Tuesday | July 21, 2026 |

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಇಂತಹ ಪ್ರಕರಣಗಳಲ್ಲಿ ಭೂ ಕಂದಾಯ ರೂಪದಲ್ಲಿ ದಂಡ ವಸೂಲಿ ಮಾಡಲು ರೇರಾ ಕಾಯ್ದೆಯಲ್ಲಿ ಅವಕಾಶಗಳಿದ್ದರೂ 2025ರ ಡಿಸೆಂಬರ್ ಅಂತ್ಯಕ್ಕೆ   ಬಿಲ್ಡರ್‍‌, ಡೆವಲಪರ್ಸ್‌ಗಳಿಂದ  ಒಟ್ಟಾರೆ  1,094.81 ಕೋಟಿ ರು ಗಳಷ್ಟು ಭೂ ಕಂದಾಯ ಬಾಕಿ ಇರುವುದು ಇದೀಗ ಬಹಿರಂಗವಾಗಿದೆ.

2025ರ ಮಧ್ಯಭಾಗದಲ್ಲಿ  1,427 ಪ್ರಕರಣಗಳಲ್ಲಿ  666,97,40,187 ರು.ಗಳಷ್ಟು ಭೂ ಕಂದಾಯ ಬಾಕಿ ಇತ್ತು. ಆದರೆ 2025ರ ಡಿಸೆಂಬರ್ ಅಂತ್ಯಕ್ಕೆ ಈ ಮೊತ್ತವು 1,094.81 ಕೋಟಿಗೇರಿದೆ. ಬಾಕಿ ಉಳಿದಿರುವ ದೊಡ್ಡ ಪ್ರಮಾಣದ ಭೂ ಕಂದಾಯ ಮೊತ್ತವನ್ನು  ವಸೂಲು ಮಾಡುವಲ್ಲಿ ರೇರಾವು  ವಿಫಲವಾಗಿದೆ.

ರೇರಾ ಕಾಯ್ದೆ ಯನ್ನು ಬಲಪಡಿಸುವ ಕುರಿತು 2026ರ ಜನವರಿ 5ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಕುರಿತು ಚರ್ಚೆಯಾಗಿದೆ. ಸಭೆಯ ನಡವಳಿಗಳು ದಿ ಫೈಲ್ ಗೆ ಲಭ್ಯವಾಗಿವೆ.

ರಾಜ್ಯದ ವಿವಿಧೆಡೆ ಬಾಕಿ ಇರುವ ಭೂ ಕಂದಾಯ ಮೊತ್ತವನ್ನು ವಸೂಲಿ ಮಾಡಲು ರೇರಾವು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪ್ರಕರಣಗಳ ಪಟ್ಟಿಯನ್ನು ಕಳಿಸಿತ್ತು. ಇದರ ಪ್ರಕಾರ ಒಟ್ಟು 2,2529 ಆರ್‍ಆರ್‍‌ಸಿ ಆದೇಶಗಳಲ್ಲಿ ಒಟ್ಟು 1,094.81 ಕೋಟಿ ಭೂ ಕಂದಾಯ ಬಾಕಿ ಇದೆ. ಈ ಪೈಕಿ ಕೇವಲ 282 ಪ್ರಕರಣಗಳಲ್ಲಿ ಮಾತ್ರ 110.26 ಕೋಟಿ ರುಪಾಯಿ ಮಾತ್ರ ವಸೂಲಾಗಿದೆ. ಇನ್ನುಳಿದ 2,247 ಪ್ರಕರಣಗಳಲ್ಲಿ ಒಟ್ಟು 984.55 ಕೋಟಿಯಷ್ಟು ವಸೂಲಾತಿಗೆ ಬಾಕಿ ಇರುವುದು ನಡವಳಿಯಿಂದ ತಿಳಿದು ಬಂದಿದೆ.

