Wednesday | May 13, 2026 |

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ ಅಕ್ರಮ ಲಾಭ ಮಾಡಿಕೊಟ್ಟಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಕಾರಣ ಮುಡಾದ ಹಿಂದಿನ ವಿಶೇಷ ಭೂ ಸ್ವಾಧೀನಾಧಿಕಾರಿ ವಿ‍ಷ್ಣುವರ್ಧನ ರೆಡ್ಡಿ ಅವರ ವಿರುದ್ಧ ವಿಚಾರಣೆಗೆ ಪೂರ್ವಾನುಮತಿ ನೀಡಲು ನಗರಾಭಿವೃದ್ಧಿ ಇಲಾಖೆಯು ಇದೀಗ ಸಹಮತಿ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು   14 ನಿವೇಶನಗಳ ಬದಲಿ ಹಂಚಿಕೆ ಮಾಡಿರುವ ಪ್ರಕರಣ ಕುರಿತು ಲೋಕಾಯುಕ್ತ ತನಿಖಾ ಸಂಸ್ಥೆಯು ನೀಡಿದ್ದ  ಬಿ ರಿಪೋರ್ಟ್‌ ಪ್ರಶ್ನಿಸಿರುವ ಅರ್ಜಿಯು  ನ್ಯಾಯಾಲಯದಲ್ಲಿ  ವಿಚಾರಣೆಗೆ ಬಾಕಿ ಇದೆ. ಈ ಮಧ್ಯೆಯೇ ಮುಡಾದ ಹಿಂದಿನ ವಿಶೇಷ ಭೂ ಸ್ವಾಧೀನಾಧಿಕಾರಿ ವಿಷ್ಣುವರ್ಧನ ರೆಡ್ಡಿ ಅವರ ವಿರುದ್ಧ ವಿಚಾರಣೆಗೆ ಪೂರ್ವಾನುಮತಿ ನೀಡಿರುವುದು ಮುನ್ನೆಲೆಗೆ ಬಂದಿದೆ.

ಮುಡಾದ ಹಿಂದಿನ ವಿಶೇಷ ಭೂ ಸ್ವಾಧೀನಾಧಿಕಾರಿ ವಿಷ್ಣುವರ್ಧನ ರೆಡ್ಡಿ ಅವರ ವಿರುದ್ಧ ವಿಚಾರಣೆಗೆ ಪೂರ್ವಾನುಮತಿ ನೀಡಬಹುದು ಎಂದು ಮೈಸೂರು ಜಿಲ್ಲಾಧಿಕಾರಿಗಳೂ ಸ್ಪಷ್ಟವಾಗಿ ಶಿಫಾರಸ್ಸು ಮಾಡಿದ್ದರು. ಇದರ ಮುಂದುವರಿಕೆ ಭಾಗವಾಗಿ ಇದೀಗ ನಗರಾಭಿವೃದ್ಧಿ ಇಲಾಖೆಯೂ ಸಹ ವಿಚಾರಣೆಗೆ ಪೂರ್ವಾನುಮತಿ ನೀಡಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಪತ್ರ ಬರೆದಿದೆ.

ಈ ಪತ್ರದ ಪ್ರತಿಯು ದಿ ಫೈಲ್‌ ಗೆ ಲಭ್ಯವಾಗಿದೆ.

ಜಿಲ್ಲಾಧಿಕಾರಿ ಟಿಪ್ಪಣಿಯಲ್ಲೇನಿದೆ?

ಮೈಸೂರು ತಾಲೂಕಿನ ಈರನಗೆರೆ ಗ್ರಾಮದ ಸರ್ವೆ ನಂಬರ್‍‌ 14/1ರಲ್ಲಿ 3 ಎಕರೆ 35 ಗುಂಟೆ ಜಮೀನು 1965ರಲ್ಲೇ ಅಂದಿನ ಸಿಐಟಿಬಿಯು ಭೂ ಸ್ವಾಧೀನಪಡಿಸಿಕೊಂಡಿತ್ತು. ಅಲ್ಲದೇ ಈ ಸಂಬಂಧ ಯಾವುದೇ ಪರಿಹಾರ ನೀಡಲು ಅವಕಾಶವಿರಲಿಲ್ಲ. ಈ ಸಂಗತಿ ಗೊತ್ತಿದ್ದರೂ ಸಹ ವಿಷ್ಣುವರ್ಧನ ರೆಡ್ಡಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದದಲ್ಲಿ  ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ  ವಾಸ್ತವಾಂಶಗಳನ್ನು ಮರೆಮಾಚಿದ್ದರು ಎಂದು ಜಿಲ್ಲಾಧಿಕಾರಿಗಳ ಟಿಪ್ಪಣಿಯಲ್ಲಿ ವಿವರಿಸಿತ್ತು.

