Wednesday | June 10, 2026 |

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ ಮಸೂದೆ ಸಂಸತ್ತಿನ ಜಂಟಿ ಸಮಿತಿಯ ಪರಿಶೀಲನೆಗೆ ರಾಜ್ಯವು ಯಾವುದೇ ಪ್ರತಿಕ್ರಿಯೆಯನ್ನೂ ನೀಡಿಲ್ಲ. ಲೋಕಸಭೆಯ ಸಚಿವಾಲಯದ ನಿರ್ದೇಶಕರು 2026ರ ಜನವರಿಯಿಂದ ಮೇ ತಿಂಗಳವರೆಗೆ ಹಲವು ಪತ್ರಗಳನ್ನು ಬರೆದಿದ್ದರೂ ಸಹ ರಾಜ್ಯವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಲೋಕಸಭೆ ಸಚಿವಾಲಯವು ರಾಜ್ಯಕ್ಕೆ ಬರೆದಿರುವ ಪತ್ರದ ಕುರಿತು ನಗರಾಭಿವೃದ್ಧಿ ಇಲಾಖೆಯು ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಗಳನ್ನು ನಡೆಸಿದೆ. ಈ ಚರ್ಚೆಯು ಕಳೆದ 4 ತಿಂಗಳಿನಿಂದಲೂ ನಡೆಯುತ್ತಿದೆ. ಆದರೂ ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿದೆ.

ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಟಿಪ್ಪಣಿ ಹಾಳೆಗಳು ಲಭ್ಯವಾಗಿವೆ.

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಇದರ ಹಿಂದೆ ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆ ಕೂಡಾ ಇದೆ ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಹೇಳಿದ್ದರು. ಈಗ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬೆನ್ನಲ್ಲೇ ನಗರಾಭಿವೃದ್ಧಿ ಇಲಾಖೆಯ ಟಿಪ್ಪಣಿ ಹಾಳೆಗಳು ಮುನ್ನೆಲೆಗೆ ಬಂದಿವೆ.

ಒಂದು ರಾಷ್ಟ್ರ ಒಂದು ಚುನಾವಣೆ ಎಂದೇ ಪ್ರಸಿದ್ಧವಾಗಿರುವ ಸಂವಿಧಾನದ 129ನೇ ತಿದ್ದುಪಡಿ ಮಸೂದೆಯನ್ನು ಸಂಸತ್ತಿನ ಜಂಟಿ ಸಮಿತಿಯು ಪರಿಶೀಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಂಸತ್ತಿನ ಜಂಟಿ ಸಮಿಗೆ ಮಾಹಿತಿ ಒದಗಿಸಬೇಕು. ನಗರಾಭಿವೃದ್ಧಿ ಇಲಾಖೆಯ ಕಾರ್ಯವ್ಯಾಪ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾರ್ಯಗಳು, ಕಾರ್ಯಕ್ರಮಗಳು, ನೀತಿಗಳು, ಯೋಜನೆಗಳ ಅನುಷ್ಠಾನ ಹಾಗೂ ಫಲಿತಾಂಶಗಳ ಮೇಲೆ ಪ್ರತ್ಯೇಕ ಚುನಾವಣೆಗಳಿಂದ ಉಂಟಾಗುತ್ತಿರುವ ನೇರವಾದ, ಪರೋಕ್ಷವಾದ ಹಾಗೂ ವಿಸ್ತೃತವಾದ ಪರಿಣಾಮಗಳ ಮಾಹಿತಿಯನ್ನು ಒದಗಿಸಬೇಕು ಎಂದು 2026ರ ಜನವರಿ 5ರಂದೇ ಲೋಕಸಭೆ ಸಚಿವಾಲಯದ ನಿರ್ದೇಶಕರು ಪತ್ರ ಬರೆದಿದ್ದರು.

 

 

ಇದಾದ ನಂತರ 2026ರ ಮಾರ್ಚ್‌ 20, ಏಪ್ರಿಲ್ 21ರಂದೂ ಸಹ ಪತ್ರ ಬರೆದಿತ್ತು.

