Thursday | August 20, 2026 |

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಸದಸ್ಯ ಇಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೋರುವ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

ಕರ್ನಾಟಕ ನಗರ ನೀರು ಸರಬರಾಜು,  ಒಳಚರಂಡಿ ಮಂಡಳಿಯ ಮುಖ್ಯ ಅಭಿಯಂತರ ಹುದ್ದೆಯು ಲೋಕೋಪಯೋಗಿ ಇಲಾಖೆಯ ವೃಂದಕ್ಕೆ ಎನ್‌ ಕೇಡರ್ ಆಗಿದ್ದರೂ ಬಿಬಿಎಂಪಿ ವೃಂದದ ಅಧಿಕಾರಿಯಾಗಿರುವ ಕಾರಣಕ್ಕೆ ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು.

ಈ ಎಲ್ಲಾ  ಆರೋಪಗಳನ್ನು ಬದಿಗೊತ್ತಿ ಪ್ರವೀಣ್‌ ಲಿಂಗಯ್ಯ ಅವರನ್ನು ಬಿಡಿಎನ ಇಂಜಿನಿಯರ್‍‌ ಮೆಂಬರ್  ಹುದ್ದೆಗೆ ವರ್ಗಾವಣೆ ಮಾಡಲು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೋರಿರುವುದು ವಿವಾದಕ್ಕೆ ದಾರಿ ಮಾಡಿಕೊಡುವ ಸಾಧ್ಯತೆಗಳಿವೆ.

ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ವೃಂದ ಮತ್ತು ನೇಮಕಾತಿ ನಿಯಮಗಳ ಪ್ರಕಾರ ಬಿಡಿಎ ಸದಸ್ಯ ಇಂಜಿನಿಯರ್‍‌  ಹುದ್ದೆಯು ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಹುದ್ದೆಯ ವೃಂದದ ಹುದ್ದೆಗೆ ಮೀಸಲಾಗಿದೆ. ಅಲ್ಲದೇ ಜಿಬಿಎ ಅಥವಾ ಈ ಹಿಂದಿನ ಬಿಬಿಎಂಪಿ ವೃಂದ ಮತ್ತು ನೇಮಕಾತಿಗಳ ಅನ್ವಯ ಬಿಬಿಎಂಪಿ ವೃಂದಕ್ಕೆ ಸೇರಿರುವ ಯಾವುದೇ ಅಧಿಕಾರಿಯು ಎರವಲು ಸೇವೆ ಮೇಲೆ ಅನ್ಯ ಇಲಾಖೆ ಅಥವಾ ಪ್ರಾಧಿಕಾರ, ನಿಗಮ, ಮಂಡಳಿಗಳಲ್ಲಿ  ನಿಯೋಜನೆಗೆ ಅವಕಾಶವಿಲ್ಲ. ಹಾಗೆಯೇ ಬಿಬಿಎಂಪಿ ವೃಂದಕ್ಕೆ ಸೇರಿರುವ ಅಧಿಕಾರಿಗಳು ಕರ್ನಾಟಕ ನಾಗರಿಕ ಸೇವಾ ನಿಯಮಗಳಿಗೆ ಒಳಪಡುವುದಿಲ್ಲ.

ಹೀಗಿದ್ದರೂ ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್‍‌ ಪ್ರವೀಣ್‌ ಲಿಂಗಯ್ಯ ಅವರನ್ನು ಬಿಡಿಎನ ಸದಸ್ಯ ಇಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಟಿಪ್ಪಣಿ ಹಾಕಿದ್ದಾರೆ. ಇದು  ಮೇಲ್ನೋಟಕ್ಕೆ ನಿಯಮ ಉಲ್ಲಂಘನೆ ಮಾಡಿರುವುದು ಕಂಡು ಬರುತ್ತದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಾಲಿ ಮುಖ್ಯ ಇಂಜಿನಿಯರ್, ಸದಸ್ಯ ಇಂಜಿನಿಯರ್ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಂತ ರಾಜಣ್ಣ ಅವರು ವಯೋನಿವೃತ್ತಿ ಹೊಂದಲಿದ್ದಾರೆ. ಈ ಹುದ್ದೆಗೆ ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್ ಪ್ರವೀಣ್ ಲಿಂಗಯ್ಯ ಅವರನ್ನು ನೇಮಿಸಲು ಡಿ ಕೆ ಶಿವಕುಮಾರ್‍‌ ಟಿಪ್ಪಣಿ ಹಾಕಿದ್ದಾರೆ.