ಖಾಸಗಿ ವ್ಯಕ್ತಿಗಳಾದ ಆರ್ ಲಿಂಗಪ್ಪ ಮತ್ತು ಆರ್ ರಮೇಶ್‌ ಕುಮಾರ್ ಎಂಬುವರ ಹೆಸರಿಗೆ ಖಾತೆ ವರ್ಗಾವಣೆಯೂ ಆಗಿರಲಿಲ್ಲ. ಇದನ್ನು ಕಂದಾಯ ದಾಖಲೆಗಳ ಪರಿಶೀಲನೆಯಲ್ಲಿಯೂ ದೃಢಪಡಿಸಿಕೊಂಡಿತ್ತು. ಆದರೂ 50;50 ರ ಅನುಆತದಲ್ಲಿ 12,120 ಚದರ ಅಡಿ ವಿಸ್ತೀರ್ಣದಲ್ಲಿ ಅಭಿವೃದ್ಧಿಪಡಿಸಿದ್ದ ಜಾಗವನ್ನು ಮಂಜೂರು ಮಾಡಲು ಅಧಿಕೃತ ಜ್ಞಾಪನ ಪತ್ರವನ್ನು ತಯಾರಿಸಿದ್ದರು.

ಅಲ್ಲದೇ ಇದನ್ನು ಆಯುಕ್ತರ ಸಹಿಗಾಗಿ ಮಂಡಿಸಿದ್ದರು. ‘ಆರ್ ಲಿಂಗಪ್ಪ ಮತ್ತು ಆರ್ ರಮೇಶ್‌ಕುಮಾರ್ ಅವರುಗಳಿಗೆ ಅಕ್ರಮ ಲಾಭ ಮಾಡಿಕೊಡುವ ಉದ್ದೇಶದಿಂದ ಇತರೆ ಆರೋಪಿಗಳೊಂದಿಗೆ ಶಾಮೀಲಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿತ್ತು. ಇದು ಕರ್ತವ್ಯಲೋಪವಾಗಿತ್ತು. ಇದರಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಪಾರ ಪ್ರಮಾಣದ ನಷ್ಟವುಂಟು ಮಾಡಿ ಖಾಸಗಿಯವರಿಗೆ ಅಕ್ರಮ ಲಾಭ ಮಾಡಿಕೊಟ್ಟಿದ್ದರು ಎಂಬ ಆರೋಪಕ್ಕೆ ವಿಷ್ಣುವರ್ಧನ ರೆಡ್ಡಿ ಅವರು ಗುರಿಯಾಗಿದ್ದರು.

 

 

ಈ ಆರೋಪಗಳ ಕುರಿತು ತನಿಖೆ ಮಾಡಲು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1986 ಕಲಂ 17(ಎ) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 (ತಿದ್ದುಪಡಿ ಕಾಯ್ದೆ) ರೀತಿ ತನಿಖೆ ಮಾಡಲು ಕರ್ನಾಟಕ ಲೋಕಾಯುಕ್ತರು ಪೂರ್ವಾನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು. ಈ ಬಗ್ಗೆ  ಜಿಲ್ಲಾಧಿಕಾರಿಗಳು ಕಡತದಲ್ಲಿನ ದಾಖಲೆಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಿದ್ದರು.