 

ಆದರೂ ರಾಜ್ಯ ಸರ್ಕಾರವು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ 2026ರ ಜೂನ್‌ 15ರೊಳಗೇ ಲೋಕಸಭೆ ಸಚಿವಾಲಯದ ನಿರ್ದೇಶಕರಿಗೆ ಪ್ರತಿಕ್ರಿಯೆ ನೀಡಬೇಕು. ಈ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಪತ್ರ ಬರೆದಿರುವುದು ಟಿಪ್ಪಣಿ ಹಾಳೆಗಳಿಂದ ತಿಳಿದು ಬಂದಿದೆ.

 

 

ಈ ಪತ್ರ ಬರೆದ ನಂತರವೂ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನಗರ ಪಾಲಿಕೆಗಳು ಶಾಖೆಯಿಂದ ಯಾವುದೇ ಮಾಹಿತಿ, ಪ್ರತಿಕ್ರಿಯೆಯನ್ನು ನೀಡಿಲ್ಲ ಎಂದು ಗೊತ್ತಾಗಿದೆ.

ಮಸೂದೆ ವಿರೋಧಿಸಿದ್ದ ಸಿದ್ದರಾಮಯ್ಯ

ಹಲವಾರು ದೋಷಗಳಿಂದ ಕೂಡಿರುವ ಈಗಿನ ಚುನಾವಣಾ ವ್ಯವಸ್ಥೆಯನ್ನು ಸುಧಾರಣೆಗೊಳಪಡಿಸುವ ತುರ್ತು ಅಗತ್ಯ ಇರುವ ಈ ಸಂದರ್ಭದಲ್ಲಿ ಇಂತಹ ಮಸೂದೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ. ಇಂತಹದ್ದೊಂದು ಮುಖ್ಯವಾದ ಮಸೂದೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಪಡೆಯುವ ಮೊದಲು ವಿರೋಧಪಕ್ಷಗಳು ಮತ್ತು ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಬೇಕಾಗಿತ್ತು ಎಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದರು.

‘ನರೇಂದ್ರ ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ಈ ಮಸೂದೆಯನ್ನು ದೇಶದ ಮೇಲೆ ಹೇರಲು ಹೊರಟಿದೆ. ಕೇರಳ ಸರ್ಕಾರ ಈಗಾಗಲೇ ‘’ಒಂದು ರಾಷ್ಟ್ರ, ಒಂದು ಚುನಾವಣೆ’’ ಪ್ರಸ್ತಾವವನ್ನು ವಿರೋಧಿಸಿ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟಿದೆ. ಅಗತ್ಯ ಬಿದ್ದರೆ ನಮ್ಮ ಸರ್ಕಾರ ಕೂಡಾ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿ ‘’ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ವಿರುದ್ದ ಬಹುಮತದ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು,’ ಎಂದು ತಿಳಿಸಿದ್ದರು.

ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಈ ಪ್ರಸ್ತಾವದಲ್ಲಿ ಪರಿಹಾರವೇ ಇಲ್ಲ ಎಂದರು. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ ಎಂದು ಹೇಳಿದ್ದರು.

ಈ ಮಸೂದೆಯು ಅಸಂವಿಧಾನಿಕ, ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಇದು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ ಎಂದು ಹಲವರು ವಾದಿಸುತ್ತಿದ್ದಾರೆ. ಒಂದು ದೇಶ, ಒಂದು ಚುನಾವಣೆಗಾಗಿ ಸಂವಿಧಾನದ 129ನೇ ತಿದ್ದುಪಡಿ ಮಸೂದೆ 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸಿದ್ದರು. ಆದರೆ, ವಿರೋಧ ಪಕ್ಷಗಳು ಇದನ್ನು ತೀವ್ರವಾಗಿ ಖಂಡಿಸಿದ್ದವು. ಈ ಮಸೂದೆಯ ಅಗತ್ಯ ಏನಿತ್ತು ಎಂದು ಪ್ರತಿಪಕ್ಷಗಳು ಸರ್ಕಾರವನ್ನು ಪ್ರಶ್ನಿಸಿವೆ. ಈ ಹಿನ್ನೆಲೆ ಮಸೂದೆಯನ್ನು ಜಂಟಿ ಸದನ ಸಮಿತಿಗೆ ಕಳುಹಿಸಲಾಗಿದೆ. ಸರ್ಕಾರ ಕೂಡ ಯಾವುದೇ ವಿರೋಧ ವ್ಯಕ್ತಪಡಿಸದೇ ಜಂಟಿ ಸದನ ಸಮಿತಿಗೆ ಮಸೂದೆಯನ್ನು ಕಳುಹಿಸಲು ಒಪ್ಪಿಕೊಂಡಿದೆ.