ಡಿ ಕೆ ಶಿವಕುಮಾರ್ ಅವರು ಪ್ರವೀಣ್ ಲಿಂಗಯ್ಯ ಅವರನ್ನು ಸದಸ್ಯ ಇಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಿಪ್ಪಣಿಯಲ್ಲಿ ಕೋರಿದ್ದಾರೆ. ಇದಕ್ಕೆ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿ ವರ್ಗದಲ್ಲೇ ಆಕ್ಷೇಪಗಳು ವ್ಯಕ್ತವಾಗಿವೆ.

2026 ಏಪ್ರಿಲ್‌ 26ರಂದು ಹೊರಡಿಸಿರುವ ಟಿಪ್ಪಣಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಪ್ರವೀಣ್‌ ಲಿಂಗಯ್ಯ ಅವರು ಮೂಲತಃ ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರು  ಪ್ರಸ್ತುತ   ಎರವಲು ಸೇವೆ ಮೇಲೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.   ಇದೀಗ ಅವರನ್ನು ಬಿಡಿಎನಲ್ಲಿ ಖಾಲಿ ಆಗುತ್ತಿರುವ ಸದಸ್ಯ ಇಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲು ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಮೇಲೆ ಒತ್ತಡ ಹೇರಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್ ಪ್ರವೀಣ್ ಲಿಂಗಯ್ಯ ಅವರು ನಿಯಮ ಮೀರಿ ಮುಖ್ಯ ಅಭಿಯಂತರರ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಆರೋಪಗಳ ನಡುವೆಯೇ ಪ್ರವೀಣ್ ಲಿಂಗಯ್ಯ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿಯಾಗುತ್ತಿರುವ ಮುಖ್ಯ ಇಂಜಿನಿಯರ್/ಪ್ರಾಧಿಕಾರದ ಸದಸ್ಯ ಇಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿವರ್ಗದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಜಲಮಂಡಳಿ ಮತ್ತು ಕೆಯುಡಿಎಫ್‌ಸಿ ಮುಖ್ಯ ಅಭಿಯಂತರರ ಹುದ್ದೆ ಪಿಡಬ್ಲ್ಯೂಡಿ ಇಲಾಖೆಯ ಇಂಜಿನಿಯರ್‍‌ಗಳಿಗೆ ಎನ್‌ ಕೇಡರ್ ಆಗಿದೆ. ಅಂದರೆ ಎರವಲು ಸೇವೆಯ ಮೇಲೆ ಕೇವಲ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಮಾತ್ರ ಬಿಡಿಎನ ಮೆಂಬರ್ ಸೆಕ್ರೆಟರಿ ಹುದ್ದೆಗೆ ವರ್ಗಾವಣೆಗೊಳ್ಳಬಹುದು. ಆದರೆ ಬಿಬಿಎಂಪಿ ಕೇಡರ್‍‌ನಿಂದ ಬಿಡಿಎ ಇಂಜಿನಿಯರ್ ಮೆಂಬರ್  ಹುದ್ದೆಗೆ ವರ್ಗಾವಣೆಗೊಳ್ಳಲು ನಿಯಮದಲ್ಲಿ ಅವಕಾಶವಿಲ್ಲ ಎಂದು ತಿಳಿದು ಬಂದಿದೆ.

ಅಲ್ಲದೇ ಬಿಡಿಎನಲ್ಲಿಯೂ ಇದೇ ಸಮಸ್ಯೆ ಇದೆ. ಸದಸ್ಯ ಅಭಿಯಂತರ ಹುದ್ದೆ ಲೋಕೋಪಯೋಗಿ ಇಲಾಖೆಗೆ ಎನ್‌ ಕೇಡರ್ ಆಗಿದೆ. ಎನ್‌ ಕೇಡರ್ ಅಂದರೇ ಯಾವ ಹುದ್ದೆಯನ್ನು ಇತರ ಇಲಾಖೆಯ ಯಾವ ಅಧಿಕಾರಿ ಅಲಂಕರಿಸಬಹುದು ಎಂದು ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಸ್ಪಷ್ಟವಾಗಿ ಇದೆ. ಆದರೂ ಈ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಪ್ರವೀಣ್‌ ಲಿಂಗಯ್ಯ ಅವರನ್ನು ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ವರ್ಗಾವಣೆ ಮಾಡಲು ಕೋರಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಂತಾಗಿದೆ.

ಇವರಲ್ಲದೇ ಜಿಬಿಎಯ ಇನ್ನೋರ್ವ ಮುಖ್ಯ ಅಭಿಯಂತರ ನಂದೀಶ್ ಎಂಬುವರು ಸಹ ಕೆ.ಯು.ಐ.ಡಿ.ಎಫ್.ಸಿ ಯುಲ್ಲಿ ಮುಖ್ಯ ಅಭಿಯಂತರರಾಗಿದ್ದಾರೆ. ಅದರೆ ಇದು ಕೂಡ ನಿಯಮಬಾಹಿರ ಎಂಬ ಆರೋಪ ಕೇಳಿ ಬಂದಿದೆ. ಇವರು ಮೂಲತಃ ಪರಿಸರ ಅಭಿಯಂತರರಾಗಿದ್ದರೂ ಸಿವಿಲ್ ವಿಭಾಗದ ಮುಖ್ಯ ಅಭಿಯಂತರರ ಹುದ್ದೆಗೆ ನೇಮಕ ಮಾಡಿರುವುದು ಚರ್ಚೆಗೆ ಗ್ರಾಸವಾಗಿತ್ತು.

ಬೈರತಿ ಸುರೇಶ್‌ ಅವರು ತುಳಿದಿದ್ದ ಹಾದಿಯನ್ನೇ ಈಗ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರು ಪ್ರವೀಣ್ ಲಿಂಗಯ್ಯನವರ ಪ್ರಕರಣವನ್ನು ಆ ಪಟ್ಟಿಗೆ ಸೇರಿಲಲು ಟಿಪ್ಪಣಿ ಹಾಕಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಒಂದೊಮ್ಮೆ  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವೀಣ್‌ ಲಿಂಗಯ್ಯ ಅವರನ್ನು ಬಿಡಿಎಯ ಸದಸ್ಯ ಇಂಜಿನಿಯರ್‍‌ ಹುದ್ದೆಗೆ ವರ್ಗಾವಣೆ ಮಾಡಲು ಒಪ್ಪಿಗೆ ಸೂಚಿಸಿದರೆ ಇದೊಂದು ಕೆಟ್ಟ ಪೂರ್ವ ನಿದರ್ಶನವಾಗಬಲ್ಲದು ಎನ್ನುತ್ತಾರೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು.

ಘನತ್ಯಾಜ್ಯ ನಿರ್ವಹಣೆ-4 ನೇ ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ  ಪ್ರವೀಣ್ ಲಿಂಗಯ್ಯ ಅವರನ್ನು ಬಿಬಿಎಂಪಿಯ ಟಿಇಸಿ ವಿಭಾಗದ ಕೆಲಸ ಕಾರ್ಯಗಳ ಹಿತದೃಷ್ಟಿಯಿಂದ ಹೆಚ್ಚುವರಿ ಪ್ರಭಾರದ ಮೇಲೆ  2021ರ ಸೆ.27ರಂದೇ  ವರ್ಗಾಯಿಸಿತ್ತು.

 

 