ಆರ್‍‌ ಲಿಂಗಪ್ಪ ಮತ್ತು ರಮೇಶ್‌ ಕುಮಾರ್ ಅವರಿಗೆ ಖಾತೆ ವರ್ಗಾವಣೆಯಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಕಂದಾಯ ದಾಖಲಾತಿಗಳನ್ನು ಪರಿಶೀಲನೆ ಮಾಡಿದ್ದರು. ಇದರ ಪ್ರಕಾರ ವಿಷ್ಣುವರ್ಧನ ರೆಡ್ಡಿ ಅವರು ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಕಚೇರಿ ಟಿಪ್ಪಣಿ ಕಂಡಿಕೆ 45ರಲ್ಲಿ   ಹಿಂದಿನ ಕಂಡಿಕೆಗಳ ಅಂಶಗಳನ್ನು ಉಲ್ಲೇಖಿಸಿ ದಸ್ತಾವೇಜಿನಂತೆ ಖಾತೆ ವರ್ಗಾವಣೆಯಾಗಿರುವ ಬಗ್ಗೆ ಕಂದಾಯ ದಾಖಲಾತಿಗಳಂತೆ ಕಂಡುಬಂದಿರುವುದಿಲ್ಲ ಎಂದು ನಮೂದಿಸಿದ್ದರು. ಅಲ್ಲದೇ ಕಚೇರಿ ಟಿಪ್ಪಣಿ 47ನೇ ಕಂಡಿಕೆಯಲ್ಲಿ  ಆಯುಕ್ತರ ಸೂಚನೆಯಂತೆ ಅಧಿಕೃತ ಜ್ಞಾಪನ ಪತ್ರ ತಯಾರಿಸಿ ಮಂಡಿಸಿದ್ದರು.

ಕಚೇರಿ ಟಿಪ್ಪಣಿ ಕಂಡಿಕೆ 50ರಲ್ಲಿ ಭೂಮಾಪಕರು ಮತ್ತು ತಾಂತ್ರಿಕ ಶಾಖೆಯಿಂದ ನಕ್ಷೆಯಿಂದ ವರದಿ ನೀಡಿ ಮಂಡಿಸಿ ಎಂದು ಕಡತದಲ್ಲಿ ನಮೂದಿಸಿದ್ದರು. ಅಲ್ಲದೇ ಕಚೇರಿ ಟಿಪ್ಪಣಿ ಕಂಡಿಕೆ  53ರಲ್ಲಿ ಕಿರು ಸಹಿ ಮಾಡಿದ್ದರು. ಹಾಗೆಯೇ ಕಚೇರಿ ಟಿಪ್ಪಣಿ ಕಂಡಿಕೆ 57ರಲ್ಲಿ  ಎಲ್ಲೆಗಳನ್ನು ಗುರುತಿಸಿ ಮೋಜಣಿ ಮಾಡಲು ಸೂಚಿಸಿದ್ದರು. ಕಚೇರಿ ಟಿಪ್ಪಣಿ ಕಂಡಿಕೆ 60, 63, 66ರಲ್ಲಿ ಕಿರು ಸಹಿ ಮಾಡಿರುವುದನ್ನು ಜಿಲ್ಲಾಧಿಕಾರಿಗಳು ಕಡತ ಪರಿಶೀಲನೆ ವೇಳೆಯಲ್ಲಿ ಪತ್ತೆ ಹಚ್ಚಿರುವುದು ಪತ್ರದಿಂದ ತಿಳಿದು ಬಂದಿದೆ.

ಅಲ್ಲದೇ ಕಚೇರಿ ಟಿಪ್ಪಣಿ ಕಂಡಿಕೆ 69ರಲ್ಲಿ ಆಯುಕ್ತರು ಸೂಚಿಸಿರುವ ಪ್ರಕಾರ ವರದಿ ಮತ್ತು ಪಾವತಿಯನ್ನು ಖಚಿತಪಡಿಸಿಕೊಂಡು ಅಧಿಕೃತ ಜ್ಞಾಪನ ಪತ್ರ ಮಂಡಿಸಲು ನಮೂದಿಸಿದ್ದರು. ಕಚೇರಿ ಟಿಪ್ಪಣಿ ಕಂಡಿಕೆ 72ರಲ್ಲಿ ಕೈಗಾರಿಕೆ ಬಡಾವಣೆ ಯಾವ ಪ್ರದೇಶದಲ್ಲಿ ರಚನೆಯಾಗಿರುತ್ತದೆ ಎಂದ ಪ್ರಾಧಿಕಾರದ ಬಡಾವಣೆಯಲ್ಲಿ ಗುರುತಿಸಿ ಸಲ್ಲಿಸಲು ನಮೂದಿಸಿದ್ದರು. ಅದೇ ರೀತಿ ಕಚೇರಿ ಟಿಪ್ಪಣಿ ಕಂಡಿಕೆ ಸಂಖ್ಯೆ 74 ಮತ್ತು ಕಂಡಿಕೆ 68ರಲ್ಲಿ ನ ಆದೇಶ ಮತ್ತು ಕಂಡಿಕೆ 71ರಲ್ಲಿ ವಿವರಣೆ ಮತ್ತು ಕಂಡಿಕೆ 73ರಲ್ಲಿ ಭೂಮಾಪಕರ ವರದಿ ಪ್ರಕಾರ ಅಧಿಕೃತ ಜ್ಞಾಪನ ಪತ್ರವನ್ನು ಸಹಿಗಾಗಿ ಮಂಡಿಸಿರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿಯು ವರದಿಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