ಒಂದು ದೇಶ, ಒಂದು ಚುನಾವಣೆ ಎಂದರೆ ಏನು?

ರಾಷ್ಟ್ರದ ಎಲ್ಲ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸುವ ಪ್ರಯತ್ನ. ಈಗ ರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬೇರೆ ಬೇರೆ ಅವಧಿಯಲ್ಲಿ ನಡೆಯುತ್ತಿವೆ. ಅವುಗಳನ್ನು ಏಕಕಾಲದಲ್ಲಿ ನಡೆಸಬೇಕು ಎನ್ನುವ ಉದ್ದೇಶ ಈ ಮಸೂದೆಯ ಹಿಂದಿದೆ. ಸ್ವಾತಂತ್ರ್ಯ ಬಂದಾಗಿನಿಂದ ವಿಧಾನಸಭೆ, ಲೋಕಸಭೆ ಸೇರಿ ಭಾರತದಲ್ಲಿ ಸುಮಾರು 400 ಚುನಾವಣೆಗಳು ನಡೆದಿವೆ. ಇದರಿಂದ ಭಾರೀ ಹಣ ಖರ್ಚಾಗುತ್ತಿದೆ.

ಜೊತೆಗೆ ಪ್ರತಿ ಚುನಾವಣೆಗೂ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಹಿನ್ನೆಲೆ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಈ ಕಾರಣಕ್ಕಾಗಿ ಒಂದು ದೇಶ, ಒಂದು ಚುನಾವಣೆ ತರಬೇಕು ಎಂದು ಕೇಂದ್ರ ಸರ್ಕಾರ ಮುಂದಾಗಿದೆ. ಅದರಲ್ಲೂ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರುತ್ತೇವೆ ಎಂದು ಭರವಸೆಯನ್ನು ಕೂಡ ನೀಡಿದ್ದು, ಅದರಂತೆ ಲೋಕಸಭೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಮಂಡನೆಯಾಗಿದೆ.

ಭಾರತಕ್ಕೆ ಹೊಸ ಪದ್ಧತಿ ಅಲ್ಲ!

ಭಾರತದಲ್ಲಿ ಏಕಕಾಲದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳು ನಡೆಯುವುದು ಇದೇ ಮೊದಲಲ್ಲ. ಒಂದು ದೇಶ, ಒಂದು ಚುನಾವಣೆ ಕಲ್ಪನೆ ಕೂಡ ಭಾರತಕ್ಕೆ ಹೊಸತಲ್ಲ. ಈ ಹಿಂದೆ ಸಂವಿಧಾನ ಅಂಗೀಕಾರ ಆದ ಬಳಿಕ ಏಕಕಾಲದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳು ನಡೆದಿವೆ. 1951ರಿಂದ 1967ರವರೆಗೆ ಅಂದ್ರೇ ನಾಲ್ಕು ಸಾರ್ವತ್ರಿಕ ಚುನಾವಣೆಗಳು ದೇಶದಲ್ಲಿ ಏಕಕಾಲಕ್ಕೆ ನಡೆದಿವೆ.