ಅಲ್ಲದೇ 3,035 ಲ್ಯಾಪ್ಸ್‌ ಪ್ರಾಜೆಕ್ಟ್‌ಗಳಲ್ಲಿ ಪ್ರವರ್ತಕರು, ಬಿಲ್ಡರ್‍‌ಗಳು, 2,945 ಪ್ರಕರಣಗಳಲ್ಲಿ ಯೋಜನಾ ಪ್ರಾಧಿಕಾರಗಳಿಂದ ಪಡೆದ ಸ್ವಾಧೀನಾನುಭವ ಪತ್ರಗಳನ್ನು ನಿಗದಿತ ಅವಧಿಯಲ್ಲಿ ರೇರಾ ಪೋರ್ಟ್‌ಲ್‌ನಲ್ಲಿ ಅಪ್‌ಲೋಡ್‌ ಮಾಡುತ್ತಿಲ್ಲ. ಹೀಗಾಗಿ ಲಿಂಕ್‌ ಗಳು ನಿಷ್ಕ್ರೀಯಗೊಂಡಿವೆ. ಪ್ರಾಜೆಕ್ಟ್‌ಗಳು ಮುಕ್ತಾಯಗೊಂಡಿದ್ದರೂ ಸಹ ಪೋರ್ಟಲ್‌ನಲ್ಲಿ ಅಪ್‌ಡೇಟ್‌ ಆಗದ ಕಾರಣ, ಲ್ಯಾಪ್ಸ್‌ ಆಗಿರುವ ಪ್ರಾಜೆಕ್ಟ್‌ಗಳ ಪಟ್ಟಿಗೆ ಸೇರುತ್ತಿರುವುದು ಗೊತ್ತಾಗಿದೆ.

 

 

ಭೂ ಕಂದಾಯ ಬಾಕಿ ಕುರಿತು ವಿಧಾನಪರಿಷತ್‌ನಲ್ಲಿ ಜೆಡಿಎಸ್‌ ಸದಸ್ಯ ಎಸ್‌ ಎಲ್‌ ಭೋಜೇಗೌಡ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ವಸತಿ ಸಚಿವ ಬಿ ಝಡ್‌ ಜಮೀರ್‍‌ ಅಹ್ಮದ್‌ ಖಾನ್‌ ಅವರು ಭೂ ಕಂದಾಯ ಬಾಕಿ ಇರುವ ಮೊತ್ತದ ಅಂಕಿ ಅಂಶದ ಮಾಹಿತಿ ಒದಗಿಸಿದ್ದರು.  ಆದರೆ ಬಹುಕೋಟಿಗಳಷ್ಟು ಬಾಕಿ ಉಳಿಸಿಕೊಂಡಿರುವ ಬಿಲ್ಡರ್‍‌, ಡೆವಲಪರ್ಸ್‌ಗಳ ವಿವರಗಳನ್ನು ಒದಗಿಸಿರಲಿಲ್ಲ.

2024 ರ ಡಿಸೆಂಬರ್‍‌ 31ರ ಅಂತ್ಯಕ್ಕೆ ಒಟ್ಟು 1,660 ಪ್ರಕರಣಗಳಲ್ಲಿ 750,85,87,682 ಕೋಟಿ ರು ಮೊತ್ತವನ್ನು ಭೂ ಕಂದಾಯ ಬಾಕಿ ಎಂದು 278 ಬಿಲ್ಡರ್‍‌ಗಳಿಗೆ ವಸೂಲಾತಿ ಆದೇಶ ಹೊರಡಿಸಿತ್ತು.  1,660 ಪ್ರಕರಣಗಳ ಪೈಕಿ 103 ಪ್ರಕರಣಗಳಲ್ಲಿ ಲೋಕ್‌ ಅದಾಲತ್‌ನಲ್ಲಿ ರಾಜಿ ಮೂಲಕ 54,66,ಕ59,913 ರು.ಗಳನ್ನು ವಸೂಲಿ ಮಾಡಿದೆ. ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ 130 ಪ್ರಕರಣಗಳಲ್ಲಿ 37,21,87,582 ರುಗ.ಳನ್ನು ವಸೂಲಿ ಮಾಡಿದ್ದರು.