‘ಈ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ವಿ‍ಷ್ಣುವರ್ಧನ ರೆಡ್ಡಿ ಅವರು ಈ ಪ್ರಕರಣದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುತತದೆ. ಇವರನ್ನು ತನಿಖೆ, ವಿಚಾರಣೆ ಕೈಗೊಳ್ಳಲು ಪೂರ್ವಾನುಮತಿ ನಿಡಬಹುದು,’ ಎಂದು ಸರ್ಕಾರಕ್ಕೆ  ವರದಿ ಸಲ್ಲಿಸಿರುವುದು ತಿಳಿದು ಬಂದಿದೆ.

 

 

ಈ ವರದಿ ಆಧರಿಸಿ ನಗರಾಭಿವೃದ್ಧಿ ಇಲಾಖೆಯು ಸಹ ಇವರ ವಿರುದ್ಧ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಲು ಸಹಮತಿಸಿದೆ. ಇದಕ್ಕೆ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಬೈರತಿ ಸುರೇಶ್‌ ಅವರೂ ಅನುಮೋದಿಸಿರುವುದು ಗೊತ್ತಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ವಿವಿಧ ರೀತಿಯ ಅಕ್ರಮಗಳು, ನಿಯಮ ಉಲ್ಲಂಘನೆಗಳ ಕುರಿತು  ಹಿಂದಿನ ಅಧ್ಯಕ್ಷ  ರಾಜೀವ್‌ ಅವರನ್ನು ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆಗೊಳಪಡಿಸುವ ಪ್ರಸ್ತಾವವಕ್ಕೆ ಕಾನೂನು ಇಲಾಖೆಯು ಸಹಮತಿಸಿದೆ. ಕಾನೂನು ಇಲಾಖೆಯು ನೀಡಿರುವ ಸಹಮತಿಯನ್ನು  ಕಾನೂನು ಸಚಿವ ಎಚ್‌ ಕೆ ಪಾಟೀಲ್ ಅವರು ಅಳೆದು ತೂಗಿ ಕಡೆಗೂ ಅನುಮೋದಿಸಿದ್ದರು.

ಮುಡಾ ಮಾಜಿ ಅಧ್ಯಕ್ಷ ರಾಜೀವ್ ವಿರುದ್ಧ ತನಿಖೆಗೆ ಕಾನೂನು ಇಲಾಖೆ ಅಸ್ತು; ಬೈರತಿ ಸುರೇಶ್ ಅಂಗಳದಲ್ಲಿ ಕಡತ

 

 

 

 

 

2021-22ನೇ ಸಾಲಿನ ಲೆಕ್ಕ ಪರಿಶೋಧನೆಯ ವರದಿಯು ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಲವು ಗಂಭೀರ ಅಕ್ರಮಗಳ ಮತ್ತೊಂದು ಮುಖವನ್ನು ತೆರೆದಿಟ್ಟಿತ್ತು.

 

 

ನಗದು ಪುಸ್ತಕ ನಿರ್ವಹಣೆಯಲ್ಲಿರುವ ಲೋಪಗಳೇನು?

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರವು ಪ್ರಾಧಿಕಾರದ ನಿಧಿ ನಿರ್ವಹಣೆಗಾಗಿ ಒಟ್ಟು 23 ಬ್ಯಾಂಕ್‌ ಖಾತೆಗಳನ್ನು ನಿರ್ವಹಿಸಿತ್ತು. ಆದರೆ ನಗದು ಪುಸ್ತಕಗಳನ್ನು ನಿರ್ವಹಣೆಯಲ್ಲಿ ಹಲವು ಲೋಪಗಳಿದ್ದವು ಎಂದು ಲೆಕ್ಕ ಪರಿಶೋಧಕರ ವರದಿಯಲ್ಲಿ ವಿವರಿಸಲಾಗಿತ್ತು.