ಆ ಬಳಿಕ ಅವಧಿಗೂ ಮುನ್ನವೇ ರಾಜ್ಯ ವಿಧಾನಸಭೆಗಳ ವಿಸರ್ಜನೆ, ಲೋಕಸಭೆ ವಿಸರ್ಜನೆ, ತುರ್ತು ಪರಿಸ್ಥಿತಿಯ ಕಾರಣ ಏಕಕಾಲದಲ್ಲಿ ದೇಶಾದ್ಯಂತ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳು ನಡೆಯಲು ಸಾಧ್ಯವಾಗಿಲ್ಲ. ಈಗ ಮತ್ತೆ ಅದೇ ಪದ್ಧತಿಯನ್ನು ತರಲು ಕೇಂದ್ರ ಸರ್ಕಾರ ಬಯಸುತ್ತಿದ್ದು, ಮೊದಲು ಕೇವಲ ವಿಧಾನಸಭೆ ಹಾಗೂ ಲೋಕಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು. ಬಳಿಕ ಸ್ಥಳೀಯ ಸಂಸ್ಥೆಗಳನ್ನು ಇದರಲ್ಲಿ ಸೇರಿಸಬೇಕು ಎಂಬ ಆಲೋಚನೆ ಇದೆ ಎಂದು ಹೇಳಲಾಗಿದೆ.

ಮಸೂದೆಯಲ್ಲಿ ಏನಿದೆ?

ಲೋಕಸಭೆ, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಅನುಕೂಲವಾಗುವಂತೆ ಸಂವಿಧಾನದ 82ಎ ಹಾಗೂ 324ಎ ವಿಧಿಗಳಿಗೆ ತಿದ್ದುಪಡಿ ತರಬೇಕು ಎಂದು ಶಿಫಾರಸು ಮಾಡಿದೆ. ಅದಲ್ಲದೇ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಿದೆ. ಮೊದಲ ಹಂತದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಬೇಕು.

ಎರಡನೇ ಹಂತದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳು ನಡೆದ 100 ದಿನಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಶಿಫಾರಸು ಮಾಡಿದೆ. ಅದಲ್ಲದೇ ಮತದಾರರ ಪಟ್ಟಿ ಹಾಗೂ ಮತದಾರರ ಗುರುತಿನ ಚೀಟಿ ಪರಿಷ್ಕರಣೆಗೂ ಸಮಿತಿ ಶಿಫಾರಸು ಮಾಡಿತ್ತು. ಅದರಂತೆ ಲೋಕಸಭೆ, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಒಂದೇ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕು. ಇದರಿಂದ ನಕಲಿ ಮತದಾನದ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂಬ ವಿಶ್ವಾಸವನ್ನು ಸಮಿತಿ ವ್ಯಕ್ತಪಡಿಸಿತ್ತು.

ಒಂದು ದೇಶ, ಒಂದು ಚುನಾವನೆ ಅನುಷ್ಠಾನವಾದರೆ, ಮೊದಲ ಬಾರಿ ರಾಷ್ಟ್ರಪತಿಗಳು ಲೋಕಸಭೆಯ ಆಡಳಿತ ಅವಧಿಯನ್ನು ಅಧಿಸೂಚನೆ ಮಾಡುತ್ತಾರೆ. ಈ ಅಧಿಸೂಚನೆಯಂತೆ ಇಡೀ ದೇಶದ ಎಲ್ಲ ರಾಜ್ಯಗಳ ವಿಧಾನಸಭೆಗೂ ಕೂಡ ಲೋಕಸಭೆಯ ಅವಧಿ ಅನ್ವಯವಾಗಲಿದೆ. ಆ ಸಮಯದಲ್ಲಿ ಹೊಸದಾಗಿ ರಚನೆಯಾದ ರಾಜ್ಯ ಸರ್ಕಾರಗಳ ಅವಧಿ ಮೊಟಕುಗೊಂಡು, ಮುಂದಿನ ಸಾರ್ವತ್ರಿಕ ಚುನಾವಣೆ ವೇಳೆಯೇ ಅವುಗಳಿಗೂ ಚುನಾವಣೆ ನಡೆಯುತ್ತದೆ. ಅಲ್ಲಿಂದ ಒನ್‌ ನೇಷನ್‌, ಒನ್‌ ಎಲೆಕ್ಷನ್‌ ಪದ್ಧತಿ ಜಾರಿಗೆ ಬರುತ್ತದೆ.

ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಅಥವಾ ಅವಿಶ್ವಾಸ ಮತಯಾಚನೆಯಿಂದ ಸರ್ಕಾರ ಪತನವಾದರೆ, ಹೊಸದಾಗಿ ಚುನಾವಣೆ ನಡೆಯುತ್ತದೆ. ಆಗ ಆಯ್ಕೆಯಾಗುವ ಸರ್ಕಾರ ಮುಂದಿನ ಸಾರ್ವತ್ರಿಕ ಚುನಾವಣೆವರೆಗೂ ಮಾತ್ರ ಇರುತ್ತದೆ. ಅಂದ್ರೇ ಸರ್ಕಾರ ರಚನೆಯಾಗಿ ಎರಡು ವರ್ಷವಾದ ಬಳಿಕ ಸರ್ಕಾರ ಪತನವಾದಲ್ಲಿ ಮತ್ತೆ ಚುನಾವಣೆ ನಡೆದು ಹೊಸದಾಗಿ ಆಯ್ಕೆಯಾಗುವ ಸರ್ಕಾರ ಎರಡೂವರೆ ಅಥವಾ ಮೂರು ವರ್ಷ ಮಾತ್ರ ಆಡಳಿತ ನಡೆಸಲಿದೆ. ಇದು ವಿಧಾನಸಭೆಗೆ ಮಾತ್ರವಲ್ಲದೇ ಲೋಕಸಭೆಗೂ ಅನ್ವಯವಾಗಲಿದೆ. ಸರ್ಕಾರ ಪತನವಾದರೆ ಮುಂದೆ ಬಾಕಿಯಿರುವ ಅವಧಿಗೆ ಮಾತ್ರ ಚುನಾವಣೆ ನಡೆಯಲಿದೆ.

ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಏಕಕಾಲದಲ್ಲಿ ಚುನಾವಣೆ ನಡೆದರೆ, ಮಾಡೆಲ್‌ ಕೋಡ್‌ ಆಫ್‌ ಕಂಡಕ್ಟ್‌ ಅವಧಿ ಕಡಿಮೆಯಾಗಿ ನಿರಂತರ ಅಭಿವೃದ್ಧಿ ಸಾಧ್ಯವಾಗುತ್ತದೆ. ಮೂರನೇಯದಾಗಿ ಚುನಾವಣಾ ಕರ್ತವ್ಯಗಳಿಗೆ ಈಗ ಗಣನೀಯ ಸಂಖ್ಯೆಯ ಸಿಬ್ಬಂದಿಯ ನಿಯೋಜನೆ ಮಾಡಲಾಗುತ್ತಿದೆ. ಪ್ರತಿ ಬಾರಿಯೂ ಚುನಾವಣೆ ನಡೆದಾಗ ಸರ್ಕಾರಿ ಕೆಲಸಗಳಿಗೆ ತೊಂದರೆಯಾಗುತ್ತದೆ. ಅದು ಒಂದು ರಾಷ್ಟ್ರ, ಒಂದು ಚುನಾವಣೆ ಆದಲ್ಲಿ ಕಡಿಮೆಯಾಗಬಹುದು ಎಂದು ಹೇಳಲಾಗುತ್ತಿದೆ.

ಆರ್ಥಿಕ ಹೊರೆ ಕಡಿಮೆ

ಕೊನೆಯದಾಗಿ ಚುನಾವಣೆಗೆ ಖರ್ಚಾಗುತ್ತಿರುವ ಹಣದ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ಈ ಪದ್ಧತಿ ಇಳಿಸಲಿದ್ದು, ಒಂದು ಚುನಾವಣೆಗೆ ಬಳಸುವ ಮಾನವ ಸಂಪನ್ಮೂಲ, ಭದ್ರತೆ, ಸಾಮಗ್ರಿಗಳನ್ನೇ ಎಲ್ಲ ಚುನಾವಣೆಗಳಿಗೂ ನಡೆಸಿದರೆ. ಆಟೋಮ್ಯಾಟಿಕ್‌ ಆಗಿ ಆರ್ಥಿಕ ಹೊರೆ ತಗ್ಗಲಿದೆ ಎಂದು ತಜ್ಞರು ಪ್ರತಿಪಾದಿಸುತ್ತಿದ್ದಾರೆ.