ಒಟ್ಟು 233 ಪ್ರಕರಣಗಳಿಂದ ಒಟ್ಟು 91,88,47,495 ರು.ಗಳನ್ನು ವಸೂಲಿ ಮಾಡಿತ್ತು.  ಉಳಿದ 1,427 ಪ್ರಕರಣಗಳಲ್ಲಿ ಒಟ್ಟಾರೆ 666,97,40,187 ರು.ಗಳನ್ನು ಭೂ ಕಂದಾಯ ಬಾಕಿ ಇತ್ತು.

 

 

ವಸೂಲಾತಿ ಚುರುಕುಗೊಳಿಸುವ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಒಂದು ಅಧಿಕಾರಯುಕ್ತ ವಿಶೇಷ ಕೋಶವನ್ನು ರಚಿಸಲು ಕಂದಾಯ ಮತ್ತು ಆರ್ಥಿಕ ಇಲಾಖೆಯೊಡನೆ ಸಮಾಲೋಚನೆ ನಡೆಸುವುದರಲ್ಲಿಯೇ ಕಾಲಹರಣ ಮಾಡಿರುವುದು ತಿಳಿದು ಬಂದಿದೆ.

 

 

ಕೇಂದ್ರ ಸರ್ಕಾರವು ಗ್ರಾಹಕರ ಹಿತಾಸಕ್ತಿಗಾಗಿ ರಿಯಲ್‌ ಎಸ್ಟೇಟ್‌ ವಲಯವನ್ನು ನಿಯಂತ್ರಿಸಲು ಮತ್ತು ಪಾರದರ್ಶಕತೆಯನ್ನು ತರಲು ರಿಯಲ್‌ ಎಸ್ಟೇಟ್‌ ವಲಯವನ್ನು ನಿಯಂತ್ರಿಸಲು ಮತ್ತು ಪಾರದರ್ಶಕತೆಯನ್ನು ತರಲು ರಿಯಲ್‌ ಎಸ್ಟೇಟ್‌ ಅಧಿನಿಯಮ 2016ನ್ನು ಜಾರಿಗೆ ತಂದಿದೆ. ಇದು 2017ರ ಜುಲೈ 11ರಿಂದಲೇ ಜಾರಿಯಲ್ಲಿತ್ತು.

 

 

ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರತಿಯೊಬ್ಬ ಬಿಲ್ಡರ್‍‌ಗಳಿಗೂ ಪ್ರಕರಣವಾರು ದಂಡ ವಿಧಿಸಿ ಈ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ಪರಿಗಣಿಸಿ ವಸೂಲಿ ಮಾಡಲು ಆದೇಶ ಹೊರಡಿಸುತ್ತದೆ. ಭೂ ಕಂದಾಯದ ಬಾಕಿ ಮೊತ್ತವನ್ನು ವಸೂಲಿ ಮಾಡಲು ಅಧಿಕಾರ ಹೊಂದಿರುವ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ರೆವಿನ್ಯೂ ರಿಕವರಿ ಸರ್ಟಿಫಿಕೇಟ್‌ಗಳೊಂದಿಗೆ ಕಳಿಸಿಕೊಡಲಾಗುತ್ತದೆ. ಈ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ಪರಿಗಣಿಸಿ ವಸೂಲಿ ಮಾಡಲು ನಿಯಮಗಳಲ್ಲಿ ಅವಕಾಶ ಇರುವುದರಿಂದ ಈ ಮೊತ್ತವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ವಸೂಲಿ ಮಾಡಿ ರೇರಾಗೆ ಜಮೆ ಮಾಡುತ್ತಾರೆ ಎಂದು ಉತ್ತರದಲ್ಲಿ ವಿವರಿಸಿದ್ದರು.