 

ಬದಲಿ ನಿವೇಶನ, ತುಂಡು ಭೂಮಿ ಮಂಜೂರು; ಸರ್ಕಾರಿ ಲೆಕ್ಕ ಪರಿಶೋಧನೆಗೂ ಕಡತ ಹಾಜರುಪಡಿಸದ ಅಧಿಕಾರಿಗಳು

ಕರ್ನಾಟಕ ಆರ್ಥಿಕ ಸಂಹಿತೆಯ ಅನುಚ್ಛೇಧ 328 ಮತ್ತು 329(1)ರಿಂದ (8)ರ ಅನ್ವಯ ಪ್ರಾರಂಭಿಕ ಶಿಲ್ಕು ಬ್ಯಾಂಕ್‌ ಖಾತೆವಾರು ಪ್ರತ್ಯೇಕ ನಗದು ಪುಸ್ತಕವನ್ನು ನಿರ್ವಹಿಸಬೇಕಿತ್ತು. ಪ್ರತಿ ದಿನದ ವ್ಯವಹಾರದ ಸ್ವೀಕೃತಿ ಮತ್ತು ವೆಚ್ಚದ ವಿವರಗಳನ್ನು ದಾಖಲಿಸಬೇಕಿತ್ತು. ನಗದು ವಹಿ ಶಿಲ್ಕು ಮತ್ತು ಬ್ಯಾಂಕ್‌ ಶಿಲ್ಕಿಗೂ ಆಸಿಕವಾಗಿ ಸಮನ್ವಯ ಮಾಡಿಕೊಂಡು ದೃಢೀಕರಿಸಬೇಕಿತ್ತು. ಆದರೆ ಮುಡಾ ಅಧಿಕಾರಿಗಳು ಈ ಯಾವ ಪ್ರಕ್ರಿಯೆಗಳನ್ನೂ ಮಾಡಿರಲಿಲ್ಲ.

‘ನಗದು ಪುಸ್ತಕವನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸಿರುವುದಿಲ್ಲ. ಟ್ಯಾಲಿ ತಂತ್ರಾಂಶದಲ್ಲಿ ನಿರ್ವಹಿಸಿರುವ ನಗದು ಪುಸ್ತಕದ ಪ್ರತಿಯನ್ನು ಮಾತ್ರ ಪರಿಶೀಲನೆಗೆ ಹಾಜರುಪಡಿಸಿದ್ದಾರೆ. ನಗದು ಪುಸ್ತಕವನ್ನು ಸಕ್ಷಮ ಅಧಿಕಾರಿಯು ಸಹಿ ಮಾಡಿ ದೃಢೀಕರಿಸಿಲ್ಲ. ಮತ್ತು ಪ್ರತಿ ಮಾಹೆಯ ಅಂತ್ಯಕ್ಕೆ ನಗದಾಗದೇ ಉಳಿದಿರುವ ಧನಾದೇಶಗಳ ವಿವರಗಳನ್ನು ಮಾಹೆವಾರು ಸಮನ್ವಯ ಮಾಡಿ ನಗದು ಪುಸ್ತಕದಲ್ಲಿ ದಾಖಲಿಸಿ ದೃಢೀಕರಿಸಿರುವುದಿಲ್ಲ,’ ಎಂದು ಲೆಕ್ಕ ಪರಿಶೋಧಕರು ವರದಿಯಲ್ಲಿ ವಿವರಿಸಿತ್ತು.

ಮೂಲೆ, ಮಧ್ಯಂತರ, ಸಿ ಎ ನಿವೇಶನಗಳ ಹಂಚಿಕೆ; ಹರಾಜು ಮೊತ್ತ ಸ್ವೀಕೃತದಲ್ಲೇ 90.76 ಕೋಟಿ ರು ವ್ಯತ್ಯಾಸ

ಹಾಗೆಯೇ ನೆಫ್ಟ್‌ ಮತ್ತು ಆರ್‍‌ಟಿಜಿಎಸ್‌ ಮೂಲಕ ಪ್ರಾಧಿಕಾರಕ್ಕೆ ಜಮೆಯಾದ ಮೊತ್ತಗಳು ಯಾವ ಯಾವ ಬಾಬ್ತು ಜಮೆಯಾಗಿದೆ ಎಂಬುದೂ ಸಹ ನಗದು ಪುಸ್ತಕದಲ್ಲಿ ನಮೂದಿಸಿರಲಿಲ್ಲ.