ಒಂದು ನೇಷನ್‌, ಒಂದು ಎಲೆಕ್ಷನ್‌ಗೆ ವೆಚ್ಚವೆಷ್ಟು?

ಏಕಕಾಲದಲ್ಲಿ ಚುನಾವಣೆ ನಡೆದರೆ ಪ್ರತಿ 15 ವರ್ಷಗಳಿಗೊಮ್ಮೆ ಸುಮಾರು 10,000 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಅದು ಕೂಡ ಹೊಸ ಇವಿಎಂಗಳ ಖರೀದಿಗೆ ಮಾತ್ರ ಎನ್ನಲಾಗಿದೆ. ಇವಿಎಂಗಳು 15 ವರ್ಷ ಬಾಳಿಕೆ ಬರುತ್ತವೆ. ಆದ್ದರಿಂದ ಒಂದು ಸೆಟ್‌ ಇವಿಎಂ ಮೂರು ಚುನಾವಣೆ ಸೈಕಲ್‌ಗಳನ್ನು ನಿಭಾಯಿಸಲಿವೆ. ಈ 10 ಸಾವಿರ ಕೋಟಿ ರೂಪಾಯಿ ಮೂರು ಚುನಾವಣೆಗೆ ಸೇರಿದ್ದರೆ, ಇದು ಬಿಟ್ಟು ಪ್ರತಿ ಎಲೆಕ್ಷನ್‌ ಸೈಕಲ್‌ಗೆ ಸುಮಾರು 7951 ಕೋಟಿ ರೂಪಾಯಿ ಖರ್ಚಾಗಲಿದೆ ಎಂದು ಹೇಳಲಾಗುತ್ತದೆ.

ಏಕಕಾಲದಲ್ಲಿ ಚುನಾವಣೆ ನಡೆಸಲು ಏನೆಲ್ಲಾ ಬೇಕು?

ಭಾರತದಂತಹ ದೊಡ್ಡ ರಾಷ್ಟ್ರದಲ್ಲಿ ನಿಜಕ್ಕೂ ಏಕಕಾಲದಲ್ಲಿ ಚುನಾವಣೆ ನಡೆಸೋದು ಸವಾಲೇ ಸರಿ. ಇದಕ್ಕಾಗಿ ಸದ್ಯ ಇರುವ ಎರಡು ಪಟ್ಟು ಇವಿಎಂಗಳು, ಬ್ಯಾಲೆಟ್‌ ಯುನಿಟ್‌ಗಳು ಬೇಕಾಗುತ್ತವೆ. ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಸದ್ಯ 26.5 ಲಕ್ಷ ಬ್ಯಾಲೆಟ್‌ ಯುನಿಟ್‌ಗಳು, 17.8 ಲಕ್ಷ ಕಂಟ್ರೋಲ್‌ ಯುನಿಟ್‌ಗಳು ಹಾಗೂ 17.8 ಲಕ್ಷ ವಿವಿಪ್ಯಾಟ್‌ಗಳ ಕೊರತೆಯಿವೆ.

ಅದಲ್ಲದೇ ಇವುಗಳನ್ನು ಶೇಖರಿಸಿಡಲು ಸುಮಾರು 800ಕ್ಕೂ ಹೆಚ್ಚು ಗೋದಾಮುಗಳು ಬೇಕಾಗಲಿವೆ. ಜೊತೆಗೆ ಸದ್ಯ ಇರುವುದಕ್ಕಿಂತ ಶೇ.50ರಷ್ಟು ಹೆಚ್ಚು ಭದ್ರತಾ ಪಡೆಗಳು ನಿಯೋಜನೆಯಾಗಬೇಕಿದೆ. ಜೊತೆಗೆ 7 ಲಕ್ಷ ಸಿಬ್ಬಂದಿಯನ್ನು ಚುನಾವಣೆಗೆ ನಿಯೋಜಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ವರದಿ ನೀಡಿದೆ.