ರೇರಾ ಕಾಯ್ದೆ ಮತ್ತು ನಿಯಮಗಳಡಿಯಲ್ಲಿ ರಾಜ್ಯದ ಬೆಂಗಳೂರು ನಗರ ಜಿಲ್ಲೆ ಸೇರಿದಂತೆ 7 ಜಿಲ್ಲೆಗಳಲ್ಲಿ 423.51 ಕೋಟಿ ರು.ಪ್ರಮಾಣದಲ್ಲಿ ಭೂ ಕಂದಾಯ ಬಾಕಿ ಇತ್ತು. ಒಂದೂವರೆ ವರ್ಷದಲ್ಲಿ ಈ ಮೊತ್ತವು 243.46 ಕೋಟಿ ರು ಹೆಚ್ಚಳವಾಗಿತ್ತು.  ದಂಡ ಪರಿಹಾರದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ಪರಿಗಣಿಸಿ ವಸೂಲು ಮಾಡುವ ವಿಷಯವನ್ನು ಸಕಾಲ ವ್ಯಾಪ್ತಿಗೊಳಪಡಿಸುವ ಸಂಬಂಧ ರೇರಾ ಪ್ರಾಧಿಕಾರ ನಡೆಸಿದ್ದ ಸಭೆಯಲ್ಲಿ 423.51 ಕೋಟಿ ರು ಪ್ರಮಾಣದಲ್ಲಿ ಭೂ ಕಂದಾಯ ಬಾಕಿ ಇರುವ ವಿಚಾರವು ಚರ್ಚೆಗೆ ಬಂದಿದೆ. ಈ ಸಂಬಂಧ 2023ರ ಸೆ.26ರಂದು ಸಭೆ ನಡೆದಿತ್ತು.

ರೇರಾ ಕಾಯ್ದೆ ಅಡಿಯಲ್ಲಿ ವಿಧಿಸಲಾಗುವ ದಂಡ, ಪರಿಹಾರದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ವಸೂಲು ಮಾಡುವ ಪ್ರಕ್ರಿಯೆಗೆ ತಗುಲುವ ವೆಚ್ಚಗಳನ್ನು ಭರಿಸಲು ಮತ್ತು ವಸೂಲಾತಿ ಶುಲ್ಕಗಳನ್ನು ವಿಧಿಸಲು ರೇರಾ ನಿಯಮಗಳಲ್ಲಿ ಸೂಕ್ತ ತಿದ್ದುಪಡಿ ತರುವ ಬಗ್ಗೆ ಕ್ರಮ ವಹಿಸಲು ವಸತಿ ಇಲಾಖೆಗೆ ಸೂಚಿಸಿತ್ತು. ಈ ಬೆಳವಣಿಗೆ ನಡುವೆಯೇ ಎಷ್ಟು ಪ್ರಮಾಣದಲ್ಲಿ ವಸೂಲಾತಿ ಶುಲ್ಕವನ್ನು ನಿಗದಿಪಡಿಸಬಹುದು ಎಂದು ಮಾಹಿತಿ ನೀಡಬೇಕು ಎಂದು ಕಂದಾಯ ಇಲಾಖೆಗೆ ವಸತಿ ಇಲಾಖೆಯು ಸೂಚಿಸಿದೆ. ಈ ಸಂಬಂಧ 2023 ಅಕ್ಟೋಬರ್‍‌ 18ರಂದು ಅನಧಿಕೃತ ಟಿಪ್ಪಣಿ ಹೊರಡಿಸಿತ್ತು.