3,493 ನಿವೇಶನಗಳಿಗೆ ಭೂಮಿ ಖರೀದಿ ವ್ಯವಹಾರ; ಲೆಕ್ಕಪರಿಶೋಧನೆಗೆ ಸಿಗದ ಸಬ್‌ ರಿಜಿಸ್ಟ್ರಾರ್‌ ದಾಖಲೆಗಳು

ಹೊಸದಾಗಿ ಪ್ರಾರಂಭಿಸಲಾದ ಖಾತೆಗಳ ಉದ್ದೇಶ ಮತ್ತು ಈಗಾಗಲೇ ತೆರೆಯಲಾಗಿರುವ ಖಾತೆಗಳಲ್ಲಿ ಉದ್ದೇಶಿತ ಪ್ರಕಾರ್ಯಗಳನ್ನು ಕೈಗೊಳ್ಳುವಲ್ಲಿ ವಿಫಲವಾದಲ್ಲಿ ಮಾತ್ರ ಹೊಸ ಖಾತೆ ತೆರೆಯಬಹುದು. ಮತ್ತು  ಹಳೆಯ ಖಾತೆಗಳನ್ನು ಮುಕ್ತಾಯಗೊಳಿಬಹುದು. ಹಳೆ ಖಾತೆಗಳು ಇದ್ದರೂ ಸಹ ಅದೇ ಸ್ವರೂಪದ ಪ್ರಕಾರ್ಯಗಳಿಗೆ ಹೊಸ ಬ್ಯಾಂಕ್‌ ಖಾತೆಗಳನ್ನು ಪ್ರಾರಂಭಿಸಿರುವ ಮತ್ತು ಹಳೆಯ ಖಾತೆಗಳನ್ನು ಮುಕ್ತಾಯಗೊಳಿಸದೇ ಮುಂದುವರೆಸಿರುವ ಸಂಬಂಧ ಮಾಹಿತಿಯನ್ನು ಹಾಜರುಪಡಿಸಲು ಲೆಕ್ಕ ಪರಿಶೋಧಕರು ಸೂಚಿಸಿದ್ದರು.

2021-22ನೇ ಸಾಲಿನಲ್ಲಿ ಪ್ರಾಧಿಕಾರದಲ್ಲಿ ಚಾಲ್ತಿಯಲ್ಲಿರುವ ಒಟ್ಟು 23 ಖಾತೆಗಳಲ್ಲಿ 15 ಖಾತೆಗಳಲ್ಲಿ ಆಂತರಿಕ ವರ್ಗಾವಣೆ ಮಾಡಲಾಗಿದ್ದನ್ನು ಲೆಕ್ಕ ಪರಿಶೋಧಕರು ತಪಾಸಣೆ ಮೂಲಕ ಬಯಲು ಮಾಡಿದ್ದರು.

‘ಒಂದು ಖಾತೆಯಿಂದ ಮತ್ತೊಂದು ಖಾತೆಗೆ ಮೊಬಲಗನ್ನು ವರ್ಗಾವಣೆ ಮಾಡಿರುವ ಸಂಬಂಧವಾಗಿ ವಿವರಗಳನ್ನು ಹಾಗೂ ವರ್ಗಾವಣೆ ಸಂಬಂಧವಾಗಿ ಸಕ್ಷಮ ಪ್ರಾಧಿಕಾರದಿಂದ ಪಡೆಯಲಾದ ಅನುಮೋದನೆಯ ಕಡತವನ್ನು ಲೆಕ್ಕ ಪರಿಶೋಧನೆಗೆ ಹಾಜರುಪಡಿಸಿರುವುದಿಲ್ಲ. ಆದರೆ ವರ್ಗಾವಣೆ ಮತ್ತು ಸ್ವೀಪ್‌ ಖಾತೆಗಳನ್ನು ಪ್ರತ್ಯೇಕಿಸಿ ಮಾಹಿತಿಯನ್ನು ಲೆಕ್ಕ ಪರಿಶೋಧನೆಗೆ ಹಾಜರುಪಡಿಸಿದ್ದಾರೆ,’ ಎಂದು ವರದಿಯಲ್ಲಿ ವಿವರಿಸಿತ್ತು.