ವಿಪಕ್ಷಗಳ ವಿರೋಧ ಏಕೆ?

ಪ್ರಮುಖವಾಗಿ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ವಿರೋಧ ಪಕ್ಷಗಳು ವಿರೋಧಿಸುತ್ತಿರುವುದು ಭಾರತದಲ್ಲಿ ಇದು ಸಾಧ್ಯವಲ್ಲ ಎಂದು. ರಾಜ್ಯ ವಿಧಾನಸಭೆಗಳ ಅವಧಿಯನ್ನು ಮೊಟಕುಗಳಿಸಲಾಗುತ್ತದೆ. ಒಕ್ಕೂಟ ವ್ಯವಸ್ಥೆಗೆ ಇದರಿಂದ ಧಕ್ಕೆ ಬರುತ್ತದೆ. ಹೊಸ ಸರ್ಕಾರಗಳ ಅವಧಿ ಕೂಡ ಮೊಟಕುಗೊಳ್ಳುವುದರಿಂದ ಈ ಪದ್ಧತಿ ಸರಿಯಲ್ಲ. ಹೆಚ್ಚೇನು ಆರ್ಥಿಕ ಹೊರೆ ತಗ್ಗಲ್ಲ ಎಂದು ವಿಪಕ್ಷಗಳು ವಾದಿಸುತ್ತಿವೆ.

ಕೇಂದ್ರ ಸರಕಾರವು ಆಯವ್ಯಯದಲ್ಲಿ ಚುನಾವಣೆ ಆಯೋಗಕ್ಕೆ ವಿಧಿ 324ರಡಿ ಅನುದಾನ ನೀಡುತ್ತದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 2023-24ರಲ್ಲಿ ಆಯೋಗಕ್ಕೆ 466 ಕೋಟಿ ರೂ. ನೀಡಿತ್ತು. ಆದರೆ, 2022-23ರಲ್ಲಿ ನೀಡಿದ್ದು 320 ಕೋಟಿ ರೂ. ಮಾತ್ರ; ಕೇಂದ್ರ ಸರಕಾರದ ಆರ್ಥಿಕ ವರ್ಷ 2024-25ರ ಒಟ್ಟು ವೆಚ್ಚ 48,20,512 ಕೋಟಿ ರೂ.ಗೆ ಹೋಲಿಸಿದರೆ, ಇದು ನಗಣ್ಯ.

ರಾಜ್ಯ ಸರಕಾರಗಳು ಕೂಡ ಸ್ಥಳೀಯ ಚುನಾವಣೆಗೆ ವೆಚ್ಚ ಮಾಡುತ್ತವೆ. ಕೇಂದ್ರ ಚುನಾವಣೆ ಆಯೋಗವು ವಿಧಿ 324(6) ಅನ್ವಯ ರಾಜ್ಯಗಳಿಗೆ ಸಿಬ್ಬಂದಿಯನ್ನು ನಿಯೋಜಿಸಬೇಕಾಗುತ್ತದೆ. ಜನಪ್ರತಿನಿಧಿಗಳ ಕಾಯ್ದೆ 1951ರ ಪ್ರಕಾರ, ವಾಹನ ಹಾಗೂ ಮತಗಟ್ಟೆ ವ್ಯವಸ್ಥೆಯನ್ನೂ ಕೇಳಬಹುದು. ಈ ಎಲ್ಲ ವೆಚ್ಚ ಪರಿಗಣಿಸಿದರೂ, ಕೇಂದ್ರ-ರಾಜ್ಯಗಳು ಚುನಾವಣೆ ನಡೆಸಲು ಮಾಡುವ ವೆಚ್ಚವನ್ನು ಹೆಚ್ಚು ಎನ್ನಲು ಆಗುವುದಿಲ್ಲ.

Hot this week

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...
Please Scan to make Your Contribution

Topics

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

Related Articles

Popular Categories

error: Content is protected !!