದಾದನ್ನು ದೂರುದಾರ ಸಾಬೀತುಪಡಿಸಬೇಕೇ?; ಸಿದ್ದಾರ್ಥ ವಿಹಾರ ಟ್ರಸ್ಟ್‌ ಪ್ರಕರಣದಲ್ಲಿ ನ್ಯಾಯಪೀಠದ ಅವಲೋಕನ

ಬೆಂಗಳೂರು; 'ದೂರುದಾರರ ವಿಚಾರಣೆಯ ಮೂಲಕವೇ  ಸಂಪೂರ್ಣ ಸರಪಳಿಯನ್ನು ಬಿಚ್ಚಿಡುವಂತೆ ಖಾಸಗಿ ದೂರುದಾರರಿಂದ...

ಸಿದ್ದಾರ್ಥ ವಿಹಾರ ಟ್ರಸ್ಟ್‌ ಪ್ರಕರಣ; ಖಾಸಗಿ ದೂರು ಮುಂದುವರೆಸಲು ಹೈಕೋರ್ಟ್‌ ಅನುಮತಿ, ಖರ್ಗೆ ಕುಟುಂಬಕ್ಕೆ ಸಂಕಷ್ಟ!

ಬೆಂಗಳೂರು; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಸಚಿವ...

Related Articles

Popular Categories

error: Content is protected !!