 

ಇದರ ಪ್ರಕಾರ ನಿವ್ವಳ ಆಂತರಿಕ ವರ್ಗಾವಣೆ ಸ್ವೀಕೃತಿಯು 223,65,52,671 ರು. ಮತ್ತು ಅಂತರಿಕ ವರ್ಗಾವಣೆ ಪಾವತಿಯು 223,65,52,671 ರು.ಗಳಿದೆ. ಒಟ್ಟು ವರ್ಗಾವಣೆ ಮೊತ್ತ ಸ್ವೀಕೃತಿ ಮತ್ತು ಪಾವತಿಯು 447.31,05,342 ರುಗಳಾಗಿವೆ. ಒಂದು ಖಾತೆಯಿಂದ ಮತ್ತೊಂದು ಖಾತೆಗೆ ಹಣ ವರ್ಗಾವಣೆ ಮಾಡುವಾಗ ಒಂದು ನಿರ್ದಿಷ್ಟ ಉದ್ದೇಶ ಮತ್ತು ದಿನಾಂಕದಂದು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ ಹಣ ವರ್ಗಾಯಿಸಲಾಗಿದೆ. ಮುಡಾದ ಈ ಲೋಪವನ್ನು ಲೆಕ್ಕ ಪರಿಶೋಧಕರು ಗಂಭೀರವಾಗಿ ಪರಿಗಣಿಸಿತ್ತು.

ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಲವು ಅಕ್ರಮಗಳ ಕುರಿತು ಲೆಕ್ಕ ಪರಿಶೋಧಕರು ಸಲ್ಲಿಸಿದ್ದ ವರದಿಯತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಲೀ, ಸಚಿವ ಬೈರತಿ ಸುರೇಶ್‌ ಅವರಾಗಲೀ ಕಣ್ಣಾಡಿಸಿರಲಿಲ್ಲ. ವರದಿ ಆಧರಿಸಿ ಇದುವರೆಗೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಅನುಮೋದನೆಯಿಲ್ಲದೆಯೇ 223 ಕೋಟಿ ರುಪಾಯಿ ವರ್ಗಾವಣೆ ಮಾಡಿದ್ದನ್ನು ಲೆಕ್ಕ ಪರಿಶೋಧಕರು ಪತ್ತೆ ಹಚ್ಚಿದ್ದರು.

 

ಅನುಮೋದನೆಯಿಲ್ಲದೇ 223 ಕೋಟಿ ರು ವರ್ಗಾವಣೆ!; ಮುಡಾ ಅಕ್ರಮ ಬಯಲು ಮಾಡಿದ ಲೆಕ್ಕ ಪರಿಶೋಧನೆ

 

ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿಯೇ ನಿಯಮಬಾಹಿರವಾಗಿ 11.57 ಕೋಟಿ ರುಪಾಯಿಗಳನ್ನು ಹೂಡಿಕೆ ಮಾಡಲಾಗಿದ್ದನ್ನು ಲೆಕ್ಕ ಪರಿಶೋಧಕರು ಶೋಧಿಸಿದ್ದರು.

ಸಿದ್ದು ಮೊದಲ ಅವಧಿಯಲ್ಲೇ ನಿಯಮಬಾಹಿರವಾಗಿ 11.57 ಕೋಟಿ ಹೂಡಿಕೆ; ನಿಶ್ಚಿತ ಠೇವಣಿ ವ್ಯವಹಾರ ಬಯಲು

 

ಅಲ್ಲದೇ ಹೂಡಿಕೆಯಲ್ಲಿಯೂ ಬಹುಕೋಟಿಯಷ್ಟು ಬಡ್ಡಿ ನಷ್ಟವಾಗಿತ್ತು.

 

ಹೂಡಿಕೆಯಲ್ಲಿಯೂ ಬಹುಕೋಟಿ ಬಡ್ಡಿ ನಷ್ಟ; ಮುಡಾ ಸಮಜಾಯಿಷಿ ಒಪ್ಪದ ಲೆಕ್ಕ ಪರಿಶೋಧಕರು

 

ಆದರೆ ಲೆಕ್ಕ ಪರಿಶೋಧಕರ ವರದಿ ಆಧರಿಸಿ ನಗರಾಭಿವೃದ್ದಿ ಇಲಾಖೆಯು ಇದುವರೆಗೂ ಪೂರ್ಣ ಪ್ರಮಾಣದಲ್ಲಿ ಕ್ರಮಗಳನ್ನು ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

Hot this week

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...
Please Scan to make Your Contribution

Topics

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

Related Articles

Popular Categories

error: Content is protected !!