 

 

ಭೂ ಕಂದಾಯ ಬಾಕಿ ಉಳಿಸಿಕೊಂಡಿರುವ ಜಿಲ್ಲೆಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯು ಪ್ರಥಮ ಸ್ಥಾನದಲ್ಲಿದೆ. ಈ ಜಿಲ್ಲೆಯಲ್ಲಿ 415.73 ಕೋಟಿ ರು. ಬಾಕಿ ಇತ್ತು.  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 73.46 ಲಕ್ಷ ರು., ಮೈಸೂರು ಜಿಲ್ಲೆಯಲ್ಲಿ 2.33 ಕೋಟಿ ರು., ಧಾರವಾಡದಲ್ಲಿ 27.33 ಲಕ್ಷ ರು., ಬೆಳಗಾವಿಯಲ್ಲಿ 69.29 ಲಕ್ಷ ರು., ದಕ್ಷಿಣ ಕನ್ನಡದಲ್ಲಿ 3.20 ಕೋಟಿ ರು., ಉಡುಪಿಯಲ್ಲಿ 53.26 ಲಕ್ಷ ರು. ಭೂ ಕಂದಾಯ ವಸೂಲಾತಿಗೆ ಬಾಕಿ ಇತ್ತು.

 

ರೇರಾ ಕಾಯ್ದೆ 2016ರ ಕಲಂ 40(1) ಹಾಗೂ ರೇರಾ ನಿಯಮ 25ರಡಿಯಲ್ಲಿ ದಂಡ/ಪರಿಹಾರದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ಪರಿಗಣಿಸಿ ವಸೂಲು ಮಾಡುವ ಸಂಬಂಧ ಸಾಧಕ ಬಾಧಕಗಳ ಕುರಿತು ಚರ್ಚೆ ಕೂಡ ನಡೆದಿತ್ತು .

 

423.51 ಕೋಟಿ ಭೂ ಕಂದಾಯ ಬಾಕಿ; ವಸೂಲಾತಿ ಶುಲ್ಕ ನಿಗದಿಗೆ ಕಂದಾಯ ಇಲಾಖೆಗೆ ವಸತಿ ಇಲಾಖೆ ಪತ್ರ

‘ರೇರಾ ಕಾಯ್ದೆಯು ಕೇಂದ್ರ ಸರ್ಕಾರದ ಕಾಯ್ದೆಯಾಗಿದೆ. ಇದನ್ನು ಸಂಬಂಧಪಟ್ಟ ತಹಶೀಲ್ದಾರ್‍‌ಗಳೇ ರೇರಾ ಕಾಯ್ದೆಯಡಿ ವಿಧಿಸುವ ದಂಡದ ಮೊತ್ತವನ್ನು ಭೂ ಕಂದಾಯ ಎಂದು ವಸೂಲು ಮಾಡಬೇಕಾಗುತ್ತದೆ. ಆದರೆ ತಹಶೀಲ್ದಾರ್‍‌ರು ಅರೆ ನ್ಯಾಯಿಕ ಪ್ರಾಧಿಕಾರವಾಗಿದ್ದು ರೇರಾ ಕಾಯ್ದೆಯಡಿ ವಿಧಿಸುವ ದಂಡದ ಮೊತ್ತವನ್ನು ಭೂ ಕಂದಾಯ ಎಂದು ವಸೂಲು ಮಾಡುವಲ್ಲಿ ಹಲವಾರು ಕಾನೂನಾತ್ಮಕ ತೊಡಕುಗಳೀವೆ,’ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚರ್ಚಿಸಿದ್ದರು.

 

ದಂಡದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ವಸೂಲು ಮಾಡುವಲ್ಲಿ ಕಂಡು ಬಂದಿರುವ ಕಾನೂನಾತ್ಮಕ ತೊಡಕುಗಳು ಮತ್ತು ಇದನ್ನು ವಸೂಲು ಮಾಡಲು ಹೆಚ್ಚು ಸಮಯಾವಕಾಶ ಬೇಕಿರುವುದರಿಂದ ಬೇರೆ ಸೇವೆಗಳ ರೀತಿಯಲ್ಲಿ ಸಕಾಲ ವ್ಯಾಪ್ತಿಗೆ ಸೇರ್ಪಡೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಎಲ್ಲಾ ಪ್ರಾದೇಶಿಕ ಆಯುಕ್ತರುಗಳೂ ಒಂದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.

Hot this week

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...
Please Scan to make Your Contribution

Topics

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

Related Articles

Popular Categories

error: Content is protected !!