ಐಐಟಿಯಲ್ಲಿ ಓದಿರುವ ಮತ್ತು ಎಂ.ಟೆಕ್ ಮಾಡಿರುವ ಮುಖ್ಯ ಇಂಜಿನಿಯರುಗಳು ಜಿಬಿಎ ವ್ಯಾಪ್ತಿಯಲ್ಲಿ  ಕಾರ್ಯನಿರ್ವಹಿಸುತ್ತಿದ್ದಾಗಲೂ ಈ ಇಂಜಿನಿಯರ್‍‌ಗಳನ್ನು  ನಗರಪಾಲಿಕೆಗಗಳಿಗೆ ಸೀಮಿತಗೊಳಿಸಿದೆ. ಅವರನ್ನು ಮುಖ್ಯವಲ್ಲದ ಕೆಲಸಗಳಿಗೆ ಅಂದರೆ  ಕಸ ಸಂಗ್ರಹಣೆಯಂತಹ ಕೆಲಸಗಳಿಗೆ ತೊಡಗಿಸಲಾಗಿದೆ. ಅಂದರೆ ಅವರ ಸೇವೆಯನ್ನು ಸಮರ್ಪಕ ಮತ್ತು ಪರಿಣಾಮಕಾರಿಯಾಗಿ ಬಳಸಿಕೊಂಡಿಲ್ಲ ಎಂಬ ಮಾತುಗಳು ಜಿಬಿಎ ವ್ಯಾಪ್ತಿಯಲ್ಲಿ ಕೇಳಿ ಬಂದಿವೆ.

ಆದರೆ  ಓರ್ವ ಮೆಕ್ಯಾನಿಕಲ್ ಇಂಜಿನಿಯರ್‍‌ ಆಗಿರುವ ರಾಜೇಶ್‌ ಎಂಬುವರಿಗೆ ಘನ ತ್ಯಾಜ್ಯ ನಿರ್ವಹಣೆ ಮತ್ತು ಬೃಹತ್ ನೀರುಗಾಲುವೆ ಮುಖ್ಯ ಇಂಜಿನಿಯರ್ ಹುದ್ದೆ ಕರುಣಿಸಿದೆ.  ಇನ್ನೋರ್ವ ಕೆಮಿಕಲ್ ಇಂಜಿನಿಯರ್ ಮಾದೇಶ ಎಂಬುವರಿಗೆ ಮುಖ್ಯ ರಸ್ತೆ ಅಭಿವೃದ್ಧಿ ಮುಖ್ಯ ಇಂಜಿನಿಯರ್ ಹುದ್ದೆ ನೀಡಿದೆ. ಮತ್ತೊಬ್ಬ ಮೆಕ್ಯಾನಿಕಲ್ ಇಂಜಿನಿಯರ್ ಆದ ವಿಶ್ವನಾಥ್‌ ಎಂಬುವರಿಗೆ ಎಲಿವೇಟೆಡ್ ಕಾರಿಡಾರ್ ಇಂಜಿನಿಯರ್ ಹುದ್ದೆ ನೀಡಲಾಗಿದೆ. ಇದಲ್ಲದೇ  ಮತ್ತೋರ್ವ ಪರಿಸರ ಇಂಜಿನಿಯರ್ ಆದ ಪ್ರೇಮಲತಾ ಎಂಬುವರಿಗೆ ಟಿವಿಸಿಸಿ ಮುಖ್ಯ ಇಂಜಿನಿಯರ್ ಹುದ್ದೆ ನೀಡಿದೆ.

‘ಹೀಗೆ ಸಿವಿಲ್ ಇಂಜಿನಿಯರಿಂಗ್ ಪದವಿಯನ್ನೇ ಹೊಂದಿರದ ಇಂಜಿನಿಯರ್‍‌ಗಳನ್ನು ಸಿವಿಲ್ ಇಂಜಿನಿಯರ್‍‌ಗಳಿಗೆ ಮೀಸಲಾದ ಹುದ್ದೆಗಳಿಗೆ ನಿಯೋಜಿಸಲಾಗುತ್ತಿದೆ. ಇದರಿಂದಾಗಿ ನಗರ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಕಾಮಗಾರಿಗಳು ತರಬೇತಿಯೇ ಇಲ್ಲದ ಇಂಜಿನಿಯರ್‍‌ಗಳಿಂದ ನಿರ್ವಹಿಸಲ್ಪಡುತ್ತಿದೆ, ‘ ಎನ್ನುತ್ತಾರೆ ಜಿಬಿಎನ ಹೆಸರು ಹೇಳಲಿಚ್ಛಿಸದ ಮುಖ್ಯ ಇಂಜಿನಿಯರ್‍‌ಯೊಬ್ಬರು.

Hot this week

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...
Please Scan to make Your Contribution

Topics

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

Related Articles

Popular Categories

error: Content is protected !!